Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಳಗಾವಿ: ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ ಅವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಆದಾಯ ಮಿತಿ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ, ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಇಲ್ಲಿನ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿವೆ. ರಾಜ್ಯವು ಜಿಎಸ್ಟಿ , ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ ಅದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್ ಪಡೆದುಕೊಂಡಿವೆ ಎಂದು ಅವರು ತಿಳಿಸಿದ್ದಾರೆ.
Updated By: Priyalachhi ಬೆಂಗಳೂರು: ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹೈಕೋರ್ಟ್ ವಕೀಲರೊಬ್ಬರು ಸಾವಿಗೀಡಾಗಿದ್ದಾರೆ. ನಂತರ ಆ ಕಾರು ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಎನ್. ರಾಮಚಂದ್ರ ರೆಡ್ಡಿ (61) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಕೂಟರ್ ಸವಾರಿ ಮಾಡುತ್ತಿದ್ದ ಭರತ್ (19) ಮತ್ತು ಹಿಂಬದಿ ಕುಳಿತಿದ್ದ ಸ್ವಾತಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 17 ರಂದು ಸಂಜೆ 7.28ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂಜಯ್ನಗರ ಪ್ರದೇಶದ ಡಾಲರ್ಸ್ ಕಾಲೋನಿಯ ಆರ್ಎಂವಿ ಕ್ಲಬ್ ಬಳಿ ರೆಡ್ಡಿ ರಸ್ತೆ ದಾಟುತ್ತಿದ್ದಾಗ, ಅತಿವೇಗದಿಂದ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ನಂತರ ಅದೇ ಕಾರು ಮುಂದಿನ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಲ್ಲಿಸಿದ್ದ ಮತ್ತೆರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಭಾಗಿಯಾದ ಎಲ್ಲ ವಾಹನಗಳಿಗೆ ಹಾನಿಯಾಗಿದೆ…
Updated By: Priyalachhi ಬೆಳಗಾವಿ: ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ ಎಂದು ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪಿ ಎಚ್ ಪೂಜಾರ್ ಅವರ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಪಿ.ಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ ಜಲಾಶಯದಿಂದಾಗಿ ವ್ಯಾಪಾರ ಕೇಂದ್ರಗಳ ಭೂಮಿ ಕೂಡ ಮೂರನೇ ಒಂದು ಭಾಗ ಮುಳುಗಡೆಯಾಗಿದ್ದು, ಸರ್ಕಾರ ಈ ವ್ಯಾಪಾರಸ್ಥರಿಗೆ ಒಂದೇ ಕಡೆ ಪುನರ್ವಸತಿ ಕಲ್ಪಿಸಿ ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಡಿಸಿಎಂ ಅವರು, “ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಹಾಗೂ ಅತಿ ದೊಡ್ಡ ಅಂಗಡಿಗಳ ಮಾಲೀಕರು ಯುನಿಟ್ 1, 2,3 ಕ್ಕೆ ವಾಣಿಜ್ಯ ಪ್ರದೇಶದಲ್ಲಿ 200 ಎಕರೆ ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ನಾವು 1635 ಎಕರೆ…
