Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಇಂದಿನ ಪಂಚಾಂಗ: ದಿನಾಂಕ : 10-12-2025 ವಾರ : ಬುಧವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಕೃಷ್ಣ ತಿಥಿ : ಷಷ್ಠಿ ನಕ್ಷತ್ರ : ಮಾಘ ಸೂರ್ಯೋದಯ : ಮುಂಜಾನೆ 06:30 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 13:35ರಿಂದ 15:00ರವರೆಗೆ ದುರ್ಮುಹೂರ್ತ : ಮಧ್ಯಾಹ್ನ 12:6ರಿಂದ 12:54ರವರೆಗೆ ರಾಹುಕಾಲ : ಮಧ್ಯಾಹ್ನ 12:10ರಿಂದ 13:35ರವರೆಗೆ ಸೂರ್ಯಾಸ್ತ : ಸಂಜೆ 05:51 ಗಂಟೆಗೆ ರಾಶಿ ಭವಿಷ್ಯ: ಮೇಷ : ನೀವು ಇಂದು ನಿಮ್ಮ ಮಕ್ಕಳ ಬೇಡಿಕೆಗೆ ಗಮನ ನೀಡುತ್ತೀರಿ. ಇಂತಹ ಸಮಯದಲ್ಲಿ ನಿಮ್ಮ ಶ್ರಮ ಅತ್ಯಂತ ಕಠಿಣವಾಗಿರುತ್ತದೆ. ನೀವು ಸುದೀರ್ಘ ಕಾಲದಿಂದ ಮುಂದೂಡುತ್ತಿದ್ದ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ವೈದ್ಯಕೀಯ ಕ್ಷೇತ್ರ ಹಾಗು ಸಾರ್ವಜನಿಕ ವಲಯದಲ್ಲಿ ಇರುವವರಿಗೆ ಇದು ಒಳ್ಳೆಯ ದಿನ. ವೃಷಭ : ಇಂದು, ನೀವು ಸಾಧ್ಯವಿರುವಷ್ಟೂ ಸೃಜನಶೀಲ ಮತ್ತು ಸ್ಪರ್ಧಾತ್ಮಕವಾಗಿರುತ್ತಿರಿ. ನಿಮ್ಮ ಕೆಲಸದ ಶೈಲಿ, ನಿಮ್ಮ ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳಲ್ಲಿ ವಿಸ್ಮಯ ಮತ್ತು ಅಚ್ಚರಿಗೊಳಿಸುತ್ತದೆ. ನಿಮ್ಮ ಕೈ ಕೆಳಗಿನವರು ಅತ್ಯಂತ ಪ್ರಭಾವಿತರು ಮತ್ತು ಪ್ರೇರೇಪಣೆ ಹೊಂದುತ್ತಾರೆ. ಮಿಥುನ : ನೀವು…
Updated By: Priyalachhi ನವದೆಹಲಿ: ತಮಿಳುನಾಡಿನ ತಿರುಪರಂಕುಂದ್ರಂ ಬೆಟ್ಟದಲ್ಲಿನ ಸುಬ್ರಹ್ಮಣ್ಯ ಸ್ವಾಮಿ ದೀಪೋತ್ಸವಕ್ಕೆ ಅವಕಾಶ ನೀಡಿ ಆದೇಶಿಸಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ.ಆರ್. ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸಲು (ಮಹಾಭಿಯೋಗ) ಕೋರಿ ಡಿಎಂಕೆ ನೇತೃತ್ವದ ಇಂಡಿಯಾ ಕೂಟದ ನಿಯೋಗ ಇಂದು (ಮಂಗಳವಾರ) ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಿದೆ. ಡಿಎಂಕೆ ನಾಯಕಿ ಕನಿಮೋಳಿ ಮತ್ತು ಟಿ.ಆರ್. ಬಾಲು, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕಾಂಗ್ರೆಸ್ನಿಂದ ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವು ನಾಯಕರು ಸ್ಪೀಕರ್ ಬಿರ್ಲಾ ಅವರಿಗೆ ವಾಗ್ದಂಡನೆ ನೋಟಿಸ್ ಹಸ್ತಾಂತರಿಸಿದರು. ಅದರಲ್ಲಿ 107 ಸಂಸದರು ಸಹಿ ಮಾಡಿದ್ದು, “ನ್ಯಾಯಾಧೀಶರ ನಡೆಯು ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ನ್ಯಾಯಾಂಗದ ಜಾತ್ಯತೀತ ತತ್ವದ ಮೇಲೆ ಗಂಭೀರ ಪ್ರಶ್ನೆ ಹುಟ್ಟುಹಾಕಿದೆ” ಎಂದು ಹೇಳಿದ್ದಾರೆ. ಹೈಕೋರ್ಟ್ ನ್ಯಾಯಾಧೀಶ ಸ್ವಾಮಿನಾಥನ್ ಅವರು, ಪ್ರಕರಣ ನಿರ್ಧರಿಸುವಾಗ ನಿರ್ದಿಷ್ಟ ಸಮುದಾಯದ ಪರ ರಾಜಕೀಯ ಪ್ರೇರಿತ ನಿಲುವು ತಳೆದಿದ್ದಾರೆ. ಇದು ದೇಶದ ಸಂವಿಧಾನದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ ಎಂದು ನೋಟಿಸ್ನಲ್ಲಿ ಆರೋಪಿಸಲಾಗಿದೆ. ವಿಪಕ್ಷಗಳ…
Updated By: Priyalachhi ಬೆಂಗಳೂರು: ಕೆಂಗೇರಿ ಸಮೀಪದ ಬಿ.ಎಂ. ಕಾವಲು ಅರಣ್ಯ ಪ್ರದೇಶದಲ್ಲಿ ಸುಮಾರು 25 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುವ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಿದ ಪ್ರಕರಣ ಬಗ್ಗೆ ಸಿಐಡಿ ಅಥವಾ ಎಸ್ಐಟಿ ರಚಿಸಿ ವಿಶೇಷ ತನಿಖೆ ನಡೆಸಬೇಕೆಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ಹಾಕಿದ್ದಾರೆ. ಭೂ ಕಬಳಿಕೆ ಬಗ್ಗೆ ಮುಖ್ಯಮಂತ್ರಿಗೆ ಸುದೀರ್ಘ ಪತ್ರ ಬರೆದಿರುವ ಸಚಿವರು, ಸರ್ಕಾರಿ ಜಾಗ ಕಬಳಕೆಯಲ್ಲಿ ಭೂಗಳ್ಳರ ಜೊತೆ ಸರ್ಕಾರಿ ಅಧಿಕಾರಿಗಳೂ ಸಹ ಶಾಮೀಲಾಗಿರುವ ಸಾಧ್ಯತೆಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಮೌಲ್ಯದ 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಬೇಕು. ತಪ್ಪಿತಸ್ಥರನ್ನು ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.…
Updated By: Priyalachhi ಭಾರತದ ಮಾಜಿ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಚಿತ್ರವನ್ನು ಪೋಸ್ಟ್ ಮಾಡಿದ್ದು, ಸಾಕಷ್ಟು ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಮಂಗಳವಾರ, ಅನುಭವಿ ಕ್ರಿಕೆಟಿಗ ಎರಡು ಚಿತ್ರಗಳ ಕೊಲಾಜ್ ಅನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಒಂದು ಬದಿಯಲ್ಲಿ ಸನ್ನಿ ಲಿಯೋನ್ ಅವರ ಚಿತ್ರವನ್ನು ಹೊಂದಿದ್ದರೆ, ಇನ್ನೊಂದು ಬದಿಯಲ್ಲಿ ಚೆನ್ನೈನ ಸಾಧು ಬೀದಿಯ ಚಿತ್ರವಿದೆ. ಅಶ್ವಿನ್ ಅವರ ಪೋಸ್ಟ್ ಕೆಲವು ಅಭಿಮಾನಿಗಳು ತಲೆ ಕೆರೆದುಕೊಳ್ಳುವಂತೆ ಮಾಡಿದ್ದರೆ, ಮತ್ತೆ ಕೆಲವರು 37 ವರ್ಷದ ಮಾಜಿ ಆಟಗಾರನ ಚಟುವಟಿಕೆಯ ಹಿಂದಿನ ತರ್ಕವನ್ನು ಅರ್ಥಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಶ್ವಿನ್ ಅವರ ಪೋಸ್ಟ್ ಸದ್ಯ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಟಿ20ಗೆ ಪದಾರ್ಪಣೆ ಮಾಡಿದ ತಮಿಳುನಾಡು ಆಲ್ರೌಂಡರ್ ಸನ್ನಿ ಸಂಧು ಅವರಿಗೆ ಸಂಬಂಧಿಸಿದ ಒಂದು ಸನ್ನೆಯಾಗಿತ್ತು ಎಂದು ಕೆಲವರು ಊಹಿಸಿದ್ದಾರೆ. ಸೋಮವಾರ, ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೌರಾಷ್ಟ್ರ ವಿರುದ್ಧ ನಡೆದ ಪಂದ್ಯದಲ್ಲಿ ಸಂಧು ಉತ್ತಮ…
