Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ ತನ್ನ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಪತ್ರ ಬರೆದಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಎಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಅಕ್ಟೋಬರ್‌ 31ರಂದು ನಮಗೆ ಪತ್ರ ಬರೆದಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ನಾವು ನವೆಂಬರ್‌ 24ರಂದು ಪ್ರತ್ಯುತ್ತರ ಬರೆದಿದ್ದೆವು. ಈತನ್ಮಧ್ಯೆ ಪ್ರಸ್ತಾವಿನ ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ಸ್ಯಾನ್ಸನ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮತ್ತು ಭಾರತೀಯ ವ್ಯವಹಾರಗಳ ಮುಖ್ಯಸ್ಥ ಅಭಯ್ ಕೆ. ರೈ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಲಾಗಿದೆ. ಆದರೆ ಅವರ ಕಡೆಯಿಂದ ಇದುವರೆಗೂ ಉತ್ತರ ಬಂದಿಲ್ಲ ಎಂದಿದ್ದಾರೆ. ಆ ಕಂಪನಿಯ ಉನ್ನತಾಧಿಕಾರಿಗಳನ್ನು ಸಂಪರ್ಕಿಸಲು ಸಾಕಷ್ಟು ಪ್ರಯತ್ನಿಸಿದರೂ ಅವರು ಸಿಕ್ಕಿಲ್ಲ. ಈ…

Read More

Updated By: Priyalachhi ನವದೆಹಲಿ: ದೆಹಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ ಆರೋಪದ ನಂತರ ಭಾರತ ಕೇವಲ ಸತ್ತ ಆರ್ಥಿಕತೆಯಲ್ಲ, ಸತ್ತ ಸಮಾಜವೂ ಆಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕಿಡಿ ಕಾರಿದ್ದಾರೆ. ದೆಹಲಿ ಹೈಕೋರ್ಟ್, ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ ಜೈಲು ಶಿಕ್ಷೆ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಅತ್ಯಾಚಾರ ಸಂತ್ರಸ್ತೆ ಮೇಲೆ ದೌರ್ಜನ್ಯ ಮತ್ತು ಭಯವನ್ನುಂಟುಮಾಡುವ ಬದಲು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವೇ? ನ್ಯಾಯಕ್ಕಾಗಿ ಧ್ವನಿ ಎತ್ತುವ ಧೈರ್ಯ ಹೊಂದಿರುವುದು ಆಕೆಯ ‘ತಪ್ಪೇ? ವಿಶೇಷವಾಗಿ ಸಂತ್ರಸ್ತೆ ಪದೇ ಪದೇ ಕಿರುಕುಳಕ್ಕೊಳಗಾಗುತ್ತಿರುವಾಗ ಮತ್ತು ಭಯದ ನೆರಳಿನಲ್ಲಿ ಬದುಕುತ್ತಿರುವಾಗ ಅಪರಾಧಿ(ಮಾಜಿ ಬಿಜೆಪಿ ಶಾಸಕ ಸೆಂಗಾರ್)ಯ ಶಿಕ್ಷೆ ಅಮಾನತುಗೊಳಿಸಿ, ಜಾಮೀನು ನೀಡಲಾಗಿದೆ ಎಂಬುದು ಅತ್ಯಂತ ನಿರಾಶಾದಾಯಕ ಮತ್ತು ನಾಚಿಕೆಗೇಡಿನ ಸಂಗತಿ” ಎಂದು…

Read More

Updated By: Priyalachhi ಪಂಚಾಂಗ: ದಿನಾಂಕ : 25-12-2025 ವಾರ : ಗುರುವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ಪಂಚಮಿ ನಕ್ಷತ್ರ : ಧನಿಷ್ಠ ಸೂರ್ಯೋದಯ : ಮುಂಜಾನೆ 06:38 ಗಂಟೆಗೆ ಅಮೃತ ಕಾಲ : ಬೆಳಗ್ಗೆ 09:28 ರಿಂದ 10:52ರ ವರೆಗೆ ದುರ್ಮುಹೂರ್ತ : ಬೆಳಗ್ಗೆ 10:38 ರಿಂದ 11:26 ಹಾಗೂ ಮಧ್ಯಾಹ್ನ 03:26 ರಿಂದ 04:14ರ ತನಕ ರಾಹುಕಾಲ : ಮಧ್ಯಾಹ್ನ 01:42 ರಿಂದ 03:07ರ ವರೆಗೆ ಸೂರ್ಯಾಸ್ತ : ಸಂಜೆ 05:57 ಗಂಟೆಗೆ ರಾಶಿ ಭವಿಷ್ಯ: ಮೇಷ : ಇಂದು ನೀವು ಹಸಿರುಮಯ ಜೀವನ ಭಾವನೆಯಲ್ಲಿದ್ದೀರಿ ಮತ್ತು ತಾರೆಗಳೂ ಅನುಮೋದಿಸಿವೆ. ನೀವು ಗಿಡ ನೆಡಬಹುದು. ಕಸದ ಡಬ್ಬಿಗಳನ್ನು ಜೋಡಿಸುವ ಮೂಲಕ ನೆರೆಹೊರೆಯನ್ನು ಸ್ವಚ್ಛವಾಗಿರಿಸಬಹುದು. ನೀವು ಜೀವಿಸುವ ವಿಶ್ವ ಉತ್ತಮ ತಾಣವಾಗಲು ಬಯಸಿದ್ದರೆ ಹಂತ ಹಂತವಾಗಿ ಇದನ್ನು ಮಾಡಿರಿ. ವೃಷಭ : ಹಡಗುಗಳು ಬಂದರಿನಿಂದ ಹೊರಟಿವೆ. ನಿಮ್ಮ…