Updated By: Priyalachhi ಬೆಳಗಾವಿ: ಕಳೆದ ಬುಧವಾರ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ಇಂದು ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಮಸೂದೆ ಅಂಗೀಕಾರಗೊಳ್ಳುತ್ತಿದ್ದಂತೆ ಸಚಿವ ಭೈರತಿ ಸುರೇಶ್ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ನಡುವೆ ಏಕವಚನದಲ್ಲಿ ವಾಕ್ಸಮರ ನಡೆಯಿತು. ಬೈರತಿ ಸುರೇಶ್ ಅವರು, ದ್ವೇಷ ಭಾಷಣ ಮತ್ತು ದ್ವೇಷ ಅಪರಾಧದಿಂದಾಗಿ ಕರಾವಳಿ ಕರ್ನಾಟಕ “ಹೊತ್ತಿ ಉರಿಯುತ್ತಿದೆ”. ಅಲ್ಲಿ ಬೆಂಕಿ ಹಚ್ಚಿದ್ದೀರಿ. ಈಗ ಇಲ್ಲಿಯೂ ಬೆಂಕಿ ಹಚ್ಚುತ್ತಿದ್ದೀರಿ ಎಂದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು ಮತ್ತು ಸಚಿವರು ಕ್ಷೇಮೆ ಕೇಳಬೇಕು ಎಂದು ಒತ್ತಾಯಿಸಿದರು. ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಸೂದೆ ಅಂಗೀಕಾರವಾಗುತ್ತಿದ್ದಂತೆ, ಬಿಲ್ ಪ್ರತಿಯನ್ನು ಹರಿದು ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದರು. ದ್ವೇಷ ಭಾಷಣ ತಡೆಯುವ ದೇಶದ ಮೊದಲ ಕಾನೂನು ಇದಾಗಿದ್ದು, ಈ ಮಸೂದೆಯು…
Updated By: Priyalachhi ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್ ಬಂದಿದೆ. ಡ್ರಗ್ಸ್ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ. ಕಾಂಗ್ರೆಸ್ನ ಎರಡು ವರ್ಷಗಳ ಆಡಳಿತದಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದರು. ಕಾನೂನು ಸುವ್ಯವಸ್ಥೆ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರರಿಗೆ, ಭಯೋತ್ಪಾದಕರಿಗೆ ರೆಸಾರ್ಟ್, ಫೈವ್ ಸ್ಟಾರ್ ಸೌಲಭ್ಯ ನೀಡಲಾಗುತ್ತಿದೆ. ಕೈದಿಗಳು ಬ್ಯಾರಕ್ಗೆ ವರ್ಗಾವಣೆ ಮಾಡಿಸಿಕೊಳ್ಳಲು ಜೈಲಧಿಕಾರಿಗಳಿಗೆ ಲಂಚ ನೀಡುತ್ತಾರೆ. ಅದಕ್ಕಾಗಿ ಲಾಬಿಯೂ ನಡೆಯುತ್ತದೆ. ರೌಡಿಶೀಟರ್ ಗುಬ್ಬಚ್ಚಿ ಸೀನ ಜೈಲಿನಲ್ಲೇ ಜನ್ಮದಿನ ಆಚರಿಸಿಕೊಂಡ. ಆ ಕೇಕ್ ಮೇಲೆ ಹೆಸರು ಬರೆಸಿಕೊಂಡಿದ್ದ. ಅಂತಹ ಕೇಕ್ ಜೈಲಿನೊಳಗೆ ಹೇಗೆ ಬಂತು ಎಂದು ತಿಳಿದಿಲ್ಲ. ಭಯೋತ್ಪಾದಕ ಶಕೀಲ್ ಮನ್ನಾ ಕೈಯಲ್ಲಿ ಫೋನ್ ಇರುವ ವಿಡಿಯೋ ಹೊರಗೆ ಬಂದಿದೆ. ಇದಕ್ಕೂ ಮುನ್ನ ನಟ ದರ್ಶನ್ ಕೈಯಲ್ಲಿ ಸಿಗರೇಟ್ ಇರುವ ಫೋಟೋ ಬಂದಿತ್ತು. ಪೊಲೀಸ್…
