Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ನವದೆಹಲಿ: ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಮಧ್ಯೆ ಹುಳಿ ಹಿಂಡುವ ಆರೋಪ ಈ ವರೆಗೂ ಅಮೆರಿಕ ವಿರುದ್ಧ ಕೇಳಿಬರುತ್ತಿತ್ತು. ಈಗ ಭಾರತ- ಅಮೆರಿಕ ನಡುವಿನ ಸಂಬಂಧ ಹಳ್ಳಹಿಡಿಸಲು ಚೀನಾ ಕುತಂತ್ರ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಭಾರತ ಮತ್ತು ವಾಷಿಂಗ್ಟನ್ ನಡುವಿನ ಆಳವಾದ ಕಾರ್ಯತಂತ್ರದ ಹೊಂದಾಣಿಕೆಯನ್ನು ತಡೆಯಲು ಭಾರತದೊಂದಿಗೆ ವಾಸ್ತವಿಕ ನಿಯಂತ್ರಣ ರೇಖೆ (LAC)ಯಲ್ಲಿ ಕಡಿಮೆಯಾದ ಉದ್ವಿಗ್ನತೆಯನ್ನು ಬೀಜಿಂಗ್ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸುವ ಪೆಂಟಗನ್ ವರದಿಯನ್ನು ಚೀನಾ ಖಂಡಿಸಿದೆ. “ಪೆಂಟಗನ್‌ನ ವರದಿ ಚೀನಾದ ರಕ್ಷಣಾ ನೀತಿಯನ್ನು ತಿರುಚಿ ಹೇಳುತ್ತಿದೆ, ಚೀನಾ ಮತ್ತು ಇತರ ದೇಶಗಳ ನಡುವೆ ಭಿನ್ನಾಭಿಪ್ರಾಯವನ್ನು ಬಿತ್ತುತ್ತದೆ ಮತ್ತು ಅಮೆರಿಕ ತನ್ನ ಮಿಲಿಟರಿ ಪ್ರಾಬಲ್ಯವನ್ನು ಕಾಪಾಡಿಕೊಳ್ಳಲು ನೆಪವನ್ನು ಹುಡುಕುವ ಗುರಿಯನ್ನು ಹೊಂದಿದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ. ಚೀನಾದ ಮಿಲಿಟರಿ ಮತ್ತು ಭದ್ರತಾ ಬೆಳವಣಿಗೆಗಳ ಕುರಿತು ಯುಎಸ್ ಯುದ್ಧ ಇಲಾಖೆಯು ಕಾಂಗ್ರೆಸ್‌ಗೆ ಸಲ್ಲಿಸಿದ ಇತ್ತೀಚಿನ ವಾರ್ಷಿಕ ವರದಿಯ ಬಗ್ಗೆ ಕೇಳಿದಾಗ…

Read More

Updated By: Priyalachhi ಬೆಂಗಳೂರು: ಕೊಲೆ, ರಾಬರಿ, ಡಕಾಯಿತಿ, ಅತ್ಯಾಚಾರ ಸೇರಿದಂತೆ ಪ್ರಮುಖ ಅಪರಾಧ ಪ್ರಕರಣಗಳು ರಾಜ್ಯದಲ್ಲಿ ತುಸು ಕಡಿಮೆಯಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ 2025ರಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಅಲ್ಲದೆ, ಕೋಮುಗಲಭೆ ಹಾಗೂ ಗ್ಯಾಂಗ್ ಚಟುವಟಿಕೆಗಳ ನಿಯಂತ್ರಣಕ್ಕೆ ಪೊಲೀಸರು ಕೈಗೊಂಡ ಬಿಗಿ ಕ್ರಮಗಳಿಂದ ಅಪರಾಧಗಳಿಗೆ ಬ್ರೇಕ್ ಹಾಕಿದ್ದಾರೆ. ಪೊಕ್ಸೊ, ಅತ್ಯಾಚಾರ, ಹಲ್ಲೆ, ಎನ್​ಡಿಪಿಎಸ್, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ವಂಚನೆ, ರಾಬರಿ, ಡಕಾಯಿತಿ ಹಾಗೂ ಗಲಭೆ ಸೇರಿದಂತೆ ರಾಜ್ಯದಲ್ಲಿ 2024ರಲ್ಲಿ 29,159 ಪ್ರಕರಣ ದಾಖಲಾಗಿದ್ದರೆ, ಈ ವರ್ಷ ಡಿಸೆಂಬರ್​ (15ರ ವರೆಗೆ) ಅಂತ್ಯಕ್ಕೆ 27,159 ಪ್ರಕರಣಗಳು ದಾಖಲಾಗಿವೆ. ಕೊಲೆ, ರಾಬರಿ, ಡಕಾಯಿತಿ ಹಾಗೂ ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಈ ವರ್ಷ ಗಮನಾರ್ಹ ಇಳಿಕೆಯಾಗಿದೆ. ಡ್ರಗ್ಸ್ ವಿರುದ್ಧ ಸಮರ ಸಾರಿರುವ ರಾಜ್ಯ ಪೊಲೀಸರು ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ದಾಖಲಿಸುವ ಮೂಲಕ ದಂಧೆಯಲ್ಲಿ ತೊಡಗಿಸಿಕೊಂಡಿದ್ದವರನ್ನು ಹಡೆಮುರಿ ಕಟ್ಟಿರುವುದಾಗಿ ಗೃಹ ಇಲಾಖೆ ನೀಡಿದ ಅಂಕಿ-ಅಂಶಗಳಿಂದ…

