Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಮಂಡ್ಯ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ತರಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಿದಷ್ಟು ಇನ್ಯಾವುದೇ ರಾಜ್ಯಗಳಲ್ಲಿ ನೀಡಿಲ್ಲ ಎಂದು ಹೇಳಿದರು. ಪಂಚ ಗ್ಯಾರಂಟಿಗಳ ಮೂಲಕ ಪ್ರತಿ ತಾಲೂಕಿಗೆ ವಾರ್ಷಿಕ 250 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನ ಘೋಷಿಸಲಾಗುವುದು ಎಂದು ತಿಳಿಸಿದರು. ಕೃಷಿ ಇಲಾಖೆ ವತಿಯಿಂದ ಸದರಿ ವರ್ಷದ ಏಪ್ರಿಲ್ನಿಂದ ಇಲ್ಲಿಯವರೆಗೂ ಕೊಪ್ಪ ಹೋಬಳಿಯ 520 ಫಲಾನುಭವಿಗಳಿಗೆ 150 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಟ್ಟು…
Updated By: Priyalachhi ಇಂದಿನ ಪಂಚಾಂಗ : ದಿನಾಂಕ : 04-12-2025 ವಾರ : ಗುರುವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಶುಕ್ಲ ತಿಥಿ : ಚತುರ್ದಶಿ ನಕ್ಷತ್ರ : ಕೃತಿಕಾ ಸೂರ್ಯೋದಯ : ಮುಂಜಾನೆ 06:26 ಗಂಟೆಗೆ ಅಮೃತ ಕಾಲ : ಬೆಳಿಗ್ಗೆ 09:17 ರಿಂದ 10:42ರ ವರೆಗೆ ದುರ್ಮುಹೂರ್ತ : ಬೆಳಿಗ್ಗೆ 10:26 ರಿಂದ 11:14 ಮತ್ತು 15:14 ರಿಂದ 16:2ರ ವರೆಗೆ ರಾಹುಕಾಲ : ಮಧ್ಯಾಹ್ನ 13:33 ರಿಂದ 14:58ರ ವರೆಗೆ ಸೂರ್ಯಾಸ್ತ : ಸಂಜೆ 05:49ಕ್ಕೆ ರಾಶಿ ಭವಿಷ್ಯ : ಮೇಷ : ನೀವು ಅನಗತ್ಯ ಸನ್ನಿವೇಶಗಳಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ನೀವು ಕಠಿಣ ಹೋರಾಟ ನಡೆಸಿದರೂ ಅದು ನಿಮಗೆ ಪೂರಕವಾಗುವುದಿಲ್ಲವಾದ್ದರಿಂದ ಹಾಗೆ ಮಾಡಬೇಡಿ. ವಿಶ್ರಾಂತಿಗೆ ಕೊಂಚ ಸಮಯ ತೆಗೆದುಕೊಳ್ಳಿ. ಏಕೆಂದರೆ, ನೀವು ಏನೇ ಮಾಡಿದರೂ ವಿಷಯಗಳು ನಿಮ್ಮತ್ತ ಸಾಗಿ ಬರುವುದಿಲ್ಲ. ವೃಷಭ : ಇಂದು ಅತಿಯಾದ ಆಲೋಚನೆ ಮತ್ತು ಅತಿಯಾದ ಒತ್ತಡ ತಂದುಕೊಳ್ಳಬೇಡಿ. ನಿಮ್ಮ ಸ್ವಾಮ್ಯತೆಯ ಸ್ವಭಾವ ಮತ್ತು ಕೋಪ ಅನಗತ್ಯ ಜಗಳಗಳಿಗೆ ಕಾರಣವಾಗಬಹುದು. ನೀವು…
Updated By: Priyalachhi ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕುಸ್ತಿ ಕದನ ನಡೆಯುತ್ತಿರುವ ನಡುವಲ್ಲೇ ರಾಜ್ಯ ಬಿಜೆಪಿಯಲ್ಲೂ ರೆಬೆಲ್ಸ್ ಟೀಮ್ ಮತ್ತೆ ಸಕ್ರಿಯವಾಗಿದೆ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಸಿದ್ದೇಶ್ವರ ಮತ್ತು ಜೆಡಿಎಸ್ನ ಎನ್.