Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಧಾರವಾಡ: ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದರು. ದೇಶದ ಜನಸಂಖ್ಯೆ ಹೆಚ್ಚಾಗಿದೆ ‘ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿದೆ. ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು. ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು. ‘ನಾವೆಲ್ಲರೂ ಮನುಷ್ಯರು, ಮನುಷ್ಯರಾಗಿ ಬದುಕಬೇಕು. ಈ ಹಿನ್ನೆಲೆಯಲ್ಲಿ ಅಂತರ ಜಾತಿಯ ವಿವಾಹಗಳು ಹೆಚ್ಚೆಚ್ಚು ಆಗಬೇಕು. ಆದರೆ, ದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಸಾಮೂಹಿಕ ಮದುವೆಯಲ್ಲಿ ಭಾಗಿಯಾದವರೆಲ್ಲರಿಗೂ ಒಂದು ಅಥವಾ ಎರಡು ಮಕ್ಕಳನ್ನ ಮಾತ್ರ ಮಾಡಿಕೊಳ್ಳಬೇಕು ಎಂದರು.

Read More

Updated By: Priyalachhi ಬೆಂಗಳೂರು: “ಐದು ಜನ ಸೇರಿ ಎರಡು ಸಲ ಊಟಕ್ಕೆ ಸೇರಿ ರಾಜಕೀಯ ಮಾತನಾಡಿದ್ದೆವು. ಇದರಲ್ಲಿ ತಪ್ಪೇನಿದೆ” ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಪ್ರಶ್ನಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವರುಗಳು ಪರಸ್ಪರ ಭೇಟಿಯಾಗುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ಕ್ಷೇತ್ರಕ್ಕೆ ಮತ್ತು ಜಿಲ್ಲೆಗೆ ಕೆಲಸಗಳಾಗಬೇಕು. ಸತೀಶ್ ಜಾರಕಿಹೊಳಿ ಅವರು ಲೋಕೋಪಯೋಗಿ ಸಚಿವರಿದ್ದಾರೆ. ಬಹಳ ಮುಖ್ಯವಾದ ಖಾತೆ. ಹೀಗಾಗಿ ಭೇಟಿ ಮಾಡಲು ಹೋಗಿರುತ್ತೇವೆ. ಕೆಲವು ಸಂದರ್ಭಗಳಲ್ಲಿ ರಾಜಕೀಯ ಮಾತನಾಡಲು ಹೋಗಿರುತ್ತೇವೆ. ಇದರಲ್ಲಿ ಮುಚ್ಚುಮರೆ ಏನಿದೆ” ಎಂದ ಅವರು, “ಐದು ಜನ ಸೇರಿ ಎರಡು ಸಲ ಊಟಕ್ಕೆ ಸೇರಿ ರಾಜಕೀಯ ಮಾತನಾಡಿದ್ದೆವು. ಇದರಲ್ಲಿ ತಪ್ಪೇನಿದೆ. ನಾವೆಲ್ಲ ರಾಜಕಾರಣಿಗಳಲ್ಲವೇ?. ನಾವು ಮಾಡುತ್ತಿರುವುದೇ ರಾಜಕಾರಣ. ಪಕ್ಷದ ಸಿದ್ಧಾಂತಗಳೇನು, ಸರ್ಕಾರದಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆಯೇ, ಇಲ್ಲವೇ ಎಂಬುದು ಸೇರಿದಂತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿರುತ್ತೇವೆ. ಅದರಲ್ಲಿ ನಿಮಗೆ ಆಶ್ಚರ್ಯ ತರುವಂತದ್ದು ಏನು ಇಲ್ಲ” ಎಂದು ಪ್ರತಿಕ್ರಿಯಿಸಿದರು. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ…

Read More

Updated By: Priyalachhi ಉಡುಪಿ: ಪರ್ಯಾಯ ಪುತ್ತಿಗೆ ಮಠ ಹಾಗೂ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಗೀತೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವು ಡಿಸೆಂಬರ್​ 7ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದರು. ಗೀತಾ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ವಿಶ್ವಗೀತಾ ಪರ್ಯಾಯ ಮಹೋತ್ಸವದ ಅಂಗವಾಗಿ ಡಿ.13ರಂದು ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಅಮೆರಿಕದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವಿಲಿಯಂ ಎಫ್. ವಿಂಡ್ಲೆ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕ ಸದ್ಗುರು ಶ್ರೀಮಧುಸೂದನ ಸಾಯಿ ಹಾಗೂ ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಚಿಂತಕರಾದ ರೋಹಿತ್ ಚಕ್ರತೀರ್ಥ ಹಾಗೂ ಡಾ.ಸುಧೀರ್ ರಾಜ್ ಕೆ. ಅವರು ವಿಚಾರ ಮಂಡಿಸುವರು. ಪರ್ಯಾಯ…

