Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ಕಾಲ್ತುಳಿತ ದುರಂತ ಸಂಭವಿಸಿದ ಏಳು ತಿಂಗಳ ಬಳಿಕ ಆರ್​​ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಅಂತಾರಾಷ್ಟ್ರೀಯ ಪಂದ್ಯಾವಳಿ ಆಯೋಜನೆಗೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಈ ಬಾರಿ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವುದರ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹಾ ನೀಡಿದ ಶಿಫಾರಸ್ಸುಗಳನ್ನ ಪಾಲಿಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಭರವಸೆ ನೀಡಿದ್ದರು. ಇದಕ್ಕೆ ವ್ಯತಿರಿಕ್ತವಾಗಿ ಆರ್​ಸಿಬಿ ಉಪಾಧ್ಯಕ್ಷ ರಾಜೇಶ್ ಮೆನನ್ ಅವರು ಛತ್ತೀಸ್​​ಘಡದ ರಾಯಪುರ ಕ್ರೀಡಾಂಗಣದಲ್ಲಿ ಆರ್​​ಸಿಬಿಯ ಎರಡು ಪಂದ್ಯಗಳು ಹಾಗೂ ನವ ಮುಂಬೈಯಲ್ಲಿ ಇನ್ನುಳಿದ ಪಂದ್ಯಗಳ ಆಯೋಜನೆಗೆ ಒಲವು ತೋರಿದ್ದರು. ಈ ಬೆಳವಣಿಗೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ನಡೆಯುವುದು ಬಹುತೇಕ ಅನುಮಾನವಾಗಿತ್ತು. ಏತ್ಮನಧ್ಯೆ ಆರ್​ಸಿಬಿ ಆಡಳಿತ ಮಂಡಳಿ ಜೊತೆ ಕೆಎಸ್​ಸಿಎ ನಡೆಸಿದ ಸಭೆ ಫಲಪ್ರದವಾಗಿತ್ತು. ಮಾತುಕತೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಎಐ ಕ್ಯಾಮರಾ…

Read More

Updated By: Priyalachhi ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ, ಮಧ್ಯವರ್ತಿ ಲಕ್ಕಪ್ಪ ಎಂಬುವವರನ್ನೂ ಬಂಧಿಸಲಾಗಿದೆ.

Read More

Updated By: Priyalachhi ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಕಾನೂನು ಎಲ್ಲರಿಗೂ ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ. ತಹಶೀಲ್ದಾರ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ.…

Read More

Updated By: Priyalachhi ಬೆಂಗಳೂರು: ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ತಿಳಿಸಿದ್ದಾರೆ. ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದೊಂದಿಗೆ ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಅವರು ಈ ವಿವರ ಮತ್ತು ಅಂಕಿಅಂಶಗಳನ್ನು ನೀಡಿದ್ದಾರೆ. ರಾಜ್ಯಕ್ಕೆ ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿದ್ದು, ಅದು ಕೇವಲ ಹೂಡಿಕೆದಾರರ ಸಮಾವೇಶಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಸಚಿವರು ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ತಯಾರಿಕೆ, ಮರುಬಳಕೆ ಇಂಧನ, ಡೇಟಾ ಕೇಂದ್ರಗಳು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಸ್ಥಾಪನೆ ವಲಯಗಳಲ್ಲಿ ಹಲವು ಅಗ್ರಗಣ್ಯ ಉದ್ಯಮ ಸಂಸ್ಥೆಗಳು ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ. ಈ ಪ್ರಸ್ತಾವನೆಗಳು ಇನ್ನು ಕೆಲವೇ ದಿನಗಳಲ್ಲಿ…

Read More

Updated By: Priyalachhi ಬೆಳಗಾವಿ: ಶುಕ್ರವಾರ ರಾತ್ರಿ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಶನಿವಾರ ಪಂಚಭೂತಗಳಲ್ಲಿ ಲೀನವಾಗಿದ್ದು, ಭಾಲ್ಕಿ ಹೊರವಲಯದ ಚಿಕಲ್ ಚೆಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಇಂದು ಸಂಜೆ ಪತ್ನಿ ಲಕ್ಷ್ಮೀಬಾಯಿ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನದಂತೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಎಚ್‌. ಕೆ‌ ಪಾಟೀಲ್​, ಎಸ್‌.ಎಸ್‌ ಮಲ್ಲಿಕಾರ್ಜುನ್​ ಸೇರಿದಂತೆ ಹಲವು ಗಣ್ಯರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆಯವರ ತಂದೆ ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದರು.

