Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಮೈಸೂರು: ಸಿದ್ದರಾಮಯ್ಯ 40 ವರ್ಷದ ರಾಜಕೀಯ ಜೀವನದಲ್ಲಿ ಬೇಕಾದಷ್ಟು ಚಾಲೆಂಜ್ ಎದುರಿಸಿದ್ದಾರೆ. ಅಗ್ನಿ ಪರೀಕ್ಷೆಗಳನ್ನ ನೋಡಿದ್ದಾರೆ. ನಾಯಕತ್ವದ ಪ್ರಶ್ನೆ ಸಂಭಾವ್ಯ ಸಚಿವ ಸಂಪುಟ ಪುನರ್ರಚನೆ ಕುರಿತು ಮುಂದುವರಿದ ಊಹಾಪೋಹಗಳ ನಡುವೆ, ಬುಧವಾರ ಸಿದ್ದರಾಮಯ್ಯ ಅವರು ಕರ್ನಾಟಕದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ. ಬೆಂಗಳೂರಿನಲ್ಲಿ ರಾಜಕೀಯ ವಲಯಗಳು ಅನಿಶ್ಚಿತತೆಯಿಂದ ತುಂಬಿದ್ದರೂ, ಅವರ ತವರು ಮೈಸೂರು ಜಿಲ್ಲೆಯಲ್ಲಿ ಸಂಭ್ರಮಾಚರಣೆಯ ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಾಮಾಜಿಕ ನ್ಯಾಯದ ಹರಿಕಾರರಾಗಿ ಗುರುತಿಸಿಕೊಂಡಿದ್ದ ದೇವರಾಜ ಅರಸು 2,789 ದಿನಗಳು, ಅಂದರೆ 7 ವರ್ಷ 239 ದಿನ (ಎರಡು ಅವಧಿಗೆ) ಮುಖ್ಯಮಂತ್ರಿ ಆಗಿದ್ದರು. ಈ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ. ಅರಸು ಅವರು 1972ರ ಮಾರ್ಚ್ 20ರಿಂದ 1980 ಜನವರಿ 7ರವರೆಗೆ ಸತತ ಏಳೂವರೆ ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ 2013ರಿಂದ 2018ರ ಅವಧಿಯಲ್ಲಿ ಮೊದಲ ಬಾರಿ 1,829 ದಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದರು. 2023ರ ಮೇ 20ರಿಂದ ಎರಡನೇ ಬಾರಿ ಮುಖ್ಯಮಂತ್ರಿ…
Updated By: Priyalachhi ಸ್ಯಾಂಡಲ್ವುಡ್ನ ‘ಪವರ್ ಸ್ಟಾರ್’ ದಿವಂಗತ ಪುನೀತ್ ರಾಜ್ಕುಮಾರ್ ಅಭಿನಯದ ಆಕಾಶ್ ಚಿತ್ರದ ಮತ್ತೆ ಬಿಡುಗಡೆಯಾಗಲಿದೆ. ಮಾರ್ಚ್ 17ರಂದು ಪುನೀತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ಮಾರ್ಚ್ 13ರಂದು ಮರು ಬಿಡುಗಡೆಯಾಗುತ್ತಿದೆ. ನೀನೆ ನೀನೆ ನನಗೆಲ್ಲಾ ನೀನೆ… ಮಾತು ನೀನೆ ಮನಸೆಲ್ಲಾ ನೀನೆ ಎಂದು ಅಡಿಬರಹ ಬರೆದು ‘ಆಕಾಶ್’ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಪುನೀತ್ ಪತ್ನಿ ಅಶ್ವಿನಿ ಅವರು, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಚಿತ್ರದ ಬಿಡುಗಡೆ ಕುರಿತಂತೆ ಮಾಹಿತಿ ನೀಡಿದ್ದಾರೆ.
