Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi  ಇಂದಿನ ಪಂಚಾಂಗ ದಿನಾಂಕ : 03-01-2026 ವಾರ : ಶನಿವಾರ ಸಂವತ್ಸರ : ವಿಶ್ವವಸು ಆಯನ : ಉತ್ತರಾಯಣ ಮಾಸ : ಮಾಘ ಪಕ್ಷ : ಶುಕ್ಲ ತಿಥಿ : ಪೂರ್ಣಿಮಾ ನಕ್ಷತ್ರ : ಆದ್ರ ಸೂರ್ಯೋದಯ : ಮುಂಜಾನೆ 6:42 ಗಂಟೆಗೆ ಅಮೃತಕಾಲ : ಬೆಳಗ್ಗೆ 06:42ರಿಂದ 08:07 ಗಂಟೆವರೆಗೆ ದುರ್ಮುಹೂರ್ತ : ಬೆಳಗ್ಗೆ 08:18ರಿಂದ 9:06 ಗಂಟೆವರೆಗೆ ರಾಹುಕಾಲ : ಬೆಳಗ್ಗೆ 09:32ರಿಂದ ಮಧ್ಯಾಹ್ನ 10:57 ಗಂಟೆವರೆಗೆ ಸೂರ್ಯಾಸ್ತ : ಸಂಜೆ 6:02 ಗಂಟೆಗೆ ರಾಶಿ ಭವಿಷ್ಯ ಮೇಷ: ಇಂದು ನೀವು ಸೂಕ್ಷ್ಮ ಕುಸುರಿ ಮತ್ತು ಸೌಂದರ್ಯಕ್ಕೆ ಗಮನ ನೀಡುತ್ತೀರಿ. ನಿಮ್ಮ ಸುತ್ತಲಿನ ಅಂತಹ ಸುಂದರ ವಸ್ತುಗಳ ಕುರಿತಾದ ಹೊಸ ಉದ್ಯಮ ಪ್ರಾರಂಭಿಸಲು ಬಯಸುತ್ತೀರಿ. ಆದರೆ ನಿರ್ಧಾರ ಕೈಗೊಳ್ಳುವುದು ಕಷ್ಟದ ಕೆಲಸ. ಆಯ್ಕೆಗಳನ್ನು ಆವಿಷ್ಕರಿಸಿ ಮತ್ತು ಮುಕ್ತ ಮನಸ್ಸಿನಲ್ಲಿರಿ. ವೃಷಭ: ಇಂದು ನಿಮ್ಮೊಂದಿಗೆ ಕೊಂಚ ಗುಣಮಟ್ಟದ ಸಮಯ ಕಳೆಯಲು ಅತ್ಯಂತ ಸೂಕ್ತವಾದ ದಿನವಾಗಿದೆ. ಹಿಂದೆಂದೂ ಇಲ್ಲದಂತೆ ನಿರಾಳವಾಗಿ ಮತ್ತು ನವೋತ್ಸಾಹ ತುಂಬಿಕೊಳ್ಳಿರಿ. ಈ ದಿನದಲ್ಲಿ ನಿಮ್ಮ ಮಿತ್ರರು ಹಾಗೂ ಕುಟುಂಬದೊಂದಿಗೆ ಭೋಜನಕೂಟ ಹಾಗೂ ಮನರಂಜನೆ ಪಡೆಯುವ ಸಾಧ್ಯತೆ…

Read More

Updated By: Priyalachhi  ಮುಂಬೈ: ಮಹಾರಾಷ್ಟ್ರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ರಾಹುಲ್ ಗಾಂಧಿಯನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿ ರಾಮನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ. ಇಂದು ದೇಶದ ಜನರು ಬಳಲುತ್ತಿದ್ದು ರಾಹುಲ್ ಗಾಂಧಿ ಆ ಕಾಲದಲ್ಲಿ ಭಗವಾನ್ ರಾಮ ಮಾಡಿದ ಅದೇ ಕೆಲಸವನ್ನು ಮಾಡುತ್ತಿದ್ದಾರೆ. ಶೋಷಿತರು ಮತ್ತು ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸುತ್ತಿದ್ದಾರೆ. ನಾನಾ ಪಟೋಲೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನಾನಾ ಪಟೋಲೆ, ರಾಹುಲ್ ಗಾಂಧಿ ರಾಮನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ. ಅಯೋಧ್ಯೆ ದೇವಾಲಯವನ್ನು ಎರಡು ವರ್ಷಗಳಿಂದ ನಿರ್ಮಿಸಲಾಗಿದೆ. ರಾಹುಲ್ ಗಾಂಧಿ ಭೇಟಿ ನೀಡಿಲ್ಲ ಎಂದು ಬಿಜೆಪಿ ಹೇಳಿಕೊಳ್ಳುವಂತೆಯೇ ಇಂದು ದೇಶದ ಜನರು ಹೇಗೆ ಬಳಲುತ್ತಿದ್ದಾರೆ ಮತ್ತು ಶ್ರೀರಾಮನು ತುಳಿತಕ್ಕೊಳಗಾದವರಿಗೆ ಮತ್ತು ದಮನಿತರಿಗೆ ನ್ಯಾಯ ಒದಗಿಸುವಲ್ಲಿ ಪಾತ್ರ ವಹಿಸಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ನಿಖರವಾಗಿ ಹೇಳುತ್ತಿದ್ದಾರೆ. ಅವರು ತಮ್ಮ ಸಿದ್ಧಾಂತದ ಮೇಲೆ ಕೆಲಸ ಮಾಡುತ್ತಿದ್ದಾರೆ. ನಾನು ಹೋಲಿಕೆಗಳನ್ನು ಮಾಡಲು ಬಯಸುವುದಿಲ್ಲ. ದೇವರು…

