Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ನಿಂದ ಕರೆ ಬಂದಿದೆ ಎಂಬ ವಿಚಾರಕ್ಕೆ ಬೆಳಗಾವಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ ತಾಲೂಕಿನ ಹುದಲಿಯಲ್ಲಿ ಮಾತನಾಡಿದ ಅವರು, ನೀವು ಅವರನ್ನೇ ಕೇಳಬೇಕು ನಾವೇನೂ ಹೇಳುವುದು?, ಟಾಸ್ ಮಾಡಿದವರು ಅವರೇ ಇಬ್ಬರು. ಅದು ದೆಹಲಿಯ ಫಿರೋಜ್ ಶಾ ಕೊಟ್ಲಾದ ಮೈದಾನದಲ್ಲಿ ಟಾಸ್ ಆಗಿದೆ. ನಾವು ಕ್ಯಾಪ್ಟನ್ ಜಾಗದಲ್ಲಿ ಇಲ್ಲ. ಆವಾಗ ಥರ್ಡ್ ಅಂಪೈರ್ ಕೂಡ ಇರಲಿಲ್ಲ. ಇಬ್ಬರೇ ಟಾಸ್ ಹಾಕಿದವರು ಅದು ಹೆಡ್ ಬಿದ್ದಿದೇಯೋ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದು ಮಾರ್ಮಿಕವಾಗಿ ಹೇಳಿದರು. ಮತ್ತೊಂದೆಡೆ, ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಣ್ಣಿನ ಆರೋಗ್ಯ ಬಹಳ ಮುಖ್ಯ, ಮಣ್ಣು ಸಂರಕ್ಷಣೆ ಆಗಬೇಕು. ನೀರು ನಿರ್ವಹಣೆ ಆಗಬೇಕು. ಕಬ್ಬು ಬೆಳೆಯುವ ಜಿಲ್ಲೆಗಳಿಗೆ ಈ ಯೋಜನೆ ಜಾರಿಗೆ ತಂದಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಾದ್ಯಂತ ಯೋಜನೆ ವಿಸ್ತರಣೆ ಮಾಡುತ್ತೇವೆ ಎಂದರು. ಡಿಕೆಶಿ ಹೆಸರು ಹೇಳುತ್ತಿದ್ದಂತೆ ಗದರಿದ ಸಿಎಂ: ಹೈಕಮಾಂಡ್…
Updated By: Priyalachhi ಕಾರವಾರ: ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಸೀಬರ್ಡ್ ನೌಕಾನೆಲೆ ಭೂಸ್ವಾಧೀನ ಪ್ರಕ್ರಿಯೆಯ ಸಂತ್ರಸ್ತರಿಗೆ ಕೊನೆಗೂ ನ್ಯಾಯ ಸಿಗುವ ಕಾಲ ಬಂದಿದೆ. ಭೂಸ್ವಾಧೀನ ಕಾಯ್ದೆಯ 28 (ಎ) ಪ್ರಕರಣಗಳ ಅಡಿ ನಿರಾಶ್ರಿತರಿಗೆ ಸಲ್ಲಬೇಕಾದ ಹೆಚ್ಚುವರಿ ಪರಿಹಾರದ ವಿಳಂಬಕ್ಕೆ ಈಗ ಶಾಶ್ವತ ಪರಿಹಾರ ಸಿಗುತ್ತಿದ್ದು, ಈ ಪ್ರಕ್ರಿಯೆ ಯಶಸ್ಸಿನ ಹಾದಿಯಲ್ಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, “ಸೀಬರ್ಡ್ ಯೋಜನೆಯಡಿ ಭೂಮಿ ಕಳೆದುಕೊಂಡ ಮಾಲೀಕರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಹಣವನ್ನು