Read More

Updated By: Priyalachhi ಕಳೆದ 23 ರಂದು ನೆಡೆದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಿಗಮದ ಕೇಂದ್ರ ಕಚೇರಿಯಲ್ಲಿ ‘ಪ್ರಗತಿ ಪರಿಶೀಲನಾ ಸಭೆ’ ನಡೆಯಿತು. ಈ ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ನಾಗರಾಜ್. ಎಂ ಸೇರಿದಂತೆ ನಿಗಮದ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ನಿಗಮದ ವಿವಿಧ ಕೌಶಲ್ಯಾಭಿವೃದ್ಧಿ ಯೋಜನೆಗಳ ಪ್ರಸ್ತುತ ಸ್ಥಿತಿಗತಿ, ಕಾರ್ಯನಿರ್ವಹಣೆಯ ಪ್ರಗತಿ ಹಾಗೂ ಮುಂದಿನ ಗುರಿಗಳ ಕುರಿತು ಪಿಪಿಟಿ ಪ್ರೆಸೆಂಟೇಷನ್ ಮೂಲಕ ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು. ರಾಜ್ಯದ ಯುವಜನತೆಗೆ ಗುಣಮಟ್ಟದ ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶಗಳ ವೃದ್ಧಿಗೆ ಪೂರಕವಾಗುವಂತೆ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

Updated By: Priyalachhi ಇತ್ತೀಚೆಗೆ ತುರುವೇಕೆರೆ ತಾಲ್ಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದ ನಮ್ಮ ಕಾರ್ಯ ಕರ್ತ ಬೈರೇಗೌಡರವರ ಪತ್ನಿ ಶ್ರೀಮತಿ ಸುಜಾತರವರು ದನಕರುಗಳನ್ನು ಮೇಯಿಸಲು ಹೋದಾಗ ಚಿರತೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಮನಗೆ ಹೋಗಿ ಕುಟುಂಬಕ್ಕೆ ಸಂತ್ವಾನ ಹೇಳಿ ಕುಟುಂಬಕ್ಕೆ 50. ಸಾವಿರ ರೂಪಾಯಿ ಪರಿಹಾರ ನೀಡಿ,ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಭರವಸೆ ನೀಡಲಾಯಿತು,ಹಾಗೂ ಇಬ್ಬರೂ ಮಕ್ಕಳ ಪೈಕಿ ಒಬ್ಬರಿಗೆ ಕುಟುಂಬ ನಿರ್ವಹಣೆಗಾಗಿ ಸರ್ಕಾರಿ ಕೆಲಸ ನೀಡುವಂತೆ ಕ್ರಮ ವಹಿಸಲು,ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆರವರನ್ಮು ಅಗ್ರಹಿಸಲಾಯಿತು.ಹಾಗೂ ಜಿಲ್ಲಾ ಅರಣ್ಯಾಧಿಕಾರಿಗಳಾದ ಶಶಿಧರ್ ರವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕೂಡಲೇ ರೈತರಿಗೆ/ಸಾರ್ವಜನಿಕರಿಗೆ ತೊಂದರೆಯಾಗಿರುವ ಹಿನ್ನಲೆ ಹೆಚ್ಚಾಗಿರುವ ನರಭಕ್ಷಕ ಚಿರತೆ ಹಾವಳಿಗಳನ್ನು ತಪ್ಪಿಸಲು ಟಾಸ್ಕಪೋರ್ಸ್ ರಚಿಸುವಂತೆ ಹಾಗೂ ಹೆಚ್ಚುವರಿ ಬೋನ್ ಗಳನ್ನು ಅಳವಡಿಸಲು ಕೂಡಲೇ ಕ್ರಮ ವಹಿಸಲು ಅಗ್ರಹಿಸಲಾಯಿತು ಈ ಸಂಧರ್ಭದಲ್ಲಿ ಗ್ರಾಮದ ಸ್ಥಳೀಯ ಮುಖಂಡರುಗಳು ಹಾಗೂ ಬಿಜೆಪಿ ಪಧಾಧಿಕಾರಿಗಳು,ಗ್ರಾಮಸ್ಥರು ಗಳು ಉಪಸ್ಥಿತರಿದ್ದರು

