Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi  ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೇ ಮಾದರಿಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆಯವರು ಹೇಳಿದ್ದಾರೆ. ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಿಂದ ರಾಜ್ಯದ 4 ಕೋಟಿಗೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾರಂಟಿಗಳನ್ನು ವಿರೋಧಿಸುವರು, ಟೀಕಿಸುವರು, ಅವರೇ ಇವಾಗ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಹಾಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆಂದು ಹೇಳಿದರು. ಬೀದರ್‌ ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ 3,44,855 ಮಹಿಳೆಯರು ಫಲಾನುಭವಿಗಳು ಇದ್ದು, ಇದುವರೆಗೆ ಯಾವುದೇ…

Read More

Updated By: Priyalachhi  ಬೆಂಗಳೂರು: ಕೋಗಿಲು ಕ್ರಾಸ್‌ನ ಫಕೀರ್‌ ಬಡಾವಣೆ ಕ್ರಮೇಣ ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಹೀಗಾಗಿ ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು ಇಂದು ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಕೇಳಿ ಪರಿಶೀಲಿಸಿದರು. ಭೇಟಿ ವೇಳೆ ಸ್ಥಳೀಯ ಮಹಿಳೆಯೊಂದಿಗೆ ಮಾತುಕತೆ ನಡೆಸಿದ ಅವರು, ಇಲ್ಲಿ ಎಷ್ಟು ವರ್ಷಗಳಿಂದ ವಾಸಿಸುತ್ತಿದ್ದೀರಿ, ಕರೆತಂದವರು ಯಾರು, ನಿವೇಶನ ಮಂಜೂರು ಮಾಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ಕಳೆದ 25 ವರ್ಷಗಳಿಂದ ಇಲ್ಲಿ ವಾಸವಿದ್ದೇವೆ ಎಂದು ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಗೂಗಲ್‌ ನಕ್ಷೆಯಲ್ಲಿ 1 ವರ್ಷದ ಹಿಂದೆ ಮನೆಗಳು ಇರಲಿಲ್ಲ. ಯಾರ…

Read More

Updated By: Priyalachhi  ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಕ್ಷತೆ ಮತ್ತು ಸುಗಮ ಸಂಚಾರ ವ್ಯವಸ್ಥೆಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತ ಸಿ. ವಂಶಿಕೃಷ್ಣ ಅವರ ನೇತೃತ್ವದಲ್ಲಿ ತಪಾಸಣೆ ನಡೆಸಿ ಅಗತ್ಯ ಸೂಚನೆಗಳನ್ನ ನೀಡಲಾಗಿದೆ. ​ಪ್ರವೇಶ: ಎಂ.ಜಿ ರಸ್ತೆ: ಎಲ್ಐಸಿ ಕಟ್ಟಡದ ಬಳಿ, ಅನಿಲ್ ಕುಂಬ್ಳೆ ವೃತ್ತ ​ಚರ್ಚ್ ಸ್ಟ್ರೀಟ್ : ಕೆ.ಸಿ. ದಾಸ್ ಬಳಿ ಬ್ರಿಗೇಡ್ ರಸ್ತೆ: ಕಾವೇರಿ ಜಂಕ್ಷನ್‌ನಲ್ಲಿ ಪ್ರವೇಶ (ಅನಿಲ್ ಕುಂಬ್ಳೆ ವೃತ್ತ ಅಥವಾ ಟ್ರಿನಿಟಿ ಜಂಕ್ಷನ್‌ನಿಂದ ಮಾತ್ರ ಪ್ರವೇಶಿಸಬಹುದು) ಮೇಯೊ ಹಾಲ್ ಜಂಕ್ಷನ್ : ಎಂ.ಜಿ ರಸ್ತೆ ಕಡೆಗೆ ಕಾವೇರಿ ಜಂಕ್ಷನ್‌ವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾಮರಾಜ್ ರಸ್ತೆ : ಕಾವೇರಿ ಎಂಪೋರಿಯಂ ಕಡೆಗೆ ಸಂಪೂರ್ಣವಾಗಿ ಪ್ರವೇಶ ನಿರ್ಬಂಧ. ನಿರ್ಗಮನ ಮಾರ್ಗಗಳು: ಒಪೇರಾ ಜಂಕ್ಷನ್ – ರೆಸಿಡೆನ್ಸಿ ರಸ್ತೆ – ಮೆಯೋ ಹಾಲ್ – ಟ್ರಿನಿಟಿ ಮೆಟ್ರೋ ಅಥವಾ ಟ್ಯಾಕ್ಸಿ ಪಾಯಿಂಟ್‌ಗಳ ಮೂಲಕ…