Read More

Updated By: Priyalachhi ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಸಕ್ರಿಯರಾಗಿ ಮುಂದುವರಿಯುವುದಾಗಿ ಮತ್ತು ರಾಜ್ಯದ ರಾಜಕೀಯ ವ್ಯವಹಾರಗಳಿಂದ ದೂರ ಉಳಿಯುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಗುರುವಾರ ಪ್ರತಿಪಾದಿಸಿದರು. ಕೇಂದ್ರಕ್ಕೆ ಸೀಮಿತವಾಗಿರುತ್ತಾರೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ ಅವರು, ‘ನಾನು ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗಿ ಮುಂದುವರಿಯುತ್ತೇನೆ’ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ರಾಜಕೀಯದಲ್ಲಿದ್ದೇನೆ. ನಾನು ಎಲ್ಲಿರಬೇಕು ಎಂಬುದನ್ನು ರಾಜ್ಯದ ಜನರು ನಿರ್ಧರಿಸುತ್ತಾರೆ. ಜನರ ಇಚ್ಛೆಯ ಆಧಾರದ ಮೇಲೆ, ರಾಜ್ಯ ರಾಜಕೀಯಕ್ಕೆ ಯಾವಾಗ ಮರಳಬೇಕೆಂದು ನಾನು ನಿರ್ಧರಿಸುತ್ತೇನೆ. ಕೇಂದ್ರದಲ್ಲಿ ನನಗೆ ಜವಾಬ್ದಾರಿಗಳನ್ನು ವಹಿಸಲಾಗಿದ್ದರೂ, ರಾಜ್ಯ ರಾಜಕೀಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು. ರಾಜಕೀಯ ಹೊಂದಾಣಿಕೆಗಳ ಬಗ್ಗೆ ಉಲ್ಲೇಖಿಸಿದ ಕುಮಾರಸ್ವಾಮಿ, ಜೆಡಿಎಸ್ ಎನ್‌ಡಿಎಯ ಭಾಗವಾಗಿದ್ದು, ಬಣದೊಳಗೆ ಯಾವುದೇ ಗೊಂದಲಕ್ಕೆ ಅವಕಾಶ ನೀಡುವುದಿಲ್ಲ. ಕರ್ನಾಟಕದಲ್ಲಿ ಆಡಳಿತವನ್ನು ಉತ್ತಮಗೊಳಿಸುವುದು ನಮ್ಮ ಉದ್ದೇಶವಾಗಿದ್ದು, ಆಡಳಿತದ ಕಾರ್ಯವೈಖರಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಹೇಳಿದರು. ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರು…

Read More

Updated By: Priyalachhi ಶಿವಮೊಗ್ಗ: ನನ್ನ ಕುತ್ತಿಗೆಯನ್ನು ಕೊಯ್ದರೂ ಹಿಂದುತ್ವವನ್ನು ಮಾತ್ರ ಬಿಡುವುದಿಲ್ಲ ಎಂದು ಹೇಳಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷಕ್ಕೆ ವಾಪಸ್ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಎಸ್ ಈಶ್ವರಪ್ಪ, ‘ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಪಕ್ಷದಲ್ಲಿ ಪರಿವರ್ತನೆ ಆಗಬೇಕು ಎಂದು ನಾನು ಹೊರಗೆ ಬಂದಿದ್ದೇನೆ. ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್‌ ಮನಸ್ಸಲ್ಲೂ ಇದೆ ವಿಚಾರ ಇದೆ ಎಂದಿದ್ದಾರೆ. ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ ಇದೇ ವೇಳೆ ಹಿಂದುತ್ವದ ಕುರಿತು ಮಾತನಾಡಿದ ಈಶ್ವರಪ್ಪ, ‘ನಮ್ಮ ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಟ್ಟು ಬೇರೆ ಕಡೆ ಹೋಗಲ್ಲ. ಇವತ್ತಲ್ಲ ನಾಳೆ ಪಕ್ಷಕ್ಕೆ ಒಳ್ಳೆಯ ಸ್ಥಿತಿ ಬರುತ್ತೆ. ಬಿಜೆಪಿ ಪಾದಯಾತ್ರೆ ವಿಚಾರಕ್ಕೂ ನನಗೇನೂ ಸಂಬಂಧ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Read More