ಶೀಘ್ರವಾಗಿ ತಲುಪಿಸುವ ನಿಟ್ಟಿನಲ್ಲಿ ನಡೆಸಿದ ವಿಶೇಷ ಪ್ರಯತ್ನಗಳು ಫಲ ನೀಡುತ್ತಿವೆ. ಒಟ್ಟು ಬಾಕಿ ಉಳಿದಿರುವ 256 ಪ್ರಕರಣಗಳ ಪೈಕಿ, ಈಗಾಗಲೇ ಮೊದಲ ಹಂತದಲ್ಲಿ 57 ಪ್ರಕರಣಗಳಿಗೆ ಸಂಬಂಧಿಸಿದಂತೆ 10 ಕೋಟಿ ರೂಪಾಯಿಗಳನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದರ ಮುಂದುವರಿದ ಭಾಗವಾಗಿ, ಇಂದು (ಡಿಸೆಂಬರ್ 19, 2025) ಮತ್ತೊಂದು ಪ್ರಮುಖ ಹಂತದಲ್ಲಿ 116 ಪ್ರಕರಣಗಳಿಗೆ ಒಟ್ಟು ₹27,66,93,397 ಮೊತ್ತದ ಹಣ ಬಿಡುಗಡೆಯಾಗಿದೆ”…
Updated By: Priyalachhi ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ನಾಳೆ ಭಾನುವಾರ(ಡಿ.21) ರೈಲು ಸಂಚಾರ ತಡವಾಗಿ ಆರಂಭವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಹಳದಿ ಮಾರ್ಗದ ರೈಲು ಸಂಚಾರ 8 ಗಂಟೆಗೆ ಆರಂಭವಾಗುತ್ತದೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರ ಎಂದಿನಂತೆ ಆರಂಭವಾಗಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.
Updated By: Priyalachhi ಬೆಂಗಳೂರು: ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ), ಗಗನಯಾತ್ರಿಗಳ ಸುರಕ್ಷಿತ ಲ್ಯಾಂಡಿಂಗ್ ಖಾತರಿಪಡಿಸುವ ಡ್ರೋಗ್ ಪ್ಯಾರಾಚೂಟ್ ಅರ್ಹತಾ ಪರೀಕ್ಷೆ ಯಶಸ್ವಿಯಾಗಿ ನಡೆಸಿದೆ. ಗಗನಯಾನ ಕ್ರೂ ಮಾಡ್ಯೂಲ್ನ ವೇಗವರ್ಧನೆ ವ್ಯವಸ್ಥೆಯ ನಿರ್ಣಾಯಕ ಹಂತವಾದ ಡ್ರೋಗ್ ಪ್ಯಾರಾಚೂಟ್ಗಳ ಅರ್ಹತಾ ಪರೀಕ್ಷೆಗಳ ಸರಣಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಇಸ್ರೋ ಶನಿವಾರ ಘೋಷಿಸಿದೆ. ಡಿಸೆಂಬರ್ 18 ಮತ್ತು 19, 2025 ರಂದು ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯದ ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ ಸೌಲಭ್ಯದಲ್ಲಿ ಈ ಪರೀಕ್ಷೆಗಳನ್ನು ನಡೆಸಲಾಯಿತು ಎಂದು ಇಸ್ರೋ ತಿಳಿಸಿದೆ.