Read More

Updated By: Priyalachhi ಬೆಂಗಳೂರು: “ಡಿಕೆ ಶಿವಕುಮಾರ್​ ಅವರು ಇಡಿ ನೋಟಿಸ್​ ಕೊಟ್ಟಿರುವುದಕ್ಕೆ ಕಿರುಕುಳ ಅಂದಿರುವುದು ಮೂರ್ಖತನದ ಪರಮಾವಧಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆಶಿಗೆ ನೋಟಿಸ್​ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ಪುರಾವೆ ಇಲ್ಲದೆ ರಾಜಕೀಯ ಪಕ್ಷ, ಮುಖಂಡರ ಮೇಲೆ ತನಿಖೆ‌ ಮಾಡಲು ಆಗಲ್ಲ. ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಪಬ್ಲಿಕ್ ಟ್ರಸ್ಟ್​ನ್ನು, ಪ್ರೈವೆಟ್ ಟ್ರಸ್ಟ್ ಮಾಡಿಕೊಂಡು ಆಸ್ತಿ ಲಪಟಾಯಿಸಿದ್ದಾರೆ‌. ಆ ವಿಚಾರವಾಗಿ ತನಿಖೆಗೆ ಬರಲು ಹೇಳಿದ್ದಾರೆ. ಡಿಕೆಶಿ ಅವರು ಇಡಿ ನೋಟಿಸ್​ ಕೊಟ್ಟಿರುವುದಕ್ಕೆ ಕಿರುಕುಳ ಅಂದಿರುವುದು ಮೂರ್ಖತನದ ಪರಮಾವಧಿ ಎಂದು ವಾಗ್ದಾಳಿ ನಡೆಸಿದರು. ಸುವರ್ಣಸೌಧಕ್ಕೆ 20 ಸಾವಿರ ರೈತರ ಜೊತೆ ಮುತ್ತಿಗೆ: “ಬೆಳಗಾವಿಯಲ್ಲಿ ಡಿಸೆಂಬರ್​ 9ರಂದು ಸುಮಾರು 15 ರಿಂದ 20 ಸಾವಿರ ರೈತರ ಜೊತೆಗೆ ಸುವರ್ಣ ಸೌಧ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ದೇವೆ. ಕ್ರಸ್ಟ್‌ ಗೇಟ್ ನಿರ್ಮಾಣ ವಿಳಂಬದಿಂದ ರೈತರಿಗೆ ಸಮಸ್ಯೆ ಆಗಿದೆ. ಎರಡನೇ ಬೆಳೆ ಬೆಳೆಯದಂತಾಗಿದೆ.…

Read More

Updated By: Priyalachhi ನವದೆಹಲಿ: ಇಂಡಿಗೋ ವಿಮಾನಗಳ ಹಾರಾಟದಲ್ಲಿ ಉಂಟಾಗಿದ್ದ ವ್ಯತ್ಯಯದಿಂದಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಒಳಗಾಗಿದ್ದರು. ಈ ರದ್ದಾದ ವಿಮಾನಗಳ ಪ್ರಯಾಣಿಕರಿಗೆ ಭಾನುವಾರ ಸಂಜೆಯೊಳಗೆ ಅವರ ಟಿಕೆಟ್ ಹಣವನ್ನು ಮರಳಿಸುವಂತೆ ನಾಗರಿಕ ವಿಮಾನಯಾನ ಸಚಿವರು ಸೂಚನೆ ನೀಡಿದ್ದಾರೆ. ಹಾಗೇ ಪ್ರತ್ಯೇಕಿಸಲಾಗಿರುವ ಅವರ ಬ್ಯಾಗೇಜ್​ಗಳನ್ನು ಇನ್ನೆರಡು ದಿನದೊಳಗೆ ಮರಳಿಸಬೇಕು ಎಂದು ಸೂಚನೆ ನೀಡಲಾಗಿದೆ. ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೋ ಕಳೆದ ಐದು ದಿನಗಳಿಂದ ಸುಮಾರು 1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು ಮಾಡಿದ್ದು, ಶನಿವಾರ ಕೂಡ ಈ ಅವ್ಯವಸ್ಥೆ ಮುಂದುವರೆದಿದೆ. ಸಮಸ್ಯೆಗೆ ಒಳಗಾಗಿರುವ ಈ ಪ್ರಯಾಣಿಕರಿಗೆ ಯಾವುದೇ ವಿಳಂಬ ಮಾಡದೇ ತಕ್ಷಣಕ್ಕೆ ಹಣ ಪಾವತಿಸುವ ಕ್ರಮಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಲಾಗಿದೆ. ಈ ಹಣ ಮರುಪಾವತಿ ಪ್ರಕ್ರಿಯೆ ಭಾನುವಾರ ಸಂಜೆ 8ಗಂಟೆಯೊಳಗೆ ಮುಗಿಯಬೇಕು ಎಂದು ಸಚಿವಾಲಯ ತಿಳಿಸಿದೆ. ವಿಮಾನಗಳ ರದ್ಧತಿಯಿಂದ ಪ್ರಯಾಣ ಯೋಜನೆಗಳ ಮೇಲೆ ಪರಿಣಾಮ ಬೀರುವ ಪ್ರಯಾಣಿಕರಿಗೆ ಯಾವುದೇ ಮರುಹೊಂದಿಸುವಿಕೆ ಶುಲ್ಕವನ್ನು ವಿಧಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.…