Updated By: Priyalachhi ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಳವಾರ, ಜನವರಿ 6 ರಂದು ವಿಶಿಷ್ಠ ದಾಖಲೆ ಬರೆಯಲು ಸಿದ್ಧರಾಗಿದ್ದಾರೆ. ಅತಿ ಹೆಚ್ಚು ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಸರಿಗಟ್ಟಲಿದ್ದು, ಈ ಮೂಲಕ 7 ವರ್ಷ 239 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲಿದ್ದಾರೆ. ಸಿದ್ದರಾಮಯ್ಯ ಅವರು 2013-2018ರ ಅವಧಿಯಲ್ಲಿ ಮೊದಲ ಬಾರಿಗೆ ಸಿಎಂ ಆಗಿದ್ದಾಗ 1,829 ದಿನಗಳ ಕಾಲ ಅಧಿಕಾರದಲ್ಲಿದ್ದರು. ಈಗ ಎರಡನೇ ಅವಧಿಗೆ ಆಡಳಿತದ ಸೂತ್ರ ಹಿಡಿದಿರುವ ಅವರು, ಜನವರಿ 6ರಂದು ದೇವರಾಜ ಅರಸರ ದಾಖಲೆಯನ್ನು ಸರಿಗಟ್ಟಲಿದ್ದಾರೆ.
Updated By: Priyalachhi ಬೆಂಗಳೂರು: ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕೃಷ್ಣ ಬೈರೇಗೌಡ ಅವರ ಈ ಹೇಳಿಕೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ನನಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯನವರ ಪರ್ಯಾಯ ವ್ಯವಸ್ಥೆ ಕಷ್ಟಸಾಧ್ಯ. ಹಾಗೆಂದು ಬೇರೆಯವರಿಗೆ ಈ ಸಾಮರ್ಥ್ಯ ಇಲ್ಲ ಎಂದು ನಾನು ಹೇಳುವುದಿಲ್ಲ. ಅವರ ನಾಯಕತ್ವವೇ ಬೇರೆ, ಬೇರೆಯವರ ಸಾಮರ್ಥ್ಯವೇ ಬೇರೆ ಎಂದು ಕಂದಾಯ ಸಚಿವರು ವಿಶ್ಲೇಷಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿರುವ ಡಿಕೆಶಿಯವರು ಪಕ್ಷ ಸಂಘಟನೆಯಲ್ಲಿ ಮುಂದಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ರಾಜಕಾರಣದಲ್ಲಿ ಇಂತಹ ಕಾಂಬಿನೇಷನ್ ತುಂಬಾ ಅಪರೂಪ ಎಂದು ಸಿಎಂ, ಡಿಸಿಎಂ ಬಗ್ಗೆ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Updated By: Priyalachhi ಬೆಂಗಳೂರು: ”ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ. ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಆಡಳಿತ ಮಾಡಿದ ದಾಖಲೆ ಬರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ”ಇದು ಬಹಳ ಸಂತೋಷದ ವಿಷಯ. ನಮಗೆ, ನಿಮಗೆ ಎಲ್ಲರಿಗೂ ಸಂತೋಷದ ವಿಚಾರ. ನೀವು ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ. ನಾನು ಅವರಿಗೆ ತುಂಬು ಹೃದಯದಿಂದ ಶುಭ ಹಾರೈಸುತ್ತೇನೆ. ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಬಯಕೆ ಎಲ್ಲರಿಗೂ ಇರುತ್ತದೆ. ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳು ಇತಿಹಾಸದ ಪುಟಕ್ಕೆ ಹಿಂದೆಯೂ ಸೇರಿದ್ದಾರೆ, ಮುಂದೆಯೂ ಸೇರುತ್ತಾರೆ” ಎಂದರು. ಇದರಿಂದ ನಿಮ್ಮ ಹಾದಿ ಸುಗಮವಾಗುತ್ತದೆಯೇ ಎಂಬ ಪ್ರಶ್ನೆಗೆ, “ಹಳ್ಳಿಯಿಂದ ಬಂದ ನಾನು ಇಲ್ಲಿಯವರೆಗೂ ತಲುಪಿದ್ದೇನೆ. ಇದಕ್ಕಿಂತ ಇನ್ನೇನು ಬೇಕು ನನಗೆ. ಯಾವುದನ್ನೂ ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ನನ್ನ ಬಾಯಲ್ಲಿ ಏನೇನೋ ಮಾತನಾಡಿಸಲು ಪ್ರಯತ್ನಿಸಬೇಡಿ ಎಂದರು. ಶುಭ ದಿನಗಳು ಬರುತ್ತಿವೆ ಎಂಬ…