Read More

Updated By: Priyalachhi AI Innovation Hub: “ಮಾನವೀಯತೆಯ ಹಾದಿಯನ್ನು ಪರಿವರ್ತಿಸುವ ಕೆಲವು ಬದಲಾವಣೆಗಳು ಕಾಲಕಾಲಕ್ಕೆ ಸಂಭವಿಸುತ್ತವೆ. ಕೃತಕ ಬುದ್ಧಿಮತ್ತೆ (AI) ಅಂತಹ ಬದಲಾವಣೆಗಳಲ್ಲಿ ಒಂದಾಗಿದೆ. ಇದು ಒಂದು ಪೀಳಿಗೆಯು ನೋಡುತ್ತಿರುವ ಅತಿದೊಡ್ಡ ಬದಲಾವಣೆಯಾಗಿದೆ. ನಾವು ಅದನ್ನು ಸ್ವೀಕರಿಸಲು ಸಿದ್ಧರಾಗಿರಬೇಕು. ಮುಂಬರುವ ದಿನಗಳಲ್ಲಿ ನಾವು ಮಾಡುವ ಎಲ್ಲದರ ಮೇಲೆ AI ಪ್ರಭಾವ ಬೀರುತ್ತದೆ” ಎಂದು ತೆಲಂಗಾಣ AI ಇನ್ನೋವೇಶನ್ ಹಬ್‌ನ ಸಿಇಒ ಫಣಿ ನಾಗಾರ್ಜುನ ಹೇಳುತ್ತಾರೆ. ‘ಈನಾಡು’ಗೆ ನೀಡಿದ ಸಂದರ್ಶನದಲ್ಲಿ ಅವರು ಸಮಾಜದ ಮೇಲೆ AI ಪ್ರಭಾವ, ಅದು ತರುವ ಬದಲಾವಣೆಗಳು ಮತ್ತು ಸರ್ಕಾರವು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. 1. ಜವಾಬ್ದಾರಿಯುತ AI ಬಗ್ಗೆ ಈಗ ದೊಡ್ಡ ಚರ್ಚೆ ನಡೆಯುತ್ತಿದೆ. ಅದು ನಿಜವಾಗಿಯೂ ಅಗತ್ಯವೇ? ಹೌದು.. ಜವಾಬ್ದಾರಿಯುತ AI ಎಂದರೆ ಉದ್ದೇಶಿತ ಪ್ರಯೋಜನೆಗಳು ಈಡೇರುವುದನ್ನು ಖಚಿತಪಡಿಸಿಕೊಳ್ಳುವುದು. AI ಉಪಕರಣವನ್ನು ಪರಿಚಯಿಸುವಾಗ ಅದು ಸುರಕ್ಷಿತ ಮತ್ತು ನೈತಿಕವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ. ದುರುಪಯೋಗವನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಹೊಂದಿರುವುದು…

Read More

Updated By: Priyalachhi ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರತಿಭಾನ್ವಿತ ತಾರೆ ರಾಜ್ ಬಿ ಶೆಟ್ಟಿ ಅಭಿನಯದ ಈ ವರ್ಷದ ಬಹುನಿರೀಕ್ಷೆಯ ಸಿನಿಮಾ ’45’ ರಿಲೀಸ್​ಗೆ ಕ್ಷಣಗಣನೆ ಆರಂಭವಾಗಿದೆ. ಅತ್ಯಂತ ಬೇಡಿಕೆಯ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ಆ್ಯಕ್ಷನ್​ ಕಟ್ ಹೇಳಿರುವ ಈ ಚಿತ್ರವನ್ನು ಬಹುಕೋಟಿ ವೆಚ್ಚದಲ್ಲಿ ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಟ್ರೇಲರ್​ನಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್​ ಟಾಕ್ ಆಗುತ್ತಿದ್ದ 45 ಸಿನಿಮಾ ನಾಳೆ 180ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಏಕೆ ಈ ಸಿನಿಮಾವನ್ನು ನೋಡಬೇಕು? ಎಂಬ ಪ್ರಶ್ನೆಗಳಿಗೆ ಇಲ್ಲಿ ಕೆಲ ವಿಶೇಷತೆಗಳಿವೆ. ವಿಭಿನ್ನ ಶೀರ್ಷಿಕೆ: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಮ್ಮ ಚೊಚ್ಚಲ ಸಿನಿಮಾಗೆ ಏಕೆ 45 ನಂಬರ್​​​ ಅನ್ನು ಶೀರ್ಷಿಕೆಯಾಗಿ ಇಟ್ಟಿದ್ದಾರೆ ಅನ್ನೋದಕ್ಕೆ ಈ ಸಿನಿಮಾ ನೋಡಬೇಕು. ಈ ಹಿಂದೆ ಹೇಳಿದಂತೆ ಇದು 45 ದಿನಗಳಲ್ಲಿ ನಡೆಯುವ ಕಥೆ. ಮೂವರು ಸೂಪರ್​ ಸ್ಟಾರ್ಸ್​ ಸ್ಕ್ರೀನ್​ ಶೇರ್: ಕನ್ನಡ…

