Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi  ಬೆಂಗಳೂರು: ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ತಯಾರಿಸಿದೆ. ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ತಯಾರಾಗುತ್ತಿರುವುದು, ರಾಜ್ಯ ಕೈಗಾರಿಕಾ ಬೆಳವಣಿಗೆಯಲ್ಲಿನ ಒಂದು ಉಜ್ಜ್ವಲ ಅಧ್ಯಾಯವಾಗಿದೆ. ಇದಕ್ಕೆ ನಮ್ಮ ಸರ್ಕಾರ ಸಹ ಅಗತ್ಯ ಸಹಕಾರ ನೀಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು. ರಿವರ್ ಮೊಬಿಲಿಟಿ ಕಂಪನಿಯ ಬೈಕ್ ತಯಾರಿಕಾ ಘಟಕದಲ್ಲಿರುವ ವ್ಯವಸ್ಥೆಗಳನ್ನು ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು. ಬಳಿಕ ಕೈಗಾರಿಕಾ ಸಹಭಾಗಿತ್ವದ ಅಡಿ ‘ಯಮಹಾ ಇಸಿ-06 ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು’ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಹಸ್ತಾಂತರಿಸಿದರು. ಬಳಿಕ ಸ್ಥಳೀಯ ಉತ್ಪಾದನೆ, ಕೈಗಾರಿಕೆ ಬೆಳವಣಿಗೆಯನ್ನು ಕೊಂಡಾಡಿದರು. ಕರ್ನಾಟಕದಾದ್ಯಂತ ಸಾವಿರಾರು ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಆಟೋಮೊಬೈಲ್ ಮಾರುಕಟ್ಟೆಯು ಇವಿಗಳತ್ತ ತ್ವರಿತ ಬದಲಾವಣೆಯನ್ನು ಕಾಣುತ್ತಿರುವುದರಿಂದ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (ಇವಿ) ಮೂಲಸೌಕರ್ಯವನ್ನು ಮತ್ತಷ್ಟು ವಿಸ್ತರಿಸಲಿದೆ ಎಂದರು. ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ…

Read More

Updated By: Priyalachhi  ಬೆಂಗಳೂರು: ”ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗಡುವು ನೀಡಿರುವ ಬಗ್ಗೆ ಅರಮನೆ ಮೈದಾನ ಆವರಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯತ್​ ಚುನಾವಣೆಗಳು ನಡೆಯಬೇಕು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಅನುಸಾರ ಏನೆಲ್ಲಾ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ ಎಂದು ತಿಳಿಸಿದರು. ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಪ್ರತಿಕ್ರಿಯಿಸಿ, ”ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಅದು ತೀರ್ಮಾನ ಮಾಡಲಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು,…

Read More

Updated By: Priyalachhi  ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು. ಮೈಸೂರು ಮಾರ್ಗವಾಗಿ ರಾಹುಲ್ ಗಾಂಧಿಯವರು ಅವರು ತಮಿಳುನಾಡಿನ ಕೂಡಲೂರು ಕಾರ್ಯಕ್ರಮಕ್ಕೆ ಹೋಗಿದ್ದರು. ಬಳಿಕ ಇದೇ ಮಾರ್ಗವಾಗಿ ಬಂದು ಮರಳಿ ದೆಹಲಿಗೆ ಪ್ರಯಾಣ ಬೆಳಸಿದರು. ರಾಹುಲ್ ಜೊತೆ ಡಿಸಿಎಂ ಮಾತು: ತಮಿಳುನಾಡಿನ ಕೂಡಲೂರು ಕಾರ್ಯಕ್ರಮ ಮುಗಿಸಿ ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಲಕಾಲ ಮಾತುಕತೆ ನಡೆಸಿದರು. ದೆಹಲಿಗೆ ತೆರಳುವ ಮುನ್ನ ರಾಹುಲ್ ಗಾಂಧಿ, ಡಿಕೆಶಿ ಇಬ್ಬರೇ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ರಾಜಕೀಯ ಚರ್ಚೆ ಇಲ್ಲ: ಇಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಸ್ವಾಗತ ಕೋರಿದ ನಂತರ ರಾಹುಲ್ ಗಾಂಧಿಯವರು ಕೂಡಲೂರು ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆ. ಸಂಜೆ ಇಲ್ಲಿಯೇ ಬಂದು ದೆಹಲಿಗೆ ಹಿಂದಿರುಗುತ್ತಾರೆ. ಅವರನ್ನು ಕಳಿಸಲು ಬರುತ್ತೇನೆ. ಇಲ್ಲಿ…

