Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: ಮಹಾರಾಷ್ಟ್ರದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ATNF) ಪೊಲೀಸರು, ನಮ್ಮ ಪೊಲೀಸರು, ಎನ್ಸಿಬಿ ಅಧಿಕಾರಿಗಳು ಹಾಗೂ ಸೋಕೋ (Scene of Crime Officers) ತಂಡದ ಅಧಿಕಾರಿಗಳ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ದಾಳಿ ನಡೆಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿ ಮಾತನಾಡಿದರು. ಹೊಸ ವರ್ಷ ಸಮೀಪಿಸುತ್ತಿರುವುದರಿಂದ ಡ್ರಗ್ಸ್ ದಂಧೆಯ ವಿರುದ್ಧ ಅಕ್ಟೋಬರ್, ನವೆಂಬರ್ ತಿಂಗಳಿಂದ ಪೊಲೀಸರು ರಾಜ್ಯದಾದ್ಯಂತ ಹೆಚ್ಚಿನ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ. ನಿನ್ನೆ ಮಹಾರಾಷ್ಟ್ರ ಪೊಲೀಸರು ಮುಂಬೈನಲ್ಲಿ ಸಿಕ್ಕ ಆರೋಪಿಯ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಆರೋಪಿಯೊಬ್ಬನನ್ನು ಹಿಡಿದಿದ್ದಾರೆ ಎಂದು ಹೇಳಿದರು. ಮುಂಬೈ ಪೊಲೀಸರು ಮತ್ತು ಬೆಂಗಳೂರು ನಗರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಡ್ರಗ್ಸ್ ತಯಾರಿಸಲು ಬೇಕಾದ ಮೆಫೆಡ್ರಿನ್…
Updated By: Priyalachhi ಮೈಸೂರು: ಹುಣಸೂರು ತಾಲೂಕಿನ ಚಿನ್ನಾಭರಣ ಮಳಿಗೆಗೆ 5 ಮಂದಿ ಡಕಾಯಿತರು ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಶಾಪ್ಗೆ ಮಧ್ಯಾಹ್ನ ಸುಮಾರು 2.10 ರ ಸಮಯದಲ್ಲಿ ಬೈಕ್ನಲ್ಲಿ ಬಂದ ಐವರು ಮುಸುಕುಧಾರಿಗಳು 7-8ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದ ವೇಳೆ ನುಗ್ಗಿ ದರೋಡೆ ಮಾಡಿದ್ದಾರೆ. 5 ಮಂದಿಯಲ್ಲಿ ನಾಲ್ವರು ಮುಸುಕು ಧರಿಸಿದ್ದರು. ಓರ್ವ ಗ್ಯಾಂಗ್ ಲೀಡರ್ ಎರಡು ಕೈಗಳಲ್ಲೂ ಗನ್ ಹಿಡಿದು ಸಿನಿಮೀಯ ಶೈಲಿಯಲ್ಲಿ ಬೆದರಿಕೆ ಹಾಕಿ, ಕೆಲವೇ ನಿಮಿಷದಲ್ಲಿ ಅಂಗಡಿಯಲ್ಲಿದ್ದ ಅಂದಾಜು 5 ಕೆ.ಜಿ. ಚಿನ್ನಾಭರಣ ದೋಚಿ ಪರಾರಿಯಾಗಿರುವ ಮಾಹಿತಿ ಬಂದಿದೆ. ದರೋಡೆಕೋರರನ್ನು ಸಿಬ್ಬಂದಿ ಹಿಂಬಾಲಿಸಿದ್ದಾರೆ. ಆದರೆ ಹಿಡಿಯಲು ಸಾಧ್ಯವಾಗಿಲ್ಲ. ದರೋಡೆ ನಡೆಸಿದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪರಾರಿಯಾಗುವ ವೇಳೆ ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರ…
