Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ದೆಹಲಿ/ಬೆಂಗಳೂರು: ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧ ಹಂತದ ತ್ಯಾಜ್ಯ ವಿಲೇವಾರಿ (Treatment and Disposal of Legacy Leachate) ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್, ರಾಜ್ಯ ರಾಜಧಾನಿಗೆ ಅಗತ್ಯವಾಗಿರುವ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದರು. ಮೆಟ್ರೋ 2ನೇ ಹಂತದ ಯೋಜನೆ ಪೂರ್ಣಗೊಳಿಸುವ ಪರಿಷ್ಕೃತ ವೆಚ್ಚ (Revised Completion Cost) 26,405 ಕೋಟಿ ರೂ.ಗಳಿಂದ 40,425 ಕೋಟಿ ರೂ.ಗಳ ವರೆಗೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ 5.06.2025ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು ಕೇಂದ್ರ ಸಚಿವಾಲಯಕ್ಕೆ 09.06.2025ರಂದು…

Read More

Updated By: Priyalachhi ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಡೈರಿಯನ್ನು ಸೋಮವಾರ ಸಲ್ಲಿಸಿದ್ದಾರೆ. ಮುಡಾ ಸೈಟ್ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಬೆಂಗಳೂರಿನ ಸೆಷನ್ಸ್ ಕೋರ್ಟ್’ನಲ್ಲಿ ನಡೆಯಿತು. ವಿಚಾರಣೆ ವೇಳೆ ಪ್ರಕರಣದ ತನಿಖೆ ಕೈಕೊಂಡಿರುವ ಲೋಕಾಯುಕ್ತ ಪೊಲೀಸರು ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರಿಗೆ ಸಲ್ಲಿಕೆ ಮಾಡಿದರು. ವಿಚಾರಣೆ ವೇಳೆ ವಾದ ಮಂಡಿಸಿದ ದೂರದಾರ ಸ್ನೇಹಮಯಿ ಕೃಷ್ಣ ಅವರು, ತನಿಖೆ ಪೂರ್ಣಗೊಂಡಿದ್ದರೂ, ಬಾಕಿ ಇದೆ ಅಂತ ಅಧಿಕಾರಿಗಳು ಸುಳ್ಳು ಹೇಳಿದ್ದಾರೆ. ಎ1 ಹಾಲಿ ಸಿಎಂ ಅವರನ್ನು ನಿರಪರಾಧಿ ಅಂತ ತೋರಿಸುವ ಪ್ರಯತ್ನ ನಡೀತಿದೆ. ಆರೋಪ ಸಾಬೀತಾದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತೆ ಅಂದರು. ತನಿಖಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೇ ಪ್ರಕರಣ ದಾಖಲಿಸಲು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ…

Read More

Updated By: Priyalachhi ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಇಂದು ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವಸ್ಥಾನದಿಂದ ಮರಳಿ ಬರುವಾಗ ದುರ್ಘಟನೆ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅತಿವೇಗ ಅಥವಾ ಚಾಲಕನ ಅಜಾಗರೂಕತೆಯೇ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ…

Read More

Updated By: Priyalachhi ಬೆಂಗಳೂರು: ಕೆಎಸ್‌ಆರ್‌ಟಿಸಿ ಸೇರಿದಂತೆ 4 ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ಸಾರಿಗೆ ಇಲಾಖೆ ಒಪ್ಪಿಗೆ ನೀಡಿದೆ. ಆದೇಶದಂತೆ ಕೆಎಸ್‌ಆರ್‌ಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರು, ಅಧಿಕಾರಿಗಳಿಗೆ ಜ.1ರಿಂದ ಅನ್ವಯವಾಗುವಂತೆ ಮಾಸಿಕ ಒಂದು ದಿನ ಋತುಚಕ್ರ ರಜೆ ನೀಡಲು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಕೆಎಸ್‌ಆರ್‌ಟಿಸಿಯಲ್ಲಿ ಕೆಲಸ ಮಾಡುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಮಹಿಳಾ ನೌಕರರು, ಅಧಿಕಾರಿಗಳು ಋತುಚಕ್ರ ರಜೆ ಪಡೆಯಲು ಅರ್ಹರಿರುತ್ತಾರೆ. ಈ ರಜೆ ಪಡೆಯಲು ಯಾವುದೇ ರೀತಿಯ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುವ ಅವಶ್ಯಕತೆಯಿಲ್ಲ ಮತ್ತು ಆಯಾ ತಿಂಗಳಿನಲ್ಲೇ ಈ ರಜೆ ಪಡೆಯಬೇಕು. ರಜೆ ಪಡೆಯುವವರು ತಮ್ಮ ರಜೆ ಅಥವಾ ಹಾಜರಾತಿ ಪುಸ್ತಕ ದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರ ರಜೆ ಸೌಲಭ್ಯ ಜನವರಿ 01 2026ರಿಂದ ಜಾರಿಗೆ ಬರುತ್ತಿದ್ದು, ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ…

