Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ ಮುರಿದ ವಿಚಾರಕ್ಕೆ ಇಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಸರಿಯಲ್ಲ.ದೇವರಾಜ ಅರಸು ಆಡಳಿತ ವೈಖರಿ ಬೇರೆ, ಸಿದ್ದರಾಮಯ್ಯ ಆಡಳಿತ ವೈಖರಿ ಬೇರೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈ ಸಮಯದಲ್ಲಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದನ್ನು ಜನರು ಮೆಚ್ಚುವುದಿಲ್ಲ ಎಂದರು. ಸಿಎಂ ಕುರ್ಚಿಗಾಗಿ ಆಂತರಿಕ ಕಚ್ಚಾಟ ಕಾಂಗ್ರೆಸ್ ನಲ್ಲಿ ಮುಂದುವರಿಯುತ್ತಲೇ ಇದೆ, ಸರ್ಕಾರದಲ್ಲಿ ಆಡಳಿತ ವೈಖರಿ ಸರಿಯಾಗಿಲ್ಲ, ಸಿದ್ದರಾಮಯ್ಯನವರದ್ದು ಸಾಧನೆ, ದಾಖಲೆ ಎಂದು ಹೇಳಲು ಏನೂ ಇಲ್ಲ ಎಂದರು.
Updated By: Priyalachhi ಬೆಂಗಳೂರು: ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ರಾಜ್ಯ ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಪಕ್ಷದ ಹೈಕಮಾಂಡ್ ನಿರ್ದೇಶನ ಪ್ರಕಾರ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ರಾಜ್ಯ ನಾಯಕರ ಜತೆ ಚರ್ಚೆ ನಡೆಸುವೆ ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ಮುಂದಿನ ರಾಜಕೀಯ ಭವಿಷ್ಯ ಕುರಿತು ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಮುಂದಿನ ಚುನಾವಣೆಯ ವಿಚಾರದಲ್ಲಿ ಹೈಕಮಾಂಡ್ ಹಾಗೂ ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಬದ್ಧಳಾಗಿರುತ್ತೇನೆ. ನಾನೂ ಸಹ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಜತೆ ಚರ್ಚೆ ನಡೆಸುವ ಉದ್ದೇಶವಿದೆ ಎಂದರು. ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಕುರಿತು ವಿರೋಧವಿಲ್ಲ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಕುರಿತು ಯಾವುದೇ ವಿರೋಧವಿಲ್ಲ. ಸಮಯ, ಸಂದರ್ಭ ಎಲ್ಲವೂ ಕೂಡಿಬಂದಾಗ ಎಲ್ಲವೂ ಸಾಧ್ಯ. ಜಿಲ್ಲೆಯ ಮಟ್ಟದಲ್ಲಿ ಪಕ್ಷದಿಂದ ನಡೆಯುವ ಹೋರಾಟಗಳು, ಸಭೆಗಳು ಮತ್ತು…
Updated By: Priyalachhi ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯ ಭಾಗವಾಗಿ, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಬುಧವಾರ ಭಾರತೀಯ ಚುನಾವಣಾ ಆಯೋಗ(ECI) ನೋಟಿಸ್ ಜಾರಿ ಮಾಡಿದೆ. ಅನಿವಾಸಿ ಭಾರತೀಯ(NRI) ಸೇನ್ ಅವರಿಗೆ ಜನವರಿ 16 ರಂದು ಅವರ ನಿವಾಸದಲ್ಲಿಯೇ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಬೂತ್ ಮಟ್ಟದ ಅಧಿಕಾರಿ(BLO) ಇಂದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದ ಬೋಲ್ಪುರದಲ್ಲಿರುವ ಸೇನ್ ಅವರ ‘ಪ್ರತಿಚಿ’ ನಿವಾಸದಲ್ಲಿ ಅವರ ಸಂಬಂಧಿಕರಿಗೆ ನೋಟಿಸ್ ತಲುಪಿಸಿದ್ದಾರೆ. ಬಿಎಲ್ಒ ಸೋಂಬ್ರತ ಮುಖರ್ಜಿ ಅವರು, ಜನವರಿ 16 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಮರ್ತ್ಯ ಸೇನ್ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಚುನಾವಣಾ ಫಾರ್ಮ್ಗೆ ಸಂಬಂಧಿಸಿದ ‘ವ್ಯತ್ಯಾಸ’ಗಳನ್ನು’ ಪರಿಶೀಲಿಸಲಿದ್ದಾರೆ.
