Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi  ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು‌ ಎಂದು ಸೂಚಿಸಿದರು. ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು. ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟ್ರೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮ ವಹಿಸಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು ಎಂದು ಹೇಳಿದರು. 3,500…

Read More

Updated By: Priyalachhi  ಯಾದಗಿರಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಮಾಹಿತಿ ಇಲ್ಲ. ಸಂಕ್ರಾಂತಿ ಹಬ್ಬ ಮುಗಿದ ನಂತರ ಇದರ ಬಗ್ಗೆ ಮಾತನಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರೇ ಈ ಬಾರಿ ಬಜೆಟ್ ಮಂಡಿಸಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಹೀಗಿದ್ದಾಗ ಅವರೇ ಬಜೆಟ್ ಮಂಡಿಸುತ್ತಾರೆ ಎಂಬ ಭರವಸೆ ಇದೆ ಎಂದರು. ರಾಹುಲ್ ಗಾಂಧಿ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿ ಬಂದ ನಂತರ ಡಿಕೆಶಿ ಬೆಂಬಲಿಗರು ದೆಹಲಿಗೆ ತೆರಳುವ ಮಾಹಿತಿ ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೋಡೋಣ, ಅಂತಹ ಸಂದರ್ಭ ಪಕ್ಷಕ್ಕೆ ಬರುವುದಿಲ್ಲ. ಪಕ್ಷದ ಹೈಕಮಾಂಡ್ ಇದೆ. ನಾವು ಯಾರೂ ಕೂಡಾ ದೆಹಲಿಗೆ ಹೋಗಲ್ಲ. ಈ ವಿಚಾರವನ್ನು ಸಂಪೂರ್ಣವಾಗಿ ಹೈಕಮಾಂಡ್‌ಗೆ ಬಿಟ್ಟಿದ್ದೇವೆ ಎಂದು ಹೇಳಿದರು. ನೀವು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಯತ್ನಿಸುವಿರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ…

Read More

Updated By: Priyalachhi  ಬೆಂಗಳೂರು: ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವ ಕೋಗಿಲು ಫಕೀರ್ ಲೇಔಟ್​​ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿದ್ದು, “ಭೂ ಕಳ್ಳರ” ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇಂದು ಯಲಹಂಕ ಬಳಿಯ ಕೋಗಿಲು ಲೇಔಟ್ ನಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಸರ್ಕಾರ 9-10 ವರ್ಷಗಳಿಂದ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದು, ಇಲ್ಲಿ ಕಸದ ಗುಂಡಿ ಇತ್ತು. ಆದರೆ ಅದರ ಮೇಲೆಯೇ ಕೆಲವರು ರಾತ್ರೋರಾತ್ರಿ ಬಂದು ಶೆಡ್ ನಿರ್ಮಿಸಿದ್ದಾರೆ ಎಂದರು. ಯಾರೂ ಸಹ ಸರ್ಕಾರಿ ಭೂಮಿಗೆ ಮತದಾರರ ಚೀಟಿ ನೀಡಿಲ್ಲ. ಸ್ಥಳೀಯ ಶಾಸಕರು ಅದನ್ನು ತಮ್ಮ ಗಮನಕ್ಕೂ ತಂದಿದ್ದಾರೆ ಎಂದರು. “ಅವರು ಕಸದ ರಾಶಿಯ ಮೇಲೆ ಎಲ್ಲಾ ಮನೆಗಳನ್ನು ನಿರ್ಮಿಸಿದ್ದಾರೆ, ಕೆಲವರು ರಾಜಕೀಯ ಮಾಡುತ್ತಿದ್ದಾರೆ… ಕೇರಳ ಸರ್ಕಾರ ಅಲ್ಪಸಂಖ್ಯಾತರಿಗೆ ಸಹಾನುಭೂತಿ ತೋರಿಸಲು ಹೊರಟಿದೆ, ಆದರೆ ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ…