Read More

Updated By: Priyalachhi ಬೆಂಗಳೂರು: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಹೇಳಿದರು. ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿಯವರು, ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ನನ್ನ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆಂದು ಹೇಳಿದರು. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಮುಖ್ಯಮಂತ್ರಿಯಾಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದರು.

Read More

Updated By: Priyalachhi ಕಲಬುರಗಿ: ಕಾಂಗ್ರೆಸ್ ನಾಯಕರ ಮೇಲೆ ಕೇಳಿಬರುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಿಜೆಪಿಯ ಬೆದರಿಕೆ ತಂತ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ಹಣಕಾಸಿನ ಮೂಲದ ಬಗ್ಗೆ ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆರೋಪಿಸಿದ್ದಾರೆ. ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣದ ವ್ಯವಹಾರವೇ ಇಲ್ಲದ ಮನಿ ಲ್ಯಾಂಡರಿಂಗ್ ಕೇಸ್ ಇದು, ಇದೆಲ್ಲಾ ಬಿಜೆಪಿಯವರ ಹೆದರಿಸುವ ಬೆದರಿಸುವ ತಂತ್ರಗಾರಿಕೆ ಅಷ್ಟೇ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ ವಿಚಾರದ ಬಗ್ಗೆ ಮಾತನಾಡಿದ ಸಚಿವ ಖರ್ಗೆ, ಈ ಪ್ರಕರಣ ‘ವಿಶ್ವದಲ್ಲೇ ವಿಶಿಷ್ಟ ಪ್ರಕರಣ’ ಎಂದು ವ್ಯಂಗ್ಯವಾಡಿದರು. ನ್ಯಾಷನಲ್ ಹೆರಾಲ್ಡ್ ಆಗಿರಬಹುದು, ಯಂಗ್ ಇಂಡಿಯಾ ಆಗಿರಬಹುದು. ಏಳೆಂಟು ವರ್ಷ ಆಯ್ತು ಈ ಪ್ರಕರಣಕ್ಕೆ. ದುಡ್ಡು ಎಲ್ಲಿಂದ ಬಂತು, ಎಷ್ಟು ಬಂತು, ಯಾರಿಂದ ಬಂತು, ಯಾರಿಗೆ ಹೋಯ್ತು ಅಂತ…