ಆರ್. ಸಂತೋಷ್ ಸೇರಿದಂತೆ ಹಲವು ರೆಬೆಲ್ ನಾಯಕರು ದೆಹಲಿಗೆ ತೆರಳಿದ್ದಾರೆ. ಮಂಗಳವಾರ ದೆಹಲಿ ತಲುಪಿರುವ ಬಂಡಾಯ ನಾಯಕರ ಗುಂಪು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜ್ಯ ಬಿಜೆಪಿಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ರೆಬೆಲ್ಸ್ ತಂಡವು ರಾಜ್ಯ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನವನ್ನು ಹೈಕಮಾಂಡ್ ಮುಂದೆ ಮಂಡಿಸಲು ಮತ್ತೆ ಆಕ್ಟಿವ್ ಆಗಿದ್ದಾರೆ. ಈ ನಡುವೆ ಬಂಡಾಯ ನಾಯಕರ ದೆಹಲಿ ಭೇಟಿಗೆ ಬಿಜೆಪಿ ಹಿರಿಯ ನಾಯಕರು ಆಶ್ಚರ್ಯ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಬಂಡಾಯಕ್ಕೆ ಕಾರಣ ಕುರಿತು ಪ್ರಶ್ನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
Updated By: Priyalachhi ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಹೋರಾಟದ ನಡುವೆ ಬುಧವಾರ ದೆಹಲಿಗೆ ತೆರಳಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡುವ ಊಹಾಪೋಹಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಡಿಸೆಂಬರ್ 14 ರಂದು ನಡೆಯಲಿರುವ ‘ವೋಟ್ ಚೋರಿ’ ರ್ಯಾಲಿಯ ಸಿದ್ಧತೆಗಳ ಮೇಲ್ವಿಚಾರಣೆ ಮಾಡಲು ಮತ್ತು ಮದುವೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ಮೊದಲನೆಯದಾಗಿ ನನ್ನ ಸ್ನೇಹಿತನ ಮಗನ ಮದುವೆಯಲ್ಲಿ ಭಾಗವಹಿಸಲು ನಾನು ಬಂದಿದ್ದೇನೆ. ಎರಡನೆಯದಾಗಿ, ಡಿಸೆಂಬರ್ 14 ರಂದು ವೋಟ್ ಚೋರಿ ರ್ಯಾಲಿಗೆ ವ್ಯವಸ್ಥೆ ಮಾಡಲು ಬಯಸಿದ್ದೇನೆ. ಕರ್ನಾಟಕದಿಂದ 10,000 ಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆಯಿದೆ. ಅವರಿಗೆ ವಾಸ್ತವ್ಯ ಮತ್ತು ಸಾರಿಗೆ ಸೇರಿದಂತೆ ಇತರ ವ್ಯವಸ್ಥೆಗಳ ಬಗ್ಗೆ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ ಚರ್ಚಿಸಲು ನಾನು ಬಂದಿದ್ದೇನೆ” ಎಂದರು.
Updated By: Priyalachhi ಬೆಂಗಳೂರು: ರಾಜ್ಯದಲ್ಲಿ 2020 ರಿಂದ 2025 ರವರೆಗಿನ ಐದು ವರ್ಷದ ಅವಧಿಯಲ್ಲಿ ಕಾಣೆಯಾದವರ ಕುರಿತು ದಾಖಲಾಗಿರುವ ದೂರುಗಳ ಸಂಖ್ಯೆ ಮತ್ತು ಅಂತಹ ದೂರುಗಳ ಮೇಲೆ ಎಷ್ಟು ಕ್ರಮ ಕೈಗೊಳ್ಳಲಾಗಿದೆ ಮತ್ತು ಎಷ್ಟು ಪ್ರಕರಣಗಳಲ್ಲಿ ನಾಪತ್ತೆಯಾದವರನ್ನು ಪತ್ತೆ ಹಚ್ಚಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ಅಂಕಿ – ಅಂಶಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತಮ್ಮ ಸಹೋದರ ಕುಮಾರ್ ಅವರು ಕಾಣೆಯಾದ ಪ್ರಕರಣ ಸಂಬಂಧ ದಾಖಲಾಗಿರುವ ದೂರಿನ ಕುರಿತ ವಿವರವಾದ ತನಿಖೆ ನಡೆಸಿ ಪತ್ತೆ ಹಚ್ಚಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಮಹೇಶ್ ಎಂಬವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. 