Read More

Updated By: Priyalachhi  ಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ ಕ್ರಾಂತಿ ಎಬ್ಬಿಸುತ್ತೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಈ ಕುರಿತು ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂದು ಅತ್ಯಂತ ಸಂತೋಷದ ದಿನ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿ‌ನ. ನಾವು ಕೂಡ ಆಚರಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮನೆಗಳ ಒತ್ತುವರಿ ತೆರವು ಸಂಬಂಧ ಕೇರಳ ಸಿಎಂ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದಲ್ಲಿ ಬೇರೆ ರಾಜ್ಯದವರು ಇರುತ್ತಾರೆ. ನಾವು ಕೇರಳಕ್ಕೆ ಹೋಗಿ ಮನಸ್ಸಿಗೆ ಬಂದಾಗೆ ಮಾಡೋಕೆ ಆಗುತ್ತಾ?.ಕಾನೂನಿನ ವ್ಯವಸ್ಥೆಯಲ್ಲಿಯೇ ನಾವು ಇರಬೇಕು. ನಾವು ಯಾವ ಸಮುದಾಯದ ವಿರೋಧಿಯೂ ಅಲ್ಲ. ಕಾಂಗ್ರೆಸ್ ಎಲ್ಲ ಸಮುದಾಯದ ಹಿತವನ್ನ ಬಯಸುತ್ತೆ. ಅನ್ಯಾಯ, ತೊಂದರೆ ನೀಡುವ ನಿಲುವು ನಮ್ಮ ಪಕ್ಷದಲ್ಲಿ ಇಲ್ಲ. ಚುನಾವಣೆ ಹಿನ್ನೆಲೆ ಕೇರಳ…

Read More

Updated By: Priyalachhi  ಚಿಕ್ಕೋಡಿ: ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ ಎಂದು ಕಾರ್ಮಿಕ ಸಚಿವ ಮತ್ತು ಮರಾಠಾ ಸಮುದಾಯದ ನಾಯಕ ಸಂತೋಷ್ ಲಾಡ್ ಅವರು ಭಾನುವಾರ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದ ಪದ್ಮ ಮಂಗಲ್ ಕಾರ್ಯಾಲಯದಲ್ಲಿ ನಡೆದ ಚಿಕ್ಕೋಡಿ ತಾಲ್ಲೂಕಿನ ಮರಾಠಾ ಸಮುದಾಯದ ಸಮಾವೇಶದಲ್ಲಿ ಮಾತನಾಡಿರುವ ಅವರು, ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ. ಮರಾಠಾ ಸಮುದಾಯವನ್ನು ದಾರಿತಪ್ಪಿಸುವವರನ್ನು ಯುವಕರು ನಂಬಬಾರದು ಎಂದು ಹೇಳಿದರು. ಮರಾಠಾ ಸಮುದಾಯವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ, ಅದು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಪ್ರಗತಿ ಸಾಧಿಸಬಹುದು. ಮರಾಠಾ ಸಮುದಾಯ ಇಂದು ಅನೇಕ ಅಂಶಗಳಲ್ಲಿ ಅತ್ಯಂತ ಕೆಳಮಟ್ಟದಲ್ಲಿದೆ. ಸಮುದಾಯವನ್ನು ಉನ್ನತೀಕರಿಸಲು ಬಲವಾದ ಸಂಘಟನೆ ಅತ್ಯಗತ್ಯ ಎಂದು ತಿಳಿಸಿದರು. ರಾಜಕೀಯ ಅಥವಾ ವಿಭಜಕ ಉದ್ದೇಶಗಳಿಗಾಗಿ ಶಿವಾಜಿ ಮಹಾರಾಜರ ಪರಂಪರೆಯನ್ನು ತಪ್ಪಾಗಿ ಪ್ರತಿನಿಧಿಸಬಾರದು. ರಾಜಕೀಯದಲ್ಲಿ ನನಗೆ ಯಾವುದೇ ಆಸಕ್ತಿ ಇಲ್ಲ. ಸಮಾಜ ಸೇವೆಯೇ ತನ್ನ ಮೊದಲ ಆದ್ಯತೆಯಾಗಿದೆ ಎಂದರು.

