Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಎಲ್. ರಾಕೇಶ್ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಬಡವರಿಗೆ ನೀಡಲಾಗುವ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿರಲಿ ಅಥವಾ ಕಡಿಮೆ ಬೆಲೆಗೆ ನೀಡುತ್ತಿರಲಿ, ಅದರಲ್ಲಿ ಸರ್ಕಾರದ ಒಂದು ವಿಭಾಗವು ಹಸ್ತಕ್ಷೇಪ ಮಾಡಲು ನಾವು ಅನುಮತಿ ನೀಡುವುದಿಲ್ಲ ಎಂದು ಮೌಖಿಕವಾಗಿ ಹೇಳಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ ಮತ್ತು ಆದ್ದರಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ. ಅಲ್ಲದೇ, ಔಷಧ ಕೇಂದ್ರಗಳು ಹೊರಗೆ ಕಾರ್ಯನಿರ್ವಹಿಸುವುದಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಸರ್ಕಾರಿ…
Updated By: Priyalachhi ಬೆಳಗಾವಿ: ಸದ್ಯ ರಾಜ್ಯದಲ್ಲಿ ನಿಖರವಾಗಿ ಕುಟುಂಬದ ಆದಾಯ ನಿರ್ಧರಿಸುವ ವ್ಯವಸ್ಥೆಯಿಲ್ಲ. ಇದರ ಲಾಭ ಪಡೆದು ಕೆಳ ಹಂತದ ಅಧಿಕಾರಿಗಳು ಆದಾಯ ಪ್ರಮಾಣ ಪತ್ರಗಳನ್ನು ಮನಬಂದಂತೆ ನೀಡುತ್ತಿದ್ದಾರೆ. ಇದರ ಫಲವಾಗಿ ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳು ದುರ್ಬಳಕೆಯಾಗುತ್ತಿದೆ. ಸುಮಾರು 24.50 ಲಕ್ಷ ಅಕ್ರಮ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು. ಗುರುವಾರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದರು. ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳ ಆಧಾರ್ ಜೋಡಣೆ ಸಂದರ್ಭದಲ್ಲಿ ನಿಗದಿಪಡಿಸಿದ ವಯೋಮಿತಿಗೂ ಕಡಿಮೆ ವಯಸ್ಸಿನವರು ಸೌಲಭ್ಯ ಪಡೆಯುತ್ತಿದ್ದಾರೆ. ಇದರೊಂದಿಗೆ ಸುಮಾರು 10 ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಪಾವತಿದಾರರು, ಹೆಚ್.ಆರ್.ಎಂ.ಎಸ್ನಲ್ಲಿ ಮಾಹಿತಿ ಇರುವ ಸರ್ಕಾರಿ ನೌಕರರು ಸಹ ಸಾಮಾಜಿಕ ಭದ್ರತಾ ಯೋಜನೆಯ ಸೌಲಭ್ಯ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಅಕ್ರಮ ಫಲಾನುಭವಿಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ. ಕೂಡಲೇ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.…
Updated By: Priyalachhi ಬೆಂಗಳೂರು: ಕರ್ನಾಟಕವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡಲು ಕಾಂಗ್ರೆಸ್ ಸರ್ಕಾರವು ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸುವ ಬಗ್ಗೆ ಗಂಭೀರವಾಗಿದೆ, ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ದೇಶದಲ್ಲಿ ಮಾದಕ ದ್ರವ್ಯಗಳ ಪೂರೈಕೆಯನ್ನು ನಿಗ್ರಹಿಸುವುದು, ಮಾದಕ ದ್ರವ್ಯ ಮಾರಾಟಗಾರರನ್ನು ಬಂಧಿಸುವುದು ಮಾತ್ರವಲ್ಲದೆ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಯುವಜನರಿಗೆ ಅರಿವು ಮೂಡಿಸಲು ಶಾಲೆಗಳು ಮತ್ತು ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಹ ಇದರ ಕೆಲಸವಾಗಿದೆ ಎಂದು ಗುರುವಾರ ಪರಿಷತ್ತಿನಲ್ಲಿ ಎಂಎಲ್ಸಿ ಅಬ್ದುಲ್ ಜಬ್ಬಾರ್ (ಕಾಂಗ್ರೆಸ್) ಕೇಳಿದ ಪ್ರಶ್ನೆಗೆ ಡಾ. ಪರಮೇಶ್ವರ ಉತ್ತರಿಸಿದರು. ಗೃಹ ಇಲಾಖೆಯು ಈ ಕೆಲಸಕ್ಕೆ ಸುಮಾರು 56 “ದಕ್ಷ” ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಡಾ. ಪರಮೇಶ್ವರ ಹೇಳಿದರು. ಮಾದಕ ದ್ರವ್ಯ ಮಾರಾಟಗಾರರನ್ನು ಬೆಂಬಲಿಸುತ್ತಿರುವ ಪೊಲೀಸ್ ಸಿಬ್ಬಂದಿ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ, ಟಾಸ್ಕ್ ಫೋರ್ಸ್…
Updated By: Priyalachhi ಬೆಳಗಾವಿ: ರಾಜ್ಯ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಲು ಕೆಲ ಷರತ್ತುಗಳ ಅನ್ವಯ ಅನುಮತಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಜನಾಭಿಪ್ರಾಯ ಸಂಗ್ರಹದ ಜೊತೆಗೆಯಲ್ಲಿ ನಿಯಮಗಳನ್ನು ರೂಪಿಸಲು ಗೃಹ ಸಚಿವರಿಗೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ. ಕಾಲ್ತುಳಿತ ದುರಂತ ಬಳಿಕ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆದಿರಲಿಲ್ಲ. ಆದರೆ, ಇದೀಗ ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ವರದಿ ಆಧರಿಸಿ ಷರತ್ತುಗಳ ಅನ್ವ. ಕ್ರಿಕೆಟ್ ಪಂದ್ಯಗಳನ್ನು ಆಡಿಸಲು ಸರ್ಕಾರ ಅನುಮತಿ ನೀಡಿದ್ದು, ಭದ್ರತೆ ಜವಾಬ್ದಾರಿಯನ್ನು ಗೃಹ ಇಲಾಖೆಗೆ ನೀಡಲಾಗಿದೆ.
Updated By: Priyalachhi ಫೈನಲಿ, ಕೋಟ್ಯಂತರ ಅಭಿಮಾನಿಗಳ ಕಾತರ ಕೊನೆಗೊಂಡಿದೆ. ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ಬಿಡುಗಡೆ ಆಗಿದೆ. ಇಂದು ಮುಂಜಾನೆ 6:30ರ ಮಾರ್ನಿಂಗ್ ಶೋನೊಂದಿಗೆ ಸಿನಿಮಾ ಒಳ್ಳೆ ಓಪನಿಂಗ್ ಪಡೆದುಕೊಂಡಿದೆ. ನಿರ್ದೇಶಕ-ನಿರ್ಮಾಪಕ ಪ್ರಕಾಶ್ ವೀರ್ ಸಾರಥ್ಯದ ಸಿನಿಮಾ ಆರಂಭಿಕವಾಗಿ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣ ವೇದಿಕೆಯಾದ ಎಕ್ಸ್ನಲ್ಲಿ ವೀಕ್ಷಕರು ತಮ್ಮ ವಿಮರ್ಶೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ”ದಿ ಡೆವಿಲ್, ಬ್ಲಾಕ್ಬಸ್ಟರ್” ಅನ್ನೋ ಟ್ವೀಟ್ ಹೇರಳವಾಗಿವೆ. ಚಿತ್ರಮಂದಿರಗಳಲ್ಲಿ ಇದ್ರೆ ನೆಮ್ದಿಯಾಗಿರ್ಬೇಕ್ ಹಾಡಿಗೆ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದಾರೆ. ತಮ್ಮ ಮೆಚ್ಚಿನ ನಟನ ಮೇಲೆ ಪ್ರೀತಿಯ ಧಾರೆಯೆರೆದಿರುವ ವಿಡಿಯೋ ಹಂಚಿಕೊಂಡ ಅಭಿಮಾನಿಯೋರ್ವರು, ”ಏನೇ ಆಗೋಗ್ಲಿ, ನಿಮ್ಮನ್ನು ಬಿಡೋರ್ ನಾವಲ್ಲ, ದಿ ಡೆವಿಲ್” ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಯೊಬ್ಬರು ಪ್ರತಿಕ್ರಿಯೆ ನೀಡಿ, ”ಬ್ಲಾಕ್ಬಸ್ಟರ್, ಪ್ಯೂರ್ ಫ್ಯಾಮಿಲಿ ಪ್ಯಾಕೇಜ್ ಎಂಟರ್ಟೈನರ್, ಪಕ್ಕಾ ಪೈಸಾ ವಸೂಲ್” ಎಂದು ಬರೆದುಕೊಂಡಿದ್ದಾರೆ. ಇವರದ್ದೇ ಮತ್ತೊಂದು ಟ್ವೀಟ್ನಲ್ಲಿ, ”ಡಿ ಬಾಸ್ ಕ್ಯಾರಕ್ಟರೈಸೇಶನ್ ಅಂಡ್…
