Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಕೋಲ್ಕತಾ: ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಇಂದಿನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ “ಚುನಾವಣಾ ಲಾಭಕ್ಕಾಗಿ ಬಾಂಗ್ಲಾದೇಶಿಗಳ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನುಸುಳುಕೋರರನ್ನು ಗುರುತಿಸುವುದಷ್ಟೇ ಅಲ್ಲದೆ, ಅವರನ್ನು ಓಡಿಸುವ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು. ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆ ಹೆಚ್ಚಳವಾಗಿದೆ. ಬಂಗಾಳ ಗಡಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಬಂಗಾಳಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ, ಈಗ ಅದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ. ನಾವು ದೇಶದ ಸಂಸ್ಕೃತಿಯನ್ನು ಉಳಿಸಬೇಕು. ನಮ್ಮ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಾದರೆ,…
Updated By: Priyalachhi ಹಾಸನ: ಹೋರಾಟ ಮಾಡುವ ಶಕ್ತಿ ನನ್ನ ಕಾಲಲ್ಲಿ ಇಲ್ಲ, ಆದರೆ ತಲೆಯಲ್ಲಿ ಇದೆ. ನಾನು ನನ್ನ ಜೀವನದಲ್ಲಿ ಎಂದೂ ಸುಳ್ಳು ಹೇಳಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ಸೋಮವಾರ ನಡೆದ ಜೆಡಿಎಸ್ ಪೂರ್ವಭಾವಿ ಸಭೆಯಲ್ಲಿ ದೇವೇಗೌಡರು ಭಾವನಾತ್ಮಕ ಹಾಗೂ ರಾಜಕೀಯ ವಿಚಾರಗಳ ಬಗ್ಗೆ ಮಾತನಾಡಿದರು. “ಹಾಸನ ಜಿಲ್ಲೆ ನಮ್ಮನ್ನು ಹುಟ್ಟಿಸಿ, ಬೆಳೆಸಿದ ನೆಲ. 1962ರಿಂದ 2025ರವರೆಗೆ ಈ ಜಿಲ್ಲೆಯ ಜನರು ನಮ್ಮನ್ನು ಬೆಳೆಸಿದ್ದಾರೆ. ನಮ್ಮಪ್ಪ ಸಾಮಾನ್ಯ ರೈತ. ನಾನು ಅವರ ಎರಡನೇ ಹೆಂಡತಿಯ ಮೊದಲ ಮಗ. ಮೊದಲ ಹೆಂಡತಿಯ ಮಕ್ಕಳು ಹಾಗೂ ಅವರೆಲ್ಲರೂ ಕಾಲವಾಗಿದ್ದರು. ನನ್ನ ಬದುಕಿನ ಬಗ್ಗೆ ನಮ್ಮಪ್ಪನಿಗೆ ಭಯವಿತ್ತು. ನನ್ನ ಆರೋಗ್ಯಕ್ಕಾಗಿ ಕುಟುಂಬಸ್ಥರು ಮತ್ತು ಕಾರ್ಯಕರ್ತರು ಹಲವು ಸಲ ಪ್ರಾರ್ಥನೆ ಮಾಡಿದ್ದಾರೆ. ನನ್ನ ಅಳಿಯ ಡಾ.ಮಂಜುನಾಥ್ ನನ್ನನ್ನು ಉಳಿಸಲು ಬಹಳಷ್ಟು ಪ್ರಯತ್ನಿಸಿದ್ದಾರೆ. ರೇವಣ್ಣ ನನ್ನ ಆಯಸ್ಸಿಗಾಗಿ ಎಷ್ಟೋ ಪೂಜೆ ಮಾಡಿಸಿದ್ದಾರೆ. ನೀವು ಎಲ್ಲರೂ ನನ್ನ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿದ್ದೀರಿ, ಇದನ್ನು…
Updated By: Priyalachhi ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.28ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ (26) ಆತ್ಮಹತ್ಯೆ ಮಾಡಿಕೊಂಡವರು. ಮೈಲಸಂದ್ರದ ಇನ್ಸ್ಟಾ ಲಿವಿಂಗ್ ಪಿಜಿಯಲ್ಲಿ ಇವರು ವಾಸವಾಗಿದ್ದರು. ತಾಯಿ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಂದಿನಿ ಖಾಸಗಿ ಕನ್ನಡ ವಾಹಿನಿಯೊಂದರಲ್ಲಿ ‘ಗೌರಿ’ ಧಾರವಾಹಿ ಹಾಗೂ ನೆರೆಯ ತಮಿಳು ಭಾಷೆಯ ಸೀರಿಯಲ್ನಲ್ಲಿ ನಟಿಸಿದ್ದರು. ನಟನಾ ಕ್ಷೇತ್ರದಲ್ಲಿ ತೀವ್ರ ಒಲವಿದ್ದ ನಂದಿನಿ, ಸಾವಿಗೆ ಮುನ್ನ ಡೈರಿಯಲ್ಲಿ ಬರೆದ ಡೆತ್ ನೋಟ್ ಪತ್ತೆಯಾಗಿದೆ. “ನನಗೆ ಸರ್ಕಾರಿ ಕೆಲಸ ಮಾಡಲು ಇಷ್ಟವಿಲ್ಲ, ಆ್ಯಕ್ಟಿಂಗ್ ಇಷ್ಟ. ಮನೆಯಲ್ಲಿ ಯಾರೂ ನನ್ನ ಮಾತನ್ನು ಕೇಳುತ್ತಿಲ್ಲ” ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಂದಿನಿಯ ತಂದೆ ಎಸ್.ಮಹಾಬಲೇಶ್ವರ ಅವರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ 2021ರಲ್ಲಿ ಮೃತಪಟ್ಟಿದ್ದರು. 2023ರಲ್ಲಿ ಮಗಳು ನಂದಿನಿಗೆ ಅನುಕಂಪ ಆಧಾರದ…
Updated By: Priyalachhi ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು. ಕೋಗಿಲುಯಿಂದ 7 ಕಿಮೀ ವ್ಯಾಪ್ತಿಯಲ್ಲೇ ಬದಲಿ ಮನೆ ಕೊಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ನಿರ್ಮಾಣ ತೆರವು ಸಂಬಂಧ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಿದರು. ಮುಂದೆ ಸರ್ಕಾರದ ಜಮೀನು ಅಕ್ರಮ ಒತ್ತುವರಿ ಆದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ವಹಿಸಲಾಗುವುದು. ಜನವರಿ 1 ರ ಹೊಸ ವರ್ಷದಂದೇ ಶೆಡ್ ಕಳೆದುಕೊಂಡವರಿಗೆ ಹೊಸ ಮನೆ ಹಂಚಿಕೆ ಮಾಡಲಾಗುವುದು. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅವರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದರು. ಇದು ಕೋಗಿಲುಯಿಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು ₹11.20 ಲಕ್ಷ ವೆಚ್ಚವಾಗಿದ್ದು, ಇವನ್ನು…
Updated By: Priyalachhi ಪಂಚಾಂಗ: ದಿನಾಂಕ : 30-12-2025 ವಾರ : ಮಂಗಳವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ದಶಮಿ ನಕ್ಷತ್ರ : ಅಶ್ವಿನಿ ಸೂರ್ಯೋದಯ : ಮುಂಜಾನೆ 06:39 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 12:20 ರಿಂದ 01:45ರ ವರೆಗೆ ದುರ್ಮುಹೂರ್ತ : ಬೆಳಗ್ಗೆ 09:04 ರಿಂದ 90:52 & ಮಧ್ಯಾಹ್ನ 12:16ರಿಂದ 01:04ರ ತನಕ ರಾಹುಕಾಲ : ಮಧ್ಯಾಹ್ನ 03:10 ರಿಂದ 04:35ರ ವರೆಗೆ ಸೂರ್ಯಾಸ್ತ : ಸಂಜೆ 05:59 ಗಂಟೆಗೆ ರಾಶಿ ಭವಿಷ್ಯ: ಮೇಷ : ಹಳೆಯ, ಆತ್ಮೀಯ ನೆನಪುಗಳು ಇಂದು ನಿಮ್ಮ ಮನಸ್ಥಿತಿಯನ್ನು ನಿರ್ಧರಿಸುತ್ತವೆ, ಅವು ನೀವು ಕೆಲಸದೊಂದಿಗೆ ಹೇಗೆ ವ್ಯವಹರಿಸುತ್ತೀರಿ ಎಂದು ತೋರುತ್ತವೆ, ಅವು ಇತರರಿಗೆ ನಿಮ್ಮ ಮಧುರವಾದ ಭಾಗವನ್ನು ಇತರರಿಗೆ ಕಾಣುವಂತೆ ಮಾಡುತ್ತವೆ. ನೀವು ಹಣದೊಂದಿಗೆ ಜಾಗರೂಕತೆ ವಹಿಸುತ್ತೀರಿ ಮತ್ತು ಅದನ್ನು ಉಳಿಸುವ ಕುರಿತು ಪ್ರಯತ್ನಿಸುತ್ತೀರಿ. ವೃಷಭ : ಇಂದು…