Read More

Updated By: Priyalachhi ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದು, ಈ ವೇಳೆ ಸಾಲು ಸಾಲು ಅಕ್ರಮ ಹಾಗೂ ಲೋಪಗಳು ಕಂಡು ಬಂದಿವೆ. ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಪೂರೈಕೆಯಲ್ಲಿ ಪ್ರತಿ ಸರ್ಕಾರಿ ಶಾಲೆಗೆ 20,000 ರಿಂದ 30,000 ರೂ.ಗಳವರೆಗೆ ಗೋಲ್‌ಮಾಲ್ ನಡೆದಿರುವ ಬಗ್ಗೆ ಪ್ರಾಥಮಿಕ ಪುರಾವೆಗಳು ಸಿಕ್ಕಿವೆ. ಬೆಂಗಳೂರು ಉತ್ತರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ(ಡಿಡಿಪಿಐ)ರ ವ್ಯಾಪ್ತಿಯಲ್ಲಿ 1,483 ಸರ್ಕಾರಿ ಶಾಲೆಗಳಿವೆ. ಪ್ರಮುಖವಾಗಿ ಬೆಂಗಳೂರು ನಗರ ಸೇರಿದಂತೆ 11ಕ್ಕೂ ಹೆಚ್ಚು ಜಿಲ್ಲೆಗಳ ಶಾಲೆಗಳಲ್ಲಿ ತಾಂತ್ರಿಕ ಅನುಮೋದನಾ ಸಮಿತಿ(ಟಿಎಪಿ) ಅನುಮೋದನೆ ಮೇರೆಗೆ ಲ್ಯಾಪ್‌ಟಾಪ್‌, ಡೆಸ್ಕ್‌ಟಾಪ್‌ ಸೇರಿದಂತೆ ಹಲವು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಖರೀದಿಸಲಾಗಿದೆ. ಈ ಖರೀದಿ ಪ್ರಕ್ರಿಯೆಯಲ್ಲಿಕೆಟಿಪಿಪಿ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಘಿಸಲಾಗಿದೆ. ಪ್ರತಿ ಯುಪಿಎಸ್‌ ಖರೀದಿಯಲ್ಲಿಕನಿಷ್ಠ 30ರಿಂದ 40 ಸಾವಿರ ರೂ.ಗಳವರೆಗಿನ ಹೆಚ್ಚುವರಿ ಬಿಲ್‌ ಮಾಡಲಾಗಿದೆ. 14 ಡಿಡಿಪಿಐಗಳು ಮತ್ತು ಕನಿಷ್ಠ 10,000 ಸರ್ಕಾರಿ ಶಾಲೆಗಳನ್ನು ಒಳಗೊಂಡ 11 ಜಿಲ್ಲೆಗಳ ಮೇಲೆ…

Read More

Updated By: Priyalachhi ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಾನು ಮಾತು ಕೊಡಲ್ಲ. ಕೊಟ್ಟ ಮೇಲೆ ತಪ್ಪಲ್ಲ. ಮಾಡೇ ಮಾಡ್ತಿವಿ ಎಂದರು. ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುವುದು ಸಮಾನತೆ ತರಲು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ಜನರು ನೀವೇ ಉತ್ತರ ಕೊಡಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಡಿಕೆ ಶಿವಕುಮಾರ್ ಯಾವಾಗಲೂ ಹೇಳುತ್ತಿರುತ್ತಾರೆ, ಟೀಕೆಗಳು ಸಾಯುತ್ತವೆ, ಮಾಡಿರುವ ಕೆಲಸಗಳು ಉಳಿಯುತ್ತವೆ ಎಂದು ಸಿಎಂ…

Read More

Updated By: Priyalachhi ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ ನಾಯಕ ನಟನಾಗಿ ನಟಿಸಿದ ‘ಕಾಂತಾರ: ಚಾಪ್ಟರ್ 1’ ಚಿತ್ರ ಯಶಸ್ಸು ಕಂಡಿದೆ.ಇದರಲ್ಲಿ ಕರಾವಳಿ ಭಾಗದ ಜನರ ದೈವದ ನಂಬಿಕೆ, ಆಚರಣೆಯನ್ನು ಜಗತ್ತಿಗೆ ತೋರಿಸಿದ್ದಾರೆ. ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು. ಈ ವೇಳೆ ಅವರಿಗೆ ದೈವದ ಅಭಯ ಸಿಕ್ಕಿದೆ. ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದ್ದು, ರಿಷಬ್ ಖುಷಿಯಾಗಿದ್ದಾರೆ. ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ ಪಂಜುರ್ಲಿ ಮಮಕಾರ ತೋರಿದೆ. ಮಂಗಳೂರಿನ ಬಾರೆಬೈಲ್ ವಾರಾಯಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ. ಸಿನಿಮಾ ನಿರ್ಮಾಣಕ್ಕೂ ಮೊದಲು ಸಿನಿಮಾ ಯಶಸ್ವಿಗಾಗಿ ಪ್ರಾರ್ಥಿಸಿ ಚಿತ್ರತಂಡದವರು ಹರಕೆ ಹೊತ್ತಿದ್ದರು. ದೈವದ ಆಶೀರ್ವಾದದಿಂದ ಸಿನಿಮಾ ಯಶಸ್ಸು ಕಂಡಿದೆ. ಹೀಗಾಗಿ,…

Read More