2020 ರಿಂದ 2025ರವರೆಗಿನ ಕಳೆದ ಐದು ವರ್ಷಗಳಲ್ಲಿ ಕಾಣೆಯಾದ ಆರೋಪದ ದೂರುಗಳ ಸಂಖ್ಯೆ, ಪುರುಷರು, ಮಹಿಳೆಯರು, ಮಕ್ಕಳಂತೆ (ಪುರಷ ಮತ್ತು ಮಹಿಳೆ), ವಯಸ್ಸು ಸೇರಿದಂತೆ ವರ್ಗವಾರು ಅಂಕಿ – ಅಂಶಗಳನ್ನು…
Updated By: Priyalachhi ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಮನೆಯಲ್ಲಿ ಮದುವೆ ಸಂಭ್ರಮ ಶುರುವಾಗಿದ್ದು, ಮದುವೆಯ ಅರಿಶಿನ ಶಾಸ್ತ್ರದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುದೀಪ್ ಅವರ ಅಕ್ಕನ ಮಗನ ಮದುವೆ ಶ್ರೀಲಂಕಾದಲ್ಲಿ ನಡೆದಿದ್ದು. ಆಪ್ತರು ಹಾಗೂ ಕುಟುಂಬಸ್ಥರ ಮಧ್ಯೆ ಅದ್ಧೂರಿಯಾಗಿ ನಡೆದಿದೆ. ಸುದೀಪ್ ಅಕ್ಕನ ಮಗನ (ಸೋದರಳಿಯ) ಮದುವೆ ಶಾಸ್ತ್ರದಲ್ಲಿ ಸುದೀಪ್ ಕುಟುಂಬ ಭಾಗಿಯಾಗಿದೆ. ಅರಿಶಿನ ಶಾಸ್ತ್ರದಲ್ಲಿ ನವಜೋಡಿ ಜೊತೆ ತಮ್ಮ ಪ್ರೀತಿಯ ಮಗಳಿಗೂ ಸುದೀಪ್ ಮತ್ತು ಪ್ರಿಯಾ ಸುದೀಪ್ ಅರಿಶಿಣ ಹಚ್ಚಿದ್ದಾರೆ. ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಾನ್ವಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳು ವೈರಲ್ ಆಗಿದೆ.
Updated By: Priyalachhi ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಶುರು ಮಾಡಲು ಕೋರ್ಟ್ ನಿರ್ಧರಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲ ಬಾಲನ್ ಗೆ ಕೋರ್ಟ್ನಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿ 7 ಆರೋಪಿಗಳು ಹಾಜರಾಗಿದ್ದರು. ಸಾಕ್ಷಿಗಳ ಪಟ್ಟಿಯನ್ನು ಸಹಾಯಕ ಎಸ್ಪಿಪಿ ಸಚಿನ್ ಅವರು ಕೋರ್ಟ್ಗೆ ಸಲ್ಲಿಸಿದರು. ಪ್ರತ್ಯಕ್ಷ ಸಾಕ್ಷಿಗಳು, FSL ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳ ಪ್ರತ್ಯೇಕ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಡಿಸೆಂಬರ್ 17ರಂದು ವಿಚಾರಣೆ ಶುರು ಆಗಲಿದ್ದು ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ನೀಡಲಾಗಿದೆ. ಈ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ಎಲ್ಲ ಸಾಕ್ಷಿಗಳ ವಿಚಾರಣೆ ಬಳಿಕ ಕೋರ್ಟ್ ಅಂತಿಮ ತೀರ್ಪು ನೀಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.