Read More

Updated By: Priyalachhi ಮೈಸೂರು : ತಮ್ಮ ಆಪ್ತ ಸಹಾಯಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿರುವ ದಾಳಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ತಮ್ಮ ಆಪ್ತ ಕಾರ್ಯದರ್ಶಿಯಾದ ಸರ್ದಾರ್ ಸರ್ಫರಾಜ್ ಖಾನ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್​, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸರ್ಫರಾಜ್‌ ಖಾನ್ ಅವರ ತಂದೆಯ ಕಾಲದಿಂದಲೂ ಶ್ರೀಮಂತರು. ಈ ದಾಳಿ ಯಾಕೆ ಆಗಿದೆ ಎಂಬುದು ಗೊತ್ತಿಲ್ಲ. ಏನಾಗಿದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು. ಸಹಕಾರ ನಿರ್ದೇಶನಾಲಯ ಇಲಾಖೆಯಿಂದ ವಸತಿ ಇಲಾಖೆಗೆ ನಿಯೋಜನೆಯಲ್ಲಿರುವ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ಸರ್ದಾರ್ ಸರ್ಫರಾಜ್ ಖಾನ್‌ಗೆ ಸಂಬಂಧಿಸಿದ ಬೆಂಗಳೂರಿನ…

Read More

Updated By: Priyalachhi ಬೆಂಗಳೂರು: ಈ ವರ್ಷದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ವಿತರಿಸದಿರುವುದನ್ನು ವಿರೋಧಿಸಿ ತಮ್ಮ ಪಕ್ಷವು ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ನಾಯಕ ಆರ್ ಅಶೋಕ ಬುಧವಾರ ಹೇಳಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಎರಡೂ ಸದನಗಳು ಅಂಗೀಕರಿಸಿದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಒಪ್ಪಿಗೆ ನೀಡದಂತೆ ಪಕ್ಷವು ವಿನಂತಿಸಲಿದೆ ಎಂದು ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ದೊಡ್ಡ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳಿದ್ದವು. ಆದರೆ, ಉತ್ತರ ಕರ್ನಾಟಕಕ್ಕೆ ಪ್ಯಾಕೇಜ್‌ಗಳನ್ನು ಘೋಷಿಸುವ ಬದಲು, ಹಣವನ್ನು ಮೊಟಕುಗೊಳಿಸಲಾಗಿದೆ ಎಂದು ಹೇಳಿದರು. ‘ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂ.ಗಳಷ್ಟು ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ. ಸರ್ಕಾರ ಉದ್ದೇಶಪೂರ್ವಕವಾಗಿಯೇ ಅದನ್ನು ತಪ್ಪಿಸಿತ್ತು. ಹಣಕಾಸು ಇಲಾಖೆ ಅದನ್ನು ಮುಚ್ಚಿಟ್ಟಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ಹಣ…

Read More

Updated By: Priyalachhi ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ರಾಷ್ಟ್ರ ರಾಜಧಾನಿಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಬುಧವಾರ ಮಾತನಾಡಿದ್ದಾರೆ. ಸಿಎಂ ಬದಲಾವಣೆ ವದಂತಿಯನ್ನು ಅವರು ತಳ್ಳಿ ಹಾಕಿದ್ದು, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಎಂದಿದ್ದಾರೆ. ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಆಂತರಿಕ ಭಿನ್ನಾಭಿಪ್ರಾಯಗಳು ಅಥವಾ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಸಭೆ ಎಂಬಿತ್ಯಾದಿ ವದಂತಿಗಳು ಮಾಧ್ಯಮಗಳಲ್ಲಿ ಮಾತ್ರ ಬರುತ್ತಿದೆ. ನಾನು ಯಾವುದೇ ಎಐಸಿಸಿ ವರಿಷ್ಠರನ್ನೂ ಭೇಟಿ ಮಾಡುತ್ತಿಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ಸಂತೋಷವಿದೆ. ಪಕ್ಷದ ಕಾರ್ಯಕರ್ತನಾಗಿರಲು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತೆರೆ ಎಳೆದರು.

Read More