Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಗುರುವಾರ ಸಂಜೆ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಭಾಗವಹಿಸಿದ್ದರು. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಆರಾಧ್ಯ ಬಚ್ಚನ್ ಅವರಿಗೆ ಸಪೋರ್ಟ್ ಮಾಡಲು ಸಂಪೂರ್ಣ ಕುಟುಂಬ ಹಾಜರಿತ್ತು. ಕಳೆದ ಸಂಜೆ ಬಚ್ಚನ್ ಕುಟುಂಬ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿತು. ಹಿರಿಯ ತಾರೆ ಅಮಿತಾಭ್ ಬಚ್ಚನ್ ಬ್ಲ್ಯಾಕ್ ಸೂಟ್ ಧರಿಸಿದ್ದರು. ಪುತ್ರ, ನಟ ಅಭಿಷೇಕ್ ಬಚ್ಚನ್ ಕ್ಯಾಶುವಲ್ ಬ್ಲ್ಯೂ ಔಟ್ಫಿಟ್ನಲ್ಲಿ ಕಾಣಿಸಿಕೊಂಡರು. ಸೊಸೆ, ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಬ್ಲ್ಯಾಕ್ ಟ್ರೆಡಿಶನಲ್ ಡ್ರೆಸ್, ಸಾಂಪ್ರದಾಯಿಕ ಬನಾರಸಿ ದುಪಟ್ಟಾದೊಂದಿಗೆ ತಮ್ಮ ಸೊಬಗು ಬೀರಿದರು. ಶಾಲೆಯ ಹೊರಗಿನ ದೃಶ್ಯಗಳು, ಕುಟುಂಬ ಸದಸ್ಯರು ಪ್ರತ್ಯೇಕವಾಗಿ ಬಂದು ಪ್ರವೇಶದ್ವಾರದ ಬಳಿ ಒಟ್ಟಿಗೆ ಸೇರುವುದನ್ನು ತೋರಿಸಿವೆ. ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅಭಿಮಾನಿಗಳು ಪ್ರೀತಿಯ ಧಾರೆಯೆರೆದಿದ್ದಾರೆ. ಅಭಿಷೇಕ್ ಮತ್ತು ಐಶ್ವರ್ಯಾ ಸ್ಥಳಕ್ಕೆ ತಲುಪಿ, ಸ್ವಲ್ಪ ಹೊತ್ತು…
Updated By: Priyalachhi ಕಾರವಾರ: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉತ್ತರಕನ್ನಡ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೋಕರ್ಣದಲ್ಲಿ ಆತ್ಮಲಿಂಗ ದರ್ಶನ: ಬೆಳಿಗ್ಗೆ ಗೋಕರ್ಣಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರೊಂದಿಗೆ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವರಿಗೆ ಬಿಲ್ವಪತ್ರೆ ಹಾಗೂ ಪಂಚಾಮೃತ ಅಭಿಷೇಕ ನೆರವೇರಿಸಿ, ಆತ್ಮಲಿಂಗದ ದರ್ಶನ ಪಡೆದರು. ಬಳಿಕ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಂಕೋಲಾದತ್ತ ಪ್ರಯಾಣ ಬೆಳೆಸಿದರು. ಆಂದ್ಲೆಯಲ್ಲಿ ದೀರ್ಘಕಾಲದ ಪೂಜೆ ಮತ್ತು ‘ದೇವಪ್ರಶ್ನೆ’: ಅಂಕೋಲಾದ ಆಂದ್ಲೆ ಗ್ರಾಮದ ಶ್ರೀ ಜಗದೀಶ್ವರಿ ಅಮ್ಮನವರ ಸನ್ನಿಧಿಗೆ ಭೇಟಿ ನೀಡಿದ ಡಿಸಿಎಂ, ಅಲ್ಲಿನ ಪ್ರಶಾಂತ ವಾತಾವರಣದಲ್ಲಿ ದೇವಿಯ ಮುಂದೆ ಸುದೀರ್ಘ ಸಮಯ ಕಳೆದರು. ಸುಮಾರು ಒಂದೂವರೆ ತಾಸಿಗೂ ಅಧಿಕ ಕಾಲ ದೇವಸ್ಥಾನದಲ್ಲಿ ಕುಳಿತು ಅರ್ಚಕರ ಮೂಲಕ ‘ಪ್ರಶ್ನಾ ಕಾರ್ಯ’ ನಡೆಸಿದರು. ನಾಗದೇವತೆ ಹಾಗೂ ತುಳಸಿಗೆ ವಿಶೇಷ ಪೂಜೆ ಸಲ್ಲಿಸಿದ ಶಿವಕುಮಾರ್, ದೇವಿಯ…