Updated By: Priyalachhi ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಪ್ರಕರಣಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಅವರು, “ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19 ಸಾವಿರ ಪ್ರಕರಣಗಳು ಬಾಕಿಯಿವೆ. ಈ ಪೈಕಿ ಸುಮಾರು 13 ಸಾವಿರ ಪ್ರಕರಣಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲೇ ಬಾಕಿ ಇವೆ” ಎಂದು ಬೇಸರ ವ್ಯಕ್ತಪಡಿಸಿದರು. “ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು ಸಂಖ್ಯೆಯಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿಯಿದ್ದರೆ ರಾಜ್ಯದ ಇತರ ಭಾಗಗಳ ಅಧಿಕಾರಿಗಳೊಂದಿಗೆ ಏನೆಂದು ಸಭೆ ನಡೆಸಲಿ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೇವಲ 6 ಸಾವಿರ ಪ್ರಕರಣಗಳು ಮಾತ್ರ ಬಾಕಿ ಇದ್ದು,…
Updated By: Priyalachhi ಮುಂಬೈ: ರಾಜಕೀಯದಲ್ಲಿ ಯಾರು ಶಾಶ್ವತವಾಗಿ ಶತ್ರುಗಳಲ್ಲ ಯಾರು ಶಾಶ್ವತವಾಗಿ ಮಿತ್ರರಲ್ಲ ಎಂಬ ಮಾತು ಅಕ್ಷರಶಃ ನಿಜವಾಗಿದ್ದು, ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ನಾಥ್ ಪುರಸಭೆಯಲ್ಲಿ ಬದ್ಧವೈರಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿವೆ. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಬುಧವಾರ ತನ್ನ 12 ಹೊಸ ಕೌನ್ಸಿಲರ್ಗಳನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಈ ಮೈತ್ರಿ “ಸಂಪೂರ್ಣವಾಗಿ ತಪ್ಪು ಕ್ರಮ” ಎಂದು ಕರೆದ ಮಹಾರಾಷ್ಟ್ರ ಕಾಂಗ್ರೆಸ್, ಅಂಬರ್ನಾಥ್ ಬ್ಲಾಕ್ ಸಮಿತಿಯನ್ನು ವಿಸರ್ಜಿಸಿ ಅದರ ಅಧ್ಯಕ್ಷ ಮತ್ತು ಪಕ್ಷದ ಹಿರಿಯ ನಾಯಕ ಪ್ರದೀಪ್ ಪಾಟೀಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು, ಈ ಸಂಬಂಧ ಪ್ರದೀಪ್ ಅವರಿಗೆ ಪತ್ರ ಬರೆದಿದ್ದು, “ಇದು ಸಂಪೂರ್ಣವಾಗಿ ತಪ್ಪು ಕ್ರಮ ಮತ್ತು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ. ಈ ವಿಷಯವನ್ನು ಪರಿಗಣಿಸಿ, ಗೌರವಾನ್ವಿತ ರಾಜ್ಯ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಅವರ ಆದೇಶದ ಮೇರೆಗೆ, ನಿಮ್ಮನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಇದಲ್ಲದೆ, ನಿಮ್ಮ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ…
Updated By: Priyalachhi ಹಾವೇರಿ: ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ದಾಖಲೆ ಮುರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂದು ಹಾವೇರಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡ, ನೆಲೋಗಲ್ಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕೀಟ್ ಹೌಸ್ ಕಟ್ಟಡದ ಶಿಲಾನ್ಯಾಸ ನೆರವೇರಿಸಿ, ಬಳಿಕ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉದ್ಘಾಟನೆ ಜೊತೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ಇನ್ನೂ ಎಷ್ಟು ದಿನ ಸಕ್ರಿಯವಾಗಿರುತ್ತೇನೆಂದು ಗೊತ್ತಿಲ್ಲ ಎಂದಿದ್ದಾರೆ.
