Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಳಗಾವಿ: ರೈತರು ಪೂರೈಸುವ ಕಬ್ಬು ತೂಕದಲ್ಲಿ ಮೋಸ ಮಾಡಿದ್ದು, ಸಾಬೀತಾದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ವಿಧಾನಸಭೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಕುರಿತು ಸಚಿವರು ಮಾತನಾಡಿದರು. ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಅಲ್ಲಿ ಡಿಜಿಟಲ್ ವೇ ಬ್ರಿಡ್ಜ್ಗಳಿವೆ. ಸರ್ಕಾರದಿಂದಲೇ ಈ ವರ್ಷ 12 ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವ ಯಂತ್ರದಲ್ಲಿ ಮೋಸ ಆಗುತ್ತಿರುವ ಬಗ್ಗೆ ಯಾವುದೇ ರೈತರು ಇದುವರೆಗೂ ದೂರು ಸಲ್ಲಿಸಿಲ್ಲ ಎಂದರು. ಬಹುಮಾನ 5 ಲಕ್ಷ ರೂಗೆ ಏರಿಕೆ: ರೈತರು ದೂರು…
Updated By: Priyalachhi ಮೈಸೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಶ್ರೀ ಶಿವರಾತ್ರಿ ಶಿವರಾತ್ರೀಶ್ವರ ಸ್ವಾಮೀಜಿಯ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಂಗಳವಾರ ಸ್ವಾಗತಿಸಲಾಯಿತು. ರಾಜ್ಯಕ್ಕೆ ಬಂದ ರಾಷ್ಟ್ರಪತಿಗಳನ್ನು ಸ್ವಾಗತಿಸಿದ ರಾಜ್ಯಪಾಲರು; ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್ ಅವರು ಹೂ ಗುಚ್ಛ ನೀಡುವ ಮೂಲಕ ರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮತ್ತಿತರರು ಇದ್ದರು. ಮೈಸೂರಿನಲ್ಲಿ ರಾಷ್ಟ್ರಪತಿ ಇಂದು ವಾಸ್ತವ್ಯ : ಮಳವಳ್ಳಿಯಲ್ಲಿ ಕಾರ್ಯಕ್ರಮ ಮುಗಿಸಿದ ಬಳಿಕ ಸಂಜೆ 5.20ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ, ಎಂಜಿ ರಸ್ತೆಯಲ್ಲಿರುವ ಪ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ. 17ರಂದು ಬೆಳಗ್ಗೆ 9.30ಕ್ಕೆ ಅಲ್ಲಿಯೇ ಉಪಹಾರ ಮುಗಿಸಿಕೊಂಡು…
Updated By: Priyalachhi ಬೆಳಗಾವಿ: ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರ (ತಿದ್ದುಪಡಿ) ಬಿಲ್, ಬೆಂಗಳೂರು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ತಿದ್ದುಪಡಿ) ಮಸೂದೆ ಹಾಗೂ ಬಾಂಬೆ ಸಾರ್ವಜನಿಕ ನ್ಯಾಸ ( ಕರ್ನಾಟಕ ತಿದ್ದುಪಡಿ) ವಿಧೇಯಕಗಳನ್ನು ಮಂಡನೆ ಮಾಡಲಾಯಿತು. ಹೊಸ ವಾಹನಗಳಿಗೆ ಸೆಸ್ ವಿಧಿಸುವ ತಿದ್ದುಪಡಿ ಮಸೂದೆ ಮಂಡನೆ: ವಾಹನ ನೋಂದಣಿ ವೇಳೆ ಸಂಗ್ರಹಿಸುವ ಒಂದು ಬಾರಿಯ ಸೆಸ್ನ ಗರಿಷ್ಠ ಮಿತಿ ಕೈಬಿಡುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರ (ತಿದ್ದುಪಡಿ) ಬಿಲ್ ಅನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಇದರ ಪ್ರಕಾರ ವಾಹನಗಳ ಮೌಲ್ಯಕ್ಕೆ ಅನುಗುಣವಾಗಿ ಸೆಸ್ ವಿಧಿಸಲು ಪ್ರಸ್ತಾಪಿಸಲಾಗಿದೆ. ಕನಿಷ್ಠ 1,000 ರೂ.ನಿಂದ ಆರಂಭವಾಗಿ ವಾಹನಗಳ ಮೌಲ್ಯಕ್ಕೆ ಅನುಗುಣವಾಗಿ ಸ್ಲ್ಯಾಬ್ ವೈಸ್ ಸೆಸ್ ವಿಧಿಸಲು ಪ್ರಸ್ತಾಪಿಸಲಾಗಿದೆ. ಈ ಹಿಂದಿನ ಕಾಯ್ದೆಯಲ್ಲಿ ವಾಹನ ನೋಂದಣಿ ಸಮಯದಲ್ಲಿ ರಾಜ್ಯ ಸರ್ಕಾರ ವಿಧಿಸುವ ‘1,000 ರೂ.ಗೆ ಹೆಚ್ಚಿರದಂಥ’ ಉಪಕರ ಎಂಬ ಪದವನ್ನು ಕೈ…
Updated By: Priyalachhi ವಾಷಿಂಗ್ಟನ್: ಕಳೆದ ವರ್ಷ ಪ್ರಸಾರವಾದ ಸುದ್ದಿ ಸಾಕ್ಷ್ಯಚಿತ್ರವೊಂದರಲ್ಲಿ ತಮ್ಮ ಭಾಷಣವನ್ನು ಎಡಿಟ್ ಮಾಡಿ ಪ್ರಸಾರ ಮಾಡಿದ್ದಕ್ಕಾಗಿ ಬಿಬಿಸಿ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುಡುಗಿದ್ದು, 10 ಬಿಲಿಯನ್ ಡಾಲರ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 33 ಪುಟಗಳ ಮೊಕದ್ದಮೆಯಲ್ಲಿ ಟ್ರಂಪ್ ಅವರು, ಬಿಬಿಸಿ ಸುದ್ದಿ ವಿರುದ್ಧ ಕಿಡಿಕಾರಿದ್ದು, “ಸುಳ್ಳು, ಮಾನನಷ್ಟಕರ, ಮೋಸಗೊಳಿಸುವ, ಅವಹೇಳನಕಾರಿ, ಪ್ರಚೋದನಕಾರಿ ಮತ್ತು ದುರುದ್ದೇಶಪೂರಿತ ಚಿತ್ರಣವನ್ನು” ಪ್ರಸಾರ ಮಾಡಿದೆ ಎಂದು ಆರೋಪಿಸಿದ್ದಾರೆ. ಇದನ್ನು “2024 ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಮತ್ತು ಪ್ರಭಾವ ಬೀರುವ ಪ್ರಯತ್ನ ಎಂದು ಆರೋಪಿಸಿದ್ದಾರೆ. ಉದ್ದೇಶಪೂರ್ವಕವಾಗಿ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವ ಸಲುವಾಗಿ ಭಾಷಣವನ್ನು ಎಡಿಟ್ ಮಾಡಿ ಬಿಬಿಸಿ ಪ್ರಸಾರ ಮಾಡಿದೆ ಎಂದು ಹೇಳಿದ್ದಾರೆ. ಆರೋಪ ಹಿನ್ನೆಲೆಯಲ್ಲಿ ಸಂಸ್ಥೆಯ ಉನ್ನತ ಅಧಿಕಾರಿಗಳು ರಾಜೀನಾಮೆ ನೀಡಿದ್ದಲ್ಲದೆ, ಭಾರತೀಯ ಮೂಲದ ಬಿಬಿಸಿ ಅಧ್ಯಕ್ಷ ಸಮೀರ್ ಶಾ ಕ್ಷಮೆಯಾಚಿಸಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣವನ್ನು ಎಡಿಟ್ ಮಾಡಿ,…
Updated By: Priyalachhi ಬೆಂಗಳೂರು, ಡಿಸೆಂಬರ್ 16: ಇಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಅವರ 66ನೇ ಜನ್ಮ ದಿನ. ಇವರ ಜನ್ಮ ದಿನ ಪ್ರಯುಕ್ತ ಮಂಡ್ಯ ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಲಿದ್ದಾರೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೆಚ್. ಡಿ. ದೇವೇಗೌಡ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಕುಮಾರಸ್ವಾಮಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ HDK ಹುಟ್ಟುಬ್ಬಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಭಾರೀ ಕೈಗಾರಿಕೆಗಳಲ್ಲಿ ತಮ್ಮ ಕೆಲಸದ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತಿದ್ದೀರ. ಸಮಾಜ ಸೇವೆಯಲ್ಲಿ ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಹಾರೈಸಿದ್ದಾರೆ. ಮೋದಿಯ ಹಾರೈಕೆಗೆ ಭಾವುಕಾರ ಕುಮಾರಸ್ವಾಮಿ, ಪ್ರಧಾನಿಯವರ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ . ಅವರ ಪಿತೃವಾತ್ಸಲ್ಯಕ್ಕೆ ನಾನು…