Updated By: Priyalachhi ಬಳ್ಳಾರಿ/ಎರ್ನಾಕುಲಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಬಳ್ಳಾರಿಯ ಚಿನ್ನದ ಉದ್ಯಮಿ ಸೇರಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಬಂಧಿತ ಆರೋಪಿಗಳು. ಇವರಿಬ್ಬರನ್ನು ವಶಕ್ಕೆ ಪಡೆದು ತಿರುವನಂತಪುರದಲ್ಲಿರುವ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿ, ಬಳಿಕ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಪ್ರಕರಣ ಸಂಬಂಧ ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಲಾಗಿತ್ತು. 2019ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದ್ವಾರಪಾಲಕರ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಲೇಪನಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಿದ್ದ. ಆ ವೇಳೆ ಅದರಲ್ಲಿದ್ದ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಗೊತ್ತಾಗಿದೆ. ವಿದ್ಯುತ್ ಲೇಪನದ ವೇಳೆ…
Updated By: Priyalachhi India Clinch Series: ಟಿ20 ಸೀರಿಸ್ನ ಕೊನೆಯ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ತೋರಿದ್ದು, ದಕ್ಷಿಣ ಆಫ್ರಿಕಾವನ್ನು ಸೋಲಿಸಿ 3-1 ಅಂತರದಲ್ಲಿ ಸೀರಿಸ್ ಅನ್ನು ಗೆದ್ದುಕೊಂಡಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಭಾರತ 20 ಓವರ್ಗಳಲ್ಲಿ 5 ವಿಕೆಟ್ಗೆ 231 ರನ್ ಗಳಿಸಿದರೆ, ದಕ್ಷಿಣ ಆಫ್ರಿಕಾ 8 ವಿಕೆಟ್ಗೆ 201 ರನ್ ಗಳಿಸಿ ಸೋಲನ್ನೊಪ್ಪಿಕೊಂಡಿತು. ಭಾರತದ ಬೃಹತ್ ಮೊತ್ತ: ಭಾರತದ ಬ್ಯಾಟಿಂಗ್ ಬಗ್ಗೆ ಹೇಳುವುದಾದರೆ, ತಿಲಕ್ ವರ್ಮಾ 73 ರನ್ ಮತ್ತು ಹಾರ್ದಿಕ್ ಪಾಂಡ್ಯ 63 ರನ್ ಗಳಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಸಂಜು ಸ್ಯಾಮ್ಸನ್ 37 ರನ್ ಮತ್ತು ಅಭಿಷೇಕ್ ಶರ್ಮಾ 34 ರನ್ ಗಳಿಸಿ ಮಿಂಚಿದರು. ಇನ್ನು, ಶಿವಂ ದುಬೆ 3 ಎಸೆತಗಳಲ್ಲಿ 10 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 5 ರನ್ ಗಳಿಸಿ ಔಟಾಗುವ ಮೂಲಕ ಮತ್ತೆ ನಿರಾಸೆ ಮೂಡಿಸಿದರು. ಒಟ್ಟಿನಲ್ಲಿ ಭಾರತ ತಂಡ 20 ಓವರ್ಗಳಲ್ಲಿ 5 ವಿಕೆಟ್…
