Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ಅ ವರು ಮುಂಬರುವ ನೀಟ್-ಯುಜಿ ಮರು-ಪರೀಕ್ಷೆಯ  ಹಿನ್ನೆಲೆಯಲ್ಲಿ ಕೇಂದ್ರ ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ. ಪರೀಕ್ಷೆಯನ್ನು ಸುರಕ್ಷಿತ, ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ನಿಗಾ ಮತ್ತು ದೋಷರಹಿತ ಭದ್ರತಾ ವ್ಯವಸ್ಥೆಗಳನ್ನು ಮಾಡುವಂತೆ ಅವರು ಒತ್ತಿಹೇಳಿದ್ದಾರೆ. ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಮಹಾನಿರ್ದೇಶಕರು ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ಎದುರಾಗಬಹುದಾದ ಯಾವುದೇ ರೀತಿಯ ಲೋಪದೋಷಗಳನ್ನು ಮುಂಚಿತವಾಗಿಯೇ ಗುರುತಿಸಲು ಮತ್ತು ಸಮಯಕ್ಕೆ ಸರಿಯಾಗಿ ತಡೆಗಟ್ಟುವ ಹಾಗೂ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆಗಳನ್ನು ವಿವರವಾಗಿ ಪರಿಶೀಲಿಸಲಾಯಿತು. ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳೊಂದಿಗೆ ಸಭೆ ಇದೇ ಸಂದರ್ಭದಲ್ಲಿ ಪ್ರಮುಖ ಸಾಮಾಜಿಕ ಮಾಧ್ಯಮಗಳಾದ ಮೆಟಾ , ಗೂಗಲ್ ಮತ್ತು ಟೆಲಿಗ್ರಾಮ್  ಪ್ರತಿನಿಧಿಗಳೊಂದಿಗೆ ಮತ್ತೊಂದು ಪ್ರತ್ಯೇಕ ಸಭೆ ನಡೆಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ವಿಶೇಷವಾಗಿ ಟೆಲಿಗ್ರಾಮ್ ಚಾನೆಲ್‌ಗಳು ಮತ್ತು ಅನಾಮಧೇಯ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿ ನಡುವೆ ಐಕ್ಯತೆಯ ಪ್ರದರ್ಶನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತುಮಕೂರಿನಲ್ಲಿ ನಡೆದ ‘ಸಾಧನಾ ಸಮರ್ಪಣಾ ಸಮಾವೇಶ’ದಲ್ಲಿ ಒಂದೇ ವೇದಿಕೆ ಹಂಚಿಕೊಂಡರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನೆಯನ್ನು ಆಚರಿಸಲು ಈ ಸಮಾವೇಶ ಆಯೋಜಿಸಲಾಗಿತ್ತು. ಅಗತ್ಯ ವಸ್ತುಗಳ, ವಿಶೇಷವಾಗಿ ಇಂಧನದ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿದ್ದಾರೆ ಎಂದು ಆರೋಪಿಸಿದ ಇಬ್ಬರು ನಾಯಕರು, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ರಕ್ಷಾಕವಚದಂತೆ ಕೆಲಸ ಮಾಡಿರುವುದರಿಂದ 2028ರಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಯಾವುದೇ ಕಾಂಗ್ರೆಸ್ ರಾಜ್ಯ ಸರ್ಕಾರ ಸತತ ಎರಡನೇ ಬಾರಿ ಜನರಿಂದ ಮರು ಆಯ್ಕೆಯಾಗಿಲ್ಲ ಎಂಬ ಪ್ರಧಾನಿ ಮೋದಿಯವರ ಇತ್ತೀಚಿನ ಹೇಳಿಕೆಗೆ ಪ್ರತಿಯಾಗಿ ಕರ್ನಾಟಕದ ಈ ನಾಯಕರ ಹೇಳಿಕೆಗಳು ಬಂದಿವೆ. ರಾಜ್ಯ ಸರ್ಕಾರ ಇಂದು ಮೇ 20 ಬುಧವಾರಕ್ಕೆ ಮೂರು ವರ್ಷ ಪೂರೈಸಲಿದೆ. ಆದರೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ “ಭಯದ ವಾತಾವರಣ” ಸೃಷ್ಟಿಸಿದ ಟಿಎಂಸಿಯ ವರ್ಷಗಳ “ದುರಾಡಳಿತ”, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತು ಅಮಿತ್ ಶಾ ಹಾಗೂ ಆರ್‌ಎಸ್‌ಎಸ್‌ನ ಸಂಘಟನಾ ಸಾಮರ್ಥ್ಯಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವು ಎಂದು ಭಾರತದ ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಅವರು ಹೇಳಿದ್ದಾರೆ. ಆಕ್ಸಿಸ್ ಮೈ ಇಂಡಿಯಾವನ್ನು ಮುನ್ನಡೆಸುತ್ತಿರುವ ಗುಪ್ತಾ ಅವರು ಬುಧವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, 15 ವರ್ಷಗಳ ಅಧಿಕಾರದ ನಂತರ ಮಮತಾ ಬ್ಯಾನರ್ಜಿಯವರ ಟಿಎಂಸಿಯನ್ನು ಪದಚ್ಯುತಗೊಳಿಸುವಲ್ಲಿ ಹಿಂದೂ ಮತಗಳ ಕ್ರೋಢೀಕರಣವು ಪ್ರಮುಖ ಪಾತ್ರ ವಹಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಬಡ ಹಳ್ಳಿಯಿಂದ ಶ್ರೀಮಂತ ನಗರದವರೆಗಿನ ಭಾರತೀಯ ಮತದಾರರನ್ನು ಅವರು ಪ್ರಬುದ್ಧ ಮತ್ತು ಬುದ್ಧಿವಂತ ಮತದಾರರು ಎಂದು ಗುಪ್ತಾ ಶ್ಲಾಘಿಸಿದ್ದಾರೆ. ಮತದಾರರು ಚುನಾವಣಾ ಭರವಸೆಗಳು, ಉಚಿತ ಕೊಡುಗೆಗಳು ಅಥವಾ ಧರ್ಮದಿಂದ ಹೆಚ್ಚಾಗಿ ಪ್ರಭಾವಿತರಾಗಿಲ್ಲ ಎಂದು ಹೇಳಿದ್ದು, ಧಾರ್ಮಿಕ ಧ್ರುವೀಕರಣಕ್ಕಿಂತ ಉತ್ತಮ ಆಡಳಿತವು ಬಿಜೆಪಿ ತನ್ನ ಪ್ರಾಬಲ್ಯವನ್ನು ಸ್ಥಾಪಿಸಲು ಸಹಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. “ಹಿಂದೂ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳ ಅಂಕಿಅಂಶಗಳನ್ನು ರಾಜ್ಯ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೂರು ವರ್ಷಗಳ ಆಡಳಿತೋತ್ಸವವನ್ನು ಆಚರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ರೈತರ ಕಲ್ಯಾಣದ ಬಗ್ಗೆ ಯಾವುದೇ ಆಸಕ್ತಿ ಇರುವಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ರೈತರ ಜೀವಗಳ ಮೇಲೆ ಸಮಾಧಿ ಕಟ್ಟಿದೆ. ಈಗ ತುಮಕೂರಿನಲ್ಲಿ ಸಂಭ್ರಮಾಚರಣೆ ಮಾಡಿದೆ. ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿದಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಹಬ್ಬ ಮಾಡುತ್ತಿದೆ. ಈ ಗ್ಯಾರಂಟಿಗಳು ನಿಜವಾಗಿಯೂ ಪರಿಣಾಮಕಾರಿ ಆಗಿದ್ದರೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುವುದೇಕೆ ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪ್ರಶ್ನಿಸಿದರು. ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (NCRB) ಅಂಕಿಅಂಶಗಳನ್ನು ಉಲ್ಲೇಖಿಸಿದ ಜೆಡಿಎಸ್ ನಾಯಕರು, ಕರ್ನಾಟಕದಲ್ಲಿ 2023ರಲ್ಲಿ 2,423 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 2024ರಲ್ಲಿ ಈ ಸಂಖ್ಯೆ 2,971ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಇದೀಗ ಕಲ್ಪತರು ನಾಡು ತುಮಕೂರು ಜಿಲ್ಲೆಯ ಹೆಸರನ್ನು ‘ಬೆಂಗಳೂರು ಉತ್ತರ’ ಎಂದು ಬದಲಾಯಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ತುಮಕೂರನ್ನು ‘ಬೆಂಗಳೂರು ಉತ್ತರ’ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ. ಆದರೆ ಸಚಿವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಣೆ ಮಾಡಲಾಗಿದೆ. ಅದೇ ರೀತಿ ತುಮಕೂರನ್ನು ಬೆಂಗಳೂರು ಉತ್ತರ ಎಂದು ಮಾಡಬೇಕು. ವಿದೇಶದಲ್ಲಿರುವವರಿಗೆ, ಉದಾಹರಣೆಗೆ ನ್ಯೂಯಾರ್ಕ್‌ನಲ್ಲಿರುವವರಿಗೆ ತುಮಕೂರು ಎಲ್ಲಿದೆ ಎಂದು ಗೊತ್ತಾಗುವುದಿಲ್ಲ, ಆದರೆ ಬೆಂಗಳೂರು ಉತ್ತರ ಎಂದರೆ ಸುಲಭವಾಗಿ ಅರ್ಥವಾಗುತ್ತದೆ. ಬ್ರ್ಯಾಂಡ್ ಬೆಂಗಳೂರು ವಿಸ್ತರಣೆಯಡಿ ಈ ಹೆಜ್ಜೆ ಇಡುವುದು ಅಗತ್ಯವಿದೆ ಎಂದು ಹೇಳಿದರು. ತುಮಕೂರು ಬೆಂಗಳೂರಿಗೆ ತುಂಬ ಹತ್ತಿರದಲ್ಲಿದೆ.