Updated By: Priyalachhi Jio Happy New Year Plan 2026: ಹೊಸ ವರ್ಷಕ್ಕೂ ಮುನ್ನ ಜಿಯೋ ತನ್ನ ಪ್ರಿಪೇಯ್ಡ್ ಬಳಕೆದಾರರಿಗಾಗಿ ಹ್ಯಾಪಿ ನ್ಯೂ ಇಯರ್ 2026 ರೀಚಾರ್ಜ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ವರ್ಷ, ಕಂಪನಿಯು ಡೇಟಾ ಮತ್ತು ಕಾಲ್ ಮಾತ್ರವಲ್ಲದೆ AI ಮತ್ತು OTT ಮನರಂಜನೆಯ ಮೇಲೂ ಗಮನಹರಿಸಿದೆ. ಜಿಯೋ ಪ್ರಕಾರ ಈ ಹೊಸ ಯೋಜನೆಗಳು ಬಳಕೆದಾರರಿಗೆ ತಡೆರಹಿತ ಸಂಪರ್ಕ, ಮನರಂಜನೆ ಮತ್ತು AI ಅನುಭವವನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಹ್ಯಾಪಿ ನ್ಯೂ ಇಯರ್ ಪ್ಲಾನ್: ಜಿಯೋದ ಅತ್ಯಂತ ಗಮನಾರ್ಹ ಕೊಡುಗೆ ₹500 ಹ್ಯಾಪಿ ನ್ಯೂ ಇಯರ್ ಯೋಜನೆ. ಇದು 28 ದಿನಗಳ ಮಾನ್ಯತೆ ಮತ್ತು ದಿನಕ್ಕೆ 2GB ಡೇಟಾವನ್ನು ನೀಡುತ್ತದೆ. ಇದು ಅನಿಯಮಿತ 5G ಡೇಟಾ ಪ್ರವೇಶವನ್ನು ಸಹ ನೀಡುತ್ತದೆ. ಅಷ್ಟೇ ಅಲ್ಲ, ಅನ್ಲಿಮಿಟೆಡ್ ವಾಯ್ಸ ಕಾಲ್ಸ ಮತ್ತು ದಿನಕ್ಕೆ 100 SMS ಅನ್ನು ಸಹ ಒಳಗೊಂಡಿದೆ. OTT ಪ್ರಿಯರಿಗೆ ಈ ಯೋಜನೆ ಸಾಕಷ್ಟು ಶಕ್ತಿಶಾಲಿಯಾಗಿದೆ. ಜಿಯೋ Lionsgate Play, Discovery…
Updated By: Priyalachhi ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಸಚಿವ ಈಶ್ವರ್ ಖಂಡ್ರೆಯವರು ಸೋಮವಾರ ಆಗ್ರಹಿಸಿದ್ದಾರೆ. ಸದನದಲ್ಲಿ ಬೆಳೆ ವಿಮೆ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರ್ ಖಂಡ್ರೆಯವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಯೋಜನೆಯನ್ನು ಬಿಜೆಪಿ ಪ್ರಾಯೋಜಿತ ‘ಗೋಲ್ಮಾಲ್’ ಎಂದು ಕರೆದಿರುವ ಸಚಿವರು, ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎನ್ನುವುದು ಬಟಾಬಯಲಾಗಲಿದೆ ಎಂದು ಹೇಳಿದ್ದಾರೆ. ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು…
Updated By: Priyalachhi ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ, ಒಕ್ಕಲಿಗ ನಾಯಕತ್ವ ಮತ್ತು ಇತರೆ ಗಣ್ಯರು ಡಿಸೆಂಬರ್ 17 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಕರ್ನಾಟಕ ಸಂಘ ಮತ್ತು ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ದಿ ಟ್ರಸ್ಟ್ ಆಯೋಜಿಸಿರುವ ಪದ್ಮವಿಭೂಷಣ ಕುವೆಂಪು ಕುರಿತ ಕಾರ್ಯಾಗಾರದಲ್ಲಿ ಆದಿಚುನಾನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗವಹಿಸಲಿದ್ದಾರೆ. ಕೇಂದ್ರವು ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ, ಮತ್ತು ವಿ.ಸೋಮಣ್ಣ, ಬಿಜೆಪಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತೇಜಸ್ವಿ ಸೂರ್ಯ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ,…