Updated By: Priyalachhi ಬೆಳಗಾವಿ: ಡಿ.9ರಿಂದ ಸುವರ್ಣಸೌಧದಲ್ಲಿ ನಡೆದ 10 ದಿನಗಳ ಕಾಲ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನ ಶುಕ್ರವಾರ(ಡಿ.19) ಮುಕ್ತಾಯವಾಯಿತು. ದ್ವೇಷ ಭಾಷಣ ನಿಯಂತ್ರಣ ಮಸೂದೆ ಸೇರಿ 23 ವಿಧೇಯಕಗಳಿಗೆ ಅಂಗೀಕಾರ, ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತು ಅವುಗಳ ಮೇಲಿನ ಚರ್ಚೆಗಳು ನಡೆದರೆ, ಗೃಹಲಕ್ಷ್ಮಿ ಹಣ ಪಾವತಿ ಗದ್ದಲ, ಪವರ್ ಫೈಟ್ ಚರ್ಚೆಗೆ ಇನ್ನಷ್ಟು ಕಿಚ್ಚು ಹಚ್ಚಿಸುವ ವೇದಿಕೆಯಾಗುವುದರೊಂದಿಗೆ ಈ ಬಾರಿಯ ಚಳಿಗಾಲದ ಅಧಿವೇಶನ ಮುಕ್ತಾಯವಾಗಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದ ಚರ್ಚೆಗೆ ಅಧಿವೇಶನದ ಎರಡನೇ ದಿನದಿಂದಲೇ ಅವಕಾಶ ನೀಡಲಾಯಿತು. ಆ ಮೂಲಕ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಮೇಲಿನ ಚರ್ಚೆಗೆ ಹೆಚ್ಚಿನ ಒತ್ತು ನೀಡಲಾಯಿತು. ಆದರೆ, ಅದು ಪ್ರತಿ ಬಾರಿಯಂತೆ ಬರೀ ಚರ್ಚೆಗಷ್ಟೇ ಸೀಮಿತವಾಯಿತೇ ಹೊರತು, ಉತ್ತರ ಕರ್ನಾಟಕಕ್ಕೆ ಸಮಸ್ಯೆಗಳಿಗೆ ಪರಿಹಾರ ನೀಡುವ ದೊಡ್ಡ ಘೋಷಣೆಗಳೇನು ಹೊರಬಿದ್ದಿಲ್ಲ. ಚಳಿಗಾಲದ ಅಧಿವೇಶನದಲ್ಲಿ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಲಾಪ ನಡೆಯಿತು. ಈ ಪೈಕಿ…
Updated By: Priyalachhi ಪಂಚಾಂಗ ದಿನಾಂಕ : 20-12-2025 ವಾರ : ಶನಿವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಶುಕ್ಲ ತಿಥಿ : ಪ್ರತಿಪದಾ ನಕ್ಷತ್ರ : ಮೂಲಾ ಸೂರ್ಯೋದಯ : ಮುಂಜಾನೆ 06:35 ಗಂಟೆಗೆ ಅಮೃತ ಕಾಲ : ಬೆಳಗ್ಗೆ 06:35ರಿಂದ 08:00ರವರೆಗೆ ದುರ್ಮುಹೂರ್ತ : ಬೆಳಗ್ಗೆ 08:11ರಿಂದ 08:59ರವರೆಗೆ ರಾಹುಕಾಲ : ಬೆಳಗ್ಗೆ 09:25ರಿಂದ 10:50ರವರೆಗೆ ಸೂರ್ಯಾಸ್ತ : ಸಂಜೆ 05:55 ಗಂಟೆಗೆ ರಾಶಿ ಭವಿಷ್ಯ: ಮೇಷ : ನೀವು ಕೆಲಸ ಮತ್ತು ಕುಟುಂಬದ ನಡುವೆ ಪರದಾಡುತ್ತೀರಿ, ಏಕೆಂದರೆ ಎರಡಕ್ಕೂ ನಿಮ್ಮ ಗಮನ ಅಗತ್ಯ. ನೀವು ಸಂಜೆಯನ್ನು ವಿನೋದಕ್ಕಾಗಿ ಮೀಸಲಿರಿಸಿ. ನೀವು ಖ್ಯಾತಿ ಪಡೆಯಲು ಪ್ರಯತ್ನಿಸುತ್ತೀರಿ ಮತ್ತು ನಿಮ್ಮ ಮಹತ್ವಾಕಾಂಕ್ಷೆಯನ್ನು ಸದ್ಯದಲ್ಲೇ ಈಡೇರಿಸಿಕೊಳ್ಳಲಿದ್ದೀರಿ. ನಿಮಗೆ ಬೆಂಬಲಕ್ಕೆ ಆಶೀರ್ವಾದಗಳಿವೆ. ವೃಷಭ : ನೀವು ಇಂದು ಬಹುತೇಕ ಸಮಯವನ್ನು ನಿಮ್ಮ ಆರೋಗ್ಯ ಮತ್ತು ಸೌಖ್ಯಕ್ಕಾಗಿ ಕಳೆಯುತ್ತೀರಿ. ವ್ಯಾಪಾರಸಂಬಂಧಿ ಭೋಜನವು ಕೆಲ ಬಾಕಿ ಮಾತುಕತೆಗಳನ್ನು ಯಶಸ್ವಿ…