Read More

Updated By: Priyalachhi  ಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ. ಇದರಂತೆ ನಗರದಲ್ಲಿ 20 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಹೇಳಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕ ಎಂ.ಎ. ಸಲೀಂ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರೊಂದಿಗೆ ಸಭೆ ನಡೆಸಿದ ನಂತರ ಸಚಿವರು ಮಾಹಿತಿ ನೀಡಿದರು. ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದಾರೆ ಎಂದು ಪೊಲೀಸ್ ಇಲಾಖೆ ಅಂದಾಜಿಸಿದೆ. ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ 14 ಸಾವಿರ ಪೊಲೀಸರು, 2,500 ಮಂದಿ ಸಂಚಾರ…

Read More

Updated By: Priyalachhi  ಬೆಂಗಳೂರು: ನಾನೂ ಕೂಡ ಒಬಿಸಿ ವರ್ಗಕ್ಕೆ ಸೇರಿದವನೇ… ಒಕ್ಕಲಿಗ ಸಮುದಾಯ ಒಬಿಸಿಗೆ ಸೇರಿದ್ದಲ್ಲವೇ? ಎಂದು ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಭಾನುವಾರ ಪ್ರಶ್ನಿಸಿದ್ದು, ಈ ಮೂಲಕ ಸಿದ್ದರಾಮಯ್ಯ ಮಾತ್ರ ಹಿಂದುಳಿದ ನಾಯರಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರರು, “ನಾನು ಕೂಡ ಒಬಿಸಿ ಎಂದು ನಿಮಗೆ ತಿಳಿದಿದೆಯೇ; ಒಕ್ಕಲಿಗ ಒಬಿಸಿ ಅಲ್ಲವೇ? ಲಿಂಗಾಯತರು ಒಬಿಸಿ, ಆದಾಯವಿಲ್ಲದ ಬ್ರಾಹ್ಮಣರು ಒಬಿಸಿಗೆ ಸೇರಿದವರಾಗಿದ್ದಾರೆಂದು ಹೇಳಿದರು. ಇದೇ ವೇಳೆ ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿ ಬರುವ ಐದು ನಿಗಮಗಳಿಗೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ಬಯಸುವ ಆಕಾಂಕ್ಷಿಗಳಿಂದ ಪಕ್ಷವು ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗೆ ಸೂಚನೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ. ಹೀಗಾಗಿ ಮೀಸಲಾತಿ ಹಾಗೂ…

Read More

Updated By: Priyalachhi ಪಂಚಾಂಗ: ದಿನಾಂಕ : 29-12-2025 ವಾರ : ಸೋಮವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ನವಮಿ ನಕ್ಷತ್ರ : ರೇವತಿ ಸೂರ್ಯೋದಯ : ಮುಂಜಾನೆ 06:39 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 01:44 ರಿಂದ 03:09ರ ವರೆಗೆ ದುರ್ಮುಹೂರ್ತ : ಮಧ್ಯಾಹ್ನ 01:03 ರಿಂದ 01:51 & 03:27 ರಿಂದ 04:15ರ ತನಕ ರಾಹುಕಾಲ : ಬೆಳಗ್ಗೆ 08:04 ರಿಂದ 09:29ರ ವರೆಗೆ ಸೂರ್ಯಾಸ್ತ : ಸಂಜೆ 05:59 ಗಂಟೆಗೆ ರಾಶಿ ಭವಿಷ್ಯ: ಮೇಷ : ಭಾವನಾತ್ಮಕವಾಗಿರುವುದು ಸದಾ ನಿಮ್ಮ ದಾರಿಯಲ್ಲಿದೆ. ವಿಷಯಗಳು ನಿಮ್ಮ ದಾರಿಗೆ ಬರದಿದ್ದರೆ ನೀವು ದುಃಖಿತರಾಗುತ್ತೀರಿ. ಆದರೆ ಟೇಬಲ್ ಮೇಲಿನ ಆಹಾರದತ್ತ ನೋಡಿ, ಕಪ್ ಬೋರ್ಡ್ ನಲ್ಲಿರುವ ಲೆವೀಸ್ ತಿನಿಸು ಮತ್ತಿತರೆ ವಿಷಯಗಳನ್ನು ಕಂಡಾಗ ಕೃಪೆಯ ಜೀವನಕ್ಕೆ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೀರಿ. ವೃಷಭ : ಬಣ್ಣದ ಪಟಾಕಿ ಸಿಡಿಸಿ ಮತ್ತು…