Updated By: Priyalachhi ಬೆಳಗಾವಿ: 2025ರ ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ ಸೇರಿದಂತೆ 3 ವಿಧೇಯಕಗಳು ವಿಧಾನಸಭೆಯಲ್ಲಿ ಮಂಡನೆಯಾದವು. ಅಲ್ಲದೆ, ಐದು ಪ್ರಮುಖ ವಿಧೇಯಕಗಳು ಅಂಗೀಕೃತಗೊಂಡವು. ಪರಿಶಿಷ್ಟ ಜಾತಿಗೆ ಲಭ್ಯವಿರುವ ಶೇ.17ರಷ್ಟು ಮೀಸಲಾತಿಯ ಪೈಕಿ 18 ಉಪಜಾತಿಗಳಿರುವ ಎಡಗೈ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಹಾಗೂ 20 ಉಪವಜಾತಿಗಳಿರುವ ಬಲಗೈ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಮತ್ತು 63 ಉಪಜಾತಿಗಳಿರುವ ಇತರ ಸಮುದಾಯಕ್ಕೆ ಶೇ.5ರಷ್ಟು ಒಳ ಮೀಸಲಾತಿ ವರ್ಗೀಕರಣ ಮಾಡುವ 2025ರ ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ವಿಧೇಯಕ ಮೂಲಕ ನೇಮಕಾತಿ ಮತ್ತು ಮುಂಬಡ್ತಿಗೆ ಅವಕಾಶ ಕಲ್ಪಿಸಲಿದೆ. ಉಳಿದಂತೆ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ (ತಿದ್ದುಪಡಿ) ವಿಧೇಯಕ, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಗಳು ವಿಧಾನಸಭೆಯಲ್ಲಿ ಮಂಡನೆಯಾದವು. ಐದು ಮಸೂದೆಗಳು ಅಂಗೀಕಾರ: ವಿಧಾನಸಭೆಯಲ್ಲಿ ಬುಧವಾರ ಐದು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಯಿತು. ಅದರಲ್ಲಿ ಪ್ರಮುಖವಾಗಿ ವಿಷಪೂರಿತ ಔಷಧ, ಡಿಕಂಪೋಸ್, ಟಾಕ್ಸಿಕ್ ಔಷಧಗಳ ಮಾರಾಟ ಮಾಡಿದರೆ ಜಾಮೀನು…
Updated By: Priyalachhi ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಸಿಎಂ ಸಿದ್ದರಾಮಯ್ಯನವರಿಗೆ ನಿನ್ನೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಬೆಳಗಾವಿ ಸುವರ್ಣ ಸೌಧದ ಹೊರಗೆ ಗಾಂಧಿ ಪ್ರತಿಮೆ ಮುಂದೆ ನಿನ್ನೆ ಕಾಂಗ್ರೆಸ್ ಏರ್ಪಡಿಸಿದ್ದ ಕೇಂದ್ರಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡು ನಂತರ ಸರ್ಕ್ಯೂಟ್ ಹೌಸ್ಗೆ ತೆರಳಿದರು. ಮಧ್ಯಾಹ್ನದಿಂದ ಕೊಠಡಿ ಬಿಟ್ಟು ಹೊರ ಬರದಿದ್ದಾಗ ಗೊತ್ತಾಗಿದ್ದು ಅವರಿಗೆ ಅನಾರೋಗ್ಯ ಎಂಬ ವಿಚಾರ. ಮೊನ್ನೆ ಮಂಗಳವಾರ ರಾತ್ರಿ ಊಟ ಮಾಡಿದ ನಂತರ ಫುಡ್ಪಾಯಿಸನ್ ಆಗಿ ಹೊಟ್ಟೆ ನೋವು ಕೂಡ ಆರಂಭವಾಗಿತ್ತಂತೆ. ಇದರಿಂದ ರಾತ್ರಿ ಸರಿಯಾಗಿ ನಿದ್ದೆ ಕೂಡ ಆಗಿರಲಿಲ್ಲ. ಬೆಳಗ್ಗೆಯಾದರೂ ಆರೋಗ್ಯ ಸರಿಯಾಗಿರಲಿಲ್ಲ. ಅದೇ ಸ್ಥಿತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಿಸಿಲಿನಲ್ಲಿ ಕುಳಿತರು. ಇದಾದ ಸ್ವಲ್ಪ ಹೊತ್ತಿಗೆ ಸುಸ್ತಾಗಿ ಸಿಎಂ ನೇರವಾಗಿ ಸರ್ಕ್ಯೂಟ್ ಹೌಸ್ಗೆ ತೆರಳಿದರು.
Updated By: Priyalachhi ಪಂಚಾಂಗ: ದಿನಾಂಕ : 18-12-2025 ವಾರ : ಗುರುವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಕೃಷ್ಣ ತಿಥಿ : ಚತುರ್ದಶಿ ನಕ್ಷತ್ರ : ಅನುರಾಧ ಸೂರ್ಯೋದಯ : ಮುಂಜಾನೆ 06:34 ಗಂಟೆಗೆ ಅಮೃತ ಕಾಲ : ಬೆಳಗ್ಗೆ 09:24 ರಿಂದ 10:49ರವರೆಗೆ ದುರ್ಮುಹೂರ್ತ : ಬೆಳಗ್ಗೆ 10:34ರಿಂದ 11:22 & ಮಧ್ಯಾಹ್ನ 03:22 ರಿಂದ 04:10ರವರೆಗೆ ರಾಹುಕಾಲ : ಬೆಳಗ್ಗೆ 01:39 ರಿಂದ 03:04ರವರೆಗೆ ಸೂರ್ಯಾಸ್ತ : ಸಂಜೆ 05:54 ಗಂಟೆಗೆ ರಾಶಿ ಭವಿಷ್ಯ: ಮೇಷ : ನೀವು ಹಾರುವ ಮುನ್ನ ನೋಡುವುದು ಉತ್ತಮ. ಒಂದು ಅವಸರದ ನಿರ್ಧಾರದಿಂದ ದೀರ್ಘಾವಧಿಯಲ್ಲಿ ನೀವು ಮಾಡಿರುವ ಸಾಕಷ್ಟು ಕೆಲಸವನ್ನು ಏನೂ ಇಲ್ಲದಂತೆ ಮಾಡಬಹುದು. ಆತಂಕದ ಬೆಳಗಿನ ನಂತರ ನೀವು ಸಂಜೆ ಮಕ್ಕಳೊಂದಿಗೆ ಕಳೆಯಲು ಅವರಿಗೆ ಹೋಮ್ ವರ್ಕ್ ಅಥವಾ ಪ್ರಾಜೆಕ್ಟ್ ಮಾಡಲು ನೆರವಾಗುತ್ತೀರಿ. ವೃಷಭ : ಇಂದು, ನೀವು ಕೆರಳಿಸುವ ಮತ್ತು ನಿಮ್ಮನ್ನು…
