Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ಕರಾವಳಿ ಕರ್ನಾಟಕದ ಮೂಲಕ ಬೆಂಗಳೂರು ಮತ್ತು ಗೋವಾದ ಮಡ್ಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾರ್ವಜನಿಕ ಬೇಡಿಕೆ ಇದಾಗಿದೆ ಮತ್ತು ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ. ಪ್ರಸ್ತಾವಿತ ಈ ಹೈ-ಸ್ಪೀಡ್ ರೈಲು ಸೇವೆಯು ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾದ ಕರಾವಳಿ ನಡುವಿನ ರೈಲು ಸಂಪರ್ಕವನ್ನು ಗಮನಾರ್ಹವಾಗಿ…

Read More

Updated By: Priyalachhi ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ (COFEPOSA) ಅಡಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದನ್ನು ಪ್ರಶ್ನಿಸಿ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಸಲ್ಲಿಸಿದ್ದ ಎರಡು ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಆರೋಪಿ ಕೊಂಡೂರು ತರುಣ್ ರಾಜು ಅವರ ಸಂಬಂಧಿಕರು, ಸಾಹಿಲ್ ಸಕರಿಯಾ ಜೈನ್ ಅರ್ಜಿಗಳನ್ನು ಸಲ್ಲಿಸಿದ್ದರು. ರನ್ಯಾ ಅವರ ತಾಯಿ ಎಚ್ ಪಿ ರೋಹಿಣಿ ಅವರು ತಮ್ಮ ಮಗಳನ್ನು ಕೋಫೆಪೋಸಾ ಅಡಿಯಲ್ಲಿ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ರನ್ಯಾ ಅವರನ್ನು ಕಳೆದ ಮಾರ್ಚ್ 3ರಂದು ಬಂಧಿಸಲಾಗಿತ್ತು. ಅವರ ಸ್ವಯಂಪ್ರೇರಿತ ಹೇಳಿಕೆಯ ಪ್ರಕಾರ, ರನ್ಯಾ ಅವರಿಗೆ ಕಳ್ಳಸಾಗಣೆ ಮಾಡಿದ ಚಿನ್ನವನ್ನು ವಿಲೇವಾರಿ ಮಾಡಲು ಮತ್ತು ದುಬೈಗೆ ಹವಾಲಾ ವರ್ಗಾವಣೆಯನ್ನು ಸುಗಮಗೊಳಿಸಲು ಸಹಾಯ ಮಾಡಿದ್ದಕ್ಕಾಗಿ ರಾಜು ಮತ್ತು ಜೈನ್ ಅವರನ್ನು ಬಂಧಿಸಲಾಗಿತ್ತು. ಏಪ್ರಿಲ್ 22…

Read More

Updated By: Priyalachhi ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ಮಾರ್ಕ್’ ಸಿನಿಮಾ ಇದೇ 25 ರಂದು ಬಿಡುಗಡೆಗೆ ಸಜ್ಜಾಗಿರುವಂತೆಯೇ ಇದರ ‘ಪ್ರೀ ರಿಲೀಸ್ ‘ ಕಾರ್ಯಕ್ರಮದಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ಅಭಿಮಾನಿಗಳ ನಡುವೆ ವಾರ್ ಗೆ ಕಾರಣವಾಗಿದೆ. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ. ಹೊರಗೆ ಪಡೆಯೊಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು ಎಂದು ಸುಮ್ಮನಿದ್ದೆ, ಮಾತನಾಡಲು ಬರುವುದಿಲ್ಲ ಎಂದರ್ಥವಲ್ಲ, ಆದರೆ ಕೆರಳಿಸುತ್ತಾ ಹೋದರೆ ಸುಮ್ಮನೆ ಕೂರಲು ಆಗುವುದಿಲ್ಲ ಎಂದು ಸುದೀಪ್ ಹೇಳಿದ್ದಾರೆ. ಇನ್ನೂ ಸುದೀಪ್ ಮಾತಿಗೆ ಟಾಂಗ್ ಕೊಟ್ಟಂತೆ ಮಾತನಾಡಿರುವ ದರ್ಶನ್‌ ಪತ್ನಿ ವಿಜಯಲಕ್ಷ್ಮಿ, ಕೆಲವರು ದರ್ಶನ್‌ ಅವ್ರು ಇಲ್ಲದೇ ಇದ್ದಾಗ ಏನೇನೋ ಮಾತಾಡ್ತಾ ಇದ್ದಾರೆ. ಅವರ ಬಗ್ಗೆ ಅವ್ರ ಫ್ಯಾನ್ಸ್ ಬಗ್ಗೆ ಎಲ್ಲಾ ಮಾತಾಡ್ತಾರೆ. ವೇದಿಕೆ ಮೇಲೆ ನಿತ್ಕೊಂಡು ಮಾತಾಡೋದು. ವೀಡಿಯಾಗಳಲ್ಲಿ ಕುಳಿತು ಮಾತಾಡೋದು. ಹೊರಗೆ ಕುತ್ಕೊಂಡ್ ಮಾತಾಡೋದು ಎಲ್ಲಾ…