Updated By: Priyalachhi ಬೆಂಗಳೂರು: ಬಿಕ್ಲು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜು ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ (ಕೋಕಾ) ಕಾಯಿದೆ ವಿಧಿಸಿದ್ದ ಸರ್ಕಾರದ ಕ್ರಮವನ್ನು ರದ್ದುಪಡಿಸಿರುವ ಹೈಕೋರ್ಟ್, ಇದೇ ಆರೋಪ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವುದಕ್ಕೆ ನಿರಾಕರಿಸಿದೆ. ಜತೆಗೆ, ಪ್ರಕರಣ ಸಂಬಂಧ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಈ ಆದೇಶದಿಂದ ಈ ಹಿಂದೆ ಮಂಜೂರಾಗಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದಾದಂತಾಗಿದ್ದು, ಭೈರತಿ ಬಸವರಾಜು ಅವರಿಗೆ ಬಂಧನ ಭೀತಿ ಎದುರಾದಂತಾಗಿದೆ. ಬಿಕ್ಲು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ದ ದಾಖಲಾಗಿದ್ದ ಕೋಕಾ ಕಾಯಿದೆ ಮತ್ತು ಎಫ್ಐಆರ್ ರದ್ದು ಮಾಡುವುದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ. ಕೋಕಾ ಕಾಯಿದೆ ರದ್ದುಮಾಡಿದ್ದು, ಇನ್ನುಳಿದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ಕೋಕಾ ಕಾಯಿದೆ ಜಾರಿ ಮಾಡುವಲ್ಲಿ ಸರಿಯಾದ…
Updated By: Priyalachhi ಬೆಳಗಾವಿ: ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವಾಗಿದೆ. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಎರಡೂವರೆ ವರ್ಷ ಮುಖ್ಯಮಂತ್ರಿ ಅಂತಾ ತೀರ್ಮಾನ ಆಗಿಲ್ಲ. ಇವಾಗ ನಾನು ಮುಖ್ಯಮಂತ್ರಿ ಆಗಿದ್ದೇನೆ, ಮುಂದೆಯೂ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ ಪುನರುಚ್ಚರಿಸಿದರು. ಉತ್ತರ ಕರ್ನಾಟಕ ಕುರಿತ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉತ್ತರಿಸುವಾಗ ನಾಯಕತ್ವ ಬದಲಾವಣೆ ವಿಚಾರದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಸುನೀಲ್ ಕುಮಾರ್, ಮುನಿರತ್ನ ಸೇರಿದಂತೆ ಮತ್ತಿತರರು ಸಿದ್ದರಾಮಯ್ಯ ಅವರ ಕಾಲೆಳೆದರು. ಐದು ವರ್ಷ ನೀವೇ ಸಿಎಂ ಎಂದು ಘಂಟಾಘೋಷವಾಗಿ ಹೇಳಿ ನೋಡೋಣ ಎಂದು ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರಿಗೆ ಸವಾಲೆಸೆದರು. ಈ ವೇಳೆ ಕೆಲಕಾಲ ಸ್ವಾರಸ್ಯಕರ ಚರ್ಚೆ ಆಯಿತು. ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ- ಸಿಎಂ ತಿರುಗೇಟು: ಮುಖ್ಯಮಂತ್ರಿಗಳು ಮಾತನಾಡುತ್ತಿದ್ದಾಗ, ಬಿಜೆಪಿ ಶಾಸಕ ಸಿದ್ದು ಸವದಿ ಇನ್ಮುಂದೆ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇರಲಿದೆ ಎಂದರು. ಅದಕ್ಕೆ ನಿಮ್ಮ ಅಪ್ಪರಾಣೆಗೂ ಬರಲ್ಲ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ…