Updated By: Priyalachhi ಗುರುವಾರ ಸಂಜೆ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಭಾಗವಹಿಸಿದ್ದರು. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಆರಾಧ್ಯ ಬಚ್ಚನ್ ಅವರಿಗೆ ಸಪೋರ್ಟ್ ಮಾಡಲು ಸಂಪೂರ್ಣ ಕುಟುಂಬ ಹಾಜರಿತ್ತು. ಕಳೆದ ಸಂಜೆ ಬಚ್ಚನ್ ಕುಟುಂಬ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿತು. ಹಿರಿಯ ತಾರೆ ಅಮಿತಾಭ್ ಬಚ್ಚನ್ ಬ್ಲ್ಯಾಕ್ ಸೂಟ್ ಧರಿಸಿದ್ದರು. ಪುತ್ರ, ನಟ ಅಭಿಷೇಕ್ ಬಚ್ಚನ್ ಕ್ಯಾಶುವಲ್ ಬ್ಲ್ಯೂ ಔಟ್ಫಿಟ್ನಲ್ಲಿ ಕಾಣಿಸಿಕೊಂಡರು. ಸೊಸೆ, ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಬ್ಲ್ಯಾಕ್ ಟ್ರೆಡಿಶನಲ್ ಡ್ರೆಸ್, ಸಾಂಪ್ರದಾಯಿಕ ಬನಾರಸಿ ದುಪಟ್ಟಾದೊಂದಿಗೆ ತಮ್ಮ ಸೊಬಗು ಬೀರಿದರು. ಶಾಲೆಯ ಹೊರಗಿನ ದೃಶ್ಯಗಳು, ಕುಟುಂಬ ಸದಸ್ಯರು ಪ್ರತ್ಯೇಕವಾಗಿ ಬಂದು ಪ್ರವೇಶದ್ವಾರದ ಬಳಿ ಒಟ್ಟಿಗೆ ಸೇರುವುದನ್ನು ತೋರಿಸಿವೆ. ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅಭಿಮಾನಿಗಳು ಪ್ರೀತಿಯ ಧಾರೆಯೆರೆದಿದ್ದಾರೆ. ಅಭಿಷೇಕ್ ಮತ್ತು ಐಶ್ವರ್ಯಾ ಸ್ಥಳಕ್ಕೆ ತಲುಪಿ, ಸ್ವಲ್ಪ ಹೊತ್ತು…
Updated By: Priyalachhi ಕಾರವಾರ: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉತ್ತರಕನ್ನಡ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೋಕರ್ಣದಲ್ಲಿ ಆತ್ಮಲಿಂಗ ದರ್ಶನ: ಬೆಳಿಗ್ಗೆ ಗೋಕರ್ಣಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರೊಂದಿಗೆ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವರಿಗೆ ಬಿಲ್ವಪತ್ರೆ ಹಾಗೂ ಪಂಚಾಮೃತ ಅಭಿಷೇಕ ನೆರವೇರಿಸಿ, ಆತ್ಮಲಿಂಗದ ದರ್ಶನ ಪಡೆದರು. ಬಳಿಕ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಂಕೋಲಾದತ್ತ ಪ್ರಯಾಣ ಬೆಳೆಸಿದರು. ಆಂದ್ಲೆಯಲ್ಲಿ ದೀರ್ಘಕಾಲದ ಪೂಜೆ ಮತ್ತು ‘ದೇವಪ್ರಶ್ನೆ’: ಅಂಕೋಲಾದ ಆಂದ್ಲೆ ಗ್ರಾಮದ ಶ್ರೀ ಜಗದೀಶ್ವರಿ ಅಮ್ಮನವರ ಸನ್ನಿಧಿಗೆ ಭೇಟಿ ನೀಡಿದ ಡಿಸಿಎಂ, ಅಲ್ಲಿನ ಪ್ರಶಾಂತ ವಾತಾವರಣದಲ್ಲಿ ದೇವಿಯ ಮುಂದೆ ಸುದೀರ್ಘ ಸಮಯ ಕಳೆದರು. ಸುಮಾರು ಒಂದೂವರೆ ತಾಸಿಗೂ ಅಧಿಕ ಕಾಲ ದೇವಸ್ಥಾನದಲ್ಲಿ ಕುಳಿತು ಅರ್ಚಕರ ಮೂಲಕ ‘ಪ್ರಶ್ನಾ ಕಾರ್ಯ’ ನಡೆಸಿದರು. ನಾಗದೇವತೆ ಹಾಗೂ ತುಳಸಿಗೆ ವಿಶೇಷ ಪೂಜೆ ಸಲ್ಲಿಸಿದ ಶಿವಕುಮಾರ್, ದೇವಿಯ…
Subscribe to Updates
Get the latest creative news from FooBar about art, design and business.