Read More

Updated By: Priyalachhi  ಗದಗ : ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆ ಆಗಿರುವ ನಿಧಿಯಲ್ಲಿ 466 ಗ್ರಾಂ ಚಿನ್ನಾಭರಣಗಳು ಮತ್ತು 634 ಗ್ರಾಂ ತಾಮ್ರದ ತಂಬಿಗೆ ಪತ್ತೆಯಾಗಿದ್ದು, ಅವುಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಸಂಪೂರ್ಣ ಘಟನೆ ಬೆಳಕಿಗೆ ಬರಲು ಕಾರಣನಾದ 14 ವರ್ಷದ ಬಾಲಕ ಪ್ರಜ್ವಲ್ ರಿತ್ತಿ ಅವರ ಪ್ರಾಮಾಣಿಕತೆ ನಿಜಕ್ಕೂ ಅನುಕರಣೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್‌. ಕೆ. ಪಾಟೀಲ್‌ ಅವರು ಹೇಳಿದರು. ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸನ್ಮಾನಿಸಿದರು. ನಂತರ ಗ್ರಾಮದ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ರಾಷ್ಟ್ರಕೂಟರು ಮತ್ತು ಚಾಲುಕ್ಯರು ಆಳ್ವಿಕೆ ನಡೆಸಿದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಒಂದು ವಿಶಿಷ್ಟ ಸ್ಥಳವಾಗಿದೆ. ಇಂತಹ ಪುರಾತನ ಮತ್ತು ಮಹತ್ವದ ಪ್ರದೇಶಗಳಲ್ಲಿ ಕೆಲವೊಮ್ಮೆ ಅಚ್ಚರಿಯ ಘಟನೆಗಳು ಸಂಭವಿಸುವುದು ಸಹಜ ಎಂದು ಸಚಿವರು ಹೇಳಿದ್ದಾರೆ. ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣವನ್ನಾಗಿ ಘೋಷಿಸಲು ರಾಜ್ಯ ಸರ್ಕಾರ…