Read More

Updated By: Priyalachhi  ಬೆಂಗಳೂರು: ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಕೋರಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು. ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100ರಿಂದ 125ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ”ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ…

Read More

Updated By: Priyalachhi  ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್‌ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದೆ. ಈ ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆರೋಗ್ಯ ಇಲಾಖೆಯು ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್ ಮತ್ತು ಅದಕ್ಕೆ ಬೇಕಾದ ಮಾನವ ಸಂಪನ್ಮೂಲ ಸೇರಿದಂತೆ ಎಲ್ಲಾ ಸಿದ್ಧತೆಗಳು ಅಂತಿಮ ಹಂತ ತಲುಪಿದೆ. ಸದ್ಯದಲ್ಲಿಯೇ ಸರ್ಕಾರದ ವತಿಯಿಂದ ರಾಜ್ಯದಾದ್ಯಂತ ಆಂಬ್ಯುಲೆನ್ಸ್‌ ಸೇವೆ ಪ್ರಾರಂಭಗೊಳ್ಳಲಿದೆ. ಪ್ರಸ್ತುತ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಒಟ್ಟಾರೆ 1841 ಆಂಬ್ಯುಲೆನ್ಸ್‌ ಲಭ್ಯವಿದ್ದು, ಇದರಲ್ಲಿ 108-ಆರೋಗ್ಯ ಕವಚ ಕಾರ್ಯಕ್ರಮದಡಿಯಲ್ಲಿ ಒಟ್ಟು 715 ಆಂಬ್ಯುಲೆನ್ಸ್‌ಗಳು ಹಾಗೂ ರಾಜ್ಯ ವಲಯದ 1126 ಆಂಬ್ಯುಲೆನ್ಸ್‌ಗಳು ಲಭ್ಯವಿದೆ ಎಂದು ತಿಳಿಸಿದೆ. ಮಾನದಂಡಗಳನ್ವಯ ಹಾಲಿ ಜನಸಂಖ್ಯೆಗೆ 813…

Read More

Updated By: Priyalachhi  ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ 1 ಎಕರೆ ಜಾಗ ನೀಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. ನೀವು ಹೇಳುವುದನ್ನೇ ನಿಜ ಎಂದು ಭಾವಿಸಿ ನಾವು ಪ್ರತಿಕ್ರಿಯೆ ನೀಡುತ್ತೇವೆ. ಕುಮಾರಸ್ವಾಮಿ ನೀಡದ ಹೇಳಿಕೆಯನ್ನು, ಅವರು ಹೇಳಿದ್ದಾರೆ ಎಂದು ಸುಳ್ಳು ಹೇಳಿ ನಮ್ಮ ಬಳಿ ಪ್ರತಿಕ್ರಿಯೆ ಕೇಳುತ್ತೀರಿ. ಈ ರೀತಿ ಕೇಳುವವರಿಗೆ, ದಾರಿ ತಪ್ಪಿಸುವವರಿಗೆ ಪ್ರೆಸ್ ಕ್ಲಬ್ ನಿಂದ ತರಬೇತಿ ನೀಡಬೇಕು. ಸಮಾಜ ಒಡೆದು, ಅಶಾಂತಿ ಮೂಡಿಸುವವರಿಗೆ ಪಾಠ ಕಲಿಸಬೇಕು. ಬಿಡಿಎ ಅಧ್ಯಕ್ಷರು ಇಲ್ಲೇ ಇದ್ದಾರೆ, ಅರ್ಜಿ ಹಾಕಿ, ಎಲ್ಲಾದರೂ ಅಗತ್ಯ ಜಾಗ ನೀಡುತ್ತೇವೆ” ಎಂದರು. “ಈ ವರ್ಷ ಬದುಕಿನಲ್ಲಿ ಸಾಧನೆ ಮಾಡಿದವರಿಗೆ ಇಂದು ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರಿಗೆ…

