Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ದೆಹಲಿ: ಜಗತ್ತು ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಈಗ ತಾನೇ ಹೊರ ಬಂದಿದೆ. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ‘ಎಬೋಲಾ ವೈರಸ್’ (Ebola Virus) ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು (PHEIC) ಘೋಷಿಸಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಸಹ ಮುನ್ನೆಚ್ಚರಿಕೆ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ಲಸಿಕೆ ಇಲ್ಲದ ಅಪರೂಪದ ತಳಿ; ಕೋವಿಡ್‌ನಂತೆ ಹರಡುವುದಿಲ್ಲ: ಡಾ. ದಿವ್ಯಾ ಅವರ ಪ್ರಕಾರ, ಪ್ರಸ್ತುತ ಔಟ್‌ಬ್ರೇಕ್ ಆಗಿರುವ ಎಬೋಲಾ ಬುಂಡಿಬುಗ್ಯೊ ತಳಿಗೆ ಯಾವುದೇ ಅಧಿಕೃತ ಲಸಿಕೆ ಅಥವಾ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ ಅತ್ಯಂತ ಹೆಚ್ಚಾಗಿದೆ. ಆದರೆ, ಇದು ಕೋವಿಡ್ ಮಹಾಮಾರಿಯಂತೆ ಗಾಳಿಯಲ್ಲಿ ಅತಿ ವೇಗವಾಗಿ ಪೆಂಡಾಮಿಕ್ ಆಗುವ ಸಾಧ್ಯತೆ ತೀರಾ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಫ್ರೀಡಂಪಾರ್ಕ್ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆ ಎಂಬುದಕ್ಕೆ ಕೇಂದ್ರದಿಂದ ಅರ್ಥ ಹೊರಟೋಗಿದೆ. ಸಿಇಟಿ ಮಾದರಿಯನ್ನು ಕೇಂದ್ರ ಸರ್ಕಾರ ನೀಟ್ ಪರೀಕ್ಷೆಗೆ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ, ರಾಜ್ಯಗಳಿಗೆ ಸ್ವತಂತ್ರವಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸಿಎಂ ಆಗದ್ದ ಕಾಲದಲ್ಲೇ PSI ಪ್ರಶ್ನೆಪತ್ರಿಕೆ ಸೋರಿಕೆ ಆಯ್ತು. ADGP ಮಟ್ಟದ ಅಧಿಕಾರಿ ಜೈಲಿಗೆ ಹೋದ ನಿದರ್ಶನ ಹಿಂದೆ ಇರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಅವ್ಯಾಹತವಾಗಿ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದೆ. ಇದಕ್ಕೆ ಯಾರು ಜವಾಬ್ದಾರಿ? ಜವಾಬ್ದಾರಿ ಹೊರಬೇಕಾದವರು ಮೋದಿ ಎಂದು ಕಿಡಿಕಾರಿದರು.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು, ಮೇ 21: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ. ಮುಖ್ಯಾಂಶಗಳು ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ಕೋರಿ ಪಿಐಎಲ್ 2 ತಿಂಗಳ ಬಾಕಿ ಗೃಹಲಕ್ಷ್ಮಿ ಹಣ ಪಾವತಿಗೆ ನಿರ್ದೇಶನ ಕೋರಿಕೆ ಪಿಐಎಲ್ ಸಂಬಂಧ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ ಅರ್ಜಿದಾರರು ಯಾರು? ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ಕೋರುವಂತೆ ಬೆಂಗಳೂರಿನ ಕಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಎಂಬುವರು ಹೈಕೋರ್ಟ್ ಮೊರೆಹೋಗಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಏನಿದೆ? ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ಬಾಕಿ ಇರುವ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ತಕ್ಷಣವೇ ಪಾವತಿಸಲು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದಾಗ ನೀವು ಮಾತನಾಡುವುದಿಲ್ಲ, ಮೌನವಾಗಿರುತ್ತೀರಿ, ಅವರನ್ನು ಏನೂ ಪ್ರಶ್ನಿಸುವುದಿಲ್ಲ, ಈಗ ನಮ್ಮನ್ನು ದರ ಇಳಿಸುತ್ತೀರಾ ಎಂದು ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ 2014ರಲ್ಲಿ ಡೀಸೆಲ್ ಬೆಲೆ 48 ರೂಪಾಯಿ, ಪೆಟ್ರೋಲ್ ಬೆಲೆ 70 ರೂಪಾಯಿ ಇತ್ತು, ಗ್ಯಾಸ್ ಸಿಲಿಂಡರ್ ಬೆಲೆ 414 ರೂಪಾಯಿ ಇತ್ತು, ಇಂದು ಇಷ್ಟು ಬೆಲೆ ಏರಿಕೆ ಮಾಡಿದ್ದು ಯಾರು ಎಂದು ಕೇಳಿದರು. ರಾಜ್ಯದಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಕಡಿಮೆ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯೆ ನೀಡದೆ ಹೋದರು. ನಂತರ ಯುನ ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ನೀಟ್ ಪರೀಕ್ಷೆ ಅಕ್ರಮದ ಹಿನ್ನೆಯಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರಾಜೀನಾಮೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಚಿನ್ನ ಖರೀದಿಸಬೇಡಿ, ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಮಿತಿಗೊಳಿಸಿ, ವಿದೇಶ ಪ್ರವಾಸ ಕಡಿಮೆ ಮಾಡಿ, ವರ್ಕ್ ಫ್ರಂ ಹೋಮ್ ರೂಢಿಸಿಕೊಳ್ಳಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಅಣಕಿಸಿ ನಟ ಕಿಶೋರ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಂದಿನ ಪ್ರಕಟಣೆಯಲ್ಲಿ ಈ ನಾನ್-ಬಯಲಾಜಿಕಲ್ ಸರ್ಕಾರವು ಹಸ್ದೇವ್ ನಿಂದ ನಿಕೋಬಾರ್ ವರೆಗೆ ನಮ್ಮ ಕಾಡುಗಳನ್ನು ಮಿಸ್ಟರ್ ಎ ಗೆ ಮಾರಾಟ ಮಾಡುವಲ್ಲಿ ನಿರತವಾಗಿದ್ದು, ಭಾರತವನ್ನು ವಿಶ್ವದ ಅತ್ಯಂತ ಕಲುಷಿತ ದೇಶವನ್ನಾಗಿ ಮಾಡಿ, ಮಾಲಿನ್ಯವನ್ನು ನಿಭಾಯಿಸಲು ಅಸಮರ್ಥವಾಗಿರುವುದರಿಂದ ಸಾರ್ವಜನಿಕರು 25% ರಷ್ಟು ಉಸಿರಾಟವನ್ನು ಕಡಿಮೆ ಮಾಡಿ ದೇಶಭಕ್ತಿಯನ್ನು ಪ್ರದರ್ಶಿಸಬೇಕು ಎಂದು ಹೇಳಬಹುದು ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಿಶೋರ್ ಕುಮಾರ್ ಮಾಡಿರುವ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು/ಚಾಮರಾಜನಗರ: ನಾನು ರಾಜ್ಯದ ಮುಖ್ಯಮಂತ್ರಿಯಾಗುತ್ತೇನೋ ಅಥವಾ ಇಲ್ಲವೋ ಎಂಬುದನ್ನು ಕಾಲವೇ ಉತ್ತರಿಸುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಪುನರುಚ್ಚರಿಸಿದ್ದಾರೆ. ರಾಜ್ಯ ಸರ್ಕಾರವು ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ನಾಯಕತ್ವ ಬದಲಾವಣೆ ಮತ್ತು ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ನಿರ್ಧರಿಸಬಹುದು ಎಂಬ ನಿರೀಕ್ಷೆಗಳ ನಡುವೆ ಅವರ ಹೇಳಿಕೆ ಬಂದಿದೆ. ಮುಖ್ಯಮಂತ್ರಿ ಹುದ್ದೆಯ ವಿಷಯಕ್ಕೆ ಸಂಬಂಧಿಸಿದ ಅಧಿಕಾರ ಜಗಳವನ್ನು ಸೌಹಾರ್ದಯುತವಾಗಿ ಚರ್ಚಿಸಿ ಪರಿಹರಿಸಲು ಪಕ್ಷದ ವರಿಷ್ಠರು ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಶಿವಕುಮಾರ್ ಅವರನ್ನು ನವದೆಹಲಿಗೆ ಕರೆಸುವ ನಿರೀಕ್ಷೆ ಹೆಚ್ಚಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಚಾಮರಾಜನಗರದಲ್ಲಿ ಉತ್ತರಿಸಿದ ಅವರು, ‘ಸಮಯ, ಮುಹೂರ್ತ ಉತ್ತರಿಸುತ್ತದೆ’ ಎಂದು ಹೇಳಿದರು. ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಅವರ ದೇವಾಲಯ ಭೇಟಿಗಳು ಮತ್ತು ಪ್ರಾರ್ಥನೆ ಸಲ್ಲಿಸುವ ಬಗ್ಗೆ ಕೇಳಿದಾಗ, ‘ನೀವು ದೇವರಂತೆ ಇದ್ದೀರಿ. ಜನರೇ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಟಲಿ ರಾಜಧಾನಿ ರೋಮ್ ನಲ್ಲಿದ್ದಾರೆ. ಅಲ್ಲಿ ಅವರು ಇಟಲಿ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಿ ಸಹಭೋಜನ ಸವಿದು ‘Melody’ ಚಾಕಲೇಟ್ ಗಳನ್ನು ತುಂಬಿದ ಪ್ಯಾಕೇಟ್ ನ್ನು ಉಡುಗೊರೆಯಾಗಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.“#Melodi” ಎಂಬ ಹ್ಯಾಶ್ ಟಾಗ್ ನಲ್ಲಿ ಕಮೆಂಟ್ ಗಳ ಸುರಿಮಳೆಯೇ ಹರಿಯುತ್ತಿದೆ. ಇಟಲಿ ಪ್ರವಾಸದಲ್ಲಿರುವ ಮೋದಿ ಅವರ ಭೇಟಿಯ ವೇಳೆ ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾದ ಹಗುರ ಮನರಂಜನಾತ್ಮಕ ವಿಡಿಯೋದಲ್ಲಿ, ನೀಲಿ ಬಣ್ಣದ ಬಂಧ್‌ಗಲಾ ಉಡುಪಿನಲ್ಲಿ ಕಾಣಿಸಿಕೊಂಡ ಮೋದಿ ಅವರು, ಬಿಳಿ ಬಣ್ಣದ ಸೂಟ್ ಧರಿಸಿದ್ದ ಮೆಲೋನಿ ಅವರಿಗೆ ಪ್ರಸಿದ್ಧ Melody ಟಾಫಿಗಳ ಚೀಲವನ್ನು ನೀಡುತ್ತಿರುವುದು ಕಾಣಿಸಿದ್ದು, ಇಬ್ಬರೂ ನಗುತ್ತಾ ಹಾಸ್ಯಮಯ ಕ್ಷಣವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು X ನಲ್ಲಿ ಹಂಚಿಕೊಂಡ ಮೆಲೋನಿ, “ಉಡುಗೊರೆಗೆ ಧನ್ಯವಾದಗಳು ಮೋದಿಯವರೇ” ಎಂದು ಬರೆದಿದ್ದಾರೆ. ವಿಡಿಯೋ ಪೋಸ್ಟ್ ಆದ ಕೆಲವೇ ಸಮಯದಲ್ಲಿ ಅದು ವೈರಲ್ ಆಗಿ, ಒಂದು ಗಂಟೆಯೊಳಗೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ವಾಷಿಂಗ್ಟನ್: ‘ಇರಾನ್ ಸಂಘರ್ಷವನ್ನು ಕೊನೆಗೊಳಿಸಲು ಯಾವುದೇ ಆತುರ ಇಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ‘ಯುದ್ಧವನ್ನು ಕೊನೆಗೊಳಿಸಲು ಸಮಯವನ್ನು ನಿಗದಿಪಡಿಸುವುದಕ್ಕಿಂತ ಕಾರ್ಯಾಚರಣೆಯ ಉದ್ದೇಶಗಳನ್ನು ಸಾಧಿಸುವುದು ಮುಖ್ಯವಾಗಿದೆ’ ಎಂದು ಟ್ರಂಪ್ ಹೇಳಿದ್ದಾರೆ. ಕಳೆದ ದಿನವಷ್ಟೇ ಸಂಯುಕ್ತ ಅರಬ್ ಒಕ್ಕೂಟ, ಕತಾರ್ ಸೇರಿದಂತೆ ಅರಬ್ ರಾಷ್ಟ್ರಗಳ ಮನವಿಯಂತೆ ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಮತ್ತೊಂದೆಡೆ ಶಾಂತಿ ಒಪ್ಪಂದವನ್ನು ಒಪ್ಪದಿದ್ದರೆ ಅಮೆರಿಕ ಮತ್ತೊಮ್ಮೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇರಾನ್‌ನ ಮುಖ್ಯ ಸಮಾಲೋಚಕ ಹೇಳಿಕೆ ನೀಡಿದ್ದಾರೆ. ‘ಯುದ್ಧವನ್ನು ಕೊನೆಗೊಳಿಸಲು ಸಮಯವನ್ನು ನಿಗದಿಪಡಿಸುವುದಕ್ಕಿಂತ ಕಾರ್ಯಾಚರಣೆಯ ಉದ್ದೇಶಗಳನ್ನು ಸಾಧಿಸುವುದು ಮುಖ್ಯವಾಗಿದೆ’ ಎಂದು ಟ್ರಂಪ್ ಹೇಳಿದ್ದಾರೆ. ಕಳೆದ ದಿನವಷ್ಟೇ ಸಂಯುಕ್ತ ಅರಬ್ ಒಕ್ಕೂಟ, ಕತಾರ್ ಸೇರಿದಂತೆ ಅರಬ್ ರಾಷ್ಟ್ರಗಳ ಮನವಿಯಂತೆ ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಮತ್ತೊಂದೆಡೆ ಶಾಂತಿ ಒಪ್ಪಂದವನ್ನು…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ರಾಯ್‌ಬರೇಲಿ: ‘ಸಂವಿಧಾನದ ಮೇಲೆ ದಾಳಿ ಮಾಡುತ್ತಿರುವ ಮತ್ತು ದೇಶದ ಹಿತಾಸಕ್ತಿಗಳನ್ನು ಆಯ್ದ ಕೈಗಾರಿಕೋದ್ಯಮಗಳಿಗೆ ಮಾರಾಟ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ದೇಶದ್ರೋಹಿಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರವಾದ ಆರೋಪ ಮಾಡಿದ್ದಾರೆ. ರಾಯ್‌ಬರೇಲಿಯಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ನೀವೆಲ್ಲ ಎದ್ದು ನಿಂತು ಹೋರಾಡಬೇಕು. ಆರ್‌ಎಸ್‌ಎಸ್ ಕಾರ್ಯಕರ್ತರು ನಿಮ್ಮ ಮನೆಗಳಿಗೆ ಬಂದು ಮಾತನಾಡುವಾಗ ಮೋದಿ ಹಾಗೂ ಅಮಿತ್ ಶಾ ದೇಶದ್ರೋಹಿಗಳು ಎಂದು ಹೇಳಬೇಕು. ಅವರು ನಮ್ಮ ದೇಶವನ್ನು ಮಾರಾಟ ಮಾಡುವ ಕೆಲಸ ಮಾಡಿದ್ದಾರೆ. ನಮ್ಮ ಸಂವಿಧಾನ, ಅಂಬೇಡ್ಕರ್, ಮಹಾತ್ಮ ಗಾಂಧಿ ಅವರ ಮೇಲೆ ದಾಳಿ ನಡೆಸಿದ್ದಾರೆ’ ಎಂದು ಟೀಕಿಸಿದ್ದಾರೆ. ‘ಪ್ರಧಾನಿ ನರೇಗಾವನ್ನು ದುರ್ಬಲಗೊಳಿಸಿದ್ದು, ಜಾತಿ ಗಣತಿಯನ್ನು ನಡೆಸದೆ ದಿನದ 24 ಗಂಟೆಯೂ ಕೈಗಾರಿಕೋದ್ಯಮಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ‘ರಸಗೊಬ್ಬರ ಕೊರತೆಯು ರೈತರನ್ನು ಬಾಧಿಸುತ್ತದೆ. ಸೀಮೆಎಣ್ಣೆ…
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಇದೇ ಮೇ 26ಕ್ಕೆ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದ್ರೆ, ಅದಕ್ಕೂ ಮುನ್ನ ಅಂದರೆ ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಇಂದಿನಿಂದ (ಮೇ 20) ಮೇ 22ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿ (ಗಂಟೆಗೆ 50-60 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ-ಆರೇಂಜ್ ಅಲರ್ಟ್ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು (ಮೇ20) ಮತ್ತು ಮೇ 21ರಂದು ವೇಳೆಗೆ ಗುಡುಗು ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು,…
Subscribe to Updates
Get the latest creative news from FooBar about art, design and business.