Updated By: Priyalachhi ಬೆಳಗಾವಿ: ಖಾತೆ ವಿಲೇವಾರಿಗೆ ತಂದಿದ್ದ ರೌಂಡ್ ರಾಬಿನ್ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಗೋಪಾಲಯ್ಯ ಅವರು ಜಿಬಿಎ ವ್ಯಾಪ್ತಿಯಲ್ಲಿ ಇ ಖಾತೆಗಳನ್ನು ನೀಡಲು ತಂದಿರುವ ರೌಂಡ್ ರಾಬಿನ್ ಪದ್ದತಿಯಿಂದ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇ ಖಾತೆ ಯೋಜನೆಯಡಿ ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 43,382 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 31,274 ಅರ್ಜಿಗಳನ್ನು ವಿಲೇ ಮಾಡಲಾಗಿದೆ. 5,448 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು. ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ…
Updated By: Priyalachhi ಬೆಂಗಳೂರು: ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೇವಲ ಕಳೆದ ಐದು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು ₹6,15,647 ಕೋಟಿ ಸಾಲವನ್ನು ವಜಾಮಾಡಿದೆ — ವರ್ಷಕ್ಕೆ ಸರಾಸರಿ ₹1,23,129 ಕೋಟಿ ವಜಾ ಮಾಡಿದ್ದಾರೆ. ಒಂದು ವರ್ಷದ ಅವಧಿಯಲ್ಲಿ ವಜಾ ಮಾಡಿರುವ ಬ್ಯಾಂಕ್ ಸಾಲದ ಮೊತ್ತವು ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನ ಮಟ್ಟ ಸುಧಾರಣೆಗಾಗಿ ನೇರವಾಗಿ ಅವರಿಗೆ ನೀಡಲಾಗುತ್ತಿರುವ ಕರ್ನಾಟಕದ ಗ್ಯಾರಂಟಿ ಯೋಜನೆಗಳ ವಾರ್ಷಿಕ ವೆಚ್ಚಕ್ಕಿಂತ ದುಪ್ಪಟ್ಟಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಾವು ಜನಸಾಮಾನ್ಯರ ಪರ ಎಂದು ಬೊಗಳೆ ಬಿಡುವ ಬಿಜೆಪಿ ಸದ್ದಿಲ್ಲದಂತೆ ಶ್ರೀಮಂತ ಉದ್ಯಮಿಗಳ ಸಾಲವನ್ನು ವಜಾ ಮಾಡಿ, ಅವರ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳನ್ನು ಬೆಂಬಲಿಸುತ್ತಿದೆ. ಇದು ಬೆವರು-ರಕ್ತ ಹರಿಸಿ ಸಂಪಾದಿಸಿದ ಗಳಿಕೆಯಲ್ಲಿ ತೆರಿಗೆ ನೀಡುತ್ತಿರುವ ಭಾರತೀಯರಿಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.…