Updated By: Priyalachhi ಬೆಳಗಾವಿ: “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರಿಗೆ ಅಧಿಕಾರ ಸಿಗುವುದಿಲ್ಲ ಅಂತಾ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಜ್ಯೋತಿಷ್ಯ ಭವಿಷ್ಯದಲ್ಲಿ ಒಂದು ಸಂಕ್ರಾಂತಿ ಫಲ. ಮತ್ತೊಂದು ಯಗಾದಿ ಫಲ ಅಂತಾ ಇರುತ್ತದೆ. ಸಂಕ್ರಾಂತಿ ಫಲದಲ್ಲಿ ಸೂರ್ಯ ಉತ್ತರಾಯಣ ಕಡೆ ಹೋಗುತ್ತಾನೆ. ಇದು ವಿಶೇಷವಾಗಿ ರಾಜರು, ಮಹಾರಾಜರು, ದೊಡ್ಡ ದೊಡ್ಡ ವ್ಯಾಪಾರಸ್ಥರು, ದುಡಿಮೆದಾರರಿಗೆ ಬರುತ್ತದೆ. 14ರ ನಂತರ ಸಂಕ್ರಾಂತಿ ಕಳೆದ ಮೇಲೆ ಈ ಭವಿಷ್ಯ ಹೇಳಬಹುದು” ಎಂದರು. “ಯುಗಾದಿ ಕಳೆದ ಮೇಲೆ ಮಳೆ, ಬೆಳೆ, ರೈತರು, ಭೂಮಿ ಬಗ್ಗೆ ಹೇಳಬಹುದು. ಆದರೆ, ಈಗ ಅತಂತ್ರ ಇದೆ. ಹಾಗಾಗಿ ಈಗ ಭವಿಷ್ಯ ಹೇಳುವುದು ಕಷ್ಟ. 2025ಕ್ಕಿಂತ 2026 ಹೆಚ್ಚು ಕಷ್ಟ ಇದೆ. 8-10 ಪರ್ಸಂಟ್…
Updated By: Priyalachhi ಬೆಂಗಳೂರು/ದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಿದೆ. ಇದನ್ನು ತೀವ್ರವಾಗಿ ವಿರೋಧಿಸಿ ಜನವರಿ ಐದರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕಾಂಗ್ರೆಸ್ ಪಕ್ಷದಿಂದ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ: ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದೆ. ಜನವಸತಿಗೆ ಅದು ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟಿಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಒದಗಿಸಲು ಇಲಾಖೆಯ ಕಾರ್ಯದರ್ಶಿ ಹಾಗೂ ಜಿಬಿಎ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.…
Updated By: Priyalachhi ಬೆಂಗಳೂರು: 26ನೇ ಆವೃತ್ತಿಯ ಬಸವನಗುಡಿ ಅವರೇಬೇಳೆ ಮೇಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ ದೊರೆತಿದೆ. ವಾಸವಿ ಕಾಂಡಿಮೆಂಟ್ಸ್ ಮಾಲೀಕರಾದ ಗೀತಾ ಶಿವಕುಮಾರ್ ಅವರು 2000ನೇ ಇಸವಿಯಲ್ಲಿ ಆರಂಭಿಸಿದ ಅವರೆಬೇಳೆ ಮೇಳ ಬೆಂಗಳೂರಿನ ಆಹಾರ, ಸಾಂಸ್ಕೃತಿಕ ಮತ್ತು ಪಾರಂಪರೆಯ ಪ್ರತೀಕವಾಗಿದೆ. ಈ ಬಾರಿ ಇನ್ನಷ್ಟು ವೈಭವದಿಂದ 4 ಜನವರಿ 2026ರ ವರೆಗೆ ಬಸವನ ಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವರೇಬೇಳೆ ಮೇಳಕ್ಕೆ ಚಾಲನೆ ನೀಡಿದರು. “ಹಣ್ಣುಗಳ ರಾಜ ಮಾವು ಹೇಗೋ ಅದೇ ರೀತಿ ಕಾಳುಗಳ ರಾಜ ಅವರೆಕಾಳು. ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ರಾಗಿ, ಜೋಳದ ಬೆಳೆ ಬೆಳೆಯುವಾಗ ಪಕ್ಕದಲ್ಲಿ ಅವರೇಕಾಳು ಸಾಮಾನ್ಯವಾಗಿ ಬೆಳೆಯುತ್ತಾರೆ. ಅವರೆಕಾಳು ನಮ್ಮೆಲ್ಲರ ನೆಚ್ಚಿನ ಖಾದ್ಯ. ವಾಸವಿ ಕಾಂಡಿಮೆಂಟ್ಸ್ ತಂಡದವರಿಂದ ಆಯೋಜನೆಯಾಗುತ್ತಿರುವ ಈ ಮೇಳದಿಂದ ನಮ್ಮ ಸಂಸ್ಕೃತಿ, ಇತಿಹಾಸವನ್ನ ಪಸರಿಸುವುದರ ಜೊತೆಗೆ ನಮ್ಮ ರೈತರಿಗೆ ವೇದಿಕೆ ಸಿಗಲಿ. ಬೆಂಗಳೂರಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಅವರೇಬೇಳೆ ಮೇಳಕ್ಕೆ ಬರಲಿ” ಎಂದು…
Updated By: Priyalachhi ತುಮಕೂರು : ವರ್ಕಿಂಗ್ ಕಮಿಟಿ ಮೀಟಿಂಗ್ ಇವತ್ತು ದೆಹಲಿಯಲ್ಲಿದೆ. ವರ್ಕಿಂಗ್ ಕಮಿಟಿ ಮೀಟಿಂಗ್ಗೆ ಎಲ್ಲಾ ಸಿಎಂಗಳಿಗೆ ಆಹ್ವಾನ ಬಂದಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಗಿದ್ದಾರೆ. ಅಲ್ಲಿ ಏನ್ ನಡೆಯುತ್ತೆ, ಯಾವ ಉದ್ದೇಶ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮಾಜಿ ಸಚಿವ ಕೆ. ಎನ್. ರಾಜಣ್ಣ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅವರು ಹೋಗೋದಿಲ್ಲ, ಅವರಿಗೆ ಆಹ್ವಾನ ಇಲ್ಲ ಎಂಬ ಮಾಹಿತಿ ನನಗೆ ಇತ್ತು. ಸಿದ್ದರಾಮಯ್ಯ ಕೇಂದ್ರ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ಮಾಡಲು ಅನುಮತಿ ಪಡೆದು ಬರ್ತಾರೆ ಎಂಬ ವಿಶ್ವಾಸ ಇದೆ. ನನಗೆ ಸಚಿವ ಸ್ಥಾನ ಸಿಕ್ಕಿದ್ರೂ ಒಂದೇ, ಸಿಗಲಿಲ್ಲ ಅಂದ್ರೂ ಒಂದೇ’ ಎಂದರು. ‘ವಿರೋಧ ಪಕ್ಷದವರು ಯಾವತ್ತೂ ನಮ್ಮ ಮಾತಿಗೆ ಸಹಮತ ವ್ಯಕ್ತಪಡಿಸಬೇಕು ಎಂಬ ನಿರೀಕ್ಷೆ ಇಲ್ಲ. ನಾವು ಮಾಡುವ ಕೆಲಸವನ್ನು ತಿರುಚಿ ಜನರಿಗೆ ಹೇಳೋದೇ ವಿರೋಧ ಪಕ್ಷದ ಕೆಲಸ. ಬಿಜೆಪಿಯಲ್ಲಿ ಇರುವಂತಹ ಜಗಳ ಕಾಂಗ್ರೆಸ್ನಲ್ಲಿ ಇಲ್ಲವೇ ಇಲ್ಲ.…
Updated By: Priyalachhi ಕಾರವಾರ: ರಾಷ್ಟ್ರಪತಿ, ಭಾರತದ ಸಶಸ್ತ್ರ ಪಡೆಗಳ ಮಹಾದಂಡನಾಯಕಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 28ರ ಭಾನುವಾರ ಕಾರವಾರದ ಕದಂಬ ನೌಕಾನೆಲೆಗೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. ಏಷ್ಯಾದ ಅತಿದೊಡ್ಡ ನೌಕಾನೆಲೆಯಾಗಿ ಅಭಿವೃದ್ಧಿ ಹೊಂದುತ್ತಿರುವ ‘ಸೀಬರ್ಡ್’ಗೆ ರಾಷ್ಟ್ರಪತಿಗಳು ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಕರಾವಳಿಯಲ್ಲಿ ಬಿಗಿ ಭದ್ರತೆ ಹಾಗೂ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಲಾಂತರ್ಗಾಮಿಯಲ್ಲಿ ಸಮುದ್ರಯಾನ: ರಾಷ್ಟ್ರಪತಿಗಳ ಕಾರ್ಯಾಲಯದ ಪ್ರಕಟಣೆಯಂತೆ, ಡಿ. 