Updated By: Priyalachhi ನವದೆಹಲಿ: ವಿವಿಧ ಸಂಸ್ಥೆಗಳು ಉಲ್ಲೇಖಿಸಿರುವ ಜಾಗತಿಕ ವಾಯು ಗುಣಮಟ್ಟದ ಶ್ರೇಯಾಂಕಗಳನ್ನು ಯಾವುದೇ ಅಧಿಕೃತ ಪ್ರಾಧಿಕಾರವು ನಡೆಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ವಾಯು ಗುಣಮಟ್ಟದ ಮಾರ್ಗಸೂಚಿಗಳು ಸಲಹಾ ಮೌಲ್ಯಗಳಾಗಿ ಮಾತ್ರ ಕಾರ್ಯನಿರ್ವಹಿಸುತ್ತವೆ. ಬದ್ಧ ಮಾನದಂಡಗಳಾಗಿ ಅಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ. ಐಕ್ಯೂಎಐಆರ್ನ ವಿಶ್ವ ವಾಯು ಗುಣಮಟ್ಟ ಶ್ರೇಯಾಂಕ, ಡಬ್ಲ್ಯುಹೆಚ್ಒ ಜಾಗತಿಕ ವಾಯು ಗುಣಮಟ್ಟ ದತ್ತಸಂಚಯ, ಪರಿಸರ ಕಾರ್ಯಕ್ಷಮತೆ ಸೂಚ್ಯಂಕ (ಇಪಿಐ) ಮತ್ತು ಜಾಗತಿಕ ರೋಗಗಳ ಹೊರೆ (ಜಿಬಿಡಿ) ಮೆಟ್ರಿಕ್ಗಳಂತಹ ಜಾಗತಿಕ ಸೂಚ್ಯಂಕಗಳಲ್ಲಿ ಭಾರತದ ಸ್ಥಾನದ ಕುರಿತು ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಿಸರ ಸಚಿವಾಲಯ, ವಿಶ್ವದಾದ್ಯಂತ ಯಾವುದೇ ಅಧಿಕೃತ ದೇಶವಾರು ಮಾಲಿನ್ಯ ಶ್ರೇಯಾಂಕವನ್ನು ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದೆ. ಜಾಗತಿಕ ಸೂಚ್ಯಂಕಗಳಲ್ಲಿ ಭಾರತದ ಸ್ಥಾನದ ಕುರಿತು ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಿಸರ ಸಚಿವಾಲಯ, ವಿಶ್ವಾದ್ಯಂತ ಯಾವುದೇ ಅಧಿಕೃತ ದೇಶವಾರು ಮಾಲಿನ್ಯ ಶ್ರೇಯಾಂಕವನ್ನು ಕೈಗೊಳ್ಳಲಾಗುವುದಿಲ್ಲ ಎಂದು ತಿಳಿಸಿದರು. ಪರಿಸರ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್…
Updated By: Priyalachhi ಬೆಳಗಾವಿ: ‘ಕಾಣುವ ಕುರ್ಚಿಗೆ ಹಂಬಲಿಸಿದೇ ಮನ, ಕೂಡಬಲ್ಲೆನೇ’ ಒಂದು ದಿನ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ದೇಶಿಸಿ ವಿಡಂಬನಾತ್ಮಕವಾಗಿ ಕಾಳೆದರು. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಮೇಲಿನ ಚರ್ಚೆ ವೇಳೆ ಈ ಸ್ವಾರಸ್ಯಕರ ಪ್ರಸಂಗ ನಡೆಯಿತು. ಬಿಜೆಪಿ ಸದಸ್ಯ ಅರವಿಂದ್ ಬೆಲ್ಲದ್ ಮಾತನಾಡಿ, ‘ಮೇಕೆದಾಟು ಪಿತಾಮಹ ಡಿ.ಕೆ.ಶಿವಕುಮಾರ್, ಮೇಕೆದಾಟುವಿನ ಯೋಜನೆ ಈಗಾಗಲೇ ಶುರು ಮಾಡಬಹುದು. ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕಾರ ಮಾಡಿದೆ’ ಎಂದರು. ಬೆಲ್ಲದ್ ಮಾತಿಗೆ ಮಧ್ಯ ಪ್ರವೇಶ ಮಾಡಿದ ಡಿಸಿಎಂ ಡಿಕೆಶಿ, ‘ಕೋರ್ಟ್ ನಮ್ಮದೇನು ಇಲ್ಲ ಸರ್ಕಾರ ತೀರ್ಮಾನ ಮಾಡಬೇಕು ಎಂದಿದೆ. ನಾನು ಹೊಸದಾಗಿ ಡಿಡಬ್ಲ್ಯೂಸಿಗೆ ಅರ್ಜಿ ಹಾಕುತ್ತೇನೆ. ಪರಿಷ್ಕೃತ ಡಿಪಿಆರ್ ಕೂಡ ರೆಡಿ ಮಾಡಿ ಕೊಡುತ್ತೇವೆ. ನಿಮ್ಮ ಎಲ್ಲರಿಗೂ ನಾನು ಕೈ ಮುಗಿದು ಕೇಳುತ್ತೇನೆ. ಆದಷ್ಟು ಬೇಗ ನಿಮ್ಮ ಎಲ್ಲರನ್ನು ಕರೆದುಕೊಂಡು ಹೋಗುವ ಸಂಕಲ್ಪವನ್ನು ತಾಯಿ ಕಾವೇರಿ ಕೊಟ್ಟಿದ್ದಾಳೆ. ನೀವೆಲ್ಲರೂ ಸಹಕಾರ ಕೊಡಬೇಕು, ಆದಷ್ಟು ಬೇಗ ಭೂಮಿ…