Read More

Updated By: Priyalachhi  ಪಂಚಾಂಗ 31-12-2025, ಬುಧವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ದ್ವಾದಶಿ ನಕ್ಷತ್ರ : ಕೃತಿಕಾ ಸೂರ್ಯೋದಯ : ಮುಂಜಾನೆ 6:40 ಗಂಟೆಗೆ ಅಮೃತಕಾಲ : ಮಧ್ಯಾಹ್ನ 1:45 ರಿಂದ 3:10 ಗಂಟೆವರೆಗೆ ದುರ್ಮುಹೂರ್ತ : ಮಧ್ಯಾಹ್ನ 12:16 ರಿಂದ 1:04 ಗಂಟೆತನಕ ರಾಹುಕಾಲ : ಮಧ್ಯಾಹ್ನ 12:20 ರಿಂದ 1:45 ಗಂಟೆವರೆಗೆ ಸೂರ್ಯಾಸ್ತ : ಸಂಜೆ 6:01 ಗಂಟೆಗೆ ಮೇಷ: ಬಹಳ ಎಚ್ಚರದಿಂದಿರಿ; ನೀವು ಇಂದು ಹಲವು ಹೃದಯಗಳನ್ನು ಒಡೆಯಲಿದ್ದೀರಿ! ಉಳಿದಂತೆ ನಿಮ್ಮ ಪ್ರೀತಿಯ ಜೀವನ ಸ್ಥಿರವಾಗಿರುತ್ತದೆ ಮತ್ತು ನೀವು ನಿಮ್ಮ ಪ್ರೀತಿಪಾತ್ರರಿಗೆ ಬದ್ಧರಾಗಲು ಸಿದ್ಧವಾದಂತೆ ಭಾವಿಸುತ್ತೀರಿ. ವಿವಾಹಿತರಾದರೆ, ನಿಮ್ಮ ಬಾಂಧವ್ಯ ಆಳವಾದ ರಂಗು ಪಡೆಯುತ್ತದೆ ಮತ್ತು ಸದೃಢ ಬಾಂಧವ್ಯದ ಲಗತ್ತು ಹೊಂದಿರುತ್ತದೆ. ವೃಷಭ: ನೀವು ಕಠಿಣ ಪರಿಶ್ರಮ ಪಟ್ಟರೂ ನೀವು ನಿರೀಕ್ಷಿಸಿದಂತೆ ಪ್ರತಿಫಲ ದೊರೆಯದೇ ಇರುವ ಸಾಧ್ಯತೆಗಳಿವೆ. ಮಧ್ಯಾಹ್ನದಲ್ಲಿ ಪ್ರಯಾಣ ಮಾಡಲು ನಿಮಗೆ ಉತ್ಸಾಹ ಇರುವುದಿಲ್ಲ. ವಿಶ್ರಾಂತಿಯ ಸಂಜೆ ಮತ್ತು ಆತ್ಮೀಯ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ. ಮಿಥುನ: ನಿಮ್ಮ ಸುತ್ತಲಿನ…