Read More

Updated By: Priyalachhi ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.‌ ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು. “ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ” ಎಂದು ಕಿಡಿಕಾರಿದರು. ಮುಂಬರುವ 27 ರಂದು ಪಕ್ಷದ ಕಾರ್ಯಕಾರಿಣಿ‌ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ…

Read More

Updated By: Priyalachhi ಇಂದಿನ ಪಂಚಾಂಗ ದಿನಾಂಕ : 23-12-2025 ವಾರ : ಮಂಗಳವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ತೃತೀಯಾ ನಕ್ಷತ್ರ : ಉತ್ತರಾಷಾಢ ಸೂರ್ಯೋದಯ : ಮುಂಜಾನೆ 06:37 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 12:16ರಿಂದ 13:41ರ ವರೆಗೆ ದುರ್ಮುಹೂರ್ತ : ಮುಂಜಾನೆ 9:1ರಿಂದ 9:49ರ ವರೆಗೆ ಮತ್ತು ಮಧ್ಯಾಹ್ನ 12:13ರಿಂದ 13:11ರ ವರೆಗೆ ರಾಹುಕಾಲ : ಮಧ್ಯಾಹ್ನ 15:06ರಿಂದ 16:31ರ ವರೆಗೆ ಸೂರ್ಯಾಸ್ತ : ಸಂಜೆ 05:56 ಗಂಟೆಗೆ ಮಂಗಳವಾರದ ರಾಶಿ ಭವಿಷ್ಯ ಮೇಷ : ಇಂದು, ಮತ್ತೊಂದು ಒತ್ತಡದ ದಿನ. ನೀವು ಯಾವುದೇ ಕಚೇರಿಯಲ್ಲಿ ಮತ್ತು ಮನೆಯಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಜ್ಜಾಗಿದ್ದೀರಿ. ನಿಮ್ಮ ಮೇಲಧಿಕಾರಿಗಳು ನಿಮಗೆ ಕೆಲ ರಿಯಾಯಿತಿಗಳನ್ನು ನೀಡಬಹುದು, ಮತ್ತು ಇದು ವಿಷಯಗಳನ್ನು ಕೊಂಚ ಸುಲಭಗೊಳಿಸುತ್ತದೆ. ನೀವು ಹಿರಿಯರಿಂದ ಮೌಲ್ಯಯುತ ಮಾರ್ಗದರ್ಶನ ಪಡೆಯುತ್ತೀರಿ. ವೃಷಭ : ಇದು ನಿಮ್ಮ ಆಡಳಿತ ಮತ್ತು ಸಂಘಟನಾ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಅದ್ಭುತ ದಿನ. ಹೊರಗಡೆ ಹೋಗಿ ಮತ್ತು ನಿಮ್ಮಲ್ಲಿರುವ ಎಲ್ಲವನ್ನೂ ನಿಮ್ಮ ಕೆಲಸದ ಸ್ಥಳ…