Updated By: Priyalachhi ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು `ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್’ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ ಇಟ್ಟುಕೊಂಡು ಈಗಿನಿಂದಲೇ ಉಳಿದ ಕೆಲಸಗಳನ್ನು ನಾವು ಆರಂಭಿಸಿದ್ದೇವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ದೇವನಹಳ್ಳಿಯ ಸಮೀಪದಲ್ಲಿ ಈಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಕ್ರಿಯವಾಗಿದೆ. ಇದು ಆರಂಭವಾಗುವಾಗಲೇ 2033ರವರೆಗೂ 150 ಕಿ.ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಾರದೆಂಬ ಷರತ್ತು ಇದೆ. ಏತನ್ಮಧ್ಯೆ ಹೊಸದೆಹಲಿ ಮತ್ತು ನವೀ ಮುಂಬೈಗಳಲ್ಲಿ ಇಂತಹ ಷರತ್ತುಗಳನ್ನು ಸಡಿಲಿಸಿ, ಎರಡನೆಯ ಏರ್ಪೋರ್ಟುಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಸಂದರ್ಭ ನೋಡಿಕೊಂಡು ಬಗೆಹರಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Updated By: Priyalachhi ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ರಾಜ್ಯ ನಾಯಕರು ಬಂದಿದ್ದೇ ಬಂದಿದ್ದು, ಡಿನ್ನರ್ ಪಾರ್ಟಿಗಳು ನಡೆಯುತ್ತಲೇ ಇವೆ. ಗುರುವಾರ ರಾತ್ರಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಭೋಜನಕೂಟವು ತೀವ್ರ ಕುತೂಹಲ ಕೆರಳಿಸಿದೆ. ಬೆಳಗಾವಿಯ ಕುವೆಂಪುನಗರದಲ್ಲಿ ಇರುವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾರ್ಟಿ ಕರೆದಿದ್ದರು. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್ ಸೇರಿದಂತೆ 25 ಸಚಿವರು, ಶಾಸಕರು ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆ, ಸುವರ್ಣ ವಿಧಾನಸೌಧದಿಂದ ನೇರವಾಗಿ ಊಟಕ್ಕೆ ಸತೀಶ್ ಜಾರಕಿಹೊಳಿ ಅವರ ಮನೆಯತ್ತ ನಾಯಕರು ದೌಡಾಯಿಸಿದರು. ಸಿದ್ದರಾಮಯ್ಯ ಜೊತೆಗೆ ಡಾ.ಹೆಚ್.ಸಿ.ಮಹದೇವಪ್ಪ, ಜಮೀರ್ ಅಹಮ್ಮದ್ ಖಾನ್, ಡಾ.ಎಂ.ಸಿ.ಸುಧಾಕರ್ ಆಗಮಿಸಿದರು. ಈ ವೇಳೆ ಮುಖ್ಯಮಂತ್ರಿಗಳನ್ನು ಸತೀಶ್ ಪುತ್ರ ರಾಹುಲ್ ಜಾರಕಿಹೊಳಿ ಹೂಗುಚ್ಛ ನೀಡಿ ಬರಮಾಡಿಕೊಂಡರು. ಇನ್ನು, ಡಾ.ಜಿ.ಪರಮೇಶ್ವರ್ ಜೊತೆಗೆ ಸತೀಶ್ ಜಾರಕಿಹೊಳಿ ತಮ್ಮ ಮನೆಗೆ ಆಗಮಿಸಿದರು. ನಾಯಕರು ತರಹೇವಾರಿ…