Read More

Updated By: Priyalachhi  ಕೆಲವು ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗದೆ ತೀವ್ರ ಸಂಕಟ ಅನುಭವಿಸುತ್ತಾರೆ. ಮತ್ತೆ ಕೆಲವರು ಸಣ್ಣ ವಿಷಯಗಳಿಗೂ ಕೋಪಗೊಂಡು ಹೈಬಿಪಿ ಸಮಸ್ಯೆಗೆ ಒಳಗಾಗುತ್ತಾರೆ. ಇನ್ನು ಕೆಲವರು ತಾವು ಇಷ್ಟಪಡುವ ಜನರಿಂದ ಏನನ್ನಾದರೂ ನಿರೀಕ್ಷಿಸುತ್ತಾರೆ, ಅದು ಸಂಭವಿಸದಿದ್ದಾಗ ಅತೃಪ್ತರಾಗುತ್ತಾರೆ. ಹೀಗೆ ಪ್ರತಿಯೊಬ್ಬರಿಗೂ ಸಂತೋಷ, ದುಃಖ, ಕೋಪ, ಭಯ ಹಾಗೂ ಆತಂಕದಂತಹ ಅನೇಕ ಭಾವನೆಗಳಿರುತ್ತವೆ. ಇವುಗಳನ್ನು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ಪ್ರಮಾಣದಲ್ಲಿ ವ್ಯಕ್ತಪಡಿಸಿದರೆ, ಯಾವುದೇ ಸಮಸ್ಯೆ ಇಲ್ಲ. ಆದರೆ ಅವು ನಿಯಂತ್ರಣವಿಲ್ಲದೆ ಹೊರಬಂದರೆ, ಒಬ್ಬ ವ್ಯಕ್ತಿಯು ತನ್ನ ವಿವೇಚನೆಯನ್ನು ಕಳೆದುಕೊಳ್ಳುತ್ತಾನೆ. ಮನಃಶಾಸ್ತ್ರಜ್ಞರ ಪ್ರಕಾರ, ಪ್ರತಿಯೊಂದು ಆಲೋಚನೆಗಳು, ಕಾರ್ಯಗಳು ಹಾಗೂ ಮಾನವ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತವೆ. ಅದಕ್ಕಾಗಿಯೇ ಭಾವನೆಗಳ ಮೇಲೆ ನಿಯಂತ್ರಿಸುವುದು ಅಗತ್ಯ. ಭಾವನೆಗಳನ್ನು ನಿಯಂತ್ರಿಸುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಯೋಣ. ಯಾರಾದರೂ ಏನಾದರೂ ಅಂದ್ರೆ ಹಲವು ಜನರು ತಕ್ಷಣ ಕೋಪಗೊಳ್ಳುತ್ತಾರೆ. ಯಾರಾದರೂ ಕೋಪಗೊಳಿಸಿದರೆ, ಅವರು ಅದರ ಬಗ್ಗೆ ಯೋಚಿಸುತ್ತಾರೆ ಹಾಗೂ ಅಳುತ್ತಾರೆ. ಅವರಿಗೆ ಇಷ್ಟವಿಲ್ಲದ ಏನಾದರೂ ಸಂಭವಿಸಿದಾಗ ಅವರು ನೋಯುತ್ತಾರೆ.…

Read More

Updated By: Priyalachhi  ಬೆಂಗಳೂರು: ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್‌)ಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸುಮಾರು 10 ಜನರಿಗೆ ಒಟ್ಟು ರೂ.50 ಲಕ್ಷ ಹಣ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಆರ್‌ಟಿ ನಗರ ನಿವಾಸಿ ಕರಿಗೌಡ ಎಸ್. ಪಾಟೀಲ್ (60) ಎಂಬುವವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎನ್. ಕೃಷ್ಣನ್ ಹಾಗೂ ನಾಗರಾಜ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ. 2022ರಲ್ಲಿ ಮಲ್ಲೇಶ್ವರ ಪಾಕಶಾಲಾ ಹೋಟೆಲ್‌ನಲ್ಲಿ ಗೋಪಿ ಎಂಬುವವರು ಎನ್‌.ಕೃಷ್ಣನ್‌ ಅವರನ್ನು ಪರಿಚಯಿಸಿದ್ದರು. ಕೃಷ್ಣನ್‌ ಅವರು ತಾನು ಕೆಎಎಸ್ ಅಧಿಕಾರಿಯಾಗಿದ್ದು, ಕೆಎಂಎಫ್‌ನಲ್ಲಿ ನಿರ್ದೇಶಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಅದೇ ಸಂದರ್ಭದಲ್ಲಿ ಆರೋಪಿ ನಾಗರಾಜ್‌ ಕೂಡ ತಾನು ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿ ನಕಲಿ ಗುರುತಿನ ಚೀಟಿ ತೋರಿಸಿದ್ದರು. ಕೆಎಂಎಫ್‌ನಲ್ಲಿ 25 ಸರ್ಕಾರಿ ಹುದ್ದೆಗಳಿದ್ದು, ಉದ್ಯೋಗಿಗಳ ಆಯ್ಕೆ ಅಧಿಕಾರ ನಮಗಿದೆ. ಆಯ್ಕೆ ಮಾಡಲು ಪರೀಕ್ಷೆ ಅಥವಾ ಸಂದರ್ಶನದ ಅಗತ್ಯ ಇಲ್ಲ. ಪ್ರತಿ ಅಭ್ಯರ್ಥಿ ರೂ.10 ಲಕ್ಷ ಸರ್ಕಾರಿ ಶುಲ್ಕ ಪಾವತಿಸಿದರೆ ಮೂರು…