27ರಂದು ಗೋವಾಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು, ಡಿ. 28ರಂದು ಬೆಳಗ್ಗೆ ಕಾರವಾರಕ್ಕೆ ಬರಲಿದ್ದಾರೆ. ಕಾರವಾರದ ನೌಕಾ ದಕ್ಕೆಯಿಂದ ಜಲಾಂತರ್ಗಾಮಿಯೊಂದರಲ್ಲಿ (Submarine) ಸಮುದ್ರಯಾನ (Sea Sortie) ಕೈಗೊಳ್ಳಲಿರುವುದು ಈ ಭೇಟಿಯ ವಿಶೇಷವಾಗಿದೆ. ಮಧ್ಯಾಹ್ನದ ನಂತರ ಅವರು ಕಾರವಾರದಿಂದ ನಿರ್ಗಮಿಸಲಿದ್ದು, ಡಿ. 29ರಂದು ಜಾರ್ಖಂಡ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಪಾಲರಿಂದ ಸ್ವಾಗತ: ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲು ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಕಾರವಾರಕ್ಕೆ ಆಗಮಿಸಲಿದ್ದಾರೆ. ನೌಕಾಸೇನೆಯ ಅಧಿಕೃತ ಕಾರ್ಯಕ್ರಮ ಇದಾಗಿರುವುದರಿಂದ, ನೌಕಾನೆಲೆಯ ಹಿರಿಯ ಅಧಿಕಾರಿಗಳು ಹಾಗೂ ಪಿಆರ್ಒ ಅರವಿಂದ್ ನೇತೃತ್ವದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೀನುಗಾರಿಕೆ ನಿಷೇಧ…
Updated By: Priyalachhi ನವದೆಹಲಿ: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. ಕೋಗಿಲು ಲೇಔಟ್ ನಲ್ಲಿ 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಅವರಿಗೆ ನೋಟಿಸ್ ಕೊಟ್ಟು ತೆರವು ಮಾಡಬೇಕು ಎಂದು ಹೇಳಿದ್ದೇವು. ಆದರೆ ಅಲ್ಲಿ ವಾಸಿಸುತ್ತಿದ್ದವರು ನಮ್ಮ ಮಾತನ್ನು ಕೇಳಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ ನಡೆಸಿ ಜಾಗವನ್ನು ಖಾಲಿ ಮಾಡಿಸಿದ್ದಾರೆ. ಈ ಬಗ್ಗೆ ನಾನು ಜಿಬಿಎ ಕಮಿಷನರ್ ಹಾಗೂ ರಾಜ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೀನಿ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ. ಅವರೆಲ್ಲಾ ವಲಸಿಗರಾದರೂ ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಜಾಗ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Updated By: Priyalachhi ಬೆಂಗಳೂರು: “ಕೋಗಿಲು ಕ್ರಾಸ್ನಲ್ಲಿರುವ ಅಕ್ರಮ ವಸತಿಗಳನ್ನು ತೆರವುಗೊಳಿಸಿರುವುದರ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಾಸ್ತವ ಅರ್ಥಮಾಡಿಕೊಳ್ಳದೆ ಟೀಕಿಸಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿಸಿಎಂ, “ಕಾನೂನಾತ್ಮಕವಾಗಿ ಅಧಿಕಾರಿಗಳು ಮಾಡಬೇಕಿರುವ ಕೆಲಸವನ್ನು ಮಾಡಿದ್ದಾರೆ. ಹಿರಿಯ ನಾಯಕರಾದ ಪಿಣರಾಯಿ ವಿಜಯನ್ ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಮಾತನಾಡಿರುವುದು ದುರಾದೃಷ್ಟಕರ. ತ್ಯಾಜ್ಯವನ್ನು ಡಂಪ್ ಮಾಡಲು 9 ವರ್ಷಗಳ ಹಿಂದೆಯೇ ನೋಟಿಫೈ ಮಾಡಿ, ನಿಗದಿಯಾಗಿದ್ದ ಸ್ಥಳದಲ್ಲಿ ಕೆಲ ಸ್ಥಳೀಯರು, ಇನ್ನೂ ಕೆಲವರು ಬೇರೆಡೆಯಿಂದ ಬಂದವರು ಅಕ್ರಮವಾಗಿ ವಸತಿ ಪ್ರದೇಶಗಳನ್ನು ನಿರ್ಮಿಸಿಕೊಂಡಿದ್ದರು”. “ಅಲ್ಲಿ ನೆಲೆಸುವುದರಿಂದ ಆರೋಗ್ಯದ ಅಪಾಯಗಳೂ ಸಹ ಇರುವುದರಿಂದ ವಸತಿ ಪ್ರದೇಶಗಳನ್ನು ತೆರವುಗೊಳಿಸಲಾಗಿದೆ. ಇಂಥಹ ವಿಚಾರಗಳಲ್ಲಿ ಪಿಣರಾಯಿ ವಿಜಯನ್ ಅವರಂಥಹ ಹಿರಿಯ ನಾಯಕರು ವಾಸ್ತವ ಅರಿಯದೆ ಮಾತನಾಡಬಾರದು. ಬೆಂಗಳೂರಿನ ಬಗ್ಗೆ ನಮಗೆ ಅರಿವಿದೆ, ಈ ರೀತಿಯ ಭೂ ಮಾಫಿಯಾವನ್ನು ಸರ್ಕಾರ ಪ್ರೋತ್ಸಾಹಿಸುವುದಿಲ್ಲ. ಸೂಕ್ತ ದಾಖಲೆಗಳನ್ನು ಹೊಂದಿರುವ ಅರ್ಹರಿಗೆ ಬೇರೆ ಮನೆಗಳನ್ನು ನಾವು ನೀಡಲಿದ್ದೇವೆ” ಎಂದು…
Updated By: Priyalachhi ಮೈಸೂರು: ಅರಮನೆ ಎದುರು ನಡೆದ ಸ್ಫೋಟ ಪ್ರಕರಣ ಕಾನೂನು ಸುವ್ಯವಸ್ಥೆಯ ವೈಫಲ್ಯ ಅಲ್ಲ. ಅದೊಂದು ಅಪಘಾತ. ಮೃತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಪರಿಹಾರ ನೀಡಲು ಅವಕಾಶವಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು. ಇಂದು ಕೆ.ಆರ್.ಆಸ್ಪತ್ರೆಗೆ ಯದುವೀರ್, ಶಾಸಕ ಶ್ರೀವತ್ಸ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ, “ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ಗೆ ಬಳಸುವ ಹೀಲಿಯಂ ಗ್ಯಾಸ್ನ ಸಿಲಿಂಡರ್ ಸ್ಫೋಟಗೊಂಡು ಸಲೀಂ ಎಂಬಾತ ಮೃತಪಟ್ಟಿದ್ದು, ಸ್ಪೋಟದಲ್ಲಿ ಗಾಯಗೊಂಡ ಐವರಲ್ಲಿ ನಂಜನಗೂಡಿನ ಮಹಿಳೆ ಮಂಜುಳಾ ಎಂಬವರು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ” ಎಂದು ಹೇಳಿದರು. “ಈ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಅಸಂಘಟಿತ ವ್ಯಾಪಾರಿಗಳಿಗೆ ಒಂದು ಪ್ರತ್ಯೇಕ ಜೋನ್ ಮಾಡುವ ಕುರಿತು ಪಾಲಿಕೆಯೊಂದಿಗೆ ಮಾತನಾಡಿದ್ದೇನೆ. ಆದರೆ, ಆಯುಕ್ತರು ಏನೂ ಕ್ರಮ ತೆಗೆದುಕೊಂಡಿಲ್ಲ” ಎಂದು ತಿಳಿಸಿದರು. “ಈ ಬಗ್ಗೆ ಮತ್ತೆ ಪ್ರಶ್ನಿಸುತ್ತೇನೆ. ಅಧಿಕಾರಿಗಳು, ಅಸಂಘಟಿತ ವ್ಯಾಪಾರಸ್ಥರನ್ನು ಗುರುತಿಸಬೇಕಾಗಿದೆ. ಈ ಘಟನೆ…
Subscribe to Updates
Get the latest creative news from FooBar about art, design and business.