Updated By: Priyalachhi ಬೆಳಗಾವಿ: ರಾಜ್ಯದಲ್ಲಿ 2014-15ರಿಂದ 2022-23ರವರೆಗಿನ ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆ (ಐಪಿಡಿಎಸ್) ಅನುಷ್ಠಾನ ಅವಧಿಯಲ್ಲಿ ಕೇಂದ್ರ ಇಂಧನ ಇಲಾಖೆ ಅನುಮೋದಿಸಿದ್ದ ಮೊತ್ತಕ್ಕಿಂತ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) 110.89 ಕೋಟಿ ರೂ. ಅಧಿಕ ವೆಚ್ಚ ಮಾಡಿರುವುದು ಸಿಎಜಿ ವರದಿಯಲ್ಲಿ ಬಹಿರಂಗಗೊಂಡಿದೆ. ಗುರುವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಪರವಾಗಿ ಸಚಿವ ಕೃಷ್ಣಬೈರೇಗೌಡ ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆ (ಐಪಿಡಿಎಸ್) ಅನುಷ್ಠಾನದ ಮೇಲಿನ ಭಾರತದ ಲೆಕ್ಕ ನಿಯಂತ್ರಕರು ಮತ್ತು ಲೆಕ್ಕ ಪರಿಶೋಧಕರ ವರದಿಯನ್ನು ಮಂಡಿಸಿದರು. ಪ್ರಮುಖವಾಗಿ ಎಸ್ಕಾಂಗಳು ಯೋಜನೆ ಅನುಷ್ಠಾನ ಮಾಡುವಲ್ಲಿ ಅನುಮೋದಿತ ವೆಚ್ಚಕ್ಕಿಂತ 110.89 ಕೋಟಿ ರೂ. ಮೊತ್ತದಷ್ಟು ಅಧಿಕ ವೆಚ್ಚವನ್ನು ಭರಿಸಿದ್ದವು. ಈ ಪೈಕಿ 38.52 ಕೋಟಿ ರೂ. ಮೊತ್ತವು ಮಾರ್ಗಸೂಚಿ ದರ ಮೀರಿ ಅಧಿಕ ದರಗಳಲ್ಲಿ ಖರೀದಿಸಿರುವುದರಿಂದ ಆಗಿದೆ. ಈ ಯೋಜನೆಯಡಿ ಒಟ್ಟಾರೆ ವೆಚ್ಚದ ಶೇ.60ರಷ್ಟು ಕೇಂದ್ರದ ಸರ್ಕಾರದ ಬಂಡವಾಳ ಅನುದಾನ, ಶೇ.30ರಷ್ಟು ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲ ಹಾಗೂ ಶೇ.10ರಷ್ಟು ಸ್ವಂತ ಹಣಕಾಸಿನಿಂದ ಭರಿಸುವ ಅವಕಾಶ ಕೊಟ್ಟಿದೆ.…
Updated By: Priyalachhi ಬೆಳಗಾವಿ: ಚಳಿಗಾಲದ ಅಧಿವೇಶನದ ಮಧ್ಯೆ ಉತ್ತರ ಕರ್ನಾಟಕ ಭಾಗಕ್ಕೆ ಒಟ್ಟು 3,450 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಬಂಪರ್ ಅನುದಾನ ನೀಡಲಾಗಿದೆ. ಅದರಲ್ಲೂ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಚಿಕ್ಕೋಡಿ ತಾಲೂಕುಗಳಲ್ಲಿ ಬಾಧಿತ ಅಚ್ಚುಕಟ್ಟಿಗೆ ಕೃಷ್ಣಾ ನದಿಯಿಂದ ನೀರನ್ನು ಎತ್ತಿ, ರಾಯಬಾಗ ಉನ್ನತಮಟ್ಟದ ವಿತರಣಾ ಕಾಲುವೆ (RHLD) ಮತ್ತು ರಾಯಬಾಗ ವಿತರಣಾ ಕಾಲುವೆಗಳಿಗೆ ನೀರು ಹರಿಸುವ 210 ಕೋಟಿ ರೂ.ಗಳ ಮೊತ್ತದ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಇತ್ತ ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಕೆರೂರು ಏತ ನೀರಾವರಿ ಯೋಜನೆಯ 1,503 ಕೋಟಿ ರೂ.ಗಳ ಮೊತ್ತದ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅದೇ ರೀತಿ,…