Read More

Updated By: Priyalachhi  ಬೆಂಗಳೂರು: ಬೆಂಗಳೂರಿನಲ್ಲಿ ವಾಸವಿರುವ ಹಲವು ಬಡವರಿಗೆ ಮನೆ ಇಲ್ಲ, ಆದರೆ, ಪರ ರಾಜ್ಯದ ಜನರಿಗೆ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿದೆ ಇದು ಸರಿಯಲ್ಲ. ಕರ್ನಾಟಕ ರಾಜ್ಯದಲ್ಲಿ ಯಾರ ಸರ್ಕಾರ ನಡೆಯುತ್ತಿದೆ ಮತ್ತು ಯಾರಿಗಾಗಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಗಿಲು ಬಳಿ ಮನೆ ಧ್ವಂಸದ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಈ ಸರ್ಕಾರದ ಮೂಗುದಾರ ಎಲ್ಲಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಇಲ್ಲಿನ ಸರ್ಕಾರ ಹೇಗೆ ನಡೆಯಬೇಕು ಎಂದು ಕಿವಿ ಮಾತು ಹೇಳುತ್ತಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹ ಹೀಗೆ ನಡೆಯಬೇಕು ಎಂದು ಹೇಳುತ್ತಾರೆ. ಹೀಗಿರುವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಸರ್ಕಾರಕ್ಕೆ ನೈತಿಕತೆ ಇದೆಯೇ ಎಂದು ಟೀಕಿಸಿದರು ಕೋಗಿಲನಲ್ಲಿ ಅಕ್ರಮ ವಲಸಿಗರ ಮನೆ ತೆರವು ಮಾಡಿರುವುದು ಸ್ವಾಗತಾರ್ಹ. ಈ ಬಗ್ಗೆ ಕೇರಳದ ಸಿಎಂ, ರಾಜ್ಯಸಭಾ ಸದಸ್ಯರು ಪ್ರಶ್ನೆ ಮಾಡುತ್ತಾರೆ…

Read More

Updated By: Priyalachhi  ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್‌ ಹೊಳೆನರಸೀಪುರ ಶಾಸಕ ಎಚ್‌.ಡಿ. ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2024ರಲ್ಲಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ರೇವಣ್ಣ ಅವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಆರೋಪವನ್ನು ವಿಶೇಷ ನ್ಯಾಯಾಲಯವು ಕೈಬಿಟ್ಟಿದೆ. ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು ನಿರಾಕರಿಸಿದ್ದು, ಎಚ್.ಡಿ. ರೇವಣ್ಣ ಅವರ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಎಚ್.ಡಿ. ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ‌ಮಾಡಲಾಗಿದೆ. ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಎಚ್‌.ಡಿ. ರೇವಣ್ಣ ವಿರುದ್ಧದ…

Read More

Updated By: Priyalachhi  ಬೆಂಗಳೂರು: ನಾಯಕತ್ವದ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏನನ್ನಾದರೂ ನಿರ್ಧರಿಸಬೇಕಾದರೆ, ಫೆಬ್ರುವರಿಯಲ್ಲಿ ಬಜೆಟ್ ಸಿದ್ಧತೆಗೂ ಮೊದಲೇ ಅದನ್ನು ಮಾಡಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವವನ್ನು ಬದಲಾಯಿಸಬೇಕೆ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಜೆಟ್ ಸಿದ್ಧತೆ ಫೆಬ್ರುವರಿಯಲ್ಲಿ ಆರಂಭವಾಗಲಿದೆ. ಅದಕ್ಕಿನ್ನು ಸುಮಾರು ಒಂದು ತಿಂಗಳು ಬಾಕಿ ಇದೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಏನನ್ನಾದರೂ ನಿರ್ಧರಿಸಬೇಕಾದರೆ, ಅದಕ್ಕೂ ಮೊದಲೇ ನಿರ್ಧರಿಸಬೇಕು’ ಎಂದು ಪ್ರಶ್ನೆಯೊಂದಕ್ಕೆ ಪರಮೇಶ್ವರ ಉತ್ತರಿಸಿದರು. ‘ಯಾರಾದರೂ ಬಜೆಟ್ ಸಿದ್ಧಪಡಿಸಬೇಕು, ಅಲ್ಲವೇ? ರಾಜ್ಯದ ಜನರಿಗೆ ನಾವು ನೀಡಿದ ಭರವಸೆಯ ಆಧಾರದ ಮೇಲೆ ಬಜೆಟ್ ಮಂಡಿಸಬೇಕು’ ಎಂದು ಹೇಳಿದರು. ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆಯೂ, ಸಿದ್ದರಾಮಯ್ಯ ಅವರು ಕಳೆದ ತಿಂಗಳು ಮುಂದಿನ ವರ್ಷ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸುವುದಾಗಿ ಹೇಳಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಮಾರ್ಚ್‌ನಲ್ಲಿ ತಮ್ಮ 16ನೇ ಬಜೆಟ್…

Read More