Updated By: Priyalachhi ಸೂರ್ಯ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಬೇಕಾದರೆ ಒಂದು ತಿಂಗಳು ಬೇಕಾಗುತ್ತದೆ. ಅದರಂತೆಯೇ ಸೂರ್ಯ ಧನುರಾಶಿಯಲ್ಲಿ ಪ್ರವೇಶ ಮಾಡಿ ಮಕರ ರಾಶಿಗೆ ಪ್ರವೇಶ ಮಾಡಲು ಒಂದು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಈ ಒಂದು ತಿಂಗಳನ್ನು (ಧನು ರಾಶಿ) “ಧನುರ್ಮಾಸ” ಎಂದು ಕರೆಯುತ್ತಾರೆ. ಕೃಷ್ಣನು ಭಗವದ್ಗೀತೆಯಲ್ಲಿ ಮಾಸಗಳನ್ನು ಕುರಿತು ಹೇಳುವಾಗ ಧನುರ್ಮಾಸದ ಮಹಾತ್ಮೆಗೆ ವಿಶೇಷ ಒತ್ತು ನೀಡಿದ್ದಾನೆ ಈ ಮಾಸದಲ್ಲಿ ವಿಶೇಷವಾಗಿ ಚಳಿ ಇರುತ್ತದೆ. ಚಳಿಯ ತೀವ್ರತೆಯೆಷ್ಟು ಇರುತ್ತದೆ ಎಂದರೆ ಚಳಿಯನ್ನು ತಾಳಲಾರದೆ, ರಾತ್ರಿ ವೇಳೆ ಮನುಷ್ಯ ತನ್ನ ದೇಹವನ್ನು ಬಿಲ್ಲಿನಂತೆ ಬಾಗಿಸಿ ಮಲಗುತ್ತಾನೆ. ಮುದುರಿಕೊಳ್ಳುತ್ತಾನೆ. ಆದ್ದರಿಂದಲೇ ಈ ಮಾಸಕ್ಕೆ ಧನುರ್ಮಾಸ ಎಂದು ಕರೆಯುತ್ತಾರೆಂಬ ಪ್ರತೀತಿ ಇದೆ. ಶಾಸ್ತ್ರಗಳ ಪ್ರಕಾರ ಮಾನವರಿಗೆ ಒಂದು ವರ್ಷ – ದೇವತೆಗಳಿಗೆ ಒಂದು ದಿನ, ಧನುರ್ಮಾಸವು ದೇವತೆಗಳ ಪ್ರಭಾತ ಕಾಲ, ಅಂದರೆ ಈ ಕಾಲದಲ್ಲಿ ದೇವತೆಗಳು ಎಚ್ಚರಗೊಂಡು ಭಕ್ತರ ಪ್ರಾರ್ಥನೆಗೆ ಶೀಘ್ರ ಪ್ರತಿಕ್ರಿಯಿಸುತ್ತಾರೆ. ಧನುರ್ಮಾಸದಲ್ಲಿ ಮಾಡಿದ ಪೂಜೆ, ವ್ರತ, ದಾನ ಸೇವೆಗಳ ಫಲ…
Updated By: Priyalachhi ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 13, 2025 ರಂದು 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನ ಇದಾಗಿದೆ. ಡಿಸೆಂಬರ್ 29, 1883 ರಂದು 8.9 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಡಿಸೆಂಬರ್ 11, 2016 ರಂದು ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಮತ್ತು ಡಿಸೆಂಬರ್ 24, 2011 ರಂದು 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಡಿಸೆಂಬರ್ 16, 2013 ರಂದು ನಗರದಲ್ಲಿ ಕನಿಷ್ಠ ತಾಪಮಾನ 13.6 ಡಿಗ್ರಿ ಸೆಲ್ಸಿಯಸ್ ಮತ್ತು ಡಿಸೆಂಬರ್ 18, 2018 ರಂದು 13.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದೀಗ 8 ವರ್ಷಗಳ ಬಳಿಕ ನಗರದಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗಲಿದೆ ಎಂದು…
Subscribe to Updates
Get the latest creative news from FooBar about art, design and business.