Updated By: Priyalachhi ಬೆಂಗಳೂರು: ಮುಡಾದಲ್ಲಿ ನಡೆದ ನಿವೇಶನ ಹಂಚಿಕೆ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಮೂವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ವರದಿಯ ಮೇಲೆ ಆದೇಶ ನೀಡಲು, ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಡೈರಿಯನ್ನು ಡಿಸೆಂಬರ್ 23ರೊಳಗೆ ಹಾಜರುಪಡಿಸುವಂತೆ ವಿಶೇಷ ನ್ಯಾಯಾಲಯ ಗುರುವಾರ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (SPP) ಸೂಚನೆ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ ಸೇರಿ ಇತರರಿಗೆ ಕ್ಲೀನ್ಚಿಟ್ ನೀಡಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ನ ಆಕ್ಷೇಪಣಾ ಅರ್ಜಿ ಕುರಿತು ನ್ಯಾಯಾಲಯ ಗುರುವಾರ ವಿಚಾರಣೆ ನಡೆಸಿತು. ತನಿಖಾ ಸಂಸ್ಥೆ ಮುಂದಿನ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ. ಆದ್ದರಿಂದ ಈಗಾಗಲೇ ಸಲ್ಲಿಸಿರುವ ವರದಿಯ ಆಧಾರದಲ್ಲೇ ನ್ಯಾಯಾಲಯ ಮುಂದುವರಿಯಬೇಕಾಗುತ್ತದೆ. ಹೀಗಾಗಿ ಮುಂದಿನ ವಿಚಾರಣೆಯೊಳಗೆ ಕೇಸ್ ಡೈರಿಯನ್ನು ಸಲ್ಲಿಸಬೇಕು. ಮಧ್ಯಂತರದಲ್ಲಿ ದೂರುದಾರರು ಅಥವಾ ಜಾರಿ ನಿರ್ದೇಶನಾಲಯ (ED) ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್…
Updated By: Priyalachhi ಪಂಚಾಂಗ: ದಿನಾಂಕ : 19-12-2025 ವಾರ : ಶುಕ್ರವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಅಮಾವಾಸ್ಯೆ ತಿಥಿ : ಅಮಾವಾಸ್ಯೆ ನಕ್ಷತ್ರ : ಜ್ಯೇಷ್ಠ ಸೂರ್ಯೋದಯ : ಮುಂಜಾನೆ 06:35 ಗಂಟೆಗೆ ಅಮೃತ ಕಾಲ : ಬೆಳಗ್ಗೆ 08:00 ರಿಂದ 09:25ರವರೆಗೆ ದುರ್ಮುಹೂರ್ತ : ಬೆಳಗ್ಗೆ 08:59 ರಿಂದ 09:47 & ಮಧ್ಯಾಹ್ನ 03:23 ರಿಂದ 04:11ರವರೆಗೆ ರಾಹುಕಾಲ : ಬೆಳಗ್ಗೆ 10:49 ರಿಂದ 12:14ರವರೆಗೆ ಸೂರ್ಯಾಸ್ತ : ಸಂಜೆ 05:54 ಗಂಟೆಗೆ ರಾಶಿ ಭವಿಷ್ಯ: ಮೇಷ : ಜೀವನದಲ್ಲಿ ಕೊಂಚ ಉತ್ಸಾಹ ಸೇರಿಸಿಕೊಳ್ಳಿರಿ- ನಿಮ್ಮ ರನ್ನಿಂಗ್ ಶೂಗಳನ್ನು ಧರಿಸಿ ಮತ್ತು ಗೋಪ್ಯ ಗುರಿಯನ್ನು ಅನ್ವೇಷಿಸಿ. ನಿಮ್ಮನ್ನು ನೀವು ವ್ಯಸ್ತರಾಗಿಸಿಕೊಳ್ಳಿ, ಆದರೆ ಯಾವುದನ್ನೂ ಅತಿಯಾಗಿ ಮಾಡಬೇಡಿ. ಇಂದು, ನೀವು ಗುಂಪು ಚಟುವಟಿಕೆಗಳಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗುತ್ತೀರಿ. ವೃಷಭ : ಇಂದು ನಿಮ್ಮ ಮನಸ್ಸು ನಿಮ್ಮ ಆತ್ಮೀಯ ಮಿತ್ರರು ಮತ್ತು ಕುಟುಂಬ ಸದಸ್ಯರತ್ತ…
Subscribe to Updates
Get the latest creative news from FooBar about art, design and business.