…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ ಇಂದು ಬುಧವಾರ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೊಯ್ಮಲ್ಯ ಬಗ್ಚಿ ಮತ್ತು ವಿಪುಲ್ ಎಂ ಪಂಚೋಲಿ ಅವರಿದ್ದ ಪೀಠವು, ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಎ ಎಂ ಸಿಂಗ್ವಿ ಅವರ ವಾದ ಆಲಿಸಿದ ಬಳಿಕ, ಜೂನ್ 30ರ ಹಿಂದಿನ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿತು. ಜನಗಣತಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR), ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಂತಹ ಕಾರ್ಯಗಳಲ್ಲಿ ರಾಜ್ಯದ ಸಿಬ್ಬಂದಿ ನಿರತರಾಗಿರುವ ಕಾರಣ, ಇನ್ನೂ ಮೂರು ತಿಂಗಳ ಹೆಚ್ಚುವರಿ ಸಮಯ ನೀಡುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಎರಡೂ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ, ಜೂನ್ 30ರೊಳಗೆ ಚುನಾವಣೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಮನಗರ ಬಳಿಯ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆಗೆ ಸುಮಾರು ಶೇ. 80 ರಷ್ಟು ರೈತರು ಒಪ್ಪಿಗೆ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಪರಿಹಾರ ವಿತರಣೆ ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಘೋಷಿಸಿದ್ದಾರೆ. ಯೋಜನೆಗೆ ವಿರೋಧ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಟೌನ್‌ಶಿಪ್ ಬಗ್ಗೆ ಪ್ರಸ್ತಾಪಿಸಿದ್ದರು ಎಂದು ತಿರುಗೇಟು ನೀಡಿದರು. ಜೆಡಿಎಸ್ ನಾಯಕರೊಂದಿಗೆ ಅವರು ಆಯ್ಕೆ ಮಾಡಿದ ಯಾವುದೇ ಸ್ಥಳ ಮತ್ತು ಸಮಯದಲ್ಲಿ ಸಾರ್ವಜನಿಕ ಚರ್ಚೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಸವಾಲು ಹಾಕಿದರು. ಬಿಡದಿ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ಇಂದು ರೈತರೊಂದಿಗೆ ಮಹತ್ವದ ಸಭೆ ನಡೆಸಿದ ಬಳಿ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ ಡಿಸಿಎಂ, “ನಮ್ಮ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ರೈತರು ಬಂದಿದ್ದರು. ಅವರಿಗೆ ಪರಿಹಾರದ ಕುರಿತು ನಾನು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೀದರ್: ಬೀದರ್–ಬೆಂಗಳೂರು ನಡುವೆ ಸ್ಟಾರ್ ಏರ್ ಸಂಸ್ಥೆಯು ಜೂನ್ 1ರಿಂದ ವಿಮಾನ ಸೇವೆ ಆರಂಭಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ವಿಮಾನ ವೇಳಾಪಟ್ಟಿ ಪ್ರಕಾರ, ಬೆಂಗಳೂರಿನಿಂದ ಬೆಳಿಗ್ಗೆ 6.30ಕ್ಕೆ ಹೊರಡುವ ವಿಮಾನ 