Updated By: Priyalachhi ನವದೆಹಲಿ: ‘ವಂದೇ ಮಾತರಂ’ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರಲಾಲ್ ನೆಹರು ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರವನ್ನು ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ರಂತಹ ನಾಯಕರು ಸಾಮೂಹಿಕವಾಗಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಬರೆದ ಹಾಡನ್ನು ಕಾಂಗ್ರೆಸ್ ‘ವಿಭಜಿಸಿದೆ’ ಎಂದು ಆಡಳಿತಾರೂಢ ಬಿಜೆಪಿ ಆರೋಪ ಮಾಡುತ್ತಿದ್ದಂತೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ,ಕಾಂಗ್ರೆಸ್ ನಾಯಕರು ಯಾವಾಗಲೂ ‘ವಂದೇ ಮಾತರಂ’ ಹಾಡುತ್ತಿದ್ದಾರೆ ಎಂದು ಹೇಳಿದರು. ಕವಿತೆಯ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರದ ಹಿಂದೆ ತುಷ್ಟೀಕರಣ ರಾಜಕೀಯವಿದೆ. ವಂದೇ ಮಾತರಂ ಗೀತೆಗೆ ಕತ್ತರಿ ಹಾಕಿದ್ದು ದೇಶದ ವಿಭಜನೆಗೆ ಕಾರಣವಾಯ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್…
Updated By: Priyalachhi ನವದೆಹಲಿ: ಸಮಾನ ಭಾರತದ ಕಲ್ಪನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ನ ಕಂಗೆಡಿಸಿದೆ ಎಂದು ಸಂಸದ ರಾಹುಲ್ ಗಾಂಧಿ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ವಿಶೇಷ ಚುನಾವಣಾ ಪರಿಷ್ಕರಣಾ ವ್ಯಾಯಾಮ (SIR)ದ ಕುರಿತು ಸಂಸತ್ತಿನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಸೋಮವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ತೀವ್ರ ದಾಳಿ ನಡೆಸಿದರು. ಈ RSS ಸಂಸ್ಥೆಯು ದೇಶದ ಸಾಂಸ್ಥಿಕ ಚೌಕಟ್ಟಿನಲ್ಲಿ ಪ್ರಾಬಲ್ಯ ಸಾಧಿಸಲು ಬಹಳ ಹಿಂದಿನಿಂದಲೂ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ‘ಆರ್ಎಸ್ಎಸ್ನ “ಮಹಾತ್ಮ ಗಾಂಧಿಯವರ ಹತ್ಯೆಯ ನಂತರದ ಯೋಜನೆಯು ಭಾರತದ ಸಾಂಸ್ಥಿಕ ಚೌಕಟ್ಟನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳುವುದಾಗಿದೆ. ಪ್ರಸ್ತುತ ರಾಜಕೀಯ ವಾತಾವರಣವು ಆ ದೀರ್ಘಕಾಲೀನ ಪ್ರಯತ್ನದಿಂದ ರೂಪುಗೊಂಡಿದೆ. ಆರ್ಎಸ್ಎಸ್ “ಮೂಲಭೂತವಾಗಿ ಸಮಾನತೆಯನ್ನು ನಂಬುವುದಿಲ್ಲ. ಬದಲಿಗೆ ಶ್ರೇಣೀಕೃತ ವಿಶ್ವ ದೃಷ್ಟಿಕೋನದಲ್ಲಿ ಬೇರೂರಿದೆ ಎಂದು ಅವರು ವಾದಿಸಿದರು. ಅಂತೆಯೇ “ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾನರು ಎಂಬ ಕಲ್ಪನೆಯು ಆರ್ಎಸ್ಎಸ್ನಲ್ಲಿರುವ ನನ್ನ ಸ್ನೇಹಿತರನ್ನು ತೊಂದರೆಗೊಳಿಸುತ್ತದೆ. ಭಾರತದ ಪ್ರಜಾಪ್ರಭುತ್ವ ಶಕ್ತಿ…