Read More

Updated By: Priyalachhi  ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಕ್ಕಳನ್ನು ಶೋಷಣೆಯಿಂದ ರಕ್ಷಿಸಲು ಪೊಲೀಸರು ವಾರದಲ್ಲಿ ನಾಲ್ಕು ದಿನ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ವಿಕಾಸ ಸೌಧದಲ್ಲಿ ಮಕ್ಕಳ ನಿಧಿ ಭಾರತದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಮಕ್ಕಳ ಆನ್‌ಲೈನ್ ಸುರಕ್ಷತೆ’ ಕುರಿತು ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಮಾಧ್ಯಮಗಳಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಪೊಲೀಸ್ ಮತ್ತು ಶಿಕ್ಷಣ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮತ್ತು ರಕ್ಷಣೆಯಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಸೂಚಿಸಿದರು.

Read More

Updated By: Priyalachhi  ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆ ನೀಡಿದ್ದಾರೆ. ದೆಹಲಿಯ ದಾನಿಯೊಬ್ಬರು ನೀಡಿರುವ 2 ಕೋಟಿ ರೂ ವೆಚ್ಚದ ಚಿನ್ನದ ಭಗವದ್ಗೀತೆಯನ್ನು ಅವರು ಕೃಷ್ಣನಿಗೆ ಸಮರ್ಪಿಸಿದ್ದಾರೆ. ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಎಸ್.ಲಕ್ಷ್ಮಿ ನಾರಾಯಣನ್ ಎಂಬವರು ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ವಿಶಿಷ್ಟ ಭಗವದ್ಗೀತೆಯಲ್ಲಿ ಎಲ್ಲ 18 ಅಧ್ಯಾಯಗಳು ಮತ್ತು 700 ಶ್ಲೋಕಗಳಿವೆ. ಕೃಷ್ಣದೇವರಿಗೆ ಸಮರ್ಪಣೆಯ ವೇಳೆ ರಥ ಬೀದಿಯಲ್ಲಿ ಚಿನ್ನದ ಭಗವದ್ಗೀತೆಯ ಮೆರವಣಿಗೆ ನಡೆಯಿತು. ಚಿನ್ನದ ಪಾರ್ಥ ಸಾರಥಿ ರಥದಲ್ಲಿ ಮೆರವಣಿಗೆ ನಡೆಸಲಾಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಪರ್ಯಾಯ ಪುತ್ತಿಗೆ ಶ್ರೀಗಳು ಮಾತನಾಡಿ, “ಭಗವದ್ಗೀತೆ ಎಲ್ಲರ ಹೃದಯದಲ್ಲಿ ಅವ್ಯಕ್ತವಾಗಿದೆ. ಅದನ್ನು ವ್ಯಕ್ತಗೊಳಿಸುವುದು ನಮ್ಮ ಕರ್ತವ್ಯ. ನಮ್ಮಲ್ಲಿ ಸುಪ್ತವಾದ…

