Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 13, 2025 ರಂದು 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನ ಇದಾಗಿದೆ. ಡಿಸೆಂಬರ್ 29, 1883 ರಂದು 8.9 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಡಿಸೆಂಬರ್ 11, 2016 ರಂದು ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಮತ್ತು ಡಿಸೆಂಬರ್ 24, 2011 ರಂದು 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಡಿಸೆಂಬರ್ 16, 2013 ರಂದು ನಗರದಲ್ಲಿ ಕನಿಷ್ಠ ತಾಪಮಾನ 13.6 ಡಿಗ್ರಿ ಸೆಲ್ಸಿಯಸ್ ಮತ್ತು ಡಿಸೆಂಬರ್ 18, 2018 ರಂದು 13.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದೀಗ 8 ವರ್ಷಗಳ ಬಳಿಕ ನಗರದಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗಲಿದೆ ಎಂದು…
Updated By: Priyalachhi ಕನ್ನಡದ ಬಹುಬೇಡಿಕೆ ತಾರೆ ದರ್ಶನ್ ತೂಗುದೀಪ ಬಣ್ಣ ಹಚ್ಚಿರುವ ಈ ವರ್ಷದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಕಳೆದ ಗುರುವಾರ, ಡಿಸೆಂಬರ್ 11ರಂದು ಗ್ರ್ಯಾಂಡ್ ರಿಲೀಸ್ ಕಂಡಿದೆ. ನಿರೀಕ್ಷೆಯಂತೆ ಸಿನಿಮಾ ಉತ್ತಮ ಪ್ರದರ್ಶನ ಮುಂದುವರಿಸಿದೆ. ತೆರೆಕಂಡ ನಾಲ್ಕೇ ದಿನಗಳಲ್ಲಿ ಪ್ರಕಾಶ್ ವೀರ್ ನಿರ್ದೇಶನದ ಈ ಚಿತ್ರವು 21.45 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್ ಕೇಂದ್ರ ಕಾರಾಗೃಹ ಸೇರಿದ್ದು, ನಾಯಕ ನಟನ ಅನುಪಸ್ಥಿತಿ ಸಿನಿಮಾ ಸುತ್ತಲಿನ ಕುತೂಹಲದ ಜೊತೆಗೆ ಗದ್ದಲವನ್ನು ಹೆಚ್ಚಿಸಿತ್ತು. ನಮ್ಮ ಮೆಚ್ಚಿನ ನಟನನ್ನು ನಾವು ಗೆಲ್ಲಿಸಿಕೊಡುತ್ತೇವೆ ಎಂದು ಅಭಿಮಾನಿಗಳು ಪಣ ತೊಟ್ಟಿದ್ದರೂ, ಇದು ಎಷ್ಟರ ಮಟ್ಟಿಗೆ ಸಾಧ್ಯ ಎಂಬ ಅನುಮಾನ ಸೋಷಿಯಲ್ ಮೀಡಿಯಾಗಳಲ್ಲಿ ಎದ್ದಿತ್ತು. ಸಿನಿಮಾ ರಿಲೀಸ್ಗೂ ಮುನ್ನ ದರ್ಶನ್ ಅವರು ತಮ್ಮ ಪತ್ನಿ ವಿಜಯಲಕ್ಷ್ಮಿ ಮೂಲಕ ಅಭಿಮಾನಿಗಳಿಗೆ ಪತ್ರವೊಂದನ್ನು ಕಳುಹಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾದ ಸಂದೇಶದಲ್ಲಿ, ಯಾವುದೇ ನೆಗೆಟಿವಿಟಿಗೆ ಗಮನ ಹರಿಸದೇ ಸಿನಿಮಾಗೆ ಬೆಂಬಲ ಕೊಡಿ…
Updated By: Priyalachhi ಚಿಕ್ಕೋಡಿ: “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದರೆ ಬಹಳ ಚಲೋ. ಅದು ಮಾಡಿ ಬಿಟ್ಟರೆ ಇಡೀ ಬಣ್ಣವನ್ನು ಅತ್ಯಂತ ವಿಸ್ತಾರವಾಗಿ ಕೋರ್ಟ್ಗೆ ತಿಳಿಸುತ್ತೇನೆ” ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿ.ವೈ. ವಿಜಯೇಂದ್ರ ಅವರ ಎಚ್ಚರಿಕೆ ಮಾತಿಗೆ ಮರು ಸವಾಲು ಹಾಕಿದರು. ಶಾಸಕ ಯತ್ನಾಳ್ ಪದೇ ಪದೇ ನನ್ನ ಹಾಗೂ ನಮ್ಮ ಕುಟುಂಬ ವಿರುದ್ಧ ಮಾತನಾಡುತ್ತಿದ್ದರೆ ನಾನು ಮಾನನಷ್ಟ ಮೊಕದ್ದಮೆ ದಾಖಲು ಮಾಡೋದಕ್ಕೆ ಚಿಂತನೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ ವಿಚಾರಕ್ಕೆ ಚಿಕ್ಕೋಡಿ ಈಟಿವಿ ಭಾರತ ಪ್ರತಿನಿಧಿ ಶಿವರಾಜ್ ನೇಸರಗಿ ಜೊತೆ ಯತ್ನಾಳ್ ಮಾತನಾಡುತ್ತಾ, “ವಿಜಯೇಂದ್ರ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಿ. ಎಲ್ಲವನ್ನು ನಾನು ನ್ಯಾಯಾಲಯದಲ್ಲಿ ವಿಸ್ತಾರವಾಗಿ ವಿವರಣೆ ನೀಡುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. “ವಿಜಯೇಂದ್ರ, ಡಿ.ಕೆ. ಶಿವಕುಮಾರ್ ಸರ್ಕಾರ ರಚನೆಗೆ ಮುಂದಾಗಿದ್ದರು. ಆದರೆ ಇವತ್ತು ಮುಗಿದ ಹೊಗಿರುವ ಕತೆ.…
Updated By: Priyalachhi ಬೆಂಗಳೂರು/ನವದೆಹಲಿ: ಸೋಮವಾರದಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾತನಾಡಿದ ಅವರು, ಶನಿವಾರ ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಲಾಗಿದೆ. ಸಾಮಾನ್ಯ ವರ್ಗಕ್ಕೆ 50 ಸಾವಿರ, ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮತಗಳ್ಳತನ ಹೋರಾಟ ಮುಂದುವರಿಕೆ: ಮತಗಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತಗಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರೆಯಲಿದೆ. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು…
Updated By: Priyalachhi ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ವರದಿಯಾಗಿರುವ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಮೊನ್ನೆ ಕಂಪನಿಯೊಂದರ ಮೊಟ್ಟೆಯ ಉಪಯೋಗ ಮಾಡಬಾರದು ಅಂತ ವಿಡಿಯೋವೊಂದು ವೈರಲ್ ಆಗಿತ್ತು. ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದು, ಆ್ಯಂಟಿ ಬಯೋಟೆಕ್ ಅಂಶ ಇದೆ ಎಂಬ ಬಗ್ಗೆ ಮಾಹಿತಿ ಬಂದಿತ್ತು. ಇದರ ಕುರಿತಂತೆ ಸ್ಪಷ್ಟವಾದ ವಿಚಾರ ತಿಳಿದುಕೊಳ್ಳಲು ನಮ್ಮ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು. ಮೊಟ್ಟೆ ಸ್ಯಾಂಪಲ್ ಪಡೆಯಲಾಗಿದೆ; ಏಕೆಂದರೆ ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿ ಗೊಂದಲ ಇದ್ದರೆ, ನಾವು ತಿಳಿದುಕೊಳ್ಳಬೇಕಾಗುತ್ತದೆ. ನಮ್ಮ ಇಲಾಖೆಗೆ ಹೇಳಿದ್ದೇನೆ. ಈಗಾಗಲೇ ಕಂಪನಿಯ ಮೊಟ್ಟೆ ಸ್ಯಾಂಪಲ್ ಪಡೆಯಲಾಗಿದೆ. ಟೆಸ್ಟ್ ಮಾಡಿದ ನಂತರ ಈ ವಿಚಾರವನ್ನು ತಮ್ಮ ಮುಂದೆ ಇಡುವೆ. ಸದ್ಯಕ್ಕೆ ಇದರ ಬಗ್ಗೆ ಆತಂಕ ಪಡುವುದು ಬೇಡ ಎಂದು ತಿಳಿಸಿದರು. ಕಳೆದ ಸೆಪ್ಟೆಂಬರ್…
Updated By: Priyalachhi ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 8.03 ಕೋಟಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯಮಿ ರಾಜೇಂದ್ರ ನಾಯ್ಡು ಅವರಿಗೆ ಷೇರು ಮಾರುಕಟ್ಟೆ ಹೆಸರಿನಲ್ಲಿ ವಂಚಿಸಲಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ರಾಜೇಂದ್ರ ನಾಯ್ಡು ಅವರಿಗೆ ಕರೆ ಮಾಡಿದ್ದ ವಂಚಕರು, ಅವರು ಈ ಹಿಂದೆ ಪಡೆದಿದ್ದ ಸಾಲದ ಕುರಿತು ಮಾತನಾಡುತ್ತಾ “ನಿಮ್ಮ ಸಿಬಿಲ್ ಸ್ಕೋರ್ ಉತ್ತಮವಾಗಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಗಳಿಸಬಹುದು” ಎಂದು ನಂಬಿಸಿದ್ದರು. ಕೆಲವು ಚಾರಿಟಿ ಸೇವೆಗಳನ್ನು ನಡೆಸುತ್ತಿದ್ದ ರಾಜೇಂದ್ರ ನಾಯ್ಡು ಅವರು ಸ್ವಲ್ಪ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅದರಿಂದ ಬರುವ ಹಣವನ್ನು ಚಾರಿಟಿಗೆ ಉಪಯೋಗಿಸಬಹುದು ಎಂದು ಭಾವಿಸಿ ಹೂಡಿಕೆ ಮಾಡಲು ಇಚ್ಛಿಸಿದ್ದರು. ಬಳಿಕ ರಾಜೇಂದ್ರ ನಾಯ್ಡು ಅವರ ಮೊಬೈಲ್ ಫೋನ್ನಲ್ಲಿ ವಂಚಕರು ಆ್ಯಪ್ವೊಂದನ್ನು ಇನ್ಸ್ಟಾಲ್ ಮಾಡಿಸಿದ್ದರು. ಆರಂಭದಲ್ಲಿ 25 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದ ರಾಜೇಂದ್ರ ನಾಯ್ಡು ನಂತರ ಹಂತಹಂತವಾಗಿ…
Updated By: Priyalachhi ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳು, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಡಿಸೆಂಬರ್ 8ರಿಂದ 19ರ ವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕು. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ. ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು…
Updated By: Priyalachhi ಬೆಂಗಳೂರು: ಬೆಂಗಳೂರು ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ. ಲಕ್ಷಾಂತರ ವಾಹನಗಳು ಬೆಂಗಳೂರಲ್ಲಿ ರಸ್ತೆಗಿಳಿಯುತ್ತವೆ. ಹೀಗಾಗಿ ರಸ್ತೆ ಅಪಘಾತಗಳು ಬೆಂಗಳೂರಲ್ಲಿ ಹೆಚ್ಚಾಗುತ್ತಿವೆ. ಅದರಲ್ಲೂ ಪಾದಚಾರಿಗಳು ರಸ್ತೆ ಅವಘಡಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿದ್ದಾರೆ. ಬೆಂಗಳೂರಿನ ರಸ್ತೆ ಅಪಘಾತಗಳು ಎಷ್ಟು ಮಾರಣಾಂತಿಕ ಎಂಬ ಸಮಗ್ರ ವರದಿ ಇಲ್ಲಿದೆ. ನಗರದಲ್ಲಿ ನಿತ್ಯ ಸರಾಸರಿ 2,300 ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಹಾಗಾಗಿ ನಗರದಲ್ಲಿ ವಾಹನಗಳ ಸಂಖ್ಯೆ 1.25 ಕೋಟಿಯ ಗಡಿ ದಾಟಿದೆ. ಈ ಪೈಕಿ ಶೇ.70ರಷ್ಟು ದ್ವಿಚಕ್ರ ವಾಹನಗಳಿವೆ. ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರತಿದಿನ ಸಾವಿರಾರು ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಲ್ಲಿ ಸುಮಾರು 26 ಲಕ್ಷಕ್ಕೂ ಅಧಿಕ ಕಾರುಗಳು ಓಡಾಡುತ್ತಿವೆ. ನಗರದಲ್ಲಿ ಜನಸಂಖ್ಯೆ ಮತ್ತು ವಾಹನಗಳ ನಡುವಿನ ಅನುಪಾತ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಹೀಗಾಗಿ ಸಂಚಾರ ಕಷ್ಟ ಸಾಧ್ಯವಾಗುತ್ತಿದೆ. ಇದರಿಂದ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಅಪಘಾತಗಳಿಂದ ಮೃತಪಟ್ಟವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಅದರಲ್ಲೂ ಪಾದಚಾರಿಗಳು ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. ಅಪಘಾತ ನಿಯಂತ್ರಿಸಲು…