Read More

Updated By: Priyalachhi  ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಇತ್ಯರ್ಥವಾಗದೆ ಮುಂದುವರೆದಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಈಗಾಗಲೇ 16 ಬಜೆಟ್‌ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ ಬಜೆಟ್‌ ಅನ್ನು ನಾನೇ ಮಂಡಿಸುತ್ತೇನೆ. ಈ ತಿಂಗಳಿನಿಂದ ಬಜೆಟ್ ಗೆ ಸಿದ್ಧತೆ ನಡೆಸುವುದಾಗಿ ಗುರುವಾರ ಹೇಳಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸಮ್ಮೇಳನ ಸಭಾಂಗಣದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು. ಸರ್ಕಾರದ ಅಪರ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಜಿಪಿಸಿಸಿಎಫ್ ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸಿಎಂ ಭೇಟಿಯಾಗಿ ಶುಭಾಶಯ ತಿಳಿಸಿದರು. ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ…

Read More

Updated By: Priyalachhi  ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯೇನು? ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ನಿನ್ನೆ ಬಳ್ಳಾರಿಯಲ್ಲಿ ನಡೆಯಿತು. ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಈ ಘಟನೆ ನಡೆದಿದೆ. ನಾಳೆ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಶಾಸಕಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ…

Read More

Updated By: Priyalachhi  ಬೆಂಗಳೂರು: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು 111 ರೂ. ಹೆಚ್ಚಳ ಮಾಡಿರುವುದು ಸಾಮಾನ್ಯ ಜನರಿಗೆ ನೇರ ಹೊಡೆತವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು 111 ರೂ. ಹೆಚ್ಚಳ ಮಾಡಿರುವುದು ಸಾಮಾನ್ಯ ಜನರಿಗೆ ನೇರ ಹೊಡೆತವಾಗಿದೆ. ಚಹಾ ಅಂಗಡಿಗಳು, ದರ್ಶಿನಿಗಳು, ಸಣ್ಣ ಹೋಟೆಲ್‌ಗಳು, ಬೇಕರಿಗಳು ಮತ್ತು ಬೀದಿ ವ್ಯಾಪಾರಿಗಳು ವಾಣಿಜ್ಯ ಎಲ್‌ಪಿಜಿಯನ್ನು ಅವಲಂಬಿಸಿದ್ದಾರೆ. ಅದರ ಬೆಲೆ ಏರಿದಾಗ, ಆಹಾರವು ದುಬಾರಿಯಾಗುತ್ತದೆ, ಜೀವನೋಪಾಯವು ಬಳಲುತ್ತದೆ ಮತ್ತು ಹಣದುಬ್ಬರವು ಪ್ರತಿ ಮನೆಯನ್ನು ಸದ್ದಿಲ್ಲದೆ ಪ್ರವೇಶಿಸುತ್ತದೆ ಎಂದು ಹೇಳಿದ್ದಾರೆ. ಸೌದಿ ಒಪ್ಪಂದ ಬೆಲೆಗಳ (ಸಿಪಿ) ಏರಿಕೆಯಿಂದಾಗಿ ಎಲ್‌ಪಿಜಿ ಬೆಲೆಗಳು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಈಗ ವಾದಿಸುತ್ತಿದೆ. ಅದು ತರ್ಕವಾಗಿದ್ದರೆ, ಜಾಗತಿಕ ಕಚ್ಚಾ ತೈಲ ಬೆಲೆಗಳು ನಿರಂತರವಾಗಿ ಕುಸಿಯುತ್ತಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏಕೆ ಕಡಿಮೆ ಮಾಡಲಾಗಿಲ್ಲ ಎಂಬ…