Updated By: Priyalachhi ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯನ್ನು ‘ಮರೆಮಾಚಲು’ ಕರ್ನಾಟಕ ಸರ್ಕಾರ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸೋಮವಾರ ಗಂಭೀರ ಆರೋಪ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಜೆಡಿ(ಎಸ್) ರಾಜ್ಯ ಕಚೇರಿ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ‘ಈ ವಿಷಯವು ಕೇವಲ ಪಕ್ಷದ ಕಾರ್ಯಕರ್ತನ ಹತ್ಯೆಯಲ್ಲ, ಆದರೆ ಹೊಣೆಗಾರರನ್ನು ರಕ್ಷಿಸಲು ಸರ್ಕಾರ ಮಾಡಿದ ಪ್ರಯತ್ನಗಳಾಗಿವೆ. ಸಂತ್ರಸ್ತನ ದೇಹವನ್ನು ಅಕ್ರಮವಾಗಿ ಎರಡು ಮರಣೋತ್ತರ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಕರ್ನಾಟಕದಲ್ಲಿ “ಕಾನೂನು ಮತ್ತು ಸುವ್ಯವಸ್ಥೆಯ ಕುಸಿತ” ಎಂದು ಅವರು ವಿವರಿಸಿದ್ದನ್ನು ಉಲ್ಲೇಖಿಸಿ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ಅವರು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು ವಿರೋಧಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು “ವಿಫಲರಾಗಿದ್ದಾರೆ”. ನನಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ದೇಹವನ್ನು ಎರಡು ಬಾರಿ…
Updated By: Priyalachhi ಗುವಾಹಟಿ(ಅಸ್ಸಾಂ): ಅಸ್ಸಾಂನ ಮಧ್ಯ ಭಾಗದ ಪ್ರದೇಶಗಳಲ್ಲಿ ಇಂದು (ಸೋಮವಾರ) ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ಮೋರಿಗಾಂವ್ ಜಿಲ್ಲೆಯಲ್ಲಿ ಬೆಳಿಗ್ಗೆ 4.17ಕ್ಕೆ 50 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಭೂಕಂಪದ ಕೇಂದ್ರಬಿಂದು ಮಧ್ಯ ಅಸ್ಸಾಂನಲ್ಲಿ 26.37 ಉತ್ತರ ಅಕ್ಷಾಂಶ ಮತ್ತು 92.29 ಪೂರ್ವ ರೇಖಾಂಶದಲ್ಲಿದೆ ಎಂದು ಕೇಂದ್ರ ತಿಳಿಸಿದೆ. ಮೋರಿಗಾಂವ್ ಜಿಲ್ಲೆಯ ನೆರೆಯ ಕಾಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಕರ್ಬಿ ಆಂಗ್ಲಾಂಗ್, ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್, ಜೋರ್ಹತ್, ಶಿವಸಾಗರ್, ಚರೈಡಿಯೊ, ಕ್ಯಾಚಾರ್, ಕರೀಮ್ಗಂಜ್, ಹೈಲಕಂಡಿ, ಧುಬ್ರಿ, ದಕ್ಷಿಣ ಸಲ್ಮಾರಾ-ಮಂಕಚಾರ್ ಮತ್ತು ಗೋಲ್ಪಾರಾ ಜಿಲ್ಲೆಗಳಲ್ಲಿ ಜನರಿಗೆ ಭೂ ಕಂಪಿಸಿದ ಅನುಭವವಾಗಿದೆ. ದರ್ರಾಂಗ್, ತಮುಲ್ಪುರ್, ಸೋನಿತ್ಪುರ್, ಕಮ್ರೂಪ್, ಬಿಸ್ವನಾಥ್, ಉದಲ್ಗುರಿ, ನಲ್ಬರಿ, ಬಜಾಲಿ, ಬರ್ಪೇಟಾ, ಬಕ್ಸಾ,…