7.45ಕ್ಕೆ ಬೀದರ್ ತಲುಪಲಿದೆ. ಅದೇ ರೀತಿ ಬೀದರ್‌ನಿಂದ ಬೆಳಿಗ್ಗೆ 8.15ಕ್ಕೆ ಹೊರಡುವ ವಿಮಾನ 9.30ಕ್ಕೆ ಬೆಂಗಳೂರು ತಲುಪಲಿದೆ. ಈ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳು, ಕೆಕೆಆರ್‌ಡಿಬಿ, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಶ್ರೀಲೀಲಾ ಅವರು ಕ್ರಿಕೆಟಿಗ ತಿಲಕ್ ವರ್ಮಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಅದರ ಬೆನ್ನಲೇ ಅವರ ನಟಿಯ ತಾಯಿ ಡಾ.ಸ್ವರ್ಣ ಲತಾ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಶ್ರೀಲೀಲಾ ಹಾಗೂ ತಿಲಕ್ ಅವರು ಕೆಲವು ದಿನಗಳ ಹಿಂದೆ ತಿರುಪತಿ ದೇವಾಲಯದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಫೋಟೊಗಳು ಹರಿದಾಡಿದ್ದವು. ಅದೇ ಬೆನ್ನಲೇ ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್, ತಿಲಕ್ ಅವರು ಸ್ಟಾರ್ ನಟಿ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ತಮಾಷೆ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಲ್ಲಿ ಚರ್ಚೆಗೆ ಕಾರಣವಾಯಿತು. ಈ ಕುರಿತು ಮಾತನಾಡಿರುವ ಸ್ವರ್ಣ ಲತಾ, ‘ನನ್ನ ಮಗಳು ಶ್ರೀಲೀಲಾ ಮುಂಬರುವ ಪರೀಕ್ಷೆಯ ತಯಾರಿ ಹಾಗೂ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಶ್ರೀಲೀಲಾ ಹಾಗೂ ತಿಲಕ್ ವರ್ಮಾ ಕಳೆದ ಒಂದು ವರ್ಷದಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಸುಳ್ಳು. ಇದು ಜನರು ಸೃಷ್ಟಿಸಿರುವ ಕಥೆ. ಸತ್ಯ ತಿಳಿಯದೇ ಯಾರ ಬಗ್ಗೆಯೂ ಸುಳ್ಳು ಹಬ್ಬಿಸಬಾರದು ಎಂದಿದ್ದಾರೆ. ಕೆಲ ದಿನಗಳ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಉಡುಪಿ: ಹಿಂದೂ ವೃದ್ಧ ಮಹಿಳೆಯೊಬ್ಬರಿಗೆ ಮನೆ ಕಟ್ಟಲು ನೆರವು ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮುಸ್ಲಿಂ ಮಹಿಳೆಯರು ಮನವಿ ಮಾಡಿದ್ದರು. ಇದನ್ನು ಮುಂದಿಟ್ಟು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿಗರಿಗೆ ಸೌಹಾರ್ದತೆಯ ಪಾಠ ಮಾಡಿದ್ದರು. ಆದರೆ ಇದೀಗ ಪ್ರಸಂಗ ಬದಲಾಗಿದೆ. ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬಂದ ಮಹಿಳೆ ಗಿರಿಜಾ ಶೆಟ್ಟಿಗಾರ್ ಅವರನ್ನು ಇಸ್ಲಾಂಗೆ ಮತಾಂತರಗೊಂಡಿದ್ದ ಪುತ್ರಿಯೇ ಕರೆತಂದಿದ್ದು ಎಂಬುದಾಗಿ ತಿಳಿದುಬಂದಿದೆ. ಹಿಂದೂ ಮಹಿಳೆಯ ನೆರೆಮನೆಯವರು ಎಂದು ಸುಳ್ಳು ಹೇಳಿ ಉಸ್ತುವಾರಿ ಸಚಿವರನ್ನೇ ಬುರ್ಖಾಧಾರಿ ಮಹಿಳೆ ಯಾಮಾರಿಸಿದ್ದಾರೆ ಎಂದು ಆರೋಪಿಸಲಾಗಿದ್ದು ಇದೀಗ ಜಿಲ್ಲಾ ಬಿಜೆಪಿ ಮುಖಂಡರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಅವರು, ಸ್ವಂತ ತಾಯಿಯನ್ನೇ ನೆರೆಮನೆಯ ಮಹಿಳೆ ಎಂದು ಸಮಾಜಕ್ಕೆ ಸುಳ್ಳು ಹೇಳಿದ ಬುರ್ಖಾಧಾರಿ ಮಹಿಳೆಯರಿಂದ ಬಿಜೆಪಿಗರು ಸೌಹಾರ್ದತೆ ಕಲಿಯುವ ಅಗತ್ಯವಿಲ್ಲ. ಇನ್ನು ಅವಸರ ಬುದ್ಧಿಯ ಲಕ್ಷ್ಮಿ ಹೆಬ್ಬಾಳ್ಳರ್ ಅವರು ಹಿಂದೆ ಮುಂದೆ ಯೋಚಿಸದೇ…

Read More