Updated By: Priyalachhi ಬೆಳಗಾವಿ: ಆರ್ಥಿಕ ಇಲಾಖೆಯ ಅನುಮತಿ ಪಡೆದು ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಿಎಂ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಶೀಘ್ರಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ನಿರಾಣಿ ಕೋರಿದ್ದರು. ಸರ್ಕಾರದ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಖಾಲಿ ಇದ್ದ ಒಟ್ಟು 2,84,881 ಹುದ್ದೆಗಳ ಪೈಕಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಎರಡೂ ಸೇರಿ 96,844 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಇನ್ನುಳಿದ 1,88,037 ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ 1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳೂ ಸೇರಿವೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದರಾಬಾದ್(ಕಲ್ಯಾಣ) ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ.…
Updated By: Priyalachhi ಬೆಂಗಳೂರು: ವಿವಾದಾತ್ಮಕ ಸುರಂಗ ರಸ್ತೆ ಯೋಜನೆಯು ಲಾಲ್ಬಾಗ್ ಸಸ್ಯೋದ್ಯಾನದಲ್ಲಿ 276 ಮರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಗ್ರೇಟರ್ ಬೆಂಗಳೂರು (ಜಿಬಿಎ) ನಡೆಸಿದ ಆರಂಭಿಕ ಸಮೀಕ್ಷೆಯು, ಅಂದಾಜಿಸಿದೆ. ಲಾಲ್ಬಾಗ್ ಬಳಿಯ ಸಿದ್ದಾಪುರ ಮತ್ತು ಅಶೋಕ ಪಿಲ್ಲರ್ ವೃತ್ತದ ನಡುವೆ ಸುರಂಗ ನಿರ್ಗಮನವನ್ನು ಯೋಜಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ (ಯುಡಿಡಿ) ಮೂಲಗಳು ತಿಳಿಸಿವೆ. ಹೆಬ್ಬಾಳ ಎಸ್ಟೀಮ್ ಮಾಲ್ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ ಕೆಎಸ್ಆರ್ಪಿ ಜಂಕ್ಷನ್ವರೆಗಿನ ಸುರಂಗ ರಸ್ತೆಯು ಉದ್ಯಾನವನದ ಮರಗಳ ಹೊದಿಕೆ ಮತ್ತು ಕೆಲವು ರಚನೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಸುರಂಗ ನಿರ್ಗಮನಕ್ಕೆ 2,56,248.95 ಚದರ ಅಡಿ ಭೂಮಿಯ ಅಗತ್ಯವಿದೆ ಎಂದು ಆರಂಭಿಕ ಸಮೀಕ್ಷೆ ಸೂಚಿಸುತ್ತದೆ. ಅಧಿಕಾರಿಗಳು ಯುಡಿಡಿಗೆ ನೀಡಿದ ವರದಿಯ ಪ್ರಕಾರ, 0.3 ಮೀಟರ್ನಿಂದ 3 ಮೀಟರ್ಗಿಂತ ಹೆಚ್ಚಿನ ಸುತ್ತಳತೆ ಹೊಂದಿರುವ ಮರಗಳನ್ನು ಕತ್ತರಿಸಬೇಕು ಎಂದು ಯುಡಿಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. TNIE ದೊರೆತ ದಾಖಲೆಗಳ ಪ್ರಕಾರ, 0.3 ರಿಂದ 1 ಮೀಟರ್ ಸುತ್ತಳತೆ ಹೊಂದಿರುವ 96…
ಸುಪ್ರೀಂ ಕೋರ್ಟ್ನಲ್ಲೂ ಪ್ರಜ್ವಲ್ಗೆ ಹಿನ್ನಡೆ; ಅತ್ಯಾಚಾರ ಪ್ರಕರಣ ಬೇರೆ ಕೋರ್ಟ್ ಗೆ ವರ್ಗಾವಣೆ ಕೋರಿದ್ದ ಅರ್ಜಿ ವಜಾ!
Updated By: Priyalachhi ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. ತಮ್ಮ ವಿರುದ್ಧ ಬಾಕಿ ಇರುವ ಇನ್ನೂ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿಂದ ಬೇರೆ ಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು.
Subscribe to Updates
Get the latest creative news from FooBar about art, design and business.