Read More

Updated By: Priyalachhi  ಇಂದಿನ ಪಂಚಾಂಗ ದಿನಾಂಕ : 02-01-2026 ವಾರ : ಶುಕ್ರವಾರ ಸಂವತ್ಸರ : ವಿಶ್ವಾವಸು ಆಯನ : ಉತ್ತರಾಯಣ ಮಾಸ : ಪುಷ್ಯ ಪಕ್ಷ : ಶುಕ್ಲ ತಿಥಿ : ಚತುರ್ದಶಿ ನಕ್ಷತ್ರ : ಮೃಗಶಿರ ಸೂರ್ಯೋದಯ : ಮುಂಜಾನೆ 6:44 ಗಂಟೆಗೆ ಅಮೃತಕಾಲ : ಬೆಳಗ್ಗೆ 08:06ರಿಂದ 09:31ಗಂಟೆವರೆಗೆ ದುರ್ಮುಹೂರ್ತ : 9:5ರಿಂದ 9:53ಗಂಟೆವರೆಗೆ ಮತ್ತು 15:29ರಿಂದ 16:17ಗಂಟೆವರೆಗೆ ರಾಹುಕಾಲ : ಮುಂಜಾನೆ 10:56ರಿಂದ ಮಧ್ಯಾಹ್ನ 12:21ಗಂಟೆವರೆಗೆ ಸೂರ್ಯಾಸ್ತ : ಸಂಜೆ 6:02 ಗಂಟೆಗೆ ಶುಕ್ರವಾರದ ರಾಶಿ ಭವಿಷ್ಯ ಮೇಷ : ನಿಮ್ಮ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನೀವು ಸಂಪತ್ತು ಮತ್ತು ಆನಂದ ತಂದುಕೊಡುತ್ತೀರಿ. ಯಾವುದೂ ಉಚಿತವಾಗಿ ದೊರೆಯುವುದಿಲ್ಲ ಮತ್ತು ನೀವು ಸಣ್ಣದಾದ ಅದೃಷ್ಟಕ್ಕಾಗಿ ಹೋಗಬೇಕಾಗುತ್ತದೆ, ಆದರೆ ಅದು ಒಳ್ಳೆಯದೇ. ಈಗಾಗಲೇ ಕಮಿಟ್ ಆಗಿರುವವರು ತಮ್ಮ ಪ್ರೀತಿಪಾತ್ರರೊಂದಿಗೆ ಉತ್ಸಾಹದ ಕ್ಷಣಗಳನ್ನು ಹಂಚಿಕೊಳ್ಳುತ್ತಾರೆ. ಇನ್ನೂ ಕಮಿಟ್ ಆಗದೇ ಇರುವವರು ಯಾರೋ ಒಬ್ಬರ ಪ್ರೀತಿಯಲ್ಲಿ ಬೀಳುತ್ತಾರೆ. ವೃಷಭ : ಈ ದಿನ ಸಂಪತ್ತಿನ ವಿಷಯದಲ್ಲಿ ಸುವರ್ಣಾವಕಾಶ ತರಲಿದೆ. ಆರೋಗ್ಯ ಮತ್ತು ಸಂಪತ್ತು, ಎರಡೂ ಈ ದಿನ ನಿಮ್ಮ ಕಡೆಗಿವೆ. ಆಭರಣ…

Read More

Updated By: Priyalachhi  ಬೆಳ್ತಂಗಡಿ: ಸಾಮೂಹಿಕ ಸಮಾಧಿ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ದೇವಾಲಯದಿಂದ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನವನ್ನು ಪ್ರತಿನಿಧಿಸುವ ವಕೀಲರು ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಸಂತ್ರಸ್ತನ ಸ್ಥಾನದಲ್ಲಿ ಪ್ರತಿನಿಧಿಸಲು ಅನುಮತಿ ನೀಡಬೇಕೆಂದು ಕೋರಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 2 (ವೈ) ಅಡಿಯಲ್ಲಿ ದೇವಸ್ಥಾನದ ಪರವಾಗಿ ವಕೀಲ ಮಹೇಶ್ ಕಜೆ ಅವರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಟಿ.ಎಚ್. ವಿಜಯೇಂದ್ರ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ದೇವಾಲಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರದ ಬಗ್ಗೆ ತನಿಖೆ ನಡೆಸುವಂತೆ ಮಾಜಿ ಸ್ವಚ್ಛ ಕಾರ್ಯಕರ್ತ ಸಿ.ಎನ್.ಚಿನ್ನಯ್ಯ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು ಮತ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಪ್ರತಿವಾದಿಯಾಗಿ ಹೆಸರಿಸಿದ್ದರು.