Updated By: Priyalachhi ಶಿವಮೊಗ್ಗ: “ನಾನೂ ಕ್ರಿಕೆಟ್ ಪ್ಲೇಯರ್. ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್ ಮಾಡಬೇಕು. ಗೂಗ್ಲಿ ಹಾಕದೇ ಸಕ್ಸಸ್ ಇಲ್ಲ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿದ ಜಾರಕಿಹೊಳಿ, “ಕ್ರಿಕೆಟ್ ಪಂದ್ಯಾವಳಿಗಾಗಿ ಶಿವಮೊಗ್ಗಕ್ಕೆ ಬಂದಿದ್ದೇನೆ. ಇದು ಖಾಸಗಿ ಕಾರ್ಯಕ್ರಮ” ಎಂದರು. ಮುಂದುವರೆದು ಮಾತನಾಡಿ, “ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್ ಮಾಡಬೇಕು. ಸ್ವಿಂಗ್, ಗೂಗ್ಲಿ ಹಾಕಬೇಕು. ಒಳ್ಳೆಯ ಬ್ಯಾಂಟಿಂಗ್ ಮಾಡದೆ ಹೋದರೆ ಉಳಿಗಾಲವಿಲ್ಲ” ಎಂದರು. ಇದೇ ವೇಳೆ, “ಈಗ ನಾನು ರಾಜಕೀಯದಲ್ಲಿ ಆಟ ಆಡುವವರಿಗೆ ಸಪೋರ್ಟ್ ಮಾಡ್ತಾ ಇದ್ದೇನೆ” ಎಂದು ಹೇಳಿದರು. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿದ್ದಂತೆಯೇ ಕಾರ್ಯಕರ್ತರಿಗೆ ಸಚಿವರು, “ನೀವು ಈ ರೀತಿ ಕೂಗಿದರೆ ಯಾವುದೇ ಪ್ರಯೋಜನವಿಲ್ಲ. ಹೀಗೆ ಕೂಗುವುದನ್ನು ಬಿಟ್ಟರೆ ನೀವೂ ಲೀಡರ್ ಆಗುತ್ತೀರಿ” ಎಂದು ಕಿವಿಮಾತು ಹೇಳಿದರು. ಬಜೆಟ್ ನಂತರ ಸಿಎಂ ಬದಲಾಗುತ್ತಾರೆಯೇ ಎಂಬ ಪ್ರಶ್ನೆಗೆ, “ಅದೆಲ್ಲಾ ದೆಹಲಿ ಹಾಗೂ ಬೆಂಗಳೂರಿನಲ್ಲಿ ಕೇಳಬೇಕು” ಎಂದು ತಿಳಿಸಿದರು.
Updated By: Priyalachhi ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಹಾಗೂ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ 1.50 ಲಕ್ಷ ಕೋಟಿ ರೂಪಾಯಿ ವಿನಿಯೋಗಿಸಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಶ್ರೀ ಮಹಾವೀರ್ ಜೈನ್ ಶಿಕ್ಷಣ್ ಸಂಘದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. ಇದು ಕೇವಲ ಸಿಲಿಕಾನ್ ನಗರ ಮಾತ್ರವಲ್ಲ ಆರೋಗ್ಯ ನಗರ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆದಿರುವ ನಗರವಾಗಿದೆ. ಕಳೆದ 25 ವರ್ಷಗಳಿಂದ ನಗರದ ಜನಸಂಖ್ಯೆ ದುಪ್ಪಟ್ಟಾಗಿದೆ. 1.40 ಕೋಟಿ ಜನಸಂಖ್ಯೆ ಇದ್ದರೆ, ವಾಹನಗಳ ಸಂಖ್ಯೆಯೇ 1.30 ಕೋಟಿಯಿದೆ. ಎಲ್ಲರೂ ಖಾಸಗಿ ವಾಹನಗಳ ಬಳಕೆ ಹೆಚ್ಚಾಗಿದ್ದು ಸಾರ್ವಜನಿಕ ಸಾರಿಗೆ ಬಳಸಲು ಮುಂದಾಗುತ್ತಿಲ್ಲ. ಹೀಗಾಗಿ ಸಂಚಾರ ದಟ್ಟಣೆ ಹೆಚ್ಚಾಗಿದೆ” ಎಂದರು. ಜೈನ ಸಂಸ್ಥೆ ಅತ್ಯುತ್ತಮ ಸೇವೆ ಮಾಡುತ್ತಿದೆ. ಹೀಗಾಗಿ ನಾನು ಕೂಡ ಶಿಕ್ಷಣ ಸಂಸ್ಥೆ ಹೊಂದಿದ್ದರೂ ನನ್ನ ಶಿಕ್ಷಣ ಸಂಸ್ಥೆ ಕಾರ್ಯಕ್ರಮಕ್ಕೆ ಹೋಗದೆ ಈ ಸಂಸ್ಥೆ ಜೊತೆ ಇದ್ದೇನೆ ಎಂದು…
Updated By: Priyalachhi ಬೆಂಗಳೂರು: ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿವರ್ಷ 3-5 ಕೋಟಿ ಸಸಿ ನೆಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ವಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23ನೇ ಚಿತ್ರಸಂತೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು,…
Subscribe to Updates
Get the latest creative news from FooBar about art, design and business.