Read More

Updated By: Priyalachhi ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದವನ್ನು ಘೋಷಿಸಿವೆ. ಇದು ಬಹುಪಾಲು ಸರಕುಗಳ ವ್ಯಾಪಾರದ ಮೇಲಿನ ಸುಂಕವನ್ನು ತೆಗೆದುಹಾಕುತ್ತದೆ (ಡೈರಿ ಮತ್ತು ಕೃಷಿ ಉತ್ಪನ್ನಗಳನ್ನು ಹೊರತುಪಡಿಸಿ), ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ನಿಯಮಗಳನ್ನು ಸರಾಗಗೊಳಿಸುತ್ತದೆ ಮತ್ತು ಹೂಡಿಕೆಗಳನ್ನು ಸುಗಮಗೊಳಿಸುತ್ತದೆ. ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಬಗ್ಗೆ ಮಾತುಕತೆ ಆರಂಭಿಸಿದ ಸುಮಾರು ಒಂಬತ್ತು ತಿಂಗಳ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ಇದು ಭಾರತದ ಅತ್ಯಂತ ವೇಗದ ಮುಕ್ತ ವ್ಯಾಪಾರ ಒಪ್ಪಂದ (FTA) ಆಗಿದೆ. ಅಮೆರಿಕವು ಶೇಕಡಾ 50ರಷ್ಟು ಕಡಿದಾದ ಸುಂಕಗಳನ್ನು ವಿಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಮುಕ್ತ ವ್ಯಾಪಾರ ಒಪ್ಪಂದ(FTA) ಮೇಲೆ ಹೆಚ್ಚಿನ ತುರ್ತುಸ್ಥಿತಿಯನ್ನು ತೋರಿಸುತ್ತಿದೆ. ಈ ವರ್ಷವೇ ಒಮನ್ ಮತ್ತು ಇಂಗ್ಲೆಂಡ್ ಅಂತಹ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. FTA ಅಡಿಯಲ್ಲಿ, ನ್ಯೂಜಿಲೆಂಡ್ ಎಲ್ಲಾ ಭಾರತೀಯ ರಫ್ತುಗಳಿಗೆ ಸುಂಕ-ಮುಕ್ತ ಪ್ರವೇಶವನ್ನು ಒದಗಿಸಲು ಒಪ್ಪಿಕೊಂಡಿದೆ. ಮತ್ತೊಂದೆಡೆ, ವ್ಯಾಪಾರ ಮೌಲ್ಯದ ಶೇಕಡಾ 95 ಭಾಗವನ್ನು ಒಳಗೊಂಡಿರುವ ಶೇಕಡಾ 70ರಷ್ಟು…

Read More

Updated By: Priyalachhi ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): “ನರೇಗಾ ಹೆಸರು ಬದಲಾವಣೆ ದುರಂತ ವಿಚಾರ, ಹೆಸರು ಬದಲಾವಣೆಯಿಂದ ಮೋದಿಗೆ ಗೌರವ ಕಡಿಮೆ ಆಯಿತು ಮತ್ತು ಕಳಂಕ ಬಂದಿದೆ” ಎಂದು ಸಚಿವ ಕೆ.ಹೆಚ್​. ಮುನಿಯಪ್ಪ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಭಾನುವಾರ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಉದ್ಘಾಟನೆ ಮಾಡಿದ ಅವರು ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಹೆಸರನ್ನು ವಿಬಿ ರಾಮ್​ ಜಿ ಎಂದು ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಅದೊಂದು ದುರಂತ ವಿಚಾರ. ಈ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಚೇತನ ಮಹಾತ್ಮ ಗಾಂಧಿ. ರಾಮರು ಯಾರಿಗೂ ಬೇಡ ಅಂತ ಹೇಳಲ್ಲ. ನಾವು ಮನೆಯಲ್ಲಿ ರಾಮನಿಗೂ ಆಂಜನೇಯನಿಗೂ ಪೂಜೆ ಮಾಡುತ್ತೇವೆ. ಯಾರಿಗೆ ಗೊತ್ತಿಲ್ಲ ರಾಮ?. ನೀವು ಎಷ್ಟು ಜನ ಬರೆಯುತ್ತೀರಾ ರಾಮ ಕೋಟಿ, ನಾನು ನಿತ್ಯ…

Read More

Updated By: Priyalachhi ಬೆಂಗಳೂರು: ರಾಜ್ಯ ಸರ್ಕಾರ ಖಾಲಿ ಅಥವಾ ಲಭ್ಯವಿರುವ ಮದ್ಯದ 569 ಸನ್ನದು (License) ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡಲು ಅಧಿಸೂಚನೆ ಹೊರಡಿಸಿದೆ. ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆಯೊಂದಿಗೆ ಹರಾಜು ಪ್ರಕ್ರಿಯೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಅಬಕಾರಿ ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದ್ದು, ಅದರಂತೆ, ಒಟ್ಟಾರೆ 569 ಸನ್ನದುಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ. ಸ್ಥಗಿತಗೊಂಡಿರುವ/ಹಂಚಿಕೆಯಾಗದೇ ಇರುವ ಸಿಎಲ್-2‌ ಮತ್ತು ಸಿಎಲ್(11-ಸಿ) ಸನ್ನದುಗಳನ್ನು ಸಿಎಲ್(2-ಎ) ಎಂದು ಮತ್ತು ಸ್ಥಗಿತಗೊಂಡಿರುವ ಸಿಎಲ್-9‌ ಸನ್ನದುಗಳನ್ನು ಸಿಎಲ್(9-ಎ) ಎಂದು ವರ್ಗೀಕರಿಸಲಾಗಿದೆ. ಅದರಂತೆ, 569 ಸನ್ನದುಗಳ ಪೈಕಿ ಹರಾಜು ಪ್ರಕ್ರಿಯೆಗೆ 477 ಸಿಎಲ್(2-ಎ) ಮತ್ತು 92 ಸಿಎಲ್(9-ಎ) ಸನ್ನದುಗಳು ಲಭ್ಯವಿರುತ್ತವೆ ಎಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ. ಸಿಎಲ್(2-ಎ) ಮತ್ತು ಸಿಎಲ್(9-ಎ) ಸನ್ನದುಗಳನ್ನು ಇ-ಹರಾಜಿನಲ್ಲಿ ಹರಾಜು ಮಾಡುವ ಸಂಬಂಧ ಪರಿಶಿಷ್ಟ ಜಾತಿ-ಎ ವರ್ಗದವರಿಗೆ ಶೇ.6ರಷ್ಟು, ಪರಿಶಿಷ್ಟ ಜಾತಿ-ಬಿ ವರ್ಗದವರಿಗೆ ಶೇ.6ರಷ್ಟು, ಪರಿಶಿಷ್ಟ ಜಾತಿ-ಸಿ ವರ್ಗದವರಿಗೆ ಶೇ.5ರಷ್ಟು ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ…