Updated By: Priyalachhi ಬೆಳಗಾವಿ: ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಮ್ಮ ಹೆಸರಿಗೆ ಸ್ಮಶಾನ ಜಮೀನು ಬರೆಸಿಕೊಂಡಿದ್ದು, ಅವರು ರಾಜೀನಾಮೆ ನೀಡುವಂತೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳೇ ಮುಡಾ ಹಗರಣದಲ್ಲಿ 14 ಸೈಟು ಪಡೆದು ವಾಪಸ್ ಕೊಟ್ಟರು. ಪ್ರಿಯಾಂಕ್ ಖರ್ಗೆ ಐದು ಎಕರೆ ಜಾಗ ಪಡೆದು ವಾಪಸ್ ನೀಡಿದರು. ಇವೆರಡೂ ಪ್ರಕರಣಗಳೇ ಅಲ್ಲ, ಕದ್ದ ಮಾಲು ವಾಪಸ್ ಕೊಟ್ಟರೆ ಅದು ಕಳ್ಳತನವೇ ಅಲ್ಲ ಎಂಬಂತೆ ಪ್ರದರ್ಶನ ಮಾಡಿದರು. ಈಗ ಕೋಲಾರ ಜಿಲ್ಲೆಯ ಗರುಡನಪಾಳ್ಯ ಗ್ರಾಮದಲ್ಲಿ ಸರ್ವೆ ನಂ.47ರಲ್ಲಿನ 1 ಎಕರೆ ಜಾಗ, ಗರುಡನಪಾಳ್ಯ, ನರಸಾಪುರ ಹೋಬಳಿಯ ಸರ್ವೆ 46ರಲ್ಲಿನ 20.16 ಎಕರೆ ಜಾಗ ಸೇರಿ ಒಟ್ಟು 21.16 ಎಕರೆಯ ಕೋಟ್ಯಂತರ ಮೌಲ್ಯದ ಸ್ಮಶಾನದ ಜಮೀನನ್ನು ಸಚಿವ ಕೃಷ್ಣ ಬೈರೇಗೌಡ ಕಬಳಿಸಿದ್ದಾರೆ. ಸ್ಮಶಾನವನ್ನು ಯಾರೂ ಕೂಡ ತಮ್ಮ ಹೆಸರಿಗೆ ಮಾಡಿಕೊಳ್ಳಲು ಆಗಲ್ಲ. ಆದರೆ ಅಕ್ರಮ ಎಸಗಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ದೂರಿದರು. ದಾಖಲೆ ಪ್ರಕಾರ,…
Updated By: Priyalachhi ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಹೋದರ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಜಿಐಎಂಎಸ್) ಪ್ರಾಧ್ಯಾಪಕ ಡಾ.ಕೇಶವ ಅಬ್ಬಯ್ಯ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಕಿಮ್ಸ್) ದಂತ ಚಿಕಿತ್ಸಾ ವಿಭಾಗಕ್ಕೆ ವರ್ಗಾವಣೆ ಮಾಡಿರುವ ಕ್ರಮಕ್ಕೆ ಹೈಕೋರ್ಟ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕ್ರಿಯೆ ಸಂಪೂರ್ಣ ನಿಯಮಗಳ ಉಲ್ಲಂಘನೆಯಾಗಿದೆ ಎಂದು ತಿಳಿಸಿ, ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ವರ್ಗಾವಣೆ ಪ್ರಶ್ನಿಸಿ ಕಿಮ್ಸ್ ಪ್ರಾಧ್ಯಾಪಕ ಡಾ.ಸುನೀಲ್ ಜಿ.ಪಾಟೀಲ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿತು. ಶಾಸನಬದ್ಧ ಮಾರ್ಗಸೂಚಿಗಳ ಉಲ್ಲಂಘನೆ: ಡಾ.ಕೇಶವ ಅಬ್ಬಯ್ಯ ಅವರನ್ನು ಕಾಯಂ ಆಗಿ ಕಿಮ್ಸ್ನಲ್ಲಿ ನಿಯೋಜಿಸುವುದು ಮತ್ತು ಅರ್ಜಿದಾರರನ್ನು ಅವರ ಅಧೀನದಲ್ಲಿ ನಿಯೋಜಿಸುವುದು ಶಾಸನಬದ್ಧ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ, ಮತ್ತು ರಾಜಕೀಯ ಪ್ರಭಾವದಿಂದ ಅಳಿಸಲಾಗದಷ್ಟು…
Subscribe to Updates
Get the latest creative news from FooBar about art, design and business.