Updated By: Priyalachhi ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಾದರೂ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಸುಧಾರಣೆಗಳು, ಸಾರ್ವಜನಿಕ ಅಹವಾಲು ನಿರ್ವಹಣೆ ಕುರಿತು ಬಿಡಿಎ ನೌಕರರಿಗೆ ತರಬೇತಿ ಕಾರ್ಯಾಗಾರವನ್ನು ಡಿಕೆಶಿ ಮಂಗಳವಾರ ಉದ್ಘಾಟಿಸಿ ಮಾತನಾಡಿದರು. “ನಮಗೆ ಏನು ತರಬೇತಿ ನೀಡಿದ್ದಾರೆ ಎಂದು ನಿಮಗೆ ಅಚ್ಚರಿಯಾಗಬಹುದು. ನಾವು ಎಷ್ಟೇ ಬುದ್ಧಿವಂತರಾದರೂ ಜ್ಞಾನ, ಅನುಭವದ ಮೂಲಕ ಸಾಯುವವರೆಗೂ ಕಲಿಯುವ ಅಗತ್ಯವಿರುತ್ತದೆ. ಹೊಸ ತಲೆಮಾರು, ಹೊಸ ವ್ಯವಸ್ಥೆ ಬರುತ್ತದೆ. ನಾವು ಅಂಕಿಗಳನ್ನು ಗುಣಿತ ಮಾಡುತ್ತಿದ್ದೆವು, ನಂತರ ಕ್ಯಾಲ್ಕುಲೇಟರ್ ಬಂತು. ನಂತರ ಕಂಪ್ಯೂಟರ್, ಈಗ ಕೃತಕ ಬುದ್ಧಿಮತ್ತೆಯ ಕಾಲ ಬಂದಿದೆ. ಈಗ ಭೂ ಮಾಪನವನ್ನು ಟೇಪ್ ಹಿಡಿದು ಮಾಡುವ ಅಗತ್ಯವಿಲ್ಲ, ಡ್ರೋನ್ ಮೂಲಕವೇ ಅಳತೆ ಮಾಡಬಹುದಾಗಿದೆ” ಎಂದು ತಿಳಿಸಿದರು. “ನಾನು ನನ್ನದೇ ಆದ ರೀತಿಯ ಇಂಟಿಲಿಜೆನ್ಸ್ ಮೂಲಕ ನಿಮ್ಮಲ್ಲಿ ನಡೆಯುತ್ತಿರುವ ಸಂತೆ, ದಂಧೆ,…
Updated By: Priyalachhi ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯಲ್ಲಿ ಸಾವಿಗೀಡಾದ ಕಾರ್ಯಕರ್ತನಿಗೆ 25ಲಕ್ಷ ರೂ ನಗದು ಪರಿಹಾರ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹೊಸ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಾಗಿದೆ. ಹೌದು.. ರಾಜ್ಯದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದ್ದು, ಹಿಂದೂ ಸಂಘಟನೆಗಳ ಮುಖಂಡ ತೇಜಸ್ ಗೌಡ ಆದಾಯ ತೆರಿಗೆ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಜನವರಿ 1 ರಂದು ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಹತ್ಯೆಯಾದ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರದ ಹಣವನ್ನು ವಿತರಿಸಿದ್ದರು. 25 ಲಕ್ಷ ರೂಪಾಯಿ ಹಣವನ್ನು ಬಟ್ಟೆ ಬ್ಯಾಗ್ ನಲ್ಲಿ ಮುಚ್ಚಿ ರಾಜಶೇಖರ್ ರೆಡ್ಡಿ ಅವರ ತಾಯಿಗೆ ನೀಡಿದ್ದರು. ಇದೀಗ ಇದೇ ಹಣ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸಂಕಷ್ಟ ತಂದೊಡ್ಡಿದೆ. ಮೂಲಗಳ…