Read More

Updated By: Priyalachhi ಪಂಚಾಂಗ: ದಿನಾಂಕ : 22-12-2025 ವಾರ : ಸೋಮವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಮಾರ್ಗಶಿರ ಪಕ್ಷ : ಶುಕ್ಲ ತಿಥಿ : ದ್ವಿತೀಯ ನಕ್ಷತ್ರ : ಉತ್ತರಾಷಾಢ ಸೂರ್ಯೋದಯ : ಮುಂಜಾನೆ 06:36 ಗಂಟೆಗೆ ಅಮೃತ ಕಾಲ : ಬೆಳಗ್ಗೆ 08:01 ರಿಂದ 09:26 ರವರೆಗೆ ದುರ್ಮುಹೂರ್ತ : ಮಧ್ಯಾಹ್ನ 01:00 ರಿಂದ 01:48 ಹಾಗೂ 03:24 ರಿಂದ 04:12 ಗಂಟೆವರೆಗೆ ರಾಹುಕಾಲ : ಮಧ್ಯಾಹ್ನ 01:41 ರಿಂದ 03:06 ರವರೆಗೆ ಸೂರ್ಯಾಸ್ತ : ಸಂಜೆ 05:56 ಗಂಟೆಗೆ ರಾಶಿ ಭವಿಷ್ಯ: ಮೇಷ: ಇದು ಕೆಲಸ ಮಾಡುವ ಸಮಯವೇ ಹೊರತು, ಯೋಜಿಸುವುದಲ್ಲ. ಕೆಲವೊಮ್ಮೆ ನಿಮ್ಮ ವಿಶೇಷ ಹುರುಪನ್ನು ಒಳ್ಳೆಯ ಬಳಕೆಗೆ ಇಟ್ಟುಕೊಳ್ಳುವುದು ಸೂಕ್ತ. ವೃಷಭ: ಇಡೀ ದಿನ ನಿಮ್ಮ ಮನಸ್ಥಿತಿಯನ್ನು ಶಕ್ತಿ, ಸಮೃದ್ಧಿ ಮತ್ತು ಉತ್ಸಾಹ ಆಳುತ್ತವೆ. ಕೆಲವರಿಗೆ ಬೇಸರವೆನಿಸಿದರೆ, ಕೆಲಸದಿಂದ ಕೊಂಚ ಬಿಡುವು ಪಡೆಯಿರಿ. ಮಿಥುನ: ನಿಮ್ಮ ಪ್ರೀತಿಯ ಜೀವನ ಕೆಲವು ಏರಿಳಿತ ಕಾಣುವ ಸಾಧ್ಯತೆ. ಹಣಕಾಸಿನ ವಿಷಯಗಳಲ್ಲಿ ಅದೃಷ್ಟ ಪರೀಕ್ಷೆ ಎದುರಿಸುತ್ತೀರಿ. ಬುದ್ಧಿ ಕಳೆದುಕೊಳ್ಳಬೇಡಿ, ವಿಶ್ವಾಸವಿಡಿ. ಕರ್ಕಾಟಕ: ದುಡುಕಿನ…

Read More

Updated By: Priyalachhi ಬೆಂಗಳೂರು: ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25ರಿಂದ 28ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ಸಮ್ಮೇಳನ (2nd Ayurveda World Summit) ನಡೆಯುವ ಹಿನ್ನೆಲೆಯಲ್ಲಿ ಜನಜಾಗೃತಿಗಾಗಿ ಇಂದು ಟೌನ್ ಹಾಲ್ ನಿಂದ ವಿಂಟೇಜ್ ಕಾರು ರ್ಯಾಲಿ ಮತ್ತು ಮಲ್ಲೇಶ್ವರದಲ್ಲಿ ವಾಕಥಾನ್ ನಡೆಯಿತು. ವಿಶ್ವ ಆಯುರ್ವೇದ ಸಮ್ಮೇಳನದ ರುವಾರಿ ಡಾ. ಗಿರಿಧರ ಕಜೆ ಮಾತನಾಡಿ, ಆಯುರ್ವೇದದ ಮಹತ್ವವನ್ನು ಜನತೆಯ ಮುಂದಿಡಲು ಬೃಹತ್ ರೂಪದಲ್ಲಿ ಸಮ್ಮೇಳನವನ್ನು ಸಂಘಟಿಸಲಾಗಿದೆ. ಆಯುರ್ವೇದ ವೈದ್ಯರು ಹಾಗೂ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ, ಜನಸಾಮಾನ್ಯರಿಗೂ ಪ್ರಯೋಜನಕಾರಿಯಾಗುವಂತೆ ಸಮ್ಮೇಳನವನ್ನು ಆಯೋಜಿಸಲಾಗಿದೆ. ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ಆಹಾರ ಪ್ರದರ್ಶಿನಿ, ಆಯುರ್ವೇದ ಪಾಕೋತ್ಸವ, ಧನ್ವಂತರಿ ಮಹಾಯಜ್ಞ, ಆಯುರ್ವೇದ ಮೆಗಾ ಎಕ್ಸ್’ಪೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಲೇಸರ್ ಶೋ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳು ಸಮ್ಮೇಳನದಲ್ಲಿ ಇರಲಿದೆ.

Read More