Updated By: Priyalachhi ಬೆಂಗಳೂರು: ಪೆರೋಲ್ ಕೋರಿ ಸಜಾ ಬಂಧಿಗಳು ಸಲ್ಲಿಸುವ ಮನವಿಗಳ ಕುರಿತಾಗಿ ಜೈಲಾಧಿಕಾರಿಗಳೇ ಸೂಕ್ತ ಆದೇಶ ಹೊರಡಿಸಿದರೆ, ನ್ಯಾಯಾಲಯದ ಮೇಲಿನ ಹೊರೆ ಕಡಿಮೆಯಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ. ಪೆರೋಲ್ ಮಂಜೂರಾತಿಗೆ ಕೋರಿದ ಸುಮಾರು 60 ಅರ್ಜಿಗಳು ಇಂದು (ಸೋಮವಾರ) ಒಂದೇ ದಿನ ವಿಚಾರಣೆಗೆ ನಿಗದಿಯಾಗಿರುವುದನ್ನು ಕಂಡು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಮಧ್ಯಾಹ್ನದ ಕಲಾಪದ ವೇಳೆ ನ್ಯಾಯಮೂರ್ತಿಗಳು ಪೆರೋಲ್ ಮಂಜೂರಾತಿ ಕೋರಿದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡರು. ಒಂದೂವರೆ ಗಂಟೆ ಸಮಯದಲ್ಲಿ 25ಕ್ಕೂ ಅಧಿಕ ಪೆರೋಲ್ ಅರ್ಜಿಗಳ ವಿಚಾರಣೆ ನಡೆಸಿ ವಿಲೇವಾರಿ ಮಾಡಿದರು. ಸಂಜೆ 4.50 ಸಮಯವಾದರೂ ಪೆರೋಲ್ ಅರ್ಜಿಗಳ ವಿಚಾರಣೆ ಅಂತ್ಯವಾಗಿರಲಿಲ್ಲ. ಈ ಹಂತದಲ್ಲಿ ಇನ್ನೆಷ್ಟು ಅರ್ಜಿಗಳಿವೆ? ಇನ್ನೂ ಮುಗಿದಿಲ್ಲವೇ? ಎಂದು ಸರ್ಕಾರಿ ವಕೀಲರನ್ನು ಕೇಳಿದ ನ್ಯಾಯಮೂರ್ತಿಗಳು, ಬಳಿಕ ವಿಚಾರಣಾ ಪಟ್ಟಿಯಲ್ಲಿನ ಪೆರೋಲ್ ಅರ್ಜಿಗಳ ಸಂಖ್ಯೆ ಗಮನಿಸಿದರು. ಆಗ 60 ಅರ್ಜಿಗಳು ವಿಚಾರಣೆ ನಿಗದಿಯಾಗಿರುವುದು ಗಮನಕ್ಕೆ ಬಂತು. ಅದಕ್ಕೆ ಸರ್ಕಾರಿ ವಕೀಲರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು,…
Updated By: Priyalachhi ದಾವಣಗೆರೆ: ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಕಾಂಗ್ರೆಸ್ನ ಹಿರಿಯ ಶಾಸಕ, ರಾಜಕೀಯ ಮುತ್ಸದ್ದಿ, ದಾವಣಗೆರೆ ಧಣಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಇಲ್ಲಿನ ಮಟ್ಟಿಕಲ್ಲು ಬಳಿಯ ಕಲ್ಲೇಶ್ವರ ಮಿಲ್ನ ಆವರಣದಲ್ಲಿ ಕುಟುಂಬಸ್ಥರು, ಗಣ್ಯರು, ಸಾರ್ವಜನಿಕರು ಹಾಗೂ ಅಭಿಮಾನಿಗಳು ಸಮ್ಮುಖದಲ್ಲಿ ನೆರೆವೇರಿತು. ಕ್ರಿಯಾ ಸಮಾಧಿ ಮಾಡಿ ಐಕ್ಯ ಮಂಟಪದಲ್ಲಿ ವಿಭೂತಿ ಗಟ್ಟಿಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಿಲಾಯಿತು. ಭಾವುಕರಾದ ಮರಿಮೊಮ್ಮಕ್ಕಳು: ಸಿರಿಗೆರೆ ಶ್ರೀಗಳು, ವಚನಾನಂದ ಸ್ವಾಮೀಜಿ, ಪಂಚಪೀಠದ ಜಗದ್ಗುರುಗಳು ಸೇರಿದಂತೆ ಹಲವು ಮಠಾಧೀಶರ ಸಮ್ಮುಖದಲ್ಲಿ ಈ ಅಂತ್ಯ ಸಂಸ್ಕಾರ ನಡೆಯಿತು. ಶಾಮನೂರು ಶಿವಶಂಕರಪ್ಪ ಅವರ ಹಿರಿಯ ಪುತ್ರ ಬಕ್ಕೇಶ್ ಅವರು ಅಂತ್ಯಸಂಸ್ಕಾರದ ವಿಧಿವಿಧಾನ ಪೂರೈಸಿದರು. ಪೂಜೆ ವೇಳೆ ಸಹೋದರನಿಗೆ ಕಿರಿಯ ಸಹೋದರರಾದ ಎಸ್ ಎಸ್ ಮಲ್ಲಿಕಾರ್ಜುನ್, ಎಸ್ ಎಸ್ ಗಣೇಶ್ ಸಾಥ್ ನೀಡಿದರು. ಮಣ್ಣಲ್ಲಿ ಮಣ್ಣಾದ ಹಿರಿಯ ಜೀವಿ ಕಂಡು ಸೊಸೆಯಂದಿರು, ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಭಾವುಕರಾದರು. ತಾತನ…
Subscribe to Updates
Get the latest creative news from FooBar about art, design and business.