Updated By: Priyalachhi ಇಂದಿನ ಪಂಚಾಂಗ: ದಿನಾಂಕ – 07-01-2026 ವಾರ – ಬುಧವಾರ ಸಂವತ್ಸರ – ವಿಶ್ವವಸು ಆಯನ – ಉತ್ತರಾಯಣ ತಿಥಿ – ಕೃಷ್ಣ ಚತುರ್ಥಿ ಮಾಸ – ಧನು ನಕ್ಷತ್ರ – ಮಘಾ ಸೂರ್ಯೋದಯ – ಮುಂಜಾನೆ 6:43ಕ್ಕೆ ಅಮೃತ ಕಾಲ – ಮಧ್ಯಾಹ್ನ 1:49 ರಿಂದ 3:14 ರವರೆಗೆ ದುರ್ಮೂಹೂರ್ತ – ಮಧ್ಯಾಹ್ನ 12:19 ರಿಂದ 1:07 ರಾಹುಕಾಲ – ಮಧ್ಯಾಹ್ನ 12:24 ರಿಂದ 1:49ರವರೆಗೆ ಸೂರ್ಯಾಸ್ತ – ಸಂಜೆ 06:05ಕ್ಕೆ ರಾಶಿ ಭವಿಷ್ಯ ಮೇಷ: ನಿಮ್ಮ ಮಕ್ಕಳು ನಿಮ್ಮ ಆದ್ಯತೆಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುತ್ತಾರೆ. ನೀವು ನಿಮ್ಮ ಕೆಲಸಕ್ಕೆ ಹಾಕುವ ಪ್ರಯತ್ನಗಳ ಪ್ರಮಾಣದಿಂದ ನೀವು ಎಲ್ಲ ಬಾಕಿ ಇರುವ ಕೆಲಸಗಳನ್ನೂ ಖಂಡಿತಾ ಪೂರೈಸುತ್ತೀರಿ. ನೀವು ಸಾರ್ವಜನಿಕ ವಲಯದಲ್ಲಿ ಅಥವಾ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ನಿಮಗೆ ಅದೃಷ್ಟದ ದಿನವಾಗುತ್ತದೆ. ವೃಷಭ: ಇಂದು ನಿಮ್ಮ ಸೃಜನಶೀಲ ಪ್ರವೃತ್ತಿ ನಿಮ್ಮ ಸ್ಪರ್ಧಾತ್ಮಕತೆಯ ಭಾಗಕ್ಕೆ ಪೂರಕವಾಗಿರುತ್ತದೆ. ನಿಮ್ಮ ದಕ್ಷತೆ ಗುರುತಿಸದೇ ಹೋಗುವುದಿಲ್ಲ ಮತ್ತು ನೀವು ನಿಮ್ಮ ಕಾರ್ಯವೈಖರಿಯಿಂದ ಪ್ರತಿಯೊಬ್ಬರನ್ನೂ ಆಶ್ಚರ್ಯಗೊಳಿಸುತ್ತೀರಿ. ನೀವು ಇಂದು ನಿಮ್ಮ ಸಹೋದ್ಯೋಗಿಗಳನ್ನು ಖಂಡಿತಾ ಪ್ರೇರೇಪಣೆ…
Updated By: Priyalachhi ಬೆಳಗಿನ ವಾಕಿಂಗ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಯಮಿತ ವಾಕಿಂಗ್ನಿಂದ ಮಧುಮೇಹ ಹಾಗೂ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ಹಲವು ಅಧ್ಯಯನಗಳು ತಿಳಿಸಿವೆ. ಚಳಿಗಾಲದ ತಂಪಾದ ವಾತಾವರಣದಲ್ಲಿ ನಡೆಯುವುದು ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಬೇಸಿಗೆಯಲ್ಲಿ ಬೆಳಗಿನ ವಾಕಿಂಗ್ ಮಾಡುವ ಅಭ್ಯಾಸವಿರುವವರು ಕಠಿಣ ಚಳಿಗಾಲದಲ್ಲಿ ಬೆಳಗಿನ ವಾಕಿಂಗ್ ಮಾಡುವಾಗ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಶ್ವಾಸಕೋಶಶಾಸ್ತ್ರಜ್ಞ ಡಾ.ವೆಂಕಟೇಶ್ ತಿಳಿಸುತ್ತಾರೆ. ಚಳಿಗಾಲದಲ್ಲಿ ಬೆಳಗಿನ ವಾಕಿಂಗ್ಗೆ ಹೋಗಲು ಯಾವೆಲ್ಲಾ ಮುನ್ನಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು? ಚಳಿಗಾಲದ ತಂಪಾದ ಗಾಳಿಯು 50ವರ್ಷಕ್ಕಿಂತ ಮೇಲ್ಪಟ್ಟ ಜನರ ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಬಹುದು. ಇದರಿಂದ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಸೂರ್ಯೋದಯದ ನಂತರ ಹೊರಗೆ ಹೋಗುವುದು ಉತ್ತಮ. ಹೊರಗೆ ಹೋಗುವ ಮೊದಲು ಮನೆಯಲ್ಲಿ ಕೆಲವು ಉಸಿರಾಟದ ವ್ಯಾಯಾಮಗಳನ್ನು ಮಾಡುವುದು ಸಹ ಒಳ್ಳೆಯದು. ನಡೆಯುವಾಗ ಎದೆ ನೋವು, ಅತಿಯಾದ ಬೆವರುವಿಕೆ, ವಿಶ್ರಾಂತಿಯ ಸಮಯದಲ್ಲಿ ಉಸಿರಾಟದ ತೊಂದರೆ, ಆಯಾಸ ಹಾಗೂ…
Subscribe to Updates
Get the latest creative news from FooBar about art, design and business.