Read More

Updated By: Priyalachhi ಇಂದಿನ ಪಂಚಾಂಗ ದಿನಾಂಕ : 26-12-2025 ವಾರ : ಶುಕ್ರವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ಷಷ್ಠಿ ನಕ್ಷತ್ರ : ಸ್ತಭಿಷ ಸೂರ್ಯೋದಯ : ಮುಂಜಾನೆ 06:38 ಗಂಟೆಗೆ ಅಮೃತ ಕಾಲ : ಮುಂಜಾನೆ 08:03 ರಿಂದ 09:28ರ ವರೆಗೆ ದುರ್ಮುಹೂರ್ತ : ಮುಂಜಾನೆ 9:2 ರಿಂದ 9:50ರ ವರೆಗೆ ಮತ್ತು ಮಧ್ಯಾಹ್ನ 03:26 ರಿಂದ 04:14ರ ವರೆಗೆ ರಾಹುಕಾಲ : ಮುಂಜಾನೆ 10:53ರಿಂದ 12:18ರ ವರೆಗೆ ಸೂರ್ಯಾಸ್ತ : ಸಂಜೆ 05:58 ಗಂಟೆಗೆ ರಾಶಿ ಭವಿಷ್ಯ ಮೇಷ: ಇಂದು ನೀವು ವಿವರಿಸಲಾಗದ ಮತ್ತು ಅದ್ಭುತ ಘಟನೆಯಿಂದ ಗೊಂದಲಕ್ಕೀಡಾಗುತ್ತೀರಿ. ಅದು ಅನಿರೀಕ್ಷಿತ ಆದರೆ ಪೂರಕ ಘಟನೆ ಎಂದು ಪರಿಗಣಿಸಬಹುದು. ಗಡುವುಗಳನ್ನು ಮುಟ್ಟಲು ಕಷ್ಟವಾಗುತ್ತದೆ. ಆದರೆ, ನಿಮ್ಮ ಕೆಲಸದ ಪ್ರಾಮುಖ್ಯತೆ ಕುರಿತು ಜನರಿಗೆ ಹೇಳುವುದು ಉತ್ತಮ. ವೃಷಭ: ನೀವು ಇಂದು ನಿಮ್ಮ ಮಿತ್ರರು ಮತ್ತು ಸಹವರ್ತಿಗಳ ಕುರಿತು ಅತ್ಯಂತ ನಿರಾಸೆ ಮತ್ತು ಕಿರಿಕಿರಿಯ ನಡುವೆ, ನೀವು ಅತ್ಯಂತ ಪೊಸೆಸಿವ್ ಮತ್ತು ಸ್ವಯಂ-ಕೇಂದ್ರಿತ ಭಾವನೆಯನ್ನು ವ್ಯಕ್ತಿಗಳು ಮತ್ತು…