Read More

Updated By: Priyalachhi ಪಂಚಾಂಗ: ದಿನಾಂಕ : 24-12-2025 ವಾರ : ಬುಧವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ಚತುರ್ಥಿ ನಕ್ಷತ್ರ : ಶ್ರಾವಣ ಸೂರ್ಯೋದಯ : ಮುಂಜಾನೆ 06:37 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 01:42 ರಿಂದ 03:07ರ ವರೆಗೆ ದುರ್ಮುಹೂರ್ತ : ಮಧ್ಯಾಹ್ನ 12:13 ರಿಂದ 01:01ರ ತನಕ ರಾಹುಕಾಲ : ಮಧ್ಯಾಹ್ನ 12:17 ರಿಂದ 01:42ರ ವರೆಗೆ ಸೂರ್ಯಾಸ್ತ : ಸಂಜೆ 05:57 ಗಂಟೆಗೆ ರಾಶಿ ಭವಿಷ್ಯ: ಮೇಷ : ಕೆಲವೊಮ್ಮೆ ನೀವು ಒತ್ತಡದಲ್ಲಿರುವುದು ಒಳ್ಳೆಯದು ಏಕೆಂದರೆ ಇದು ನಿಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಹೊರತರುತ್ತದೆ. ನೀವು ನಿಮ್ಮ ಕೆಲಸದಲ್ಲಿ ಎಲ್ಲ ನಿಮ್ಮ ಸಹೋದ್ಯೋಗಿಗಳನ್ನೂ ಮೀರುತ್ತೀರಿ. ಆದರೆ, ಫಲಿತಾಂಶಗಳು ನಿಮ್ಮ ನಿರೀಕ್ಷೆಗಳಿಗೆ ಹೊಂದಿಕೊಳ್ಳುವುದಿಲ್ಲ. ಫಲಿತಾಂಶಗಳು ತಡವಾಗುವುದರಿಂದ ನೀವು ತಾಳ್ಮೆಯಿಂದ ಇರಬೇಕು. ವೃಷಭ : ನಿಮ್ಮದೇ ಸಾಧನೆಗಳನ್ನು ಯೋಜಿಸುವುದು ಮತ್ತು ಮಿತ್ರರ ಯಶಸ್ಸಿಗೆ ಕೊಡುಗೆ ನೀಡುವುದು ಇಂದಿನ…

Read More

Updated By: Priyalachhi ಮಂಗಳೂರು: ಜೈಲಿನಲ್ಲಿ ತಪಾಸಣೆಗೆ ಟ್ರಯಲ್ ಬೇಸಿಸ್ ಮೇಲೆ ಎಐ ಟೆಕ್ನಾಲಜಿ ಬಳಕೆ ಮಾಡುತ್ತೇವೆ.‌ ಅದು ಎಷ್ಟು ಪರಿಣಾಮಕಾರಿ ಆಗುತ್ತದೆ ಎಂದು ನೋಡಿ ಅಳವಡಿಕೆ ಮಾಡುತ್ತೇವೆ. ಪರಪ್ಪನ ಅಗ್ರಹಾರ, ಮೈಸೂರು ಜೈಲಿನಲ್ಲಿ ಟ್ರಯಲ್ ಆಗಿದೆ.‌ ಮಂಗಳೂರು ಜೈಲಿನಲ್ಲಿಯೂ ಬೇಕಾದ್ರೆ ಟ್ರಯಲ್ ಮಾಡುತ್ತೇವೆ ಎಂದು ಕಾರಾಗೃಹ ವಿಭಾಗದ ನೂತನ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಂಗಳೂರು ಕಾರಾಗೃಹಕ್ಕೆ ಔಪಚಾರಿಕವಾಗಿ ಬಂದು ಭೇಟಿ ಕೊಟ್ಟಿದ್ದೇನೆ. ರಾಜ್ಯದಲ್ಲಿ 54 ಕಾರಾಗೃಹಗಳಿವೆ. ಎಲ್ಲಾ ಕಾರಾಗೃಹವನ್ನು ಸಮಯಕ್ಕೆ ಸರಿಯಾಗಿ ನೋಡಬೇಕು. ಮಂಗಳೂರಿನಲ್ಲಿ ಇರುವುದು ಸೂಕ್ಷ್ಮ ಕಾರಾಗೃಹ. ಈಗಾಗಲೇ ಇಲ್ಲಿ ರೈಡ್‌ಗಳನ್ನು ಮಾಡಲಾಗಿದೆ.‌ ಒಳಗಡೆ ಗಲಾಟೆ ಮಾಡಿರುವ ಕೈದಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಇನ್ನೊಂದಿಷ್ಟು ಕೈದಿಗಳನ್ನು ಬೇರೆ ಜಾಗಕ್ಕೆ ಕಳುಹಿಸುತ್ತೇವೆ ಎಂದರು‌. ಒಳ್ಳೆಯ ನಡತೆ ಹೊಂದಿರುವವರಿಗೆ ಸಹಕಾರ ಕೊಡ್ತೇವೆ.‌ ಅದಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇವೆ. ಯಾವ ರೀತಿ ನಿಷೇಧಿತ ವಸ್ತುಗಳು ಬರ್ತಿದೆ ಎಂದು ಚರ್ಚೆ…

Read More

Updated By: Priyalachhi 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ಚಲನಚಿತ್ರೋತ್ಸವ ನಡೆಯಲಿದ್ದು, ವಿಧಾನಸೌಧದ ಗ್ರ್ಯಾಂ ಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡುತ್ತೇನೆ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ ಎಂದು ಹೇಳಿದರು.

Read More

Updated By: Priyalachhi ಮಾಜಿ ಸಚಿವ ಕೆ.ಎನ್. ರಾಜಣ್ಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನ ಮತಕಳ್ಳತನ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಉಲ್ಲೇಖಿಸಿರುವ ಅವರು ಭೇಟಿಗೂ ಸಮಯವಕಾಶ ಕೇಳಿದ್ದಾರೆ. ಸಾಲು ಸಾಲು ಪತ್ರಗಳನ್ನು ಬರೆಯುತ್ತಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ ಬಿಟ್ಟರೆ ಆಗುವ ಸಮಸ್ಯೆ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ತುಮಕೂರಿನ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿರುವ ನಾನು, ಸರ್ಕಾರದಲ್ಲಿ ಸಹಕಾರ ಸಚಿವನಾಗಿಯೂ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದೇನೆ. ಕೆಪಿಸಿಸಿ ನೇಮಕ ಮಾಡಿದ ಬಿಎಲ್ಏಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಬಿಎಲ್ಏಗಳು ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ಕಾಂಗ್ರೆಸ್ ಇನ್ನೂ 8 ರಿಂದ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲುವ ಸಾಧ್ಯತೆ ಇತ್ತು ಎಂದು ಪತ್ರದಲ್ಲಿ ಬರೆದಿದ್ದಾರೆ.

Read More

Updated By: Priyalachhi ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯ ಎಸ್‌ಐಟಿ, ಎಫ್‌ಐಆರ್‌ನಲ್ಲಿ ಹೆಸರಿಸಲಾದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಇತರ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಕುರಿತಂತೆ ಪ್ರಕರಣದ ಪ್ರಾಸಿಕ್ಯೂಟರ್‌ ಅಶೋಕ್‌ ಎನ್‌.ನಾಯಕ್‌ ಅವರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್ ಅವರಿಗೆ 4,236 ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದರು. ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಹಿನ್ನೆಲೆ ದೋಷಾರೋಪ ಪಟ್ಟಿಯಿಂದ ಅವರ ಹೆಸರನ್ನು ಹೊರಗಿಡಲಾಗಿದೆ. ಈ ಮಧ್ಯೆ ಭೈರತಿ ಬಸವರಾಜ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ A5 ಆಗಿರುವ ಭೈರತಿ ಬಸವರಾಜ್ ಗೆ ಲಿಂಕ್ ಆಗಿರುವ ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.

Read More

Updated By: Priyalachhi ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಿಗದಿಯಾಗಿದ್ದ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಆಯೋಜಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದ ಹಿನ್ನೆಲೆಯಲ್ಲಿ ಶಿಫಾರಸು ಮಾಡಲಾದ ಸರಿಪಡಿಸುವ ಕ್ರಮಗಳನ್ನು ಜಾರಿಗೆ ತರಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿಫಲವಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಪರಿಣಾಮ ಇಂದು ನಿಗದಿಯಾಗಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಕ್ರೀಡಾಂಗಣದಲ್ಲಿ ನಡೆಯುತ್ತಿಲ್ಲ. ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದೆಹಲಿ ಪರವಾಗಿ ಪಂದ್ಯವನ್ನು ಆಡಲು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.

Read More