Updated By: Priyalachhi ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಮತ್ತೊಂದು ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ. ಅಪರಾಧದ ಗಂಭೀರತೆ ಮತ್ತು ಬಾಕಿ ಇರುವ ಇತರ ಪ್ರಕರಣಗಳ ಮೇಲಿನ ಸಂಭಾವ್ಯ ಪರಿಣಾಮದಿಂದಾಗಿ ಈ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಿದ ಪೀಠ, ಪ್ರಸ್ತುತ ಪ್ರಕರಣದಲ್ಲಿ ದೂರುದಾರರು, ಆರೋಪಿಯ “ಉತ್ತಮ ರಾಜಕೀಯ ಮತ್ತು ಆರ್ಥಿಕ ಹಿನ್ನೆಲೆ” ಯಿಂದಾಗಿ ಪೊಲೀಸರನ್ನು ಸಂಪರ್ಕಿಸಲು ವಿಳಂಬ ಮಾಡಿದ್ದಾರೆ ಎಂದು ಹೇಳಿದೆ. ಪ್ರಜ್ವಲ್…
Updated By: Priyalachhi ಬೆಂಗಳೂರು: ಕರ್ನಾಟಕದ ರಾಜಭವನವನ್ನು ಇನ್ನು ಮುಂದೆ ‘ಲೋಕಭವನ, ಕರ್ನಾಟಕ’ ಎಂದು ಕರೆಯಲಾಗುವುದು ಎಂದು ರಾಜ್ಯಪಾಲರ ಸಚಿವಾಲಯ ಬುಧವಾರ ತಿಳಿಸಿದೆ. ಕರ್ನಾಟಕ ರಾಜ್ಯಪಾಲರ ನಿವಾಸ ರಾಜ ಭವನದ ಹೆಸರು ಬದಲಾವಣೆ; ತಕ್ಷಣದಿಂದ ಜಾರಿಗೆ ಅಧಿಸೂಚನೆ; ಹೊಸ ಹೆಸರು ಏನು? ಬೆಂಗಳೂರಿನ ರಾಜ ಭವನಕ್ಕೆ ‘ಲೋಕ ಭವನ, ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಗಿದೆ. ಭಾರತ ಸರ್ಕಾರದ ಗೃಹ ಸಚಿವಾಲಯದ ಸೂಚನೆ ಹಾಗೂ ರಾಜ್ಯಪಾಲರ ಅನುಮೋದನೆಯಂತೆ ಈ ಮಹತ್ವದ ಬದಲಾವಣೆ ಜಾರಿಗೆ ಬಂದಿದೆ. ಈ ಹೊಸ ಹೆಸರು ತಕ್ಷಣದಿಂದಲೇ ಅನ್ವಯವಾಗಲಿದ್ದು, ಅಧಿಕೃತವಾಗಿ ‘ಲೋಕ ಭವನ, ಕರ್ನಾಟಕ’ ಎಂದೇ ಗುರುತಿಸಲಾಗುತ್ತದೆ. ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಅನುಮೋದನೆಯ ನಂತರ ಈ ಬದಲಾವಣೆ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ರಾಜ್ಯಪಾಲರ ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ. “ಭಾರತ ಸರ್ಕಾರದ ಗೃಹ ಸಚಿವಾಲಯದ ಸಂವಹನದ ಅನುಸಾರವಾಗಿ … ದಿನಾಂಕ 25-11-2025 ಮತ್ತು ಕರ್ನಾಟಕ ರಾಜ್ಯಪಾಲರ ಅನುಮೋದನೆಯ ಪ್ರಕಾರ, ‘ರಾಜಭವನ, ಕರ್ನಾಟಕ’ದ ಹೆಸರನ್ನು ಮಾರ್ಪಡಿಸಿ…
Updated By: Priyalachhi ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿಯವರ ಭರವಸೆ ಬಳಿಕ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರು ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್ ವರಲಕ್ಷ್ಮಿ ಅವರು ಮಾತನಾಡಿ, ಮುಷ್ಕರವನ್ನು ಕೈಬಿಟ್ಟು ದೆಹಲಿ ಬಂದು ಮಾತುಕತೆ ನಡೆಸುವಂತೆ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಇನ್ನೂ ಯಾವುದೇ ಭರವಸೆಗಳನ್ನು ನೀಡಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಲು ಗಡುವು ನೀಡಲು ನಾವು ದೆಹಲಿಗೆ ಹೋಗುತ್ತೇವೆಂದು ಹೇಳಿದ್ದಾರೆ. ಅಂಗನವಾಡಿ ಘಟಕ ವೆಚ್ಚ ಹೆಚ್ಚಳ ಮಾಡಿ, ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು. ಆದರೆ, 2018ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ 2,700 ರೂ. ಸಹಾಯಕಿಯರಿಗೆ 1,350 ರೂ. ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ಕನಿಷ್ಠವೇತನವನ್ನೂ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೌತಿಕ ಗುರುತು ವ್ಯವಸ್ಥೆ (ಎಫ್ಆರ್ಎಸ್) ರದ್ದು ಮಾಡಬೇಕು. ಇಲ್ಲದಿದ್ದರೆ ಎಫ್ಆರ್ಎಸ್ ಇರುವ…
Subscribe to Updates
Get the latest creative news from FooBar about art, design and business.