Read More

Updated By: Priyalachhi ನವದೆಹಲಿ/ಮೈಸೂರು: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್​​​ ಬ್ಯೂರೋ ಆಫ್​​ ಕಮ್ಯುನಿಕೇಷನ್​-CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, “ಮೈಸೂರಿನಲ್ಲಿ ಕೇಂದ್ರೀಯ ಸಂಪರ್ಕ ಬ್ಯೂರೋವನ್ನು ಮತ್ತಷ್ಟು ಉನ್ನತೀಕರಿಸಿ ಯಥಾಸ್ಥಿತಿಯಲ್ಲಿ ಮುಂದುವರಿಸುವುದು ಅತ್ಯಗತ್ಯ. ರಾಜ್ಯದಲ್ಲೇ ಮೈಸೂರು ನಗರಕ್ಕೆ ಐತಿಹಾಸಿಕ ಪ್ರಾಮುಖ್ಯತೆ ಇದೆ. ಇಲ್ಲಿಗೆ ದೇಶ, ವಿದೇಶಗಳಿಂದ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಾರೆ. ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಜನಪರ ಕಾರ್ಯಕ್ರಗಳನ್ನು ಪ್ರಸರಿಸುವಲ್ಲಿ ಈ ಬ್ಯೂರೋ ಪ್ರಮುಖ ಪಾತ್ರ ವಹಿಸುತ್ತಿದೆ. ಮುಖ್ಯವಾಗಿ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಜನತೆಗೆ ಮಾಹಿತಿ ನೀಡುವಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದೆ. ಒಂದು ವೇಳೆ ಈ ಬ್ಯೂರೋದ ಕಚೇರಿ ಸ್ಥಗಿತವಾದರೆ ಕೇಂದ್ರ ಸರ್ಕಾರ…

Read More

Updated By: Priyalachhi ರಾಜ್ಯಾದ್ಯಂತ ಇಂದು ಸಿನಿಮಾ ಸಂಭ್ರಮ ಬಹಳ ಜೋರಾಗಿದೆ. ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟ ಅಭಿನಯ ಚಕ್ರವರ್ತಿ ಖ್ಯಾತಿಯ ಸುದೀಪ್​ ಮುಖ್ಯಭೂಮಿಕೆಯ 2025ರ ಬಹುನಿರೀಕ್ಷಿತ ಚಿತ್ರ ‘ಮಾರ್ಕ್​’ ಫೈನಲಿ ಚಿತ್ರಮಂದಿರ ಪ್ರವೇಶಿಸಿದೆ. ಕೋಟ್ಯಂತರ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮುಂಜಾನೆಯೇ ಥಿಯೇಟರ್​ ಬಳಿ ಸಂಭ್ರಮಾಚರಣೆ ಶುರುವಾಗಿತ್ತು. ಕರ್ನಾಟಕದಲ್ಲಿ 180ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬೆಂಗಳೂರಿನ ಸಂತೋಷ್ ಸೇರಿ ಹಲವು ಥಿಯೇಟರ್​ಗಳಲ್ಲಿ ಬೆಳಗ್ಗೆ 6.30ಕ್ಕೆ ಶೋ ಆರಂಭಗೊಂಡಿದೆ. ಸುದೀಪ್ ಪುತ್ರಿ ಸಾನ್ವಿ ಹಾಗೂ ಪತ್ನಿ ಪ್ರಿಯಾ ಅವರು ಸಂತೋಷ್ ಚಿತ್ರಮಂದಿರದಲ್ಲಿ ಬೆಳಗ್ಗೆಯೇ ಅಭಿಮಾನಿಗಳ ಜೊತೆ ಕುಳಿತು ‘ಮಾರ್ಕ್’ ಸಿನಿಮಾ ವೀಕ್ಷಿಸಿ ಸಂಭ್ರಮಿಸಿದ್ದಾರೆ. ಸಿನಿಮಾದ ‘ಮಸ್ತ್ ಮಲೈಕಾ’ ಸಾಂಗ್ ಮೂಲಕ​ ಸುದೀಪ್​ ಪುತ್ರಿ ಸಾನ್ವಿ ಅವರು ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಮಗಳು ಸಾನ್ವಿ ಈ ಹಾಡಿಗೆ ಕಂಠದಾನ ಮಾಡಿದ್ದು, ತಂದೆ ಕಿಚ್ಚ‌ ಸುದೀಪ್​ ಭರ್ಜರಿ ಡ್ಯಾನ್ಸ್​​ ಮಾಡಿದ್ದಾರೆ. ಈ ಮೂಲಕ ಸಾನ್ವಿ ಸುದೀಪ್​​…

