Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ರಾಜ್ಯದ ಸರ್ಕಾರಿ ಶಾಲೆಗಳಿಗೆ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು 60,000ಕ್ಕೂ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿಯಿದೆ. 2026-27ನೇ ಸಾಲಿನಲ್ಲಿ 40,000 ಪ್ರಾಥಮಿಕ & 11,000 ಪ್ರೌಢ ಶಾಲಾ ಶಿಕ್ಷಕರು ಸೇರಿ 51,000ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮೋದನೆ ಸಿಕ್ಕಿದೆ. ಮೊದಲ ಹಂತದಲ್ಲಿ ಪ್ರಾಥಮಿಕ ಶಾಲೆಗಳಿಗೆ 30,337 & ಪ್ರೌಢ ಶಾಲೆಗಳಿಗೆ 9,730 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಲಾಗಿದೆ. ಆಯ್ಕೆಯಾದವರಿಗೆ ಮಾಸಿಕ ₹12,000 ಗೌರವಧನ ಸಿಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಕೇಳಿದ ಕೂಡಲೇ ಚಲುವರಾಯ ನಾಯಕ ಎಂಬ ಅಭಿಮಾನಿಯೊಬ್ಬರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. “ಸಿದ್ದರಾಮಯ್ಯ ಸಾಹೇಬರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನಮ್ಮ ಆಗ್ರಹ. ಅವರಿಗೆ ಐದು ವರ್ಷಗಳ ಪೂರ್ಣಾವಧಿ ನೀಡಬೇಕು. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿಯವರು ಈ ವಿಚಾರದಲ್ಲಿ ತೆಗೆದುಕೊಂಡಿರುವ ನಿರ್ಧಾರ ನೂರಕ್ಕೆ ನೂರು ತಪ್ಪು,” ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ‘ಅನ್ನರಾಮಯ್ಯ’, ‘ದಲಿತ ರಾಮಯ್ಯ’, ‘ಅಹಿಂದ ನಾಯಕ’ ಹಾಗೂ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ ಅಭಿಮಾನಿಗಳು, “ಅವರ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ಬಡವರ ಪಾಲಿನ ಧೀಮಂತ ನಾಯಕರಾಗಿರುವ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿಯೇ ರಾಜಕೀಯದಿಂದ ನಿರ್ಗಮಿಸಬೇಕು,” ಎಂದು ಒತ್ತಾಯಿಸಿದ್ದಾರೆ. ವರುಣಾ ಕ್ಷೇತ್ರದ ಅಭಿಮಾನಿಗಳಾದ ಅಭಿಷೇಕ್ ಮತ್ತು ಮಹದೇವ್ ಅವರು ಮಾತನಾಡಿ,…
ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಹಾಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುವ ಸಾಧ್ಯತೆಗಳು ದಟ್ಟವಾಗಿವೆ. ಅಧಿಕಾರ ಹಂಚಿಕೆ ಸೂತ್ರದನ್ವಯ ಹೈಕಮಾಂಡ್ ಜೊತೆಗಿನ ಸಾಲು ಸಾಲು ಸಭೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆಗೆ ಒಲವು ತೋರಿದ್ದಾರೆ ಎಂಬ ಸುಳಿವು ಲಭ್ಯವಾಗಿದೆ. ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಮಧ್ಯ ಕರ್ನಾಟಕದಾದ್ಯಂತ ರಾಜಕೀಯ ವಲಯದಲ್ಲಿ ಈ ಹಠಾತ್ ಬೆಳವಣಿಗೆ ತೀವ್ರ ಸಂಚಲನ ಮೂಡಿಸಿದೆ. ರಾಹುಲ್ ಗಾಂಧಿಯಿಂದ ಹೊಸ ಆಫರ್: ಎಐಸಿಸಿ ಕಚೇರಿಯಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಸುದೀರ್ಘ ಚರ್ಚೆಗಳು ನಡೆದಿವೆ. ಈ ವೇಳೆ ರಾಹುಲ್ ಗಾಂಧಿ ಅವರು ಅಧಿಕಾರ ಹಂಚಿಕೆ ವಿಚಾರವನ್ನು ಖುದ್ದು ಪ್ರಸ್ತಾಪಿಸಿದ್ದು, ಸಿದ್ದರಾಮಯ್ಯನವರಿಗೆ ರಾಜ್ಯಸಭೆ ಸದಸ್ಯತ್ವದ ಜೊತೆಗೆ ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನದ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರ ಪುತ್ರ ಯತೀಂದ್ರ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಹಾಗೂ ಆಪ್ತ ಬಣದ ಶಾಸಕರಿಗೆ ಪ್ರಮುಖ ಖಾತೆಗಳ ಭರವಸೆಯನ್ನೂ ಹೈಕಮಾಂಡ್ ಮುಂದಿಟ್ಟಿದೆ ಎಂಬ ಮಾಹಿತಿಯಿದೆ. ಆಪ್ತರೊಂದಿಗೆ ದೆಹಲಿಯಲ್ಲಿ ಗೌಪ್ಯ ಸಭೆ ಹೈಕಮಾಂಡ್ ಜೊತೆಗಿನ…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸತತ ನಾಲ್ಕು ಬಾರಿ ಏರಿಕೆ ಮಾಡಲಾಗಿದ್ದರೂ, ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMCs) ಪ್ರತಿದಿನ ಸುಮಾರು 600 ಕೋಟಿ ರೂ.ಗಳ ಭಾರಿ ನಷ್ಟವನ್ನು ಎದುರಿಸುತ್ತಿವೆ. ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಒಟ್ಟು 4 ಬಾರಿ ಪರಿಷ್ಕರಣೆ ಮಾಡಲಾಗಿದ್ದು, ಲೀಟರ್‌ಗೆ ಒಟ್ಟಾರೆ 7.50 ರೂ.ಗಳಷ್ಟು ಹೆಚ್ಚಳವಾಗಿದೆ. ಈ ದರ ಏರಿಕೆಯ ಪರಿಣಾಮವಾಗಿ, ತೈಲ ಕಂಪನಿಗಳಿಗೆ ಆಗುತ್ತಿದ್ದ ದೈನಂದಿನ ನಷ್ಟವು 1,000 ಕೋಟಿ ರೂ.ಗಳಿಂದ 600 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ. ಆದರೆ ನಷ್ಟ ಮಾತ್ರ ಸಂಪೂರ್ಣವಾಗಿ ನಿಂತಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಮಾಹಿತಿ ನೀಡಿದ್ದಾರೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ, ಅದರಲ್ಲೂ ಮುಖ್ಯವಾಗಿ ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇ. 50ರಷ್ಟು ದಿಢೀರ್ ಏರಿಕೆಯಾಗಿದೆ. ಕಚ್ಚಾ ತೈಲದ ಆಮದು ವೆಚ್ಚ ಹೆಚ್ಚಾಗಿರುವ ಕಾರಣ ಹಾಗೂ ಡಾಲರ್ ಎದುರು…
ಬೆಂಗಳೂರು: ಕನಿಷ್ಠ 8 ವರ್ಷಗಳ ನಿಯಮಿತ ಸೇವೆ ಸಲ್ಲಿಸಿದ ಕೆಎಎಸ್ ಅಧಿಕಾರಿಗಳಿಗೆ ಐಎಎಸ್ ವೃಂದಕ್ಕೆ ಮುಂಬಡ್ತಿ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಲ್ಲಿ ಭಾರೀ ಬಿಕ್ಕಟ್ಟು ಸೃಷ್ಟಿಯಾಗಿದೆ. ಏಳು ಮಂದಿ ಅನರ್ಹ ಅಧಿಕಾರಿಗಳು ಇನ್ನೂ ಐಎಎಸ್ ವೃಂದದಲ್ಲಿ ಮುಂದುವರಿದಿರುವುದನ್ನು ವಿರೋಧಿಸಿ 2008 ಹಾಗೂ 2010ನೇ ಬ್ಯಾಚ್‌ನ 25 ಕೆಎಎಸ್ ಅಧಿಕಾರಿಗಳು ಬಂಡೆದ್ದಿದ್ದಾರೆ. ಈ ಗೊಂದಲದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಕೆಎಎಸ್ ವೃಂದದ ನಾಲ್ವರು ಅಧಿಕಾರಿಗಳಿಗೆ ಐಎಎಸ್ ಮುಂಬಡ್ತಿ ನೀಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಪಟ್ಟಿ ಸಿದ್ಧಪಡಿಸಿತ್ತು. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಜಾತಿ ಅಧಿಕಾರಿಯೊಬ್ಬರಿಗೆ ವಿಶೇಷ ಮನ್ನಣೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರ ಸಚಿವ ಸಂಪುಟದ ಮುಂದೆಯೂ ಚರ್ಚೆಗೆ ಬಂದಿದ್ದು, ವಿವಾದದ ಸ್ವರೂಪ ಅರಿತ ಸಂಪುಟವು ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯಲು ಸೂಚಿಸಿ, ನಿರ್ಣಯದಿಂದ ಹಿಂದೇಟು ಹಾಕಿದೆ. ಈ ಬೆಳವಣಿಗೆಗಳ ನಡುವೆಯೇ, ಉಪಮುಖ್ಯಮಂತ್ರಿ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮೈಸೂರು: ಸಾಲ ಕೇಳಲು ಬಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ ಸಂಬಂಧ ನನ್ನ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿರುವುದರ ಹಿಂದೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಕೋಟೆ ಹುಂಡಿ ಮಹಾದೇವ ಎಂಬ ವ್ಯಕ್ತಿ 55 ಲಕ್ಷ ಹಣ ಸಾಲ ನೀಡಿದ್ದು, ಅದನ್ನು ಕೇಳಲು ಹೋದಾಗ ಹೆಚ್.ವಿಶ್ವನಾಥ್ ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಆ ವ್ಯಕ್ತಿ ನನ್ನ ವಿರುದ್ಧ ದೇವರಾಜ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಪೋಲಿಸರು ನನಗೆ ನೊಟೀಸ್ ಕೊಟ್ಟಿದ್ದರು. ಅದಕ್ಕೆ ಉತ್ತರ ನೀಡಿದ್ದೇನೆ. ಅನಂತರವೂ ನನ್ನ ವಿರುದ್ಧ ಎಫ್‌ಐಆರ್ ದಾಖಲು ಮಾಡಿ ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದರು. ಈ ಬಗ್ಗೆ ಹೈಕೋರ್ಟ್ಗೆ ಹೋಗುತ್ತೇನೆ. ನಾನು 50 ವರ್ಷ ರಾಜಕಾರಣದಲ್ಲಿ ಸಾಲ ಮಾಡಿಲ್ಲ. ಕೋಟೆ ಹುಂಡಿ ಮಹಾದೇವನಿಗೆ ಎಲ್ಲಿಂದ ಹಣ ಬಂತು,…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಸಿಂಧನೂರು: ಪಕ್ಷದ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಸಹಮತ ವ್ಯಕ್ತಪಡಿಸಿದ್ದು , ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಂದೆಯವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮೂರು ವರ್ಷ ಆಡಳಿತ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮಧ್ಯೆ 6 ವಿಧಾನಸಭಾ ಉಪಚುನಾವಣೆ ನಡೆದಿದ್ದು , ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರಕ್ಕೆ ಜನರ ಸಂಪೂರ್ಣ ಬೆಂಬಲವಿದೆ ಎಂಬುದು ಸಾಬೀತಾಗಿದೆ ಎಂದರು. ಎಸ್ಐಆರ್ ಜಾರಿಯಿಂದ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಆದಂತೆ ಕರ್ನಾಟಕದಲ್ಲಿ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಯಾವುದೇ ಕಾರಣಕ್ಕೂ ಸಾಮಾನ್ಯ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ ವಿರೋಧವಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಕೇಂದ್ರದ ಆಡಳಿತರೂಢ ಬಿಜೆಪಿಯನ್ನೇ ಹಿಂದಿಕ್ಕಿದೆ. ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಇತ್ತ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕರು ಐ ಆಮ್ ಕಾಕ್ರೋಚ್ ಎಂಬ ಟೀ ಶರ್ಟ್ ಅನ್ನು ಬಿಡುಗಡೆ ಮಾಡಿದರು. ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಾಂಪ್ರಮೈಸ್, ಐ ಆಮ್ ಕಾಕ್ರೋಚ್ ಎಂಬ ಟೀ ಶರ್ಟ್ ಬಿಡುಗಡೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಈ ಕ್ರಮ ರೈತರಿಗೆ ದ್ರೋಹವಾಗಿದ್ದು, ಸರ್ಕಾರ ರೈತರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಪ್ರದೇಶವು ತೆಂಗು, ಮಾವು, ರೇಷ್ಮೆ ಹಾಗೂ ಹಾಲು ಉತ್ಪಾದನೆಗೆ ಹೆಸರುವಾಸಿಯಾದ ಫಲವತ್ತಾದ ಕೃಷಿಭೂಮಿಯಾಗಿದೆ. ಇಂತಹ ಜಮೀನನ್ನು ಸರ್ಕಾರ ಕಬಳಿಸಲು ಯತ್ನಿಸುತ್ತಿದೆ ಎಂದು ದೂರಿದರು. “ಡಿಸಿಎಂ ಡಿ.ಕೆ. ಶಿವಕುಮಾರ್ ನಡೆಸಿದ ಸಭೆಗಳಲ್ಲಿ ನಕಲಿ ರೈತರನ್ನು ಕರೆಸಿ ಭೂಸ್ವಾಧೀನಕ್ಕೆ ಬೆಂಬಲವಿದೆ ಎಂಬ ಚಿತ್ರಣ ಸೃಷ್ಟಿಸಲಾಗಿದೆ. ಆದರೆ, ನಿಜವಾದ ರೈತರು ತಮ್ಮ ಭೂಮಿಯನ್ನು ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಿದರು. ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಆರಂಭದಿಂದಲೇ ಬೆಂಬಲ ನೀಡಿದ್ದು, ಮುಂದೆಯೂ ಅವರ ಪರ ನಿಲ್ಲಲಿದೆ ಎಂದು ತಿಳಿಸಿದರು. ಬೆಂಗಳೂರಿನ ಸುತ್ತಮುತ್ತ ಈಗಾಗಲೇ ಸಾಕಷ್ಟು ಖಾಲಿ ಜಾಗಗಳಿವೆ. ಕೆಂಪೇಗೌಡ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಚಿಕ್ಕಮಗಳೂರು, ಮೇ 21: ಶಾಸಕಿ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕಿತ್ತಾಡಿಕೊಂಡಿರುವ ಘಟನೆ ನಿಪ್ಪಾಣಿಯಲ್ಲಿ ನಡೆದ ಬೆನ್ನಲ್ಲೇ ಇತ್ತ ಚಿಕ್ಕಮಗಳೂರಲ್ಲೂ ಅದೇ ಮಾದರಿಯ ಪ್ರಸಂಗ ನಡೆದಿದೆ. ಚಿಕ್ಕಮಗಳೂರು ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೈಡ್ರಾಮಾವೇ ನಡೆದಿದೆ. ಮುಖ್ಯಾಂಶಗಳು ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್ ಘೋಷಣೆ ಚಿಕ್ಕಮಗಳೂರಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ ಎಂಎಲ್‌ಸಿ ಎದುರೇ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು ರಾಂಪುರದಿಂದ ಶಕ್ತಿ ನಗರದವರೆಗೂ ಕಾಮಗಾರಿಗಳ ವೀಕ್ಷಣೆ ಮಾಡಿ ಸಿ.ಟಿ. ರವಿ ವಾಪಸ್ ಬರುತ್ತಿದ್ದ ವೇಳೆ ರಾಂಪುರ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಎದುರಾಗಿದ್ದು, ಎರಡೂ ಕಡೆಯಿಂದ ಘೋಷಣೆಗಳು ಮೊಳಗಿವೆ. ಇದು ವಿಕೋಪಕ್ಕೆ ಹೋಗಿ ಸಿ.ಟಿ. ರವಿ ಸಮ್ಮುಖದಲ್ಲಿಯೇ ಕಾರ್ಯಕರ್ತರು…
Subscribe to Updates
Get the latest creative news from FooBar about art, design and business.