Updated By: Priyalachhi ಬೆಳಗಾವಿ: ಗೋಕಾಕ್ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿತು. ಸೋಮವಾರ ಸಂಜೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ತಮ್ಮ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಗೋಕಾಕ್ ಶೂನ್ಯ ಸಂಪಾದನಾ ಮಠದ ಮುರುಘ ರಾಜೇಂದ್ರ ಸ್ವಾಮೀಜಿ, ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಅಮರ ಸಿದ್ದೇಶ್ವರ ಸ್ವಾಮೀಜಿ, ಮುಖಂಡ ಅಶೋಕ ಪೂಜಾರಿ ಸೇರಿ ಮತ್ತಿತರರು ಇದ್ದರು. ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜನೆ ವಿಚಾರಕ್ಕೆ ಇತಿಶ್ರೀ ಹಾಡುವಂತೆ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಮೇಲೆ ನಾವು ಒತ್ತಡ ಹೇರುತ್ತಿದ್ದೇವೆ. ಗೋಕಾಕ್ ಮತ್ತು ಚಿಕ್ಕೋಡಿ ಜಿಲ್ಲೆ ಆಗಬೇಕು ಅಂತಾ ಬೇಡಿಕೆ ಇಟ್ಟಿದ್ದೇವೆ. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರ…
Updated By: Priyalachhi ಬೆಳಗಾವಿ: ಮದ್ಯಪಾನ ವಿಪರೀತ ಸೇವನೆಯಿಂದ ಮನುಷ್ಯನ ಯಕೃತ್ (ಲಿವರ್) ತೊಂದರೆ ಜೊತೆಗೆ ಜಾಂಡೀಸ್ ಖಾಯಿಲೆಗೆ ತುತ್ತಾಗಲಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆಗೆ ಒದಗಿಸುವ ಉದ್ದೇಶದಿಂದ ಅಬಕಾರಿ ಇಲಾಖೆಗೆ ಬರುವ ಆದಾಯದಲ್ಲಿ ಶೇ.20ರಷ್ಟು ಹಣವನ್ನು ಮೀಸಲಿಡಬೇಕು ಎಂದು ವಿಧಾನಪರಿಷತ್ನಲ್ಲಿ ವಿರೋಧ ಪಕ್ಷ ಒತ್ತಾಯಿಸಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಮೇಲ್ಮನೆ ಸದಸ್ಯರಾದ ಎನ್.ರವಿಕುಮಾರ್, ಕೆ.ಎಸ್.ನವೀನ್, ಸಿ.ಟಿ.ರವಿ, ಶಿವಕುಮಾರ್, ರಮೇಶ್ ಬಾಬು, ಭಾರತಿ ಶೆಟ್ಟಿ. ಬಿ.ಕೆ.ಹರಿಪ್ರಸಾದ್ ಸೇರಿದಂತೆ ಇನ್ನಿತರರು ನಿಯಮ 330ರ ಅಡಿ ಮಾತನಾಡಿದರು. ಮೊದಲಿಗೆ ರವಿಕುಮಾರ್ ಮಾತನಾಡಿ, ಮದ್ಯಸೇವನೆಯಿಂದ ಶೇ.3ರಷ್ಟು ಜನರು ರೋಗಕ್ಕೆ ತುತ್ತಾಗುತ್ತಿದ್ಧಾರೆ. ವರ್ಷಕ್ಕೆ 43 ಸಾವಿರ ಕೋಟಿ ಆದಾಯಕ್ಕೆ ಸರ್ಕಾರ ಗುರಿ ಇಟ್ಟುಕೊಂಡಿದೆ. ಆದರೂ ಶೇ.20ರಷ್ಟು ಆದಾಯ ಕಡಿಮೆಯಾಗಿದೆ. ಮದ್ಯಸೇವನೆಯಿಂದ ಜಾಂಡಿಸ್, ಯಕೃತ್ಗೆ ತೊಂದರೆಯಾಗಿ ಚಿಕಿತ್ಸೆಗೆ ಹೆಚ್ಚು ಖರ್ಚಾಗುತ್ತಿದೆ. ಹೀಗಾಗಿ ಅಬಕಾರಿ ಇಲಾಖೆಗೆ ಬರುವ ಆದಾಯದಲ್ಲಿ ಶೇ.20ರಷ್ಟು ಮದ್ಯಪ್ರಿಯರ ಅನಾರೋಗ್ಯ ಚಿಕಿತ್ಸೆಗೆ ಹಣ ಮೀಸಲಿಡಿ ಎಂದು ಒತ್ತಾಯಿಸಿದರು. ಜಾಂಡಿಸ್ನಿಂದ ಮದ್ಯಪ್ರಿಯರು ಬೇಗ ಸಾಯುತ್ತಿದ್ದಾರೆ. ರೋಗದ ಚಿಕಿತ್ಸೆಗೆ ಸರ್ಕಾರ…
Subscribe to Updates
Get the latest creative news from FooBar about art, design and business.