Read More

Updated By: Priyalachhi Aus vs ENG 4th Test: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಟೆಸ್ಟ್ ಸರಣಿಯು ಭರದಿಂದ ಸಾಗುತ್ತಿದೆ. ಈ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇದುವರೆಗೆ ಮೂರು ಪಂದ್ಯಗಳು ಪೂರ್ಣಗೊಂಡಿದ್ದು, ಆಸ್ಟ್ರೇಲಿಯಾ ಮೂರನ್ನೂ ಗೆದ್ದು ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡು ಟ್ರೋಫಿಯನ್ನು ಸಹ ಉಳಿಸಿಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ನಾಲ್ಕನೇ ಬಾಕ್ಸಿಂಗ್​ ಡೇ ಟೆಸ್ಟ್ ಪಂದ್ಯ ನಾಳೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಸರಣಿಯನ್ನು ಗೆದ್ದಿರುವ ಆಸ್ಟ್ರೇಲಿಯಾ, ಉಳಿದ ಪಂದ್ಯಗಳನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ಅನ್ನು ವೈಟ್‌ವಾಶ್ ಮಾಡುವ ಗುರಿಯನ್ನು ಹೊಂದಿದೆ. ಇಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕಾಗಿ 12 ಆಟಗಾರರ ತಂಡ ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಸರಣಿಯಿಂದ ಹೊರಗುಳಿದ ಕಾರಣ ಸ್ಟೀವ್ ಸ್ಮಿತ್ ಮತ್ತೊಮ್ಮೆ ತಂಡವನ್ನು ಮುನ್ನಡೆಸಲಿದ್ದಾರೆ. ಗುರುವಾರ ಆಸ್ಟ್ರೇಲಿಯಾದ ಅಂತಿಮ ತರಬೇತಿ ಅವಧಿಯ ನಂತರ ನಾಲ್ಕನೇ ಟೆಸ್ಟ್‌ಗೆ ತಂಡ ಪ್ರಕಟಿಸಿದೆ. ನಾವು ನಾಳೆ ಪಿಚ್​ ಪರಿಸ್ಥಿತಿಯನ್ನು ಗಮನಿಸಿದ…

Read More

Updated By: Priyalachhi ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿ.27 ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ ಸಿಡಬ್ಲ್ಯುಸಿ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

Read More

Updated By: Priyalachhi ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಇದು ರಾಜ್ಯದಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಅಧಿಕಾರದ ಜಗಳಕ್ಕೆ ಸಂಬಂಧಿಸಿದ ಊಹಾಪೋಹಗಳಿಗೆ ಕಾರಣವಾಗಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ಡಿಸೆಂಬರ್ 26 ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಕೆಶಿ, ಇಂದು (ಡಿಸೆಂಬರ್ 25) ಬೆಂಗಳೂರಿನಲ್ಲಿ ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿವಕುಮಾರ್, ಡಿಸೆಂಬರ್ 27ರಂದು ದೆಹಲಿಯಲ್ಲಿ…

Read More

Updated By: Priyalachhi ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 11ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ನಡುವೆ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್​ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ದುರಂತದಲ್ಲಿ 11 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್​ನಲ್ಲಿ ಸುಮಾರು 32 ಮಂದಿ ಪ್ರಯಾಣಿಕರು ಇದ್ದರು ಎಂದು ವರದಿಗಳಿಂದ ತಿಳಿದುಬಂದಿದೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Read More

Updated By: Priyalachhi ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನನ್ನ ಹೆಸರನ್ನು ಇದರಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಜಿ ಪ್ರಧಾನಿ, ಎಚ್.ಡಿ.ದೇವೇಗೌಡರು ಹೇಳಿದ್ದಾರೆ. ಬುಧವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೆಲವು ರೈತರು ಹಾಗೂ ನನ್ನನ್ನು ಉಲ್ಲೇಖ (ಪಾರ್ಟಿ) ಮಾಡಿದೆ. ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದು ತಿಳಿಸಿದರು. ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‍ಶಿಪ್ ಗಳು, ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ. ನೈಸ್ ಕಂಪೆನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ…

Read More