Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ನವದೆಹಲಿ: ನವದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರಿ ಎದುರು ನಡೆದ ಪ್ರತಿಭಟನೆಗೆ ಸಂಬಂಧಿಸಿ ಬಾಂಗ್ಲಾದೇಶ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಹಾಗೂ ಆರೋಪವನ್ನು ಭಾರತ ನಿರಾಕರಿಸಿದ್ದು, ಆರೋಪ ತಪ್ಪಾಗಿದ್ದು, ದಾರಿತಪ್ಪಿಸುವ ಪ್ರಚಾರವಾಗಿದೆ ಎಂದು ಹೇಳಿದೆ. ಡಿಸೆಂಬರ್ 20ರಂದು ಬಾಂಗ್ಲಾದೇಶದ ಮಯ್ಮನ್ಸಿಂಗ್ ಜಿಲ್ಲೆಯಲ್ಲಿ ದೀಪು ಚಂದ್ರ ದಾಸ್ ಎಂಬವರ ಹತ್ಯೆಯನ್ನು ಖಂಡಿಸಿ ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಸುಮಾರು 20–25 ಮಂದಿ ಯುವಕರು ಕೆಲಕಾಲ ಬಾಂಗ್ಲಾದೇಶ ರಾಯಭಾರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಎಂ. ತೌಹೀದ್ ಹೊಸೈನ್ ಅವರು, ಬಾಂಗ್ಲಾದೇಶ ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆಯಾಗಿದ್ದು, ಅತ್ಯಂತ ಭದ್ರತಾ ವಲಯದಲ್ಲಿರುವ ಹೈಕಮಿಷನ್ ಬಳಿ 25–30 ಮಂದಿ ಹೇಗೆ ತಲುಪಿದರು ಎಂಬುದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದರು. ಬಾಂಗ್ಲಾದೇಶ ಸರ್ಕಾರಿ ಸುದ್ದಿ ಸಂಸ್ಥೆ ಬಿಎಸ್ಎಸ್ ವರದಿ ಪ್ರಕಾರ, ಆ ಪ್ರತಿಭಟನಾಕಾರರು ಕೇವಲ ಹತ್ಯೆ ವಿರುದ್ಧ ಘೋಷಣೆ ಕೂಗಲಿಲ್ಲ, “ಇತರೆ ಹೇಳಿಕೆಗಳನ್ನೂ…
Updated By: Priyalachhi ಮಂಡ್ಯ: “ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಆದರೆ ಯಾವ ಶಕ್ತಿಯಿಂದಲೂ ಈ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮಂಡ್ಯದ ಮಳವಳ್ಳಿಯಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದ್ದು, ನಿನ್ನೆ(ಶನಿವಾರ) 5ನೇ ದಿನದ ಮಹೋತ್ಸವಕ್ಕೆ ಚಾಲನೆ ಸಿಕ್ಕಿತು. ಜ್ಯೋತಿ ಬೆಳಗುವ ಮೂಲಕ ಮಹೋತ್ಸವವನ್ನು ಶ್ರೀಗಳು ಉದ್ಘಾಟಿಸಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, “ರಾತ್ರಿಯಾದರೂ ಭಕ್ತರು ಇಷ್ಟೊಂದು ಸಂಖ್ಯೆಯಲ್ಲಿ ಕುಳಿತಿರುವುದು ಸಂತಸ ಮೂಡಿಸಿದೆ. ರಾಜ್ಯದಲ್ಲಿ ಕುರ್ಚಿ ಕಾಳಗ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಒಂದು ಕುರ್ಚಿ ಕೂಡ ಖಾಲಿ ಇಲ್ಲ. ಜಗದ್ಗುರುಗಳು ಅನ್ನದಾಸೋಹ, ಅಕ್ಷರದಾಸೋಹ ಮೂಲಕ ಸಮಾಜ ಕಟ್ಟಿದರು. ಆದಿಗುರುಗಳ ಪರಂಪರೆಯನ್ನು ಸುತ್ತೂರು ಶ್ರೀಗಳು ಮುಂದುವರೆಸುತ್ತಿದ್ದಾರೆ. ಜನಸಾಮಾನ್ಯರ ಹೃದಯದಲ್ಲಿ ಸುತ್ತೂರು ಮಠ ಆಧ್ಯಾತ್ಮದ ದೀಪ ಹಚ್ಚಿದೆ. ನೊಂದವರ ಪಾಲಿಗೆ ಅನ್ನ, ಅಕ್ಷರ ನೀಡುತ್ತಿದೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಎಲ್ಲ ಮಠಗಳಿಗೆ ಅನುದಾನ ನೀಡಿದರು. ಅನುಭವ ಮಂಟಪ ನಿರ್ಮಾಣಕ್ಕೆ…