Read More

Updated By: Priyalachhi  ಬೆಂಗಳೂರು: ಬಜೆಟ್‌ವರೆಗೆ ಏನೂ‌ ಆಗುವುದಿಲ್ಲ. ಅಲ್ಲಿವರೆಗೆ ಏನೂ ಮಾತನಾಡೋಕೆ‌ ಹೋಗಬೇಡಿ. ಮಾರ್ಚ್ 31ರ ವರೆಗೆ ಕಲ್ಪನೆಗಳು ಬೇಡ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.‌ ಬೆಂಗಳೂರಲ್ಲಿಂದು ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.‌ ಬಜೆಟ್‌ವರೆಗೆ ಏನೂ‌ ಆಗದು. ಅಲ್ಲಿಯವರೆಗೆ ಏನೂ ಮಾತನಾಡೋಕೆ‌ ಹೋಗಬೇಡಿ. ಮಾರ್ಚ್ 31ರ ವರೆಗೆ ಕಲ್ಪನೆ ಬೇಡ. ಸಿದ್ದರಾಮಯ್ಯನವರು ಈಗಲೂ ಇರಬೇಕು, 2028ಕ್ಕೂ ಇರಬೇಕು ಅಂತ ಹೇಳಿದ್ದೇನೆ. ಅದರ ಬಗ್ಗೆ ಯಾಕೆ ನೀವು ಹೇಳಲ್ಲ ಎಂದರು. ಸಿಎಂ ವೈರಾಗ್ಯದ ಮಾತು ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆಶಿ ವೈರಾಗ್ಯದ ಮಾತು ಹೇಳಿಲ್ವಾ?. ಕಾರ್ಯಕರ್ತನಾಗಿ ಇರ್ತೇನೆ ಅಂತ ಹೇಳಿಲ್ವಾ?. ಕಾರ್ಯಕರ್ತ ಪರ್ಮನೆಂಟ್. ರಾಜಕಾರಣ ನಿಂತ ನೀರಲ್ಲ. ಚಲನಶೀಲತೆಯೇ ರಾಜಕಾರಣ. ಇವರಲ್ಲಿ ಯಾರ್ಯಾರು ಏನೇನಾಗ್ತಾರೆ ಗೊತ್ತಿಲ್ಲ. ಈಗಲೇ ಎಲ್ಲವನ್ನೂ ಊಹೆ ಮಾಡೋಕೆ ಆಗಲ್ಲ. ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ಹೈಕಮಾಂಡ್ ಪರಿಗಣಿಸಬಹುದು ಎಂದು ತಿಳಿಸಿದರು. ಸತೀಶ್ ಜಾರಕಿಹೊಳಿ ಭೇಟಿ ವಿಚಾರಕ್ಕೆ, ರಾಜನಹಳ್ಳಿ ವಾಲ್ಮೀಕಿ ಜಾತ್ರೆ ಇದೆ. ಬಸನಗೌಡ ದದ್ದಲ್ ಅದಕ್ಕೆ ಅಧ್ಯಕ್ಷರು.…

Read More

Updated By: Priyalachhi  ಬೆಂಗಳೂರು: ಪ್ರಲ್ಹಾದ್​ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಜಾಹೀರಾತು ನೀಡಿರುವುದು ತಪ್ಪು ಎಂಬ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರ ಹೇಳಿಕೆ ಪ್ರತಿಕ್ರಿಯಿಸುತ್ತಾ, ಪ್ರಲ್ಹಾದ್​ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸವೇ ಗೊತ್ತಿಲ್ಲ. ಇದು ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಆರಂಭವಾದ ಪತ್ರಿಕೆ. ಇದು ದೇಶದ ಇತಿಹಾಸದ ಭಾಗವಾಗಿದೆ. ಜೋಶಿ ಅವರಾಗಲಿ, ಅವರ ಪಕ್ಷವಾಗಲಿ ಯಾವುದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿಲ್ಲ. ಅವರು, ಅವರ ಪಕ್ಷದವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಹೀಗಾಗಿ ಅವರಿಗೆ ಅರಿವಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು. ಜಿ ರಾಮ್ ಜಿ ವಿರುದ್ಧ ಕಾನೂನು ಹೋರಾಟ: ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ…

Read More