Updated By: Priyalachhi ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ. ಅರಸೀಕೆರೆ ಮಲೇಕಲ್ಲು ಅಮರಗಿರಿ ತಿರುಪತಿ ದೇವಾಲಯ, ಮಾಲೂರಿನ ಚಿಕ್ಕತಿರುಪತಿ, ಮೈಸೂರು, ಬೆಳಗಾವಿ ಹುಬ್ಬಳ್ಳಿ ಚಿಕ್ಕಮಗಳೂರು, ಹಾಸನ, ಶೀರಂಗಪಟ್ಟಣದ ರಂಗನಾಥ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಯುತ್ತಿದ್ದು, ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನು ಬೆಂಗಳೂರಿನ ಮಲ್ಲೇಶ್ವರಂ ಹಾಗು ಜೆಪಿ ನಗರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ಆಗಮಿಸಿ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿದ್ದು, ಇಂದು ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು…
Updated By: Priyalachhi ಕಿಚ್ಚ ಸುದೀಪ್ ಅಭಿನಯದ 2025ರ ಬಹುನಿರೀಕ್ಷೆಯ ‘ಮಾರ್ಕ್’ ಸಿನಿಮಾ ಕ್ರಿಸ್ಮಸ್ಗೆ ತೆರೆಕಂಡು ಸೂಪರ್ ಹಿಟ್ ಆಗಿದೆ. ಡಿಸೆಂಬರ್ 25ರಂದು ರಾಜ್ಯಾದ್ಯಂತ 180+ ಚಿತ್ರಮಂದಿರಗಳಲ್ಲಿ ತೆರೆಕಂಡ ವಿಜಯ್ ಕಾರ್ತಿಕೇಯನ್ ನಿರ್ದೇಶನದ ಚಿತ್ರ, ಪ್ರೇಕ್ಷಕರಿಂದ ಬಹುತೇಕ ಉತ್ತಮ ಪ್ರತಿಕ್ರಿಯೆ ಸ್ವೀಕರಿಸಿತು. ಪ್ರೇಕ್ಷಕರ ಮೆಚ್ಚುಗೆ ಪಡೆದು, ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುವ ಮೂಲಕ ‘ಮಾರ್ಕ್’ ಯಶಸ್ವಿಯಾಗಿದೆ. ಹೌಸ್ಫುಲ್ ಪ್ರದರ್ಶನ ಕಂಡಿರುವ ಚಿತ್ರ ಬಾಕ್ಸ್ ಆಫೀಸ್ನಲ್ಲೂ ಕಮಾಲ್ ಮಾಡಿದೆ. ಮಾರ್ಕ್ ಚಿತ್ರತಂಡ ಅಧಿಕೃತ ಮಾಹಿತಿ ಕೊಟ್ಟಿದ್ದು, ಮೊದಲ ವಾರಾಂತ್ಯದಲ್ಲಿಯೇ 35 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವೀಕೆಂಡ್ನಲ್ಲಿ ಮಾತ್ರವಲ್ಲದೇ ಸೋಮವಾರವೂ ಕಿಚ್ಚನ ಚಿತ್ರ ಹೌಸ್ಫುಲ್ ಪ್ರದರ್ಶನ ಕಾಣುವ ಮೂಲಕ ಮುನ್ನುಗ್ಗುತ್ತಿದೆ. ಸಿನಿಮಾ ವಿಮರ್ಶಕರು ಹಾಗೂ ವಿತರಕರು ಮಾರ್ಕ್ ಸಿನಿಮಾವನ್ನು ಕಮರ್ಷಿಯಲಿ ಹಿಟ್ ಎಂದು ಶ್ಲಾಘಿಸಿದ್ದಾರೆ. ಹಿಂದಿ ಹಾಗೂ ಹಾಲಿವುಡ್ ಸಿನಿಮಾಗಳಿಗೆ ಟಕ್ಕರ್ ಕೊಟ್ಟು ದೊಡ್ಡ ಮಟ್ಟದ ಗೆಲುವನ್ನು ಕಿಚ್ಚನ ಸಿನಿಮಾ ಪಡೆದುಕೊಂಡಿದೆ. ಕಿಚ್ಚನ ಸ್ವಾಗ್, ಸ್ಟೈಲ್, ಅಟಿಟ್ಯೂಡ್ ಕಂಡು ಚಿತ್ರರಸಿಕರು ಫಿದಾ ಆಗಿದ್ದಾರೆ.…