Updated By: Priyalachhi ನವದೆಹಲಿ: ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವಂತೆಯೇ ಇತ್ತ ಭಾರತ ಸರ್ಕಾರ ಅಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಮುಂದಾಗಿದೆ. ಭದ್ರತಾ ದೃಷ್ಟಿಯಿಂದ ಈಗಾಗಲೇ ಇರಾನ್ ನಲ್ಲಿರುವ ಭಾರತೀಯರಿಗೆ ಕೂಡಲೇ ಇರಾನ್ ತೊರೆಯುವಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದು, ಅದಾಗ್ಯೂ ಇರಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ. ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಸರ್ಕಾರ ತುರ್ತು ಯೋಜನೆಗಳನ್ನು ರೂಪಿಸಲು ಪ್ರಾರಂಭಿಸಿದೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ‘ಇರಾನ್ ನ ಹೆಚ್ಚಿನ ಭಾಗಗಳಲ್ಲಿ ಅಶಾಂತಿ ಮುಂದುವರೆದಿದ್ದು, ಇರಾನ್‌ನಲ್ಲಿನ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಮರಳುವಿಕೆಗೆ ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ” ಎಂದು ತಿಳಿಸಿದೆ.

Read More

Updated By: Priyalachhi ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸುವ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿದ ಪರಿಣಾಮ ಬ್ಯಾನರ್ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಚಿಕ್ಕಪೇಟೆಯಲ್ಲಿ ಈ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ಇತ್ತು. ಈ ವೇಳೆ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯದ ಮುಂದೆ ಹುಲ್ಲು, ಹೂ ಬ್ಯಾನರ್ ಗಳಿಂದ ಸಿಂಗಾರ ಮಾಡಲಾಗಿತ್ತು. ಪಟಾಕಿ‌ ಹಚ್ಚುವಾಗ ಬೆಂಕಿ‌ ಕಿಡಿ ಬ್ಯಾನರ್ ಗೆ ಹಾಕಿದ್ದ ಹುಲ್ಲಿಗೆ ಬಿದ್ದು ಅವಘಡ ಸಂಭವಿಸಿದೆ.

Read More

Updated By: Priyalachhi 2023 ರ ವಿಧಾನಸಭಾ ಚುನಾವಣೆಯಲ್ಲಿ ಶಿಡ್ಲಘಟ್ಟದ ​​ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಾಜೀವ್ ಗೌಡ ಅವರ ನಡವಳಿಕೆ ಅಶಿಸ್ತು ಮತ್ತು ಪಕ್ಷದ ಹಿತಾಸಕ್ತಿಗೆ ಹಾನಿಕಾರಕ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನಿನ್ನೆ ಬಿಡುಗಡೆ ಮಾಡಲಾದ ನೋಟಿಸ್‌ನಲ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ (ಆಡಳಿತ) ಜಿ ಸಿ ಚಂದ್ರಶೇಖರ್ ಸ್ಪಷ್ಟನೆ ನೀಡಿ, ದೂರವಾಣಿ ಸಂಭಾಷಣೆಯ ಸಮಯದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಬ್ಯಾನರ್ ತೆಗೆದುಹಾಕಿದ್ದಕ್ಕಾಗಿ ರಾಜೀವ್ ಗೌಡ ಪುರಸಭೆ ಆಯುಕ್ತೆ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡಿದ್ದು, ಅದರ ಆಡಿಯೋ ಮತ್ತು ವಿಡಿಯೋ ಕ್ಲಿಪ್ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ ಎಂದು ಪಕ್ಷದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕನ ನಡವಳಿಕೆ ಮತ್ತು ಅವಹೇಳನಕಾರಿ ಪದಗಳು ಪಕ್ಷಕ್ಕೆ ಮುಜುಗರವನ್ನುಂಟುಮಾಡಿದೆ ಮತ್ತು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಏಳು ದಿನಗಳಲ್ಲಿ ಸದಸ್ಯರು ತಮ್ಮ ಲಿಖಿತ ವಿವರಣೆಯನ್ನು ಸಲ್ಲಿಸಲು ಕೆಪಿಸಿಸಿ ಕೇಳಿದೆ, ಇಲ್ಲದಿದ್ದರೆ ಶಿಸ್ತು ಸಮಿತಿ…

Read More