Updated By: Priyalachhi ಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಸರ್ಕಾರದಿಂದ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ” ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೋರ್ಟ್ ಆದೇಶ ಮಾಡಿರುವುದು ಸರಿ ಇದೆ. ಈಗ ಇರುವ ಶಿಕ್ಷಕರು 20ರಿಂದ 30 ವರ್ಷಗಳ ಹಿಂದೆ ನೇಮಕಗೊಂಡವರು. ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆಂದು ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು” ಎಂದರು. ಶೇ.100ರಷ್ಟು ಫಲಿತಾಂಶ ತರುವ ಶಾಲೆಗೆ ಪ್ರಶಸ್ತಿ: “ನಾವು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಜನ ಸೇವೆಯಲ್ಲಿ ಇರುತ್ತೇವೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಯಲ್ಲಿ ಶೇ.100ರಷ್ಟು ಫಲಿತಾಂಶ ಬಂದ ಶಾಲೆಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಉತ್ತಮ ಫಲಿತಾಂಶ…
Updated By: Priyalachhi ಬೆಂಗಳೂರು: “ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ” ಎಂದರು. ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, “ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ,…
Updated By: Priyalachhi ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರದಿಂದ 6 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು. 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಪ್ರದೇಶ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು. ನಗದು ಬಹುಮಾನ ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ.…
Updated By: Priyalachhi ಬೆಸ್ಕಾಂ ನ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ನಾಳೆ (ಡಿ.22) ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಪ್ರೆಸ್ಟೀಜ್ ಫಾಲ್ಕಾನ್ ಸಿಟಿ ಉಪಕೇಂದ್ರ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಅಂಚೆ ಪಾಳ್ಯ ಪ್ರದೇಶದಲ್ಲಿಯೂ ವಿದ್ಯುತ್ ವ್ಯತ್ಯಯ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶೋಭಾ ಇಂದ್ರಪ್ರಸ್ಥ ಅಪಾರ್ಟ್ಮೆಂಟ್, ಗ್ಲೋಬಲ್ ಮಾಲ್ ಕಂಬೀಪುರ, ಕಾರುಬೆಲೆ, ಹೆಚ್.ಗೊಲ್ಲಹಳ್ಳಿ, ಕಾಟನಾಯಕನಪುರ, ವರಹಸಂದ್ರ, ಸ್ವಾಮೀಜಿನಗರ, ಅಂಚೆಪಾಳ್ಯ, ಅಪ್ರಮೇಯನಗರ, ಕೃಷ್ಣ ಟೆಂಪಲ್ ಸರ್ಕಾರಿ ಶಾಲೆ, ಪ್ರಾವಿಡೆಂಡ್ ಅಪಾರ್ಟ್ಮೆಂಟ್, ವಿ.ಬಿ.ಹೆಚ್.ಸಿ ಅವಾಟೋಮೆಂಟೋ, ಇ.ಸಿ. ಎನೋ ಶಾಲಿಜೋ ರೂಡೋ, ಗುಡ್ಅರ್ಥ್, ಶ್ರೀನಿಧಿ ಗ್ರೀನ್ ಲೇಔಟ್, ದೇವಗೆರೆ, ಆನೆಪಾಳ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾನ್ ಸಿಟಿ ಅಪಾರ್ಟ್ಮೆಂಟ್, ದೊಡ್ಡಕಲ್ಲಸಂದ್ರ,…
Updated By: Priyalachhi ಕಲಬುರಗಿ: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಹೈಕಮಾಂಡ್ ಯಾವುದೇ ಗೊಂದಲವನ್ನು ಸೃಷ್ಟಿಸಿಲ್ಲ. ಅದು ಸ್ಥಳೀಯ ಮಟ್ಟದಲ್ಲೇ ಇದೆ” ಎಂದರು. ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ “ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?”. ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ತಾಕೀತು ಮಾಡಿದ್ದಾರೆ.