Updated By: Priyalachhi ಬೆಂಗಳೂರು: ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂ ಸ್ವಾಧೀನ ಕುರಿತು ಸಿಎಂ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. 2023-24ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ 25 ಕೋಟಿ ರೂ.ಗಳಂತೆ ಒಟ್ಟು 3,510 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ 2,040 ರೂ. ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, 920 ಕೋಟಿ ರೂ. ವೆಚ್ಚ ಭರಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ರಸ್ತೆ ದುರಸ್ತಿಗಾಗಿ ₹1,890 ಕೋಟಿ ಅನುಮೋದನೆ: 1,205 ಕೋಟಿ ರೂ. ಬಿಡುಗಡೆ ಮಾಡಲು ಬೆಳಗಾವಿ ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ. ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. 2024-25ರಲ್ಲಿ ಮಳೆ…
Updated By: Priyalachhi ದಾವಣಗೆರೆ: ಇತ್ತೀಚೆಗೆ ನಗರದಲ್ಲಿ ನಡೆದ 290 ಗ್ರಾಂ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣ ಸಂಬಂಧ ವಿದ್ಯಾನಗರ ಠಾಣೆ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಡಿಸೆಂಬರ್ 22ರಂದು (ಸೋಮವಾರ) ಡ್ರಗ್ಸ್ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಮೇಲೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ವಿದ್ಯಾನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಕಾಂಗ್ರೆಸ್ ಮುಖಂಡ ವೇದಮೂರ್ತಿ ಎಸ್.ಜಿ. (53) ಸೇರಿದಂತೆ, ರಾಜಸ್ಥಾನ ಮೂಲದ ರಾಮ್ ಸ್ವರೂಪ್ (33) ಧೋಲಾರಾಮ್ (36) ಹಾಗೂ ದೇವ್ ಕಿಶನ್ (35) ಎಂಬವರನ್ನು ಬಂಧನ ಮಾಡಲಾಗಿತ್ತು. ಬಂಧಿತರಿಂದ ಎಂಡಿಎಂಎ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ಮೌಲ್ಯದ 290 ಗ್ರಾಂ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈಗ ಅನ್ವರ್ ಭಾಷಾ, ಪಾರಸ್, ಕೃಷ್ಣಮೂರ್ತಿ ಹಾಗೂ ಧೋನಿ ಅಲಿಯಾಸ್ ಮಂಜುನಾಥ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಎಸ್ಪಿ ಮಾಹಿತಿ: ಪ್ರಕರಣದ ಬಗ್ಗೆ ಮಾಧ್ಯಮದವರಿಗೆ…
Updated By: Priyalachhi ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್ಗಳ ವ್ಯವಸ್ಥೆಯನ್ನು ಮಾಡಬೇಕು. ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮ ವಹಿಸಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು ಎಂದು ಹೇಳಿದರು. 3,500…
Subscribe to Updates
Get the latest creative news from FooBar about art, design and business.