Read More

Updated By: Priyalachhi  ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇನಾಂವೀರಪುರ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಏಳು ತಿಂಗಳ ಗರ್ಭಿಣಿ ಮಾನ್ಯಾಳ ಮರ್ಯಾದೆ ಹತ್ಯೆ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಇಂತಹ ಹತ್ಯೆ ಹತ್ತಿಕ್ಕಲು ಕಠಿಣ ಕಾನೂನು ಜಾರಿಗೆ ತರಬೇಕು ಎಂಬ ಒತ್ತಾಯವೂ ಹೆಚ್ಚಾಗುತ್ತಿದೆ. ಈ ಮಧ್ಯೆ ಇಂದು ಮಾನ್ಯಾಳ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ, ಈ‌ ಕೃತ್ಯವನ್ನು ಸರ್ಕಾರ ತೀವ್ರವಾಗಿ ಖಂಡಿಸಿದೆ. ಮನುವಾದದ ಮನಸ್ಸುಗಳನ್ನು ಹತ್ತಿಕ್ಕಲೇ ಬೇಕು. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಸುಮ್ಮನೆ ಬಿಡುವುದಿಲ್ಲ. ಮರ್ಯಾದಾ ಹತ್ಯೆಯಂತಹ ಪ್ರಕರಣಗಳ ತಡೆಗೆ ಕಠಿಣ ಕಾನೂನನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರುವ ಕುರಿತು ಪರಿಶೀಲಿಸಲಾಗುವುದು, ಮಾನ್ಯ ಹೆಸರಿನಲ್ಲಿ ಕಾಯ್ದೆ ತರುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು. ಇದು ಮರ್ಯಾದೆ ಹತ್ಯೆಯಲ್ಲ ಉಗ್ರವಾದ ಕೊಲೆ. ಇದು ನಮ್ಮ ಭಾಗದಲ್ಲಿ ಕಂಡುಬಂದಿರಲಿಲ್ಲ. ರಾಜಸ್ಥಾನ, ಹರಿಯಾಣ ಸೇರಿ‌ ಇತರ ರಾಜ್ಯದಲ್ಲಿತ್ತು. ನಮ್ಮ ಕರ್ನಾಟಕ ಮುಂದುವರಿದ ರಾಜ್ಯ. ಪ್ರಾಯಕ್ಕೆ ಬಂದ…

Read More

Updated By: Priyalachhi  ಬೆಂಗಳೂರು: “ಕೋಗಿಲು ಅಕ್ರಮ ಗುಡಿಸಲು-ಮನೆ ತೆರವು ಪ್ರಕರಣದಲ್ಲಿ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ” ಎಂದು ಶಾಸಕ ಎಸ್.ಆರ್​. ವಿಶ್ವನಾಥ್ ಎಚ್ಚರಿಸಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್​​ ಬಳಿಯಿರುವ ಫಕೀರ್​​​ ಕಾಲೋನಿ ಮತ್ತು ನಸೀಮ್​​ ಬಡಾವಣೆಯಲ್ಲಿ ಮನೆ-ಗುಡಿಸಲುಗಳ ನೆಲಸಮ ಕುರಿತು ಸತ್ಯಾಸತ್ಯತೆಯನ್ನು ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ಸತ್ಯಶೋಧನಾ ತಂಡವನ್ನು ರಚಿಸಿದ್ದು, ಆ ತಂಡ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಭೆ ನಡೆಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಆರ್​. ವಿಶ್ವನಾಥ್​​, “ಬಿಬಿಎಂಪಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ಕಟ್ಟಿಕೊಂಡಿದ್ದಾರೆ. ಇವತ್ತು ನಿಜವಾದ ಫಲಾನುಭವಿ 10.5 ಲಕ್ಷ ರೂಪಾಯಿ ದುಡ್ಡು ಕಟ್ಟಬೇಕಾಗುತ್ತದೆ. ಬ್ಯಾಂಕ್ ಸಾಲ; ಇಲ್ಲವೇ ಸ್ವಂತ ಪ್ರಯತ್ನದಿಂದ ಇದನ್ನು ಕಟ್ಟಬೇಕು. ಇವನಿಗೆ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ, ಅಲ್ಪಸಂಖ್ಯಾತ ಇಲಾಖೆಯಿಂದ ಎರಡೂವರೆ ಲಕ್ಷ ರೂಪಾಯಿ. ಇವೆಲ್ಲವನ್ನು ಕೊಟ್ಟು ಕೇವಲ ಎರಡೂವರೆ ಲಕ್ಷದಲ್ಲಿ ಮನೆ…

Read More

Updated By: Priyalachhi  ವಿಜಯಪುರ: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರು ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನನಿರತರನ್ನು ಸೊಲ್ಲಾಪುರ ರಸ್ತೆಯಲ್ಲಿ ಪೊಲೀಸರು ತಡೆದುರ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಗನಬಸವ ಸ್ವಾಮೀಜಿ ಸಿಟ್ಟಿಗೆದ್ದು ಏಕಾಏಕಿ ಪಿಎಸ್ ಐ ಲಮಾಣಿ ಹಾಗೂ ಮತ್ತೋರ್ವ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Read More