Updated By: Priyalachhi ಬೆಂಗಳೂರು: ಅತೀವ್ರ ಚಳಿಗೆ ರಾಜ್ಯದ ಜನತೆ ತತ್ತರಿಸಿದ್ದು, ಈ ನಡುವೆ ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ಚಳಿ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ವಿಜಯನಗರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇದೇ ವೇಳೆ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಿಗೂ ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 20ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ದಾಖಲಾಗಿದೆ. ಐಎಂಡಿ ಅಂಕಿಅಂಶಗಳ ಪ್ರಕಾರ, ವಿಜಯಪುರದಲ್ಲಿ ಅತೀ ಕಡಿಮೆ 6.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಹಾಸನದಲ್ಲಿ 7 ಡಿಗ್ರಿ, ಬೀದರ್ನಲ್ಲಿ 7.4 ಡಿಗ್ರಿ ಹಾಗೂ ರಾಯಚೂರಿನಲ್ಲಿ 8.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಡಿಸೆಂಬರ್ 19ರಂದು ಐದು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ…
Updated By: Priyalachhi ಕೋಲ್ಕತ್ತಾ(ಪಶ್ಚಿಮ ಬಂಗಾಳ): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದಂತೆ, 2026ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ಬಾಗಿಲು ತೆರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ವರ್ಚುಯಲ್ ಮೋಡ್ನಲ್ಲಿ ತಾಹೆರ್ಪುರ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರತಿಕೂಲ ಹವಾಮಾನದಿಂದಾಗಿ ಕಾರ್ಯಕ್ರಮ ನಡೆಯುತ್ತಿರುವ ಸ್ಥಳಕ್ಕೆ ತಲುಪಲು ಸಾಧ್ಯವಾಗದಿದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ಗೋಚರತೆ ಕಡಿಮೆ ಇದ್ದ ಕಾರಣ, ಹೆಲಿಕಾಪ್ಟರ್ ತಾಹೆರ್ಪುರದ ತಾತ್ಕಾಲಿಕ ಹೆಲಿಪ್ಯಾಡ್ ಮೈದಾನದ ಮೇಲೆ ಸ್ವಲ್ಪ ಹೊತ್ತು ಹಾರಾಟ ಮಾಡಿ ನಂತರ ಯು – ಟರ್ನ್ ತೆಗೆದುಕೊಂಡು ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಮರಳಿತು ಎಂದು ಹೇಳಿದರು. ಬಂಗಾಳದ ಹಿಂದುಳಿದ ಪ್ರದೇಶಗಳಿಗೆ ಆಧುನಿಕ ಸಂಪರ್ಕವನ್ನು ಖಚಿತಪಡಿಸುವುದು ನಮ್ಮ ಪ್ರಯತ್ನಗಳ ಗುರಿಯಾಗಿದೆ. ಟಿಎಂಸಿ ನನ್ನನ್ನು ಮತ್ತು ಬಿಜೆಪಿಯನ್ನು ಎಷ್ಟು ಬೇಕಾದರೂ ವಿರೋಧಿಸಬಹುದು, ಆದರೆ ಬಂಗಾಳದ ಪ್ರಗತಿಯನ್ನು ನಿಲ್ಲಿಸಬಾರದು ಎಂದ ಪ್ರಧಾನಿ, ಬಂಗಾಳದಲ್ಲಿ ನುಸುಳುಕೋರರು ಟಿಎಂಸಿಯ ಆಶ್ರಯವನ್ನು ಆನಂದಿಸುತ್ತಿದ್ದಾರೆ. ಒಳನುಸುಳುಕೋರರನ್ನು ಗುರುತಿಸದಂತೆ ರಕ್ಷಿಸಲು ಟಿಎಂಸಿ…
Updated By: Priyalachhi ಬಾಹುಬಲಿ, ಸಲಾರ್ ಮತ್ತು ಕಲ್ಕಿ 2898 ಎಡಿ ಅಂತಹ ಬ್ಲಾಕ್ಬಸ್ಟರ್ ಚಿತ್ರಗಳ ಮೂಲಕ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್ ಅವರೀಗ ಹೊಸ ಪ್ರತಿಭೆಗಳ ಬೆಂಬಲಕ್ಕೆ ನಿಂತಿದ್ದಾರೆ. ಪ್ರತಿಭಾವಂತ ಕಥೆಗಾರರನ್ನು ಗುರುತಿಸಿ ಅವರಿಗೆ ಜಾಗತಿಕ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಸೌತ್ ಸೂಪರ್ ಸ್ಟಾರ್ ಪ್ರಭಾಸ್ ‘ದಿ ಸ್ಕ್ರಿಪ್ಟ್ ಕ್ರಾಫ್ಟ್ ಇಂಟರ್ ನ್ಯಾಷನಲ್ ಶಾರ್ಟ್ ಫಿಲ್ಮ್ ಫೆಸ್ಟಿವಲ್’ (The Script Craft International Short Film Festival) ಅನ್ನು ಅಧಿಕೃತವಾಗಿ ಅನಾವರಣಗೊಳಿಸಿದ್ದಾರೆ. ಈ ಕ್ರಾಂತಿಕಾರಿ ವೇದಿಕೆಯು ಪ್ರಪಂಚದಾದ್ಯಂತ ಇರುವ ಉದಯೋನ್ಮುಖ ನಿರ್ದೇಶಕರು ಮತ್ತು ಕಥೆಗಾರರಿಗೆ ಸಿನಿಮಾ ರಂಗಕ್ಕೆ ನೇರ ಪ್ರವೇಶ ಒದಗಿಸುವ ಗುರಿಯನ್ನು ಹೊಂದಿದೆ. ಈ ವೇದಿಕೆಯ ಪ್ರಮುಖಾಂಶಗಳು ಹೀಗಿವೆ ಯಾವುದೇ ಮೂಲೆಯ ಕಥೆಗಾರರು ಭಾಗವಹಿಸಬಹುದು: ಈ ಸ್ಪರ್ಧೆಯಲ್ಲಿ ವಿಶ್ವದ ಯಾವುದೇ ಮೂಲೆಯ ಕಥೆಗಾರರು ಭಾಗವಹಿಸಬಹುದು. 2 ನಿಮಿಷಕ್ಕಿಂತ ಹೆಚ್ಚಿನ ಅವಧಿಯ ಯಾವುದೇ ಶೈಲಿಯ ಅಥವಾ ಜಾನರ್ನ ಕಿರುಚಿತ್ರಗಳನ್ನು ಇಲ್ಲಿ ಸಲ್ಲಿಸಬಹುದು. ಜನರ ತೀರ್ಪು: ಈ ಉತ್ಸವದಲ್ಲಿ…
Subscribe to Updates
Get the latest creative news from FooBar about art, design and business.