Read More

Updated By: Priyalachhi ಬೆಂಗಳೂರು: ದುರಾಡಳಿತ ಮತ್ತು ವ್ಯಾಪಕ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಲ್ಲಾ 25 ಗ್ರಾಮ ಪಂಚಾಯಿತಿಗಳ ವಿರುದ್ಧ ಇದೇ ಮೊದಲ ಬಾರಿಗೆ ಬಾರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ಇತಿಹಾಸದಲ್ಲಿ ಇಂತಹ ಕ್ರಮ ಕೈಗೊಂಡಿರುವುದು ಇದೇ ಮೊದಲು. ಸೆಪ್ಟೆಂಬರ್ 30 ಮತ್ತು ಡಿಸೆಂಬರ್ 2 ರಂದು ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನಂತರ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಈಗ ಅವರು ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇಡೀ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ. ಇದು ಕೇವಲ ಆರಂಭವಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಲು ಜಿಲ್ಲಾ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳಲ್ಲಿ ಸುಧಾರಣೆಗಳನ್ನು ತರಲು, ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಸರಿಪಡಿಸಲು ತುಮಕೂರು ಮತ್ತು ಮಂಡ್ಯದಂತಹ ಜಿಲ್ಲೆಗಳಲ್ಲಿ ಮುಂದಿನ ಕ್ರಮ ಆರಂಭಿಸಲು ಯೋಜಿಸಿದ್ದಾರೆ.

Read More

Updated By: Priyalachhi ಕಾರವಾರ: ಕಾರವಾರದ ಐ.ಎನ್.ಎಸ್‌ ಕದಂಬ ನೌಕಾನೆಲೆ ಡಾಕ್‌ ನಿಂದ ಐ.ಎನ್‌.ಎಸ್‌ ವಾಗ್ಶಿರ್‌ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್‌ ಕಲಾಂ ನಂತರ ಸಬ್ ಮೇರಿನ್ ನಲ್ಲಿ ಪ್ರಯಾಣಿಸಿದ ಎರಡನೇ ರಾಷ್ಟಪತಿ ದ್ರೌಪದಿ ಮುರ್ಮು ಆಗಿದ್ದಾರೆ. ಐಎನ್ಎಸ್ ವಾಘಶೀರ್ ಭಾರತೀಯ ನೌಕಾಪಡೆಗೆ ಸೇರಿದ ಆರನೇಯ ಕಲ್ವರಿ-ವರ್ಗದ ಜಲಾಂತರ್ಗಾಮಿ ನೌಕೆಯಾಗಿದೆ. ಇದು ದೇಶದ ಅತ್ಯಂತ ಸುಧಾರಿತ ಜಲಾಂತರ್ಗಾಮಿಯಾಗಿದ್ದು, ‘ಮೇಕ್ ಇನ್ ಇಂಡಿಯಾ’ದ ರಕ್ಷಣಾ ಉಪಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಷ್ಟ್ರಪತಿಗಳೊಂದಿಗೆ ನೌಕಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಮತ್ತಿತರರು ಉಪಸ್ಥಿತರಿದ್ದರು. ಆಳ ಸಮುದ್ರದಲ್ಲಿ ನೌಕಾಪಡೆಯು ಎದುರಿಸುವ ಸವಾಲುಗಳು ಮತ್ತು ಜಲಾಂತರ್ಗಾಮಿ ಕಾರ್ಯಾಚರಣೆಗಳ ಸಂಕೀರ್ಣತೆಯನ್ನು ಹತ್ತಿರದಿಂದ ವೀಕ್ಷಿಸಲು ಈ ಭೇಟಿ ಸಹಕಾರಿಯಾಯಿತು.

Read More