Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ನವದೆಹಲಿ: ದೇಶದಾದ್ಯಂತ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇಗುಲಕ್ಕೆ ಆಗಮಿಸುತ್ತಿರುವ ಭಕ್ತರು ಮಹಾಬಲಿ ಹನುಮಂತನ ನಾಮಸ್ಮರಣೆ ಮಾಡುತ್ತಾ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ಹನುಮಂತನ ದೇವಾಲಯ, ಮಧ್ಯಪ್ರದೇಶದ ಮಹಾಕಾಳೇಶ್ವರ ದೇವಾಲಯ, ದೆಹಲಿಯ ಹನುಮಾನ್ ಬಾಬಾ ದೇವಾಲಯ ಹಾಗೂ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಾಲಯಕ್ಕೆ ಆಗಮಿಸುತ್ತಿರುವ ಭಕ್ತರು ಸಾಲುಗಟ್ಟಿ ನಿಂತು ಹನುಮಂತನೆ ದರ್ಶನ ಪಡೆಯುತ್ತಿದ್ದಾರೆ. ಹನುಮ ಜಯಂತಿಯನ್ನು ವರ್ಷಕ್ಕೆ ಎರಡು ಬಾರಿ ಆಚರಿಸಲಾಗುತ್ತದೆ, ಒಂದು ದಿನಾಂಕವನ್ನು ವಿಜಯ ಅಭಿನಂದನೆ ಹಬ್ಬವಾಗಿ ಆಚರಿಸಲಾಗುತ್ತದೆ ಮತ್ತು ಎರಡನೇ ದಿನಾಂಕವನ್ನು ಜನ್ಮದಿನವಾಗಿ ಆಚರಿಸಲಾಗುತ್ತದೆ. ಈ ದಿನದಂದು ಪವಿತ್ರ ಸ್ನಾನ ಮಾಡುವುದು, ದಾನ ಮಾಡುವುದು ಮತ್ತು ಇತರ ಧಾರ್ಮಿಕ ಕಾರ್ಯಗಳನ್ನು ಮಾಡುವುದು ವಿಶೇಷ ಮಹತ್ವವನ್ನು ಹೊಂದಿದೆ. ಹನುಮ ಜಯಂತಿಯನ್ನು ಆಚರಿಸುವುದರ ಹಿಂದೆ ಪೌರಾಣಿಕ ಕಥೆಯಿದೆ. ಮೊದಲ ದಿನಾಂಕದ ಪ್ರಕಾರ, ಬಾಲ ಹನುಮಂತನು ಸೂರ್ಯನನ್ನು ಹಣ್ಣು ಎಂದು ಭಾವಿಸಿ ತಿನ್ನುವ…

Read More

Updated By: Priyalachhi ದಿನಾಂಕ : 03-12-2025 ವಾರ : ಬುಧವಾರ ಸಂವತ್ಸರ : ವಿಶ್ವವಸು ಆಯನ : ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಶುಕ್ಲ ತಿಥಿ : ತ್ರಯೋದಶಿ ನಕ್ಷತ್ರ : ಭರಣಿ ಸೂರ್ಯೋದಯ : ಮುಂಜಾನೆ 06:26 ಗಂಟೆಗೆ ಅಮೃತ ಕಾಲ : ಮಧ್ಯಾಹ್ನ 13:32 ರಿಂದ 14:58ರ ವರೆಗೆ ದುರ್ಮುಹೂರ್ತ : ಮಧ್ಯಾಹ್ನ 12:2 ರಿಂದ 12:50ರವರೆಗೆ ರಾಹುಕಾಲ : ಮಧ್ಯಾಹ್ನ 12:07 ರಿಂದ 13:32ರ ವರೆಗೆ ಸೂರ್ಯಾಸ್ತ : ಸಂಜೆ 05:48ಕ್ಕೆ ರಾಶಿ ಭವಿಷ್ಯ : ಮೇಷ : ನಿಮ್ಮ ನಿಜವಾದ ಮೌಲ್ಯವೇನೆಂದು ನೀವು ಪ್ರದರ್ಶಿಸಲು ಇಂದು ಸೂಕ್ತವಾದ ದಿನದಂತೆ ಕಾಣುತ್ತದೆ. ಕೆಲಸದ ವಿಷಯದಲ್ಲಿ, ಮಹತ್ತರ ಪ್ರಸ್ತಾವನೆಗಳು ಮತ್ತು ಸೃಜನಶೀಲ ಆಲೋಚೆಗಳಿಂದ ನೀವು ಅತ್ಯಂತ ಉತ್ಸುಕರಾಗಿರುತ್ತೀರಿ. ವಿಷಯಗಳು ಸರಾಗವಾಗಿ ಮುನ್ನಡೆಯದ ತಾತ್ಕಾಲಿಕ ಹಂತವಿರಬಹುದು, ಆದರೆ ಅದರಿಂದ ನೀವು ಭರವಸೆ ಕಳೆದುಕೊಳ್ಳಬೇಕೆಂದು ಅರ್ಥವಲ್ಲ. ನಿಮ್ಮ ಜೀವನದಲ್ಲಿ ಪ್ರವೇಶಿಸುವ ಋಣಾತ್ಮಕತೆಯನ್ನು ಹೊರದೂಡುವಲ್ಲಿ ನೀವು ಯಶಸ್ವಿಯಾದರೆ ನಿರಾಶೆ ಶಾಶ್ವತ ಅತಿಥಿಯಲ್ಲ. ವೃಷಭ : ಇಂದು ನಿಮ್ಮ ಹಣೆಬರಹ ಏನು ತರುತ್ತದೋ ಅದಕ್ಕೆ ನೀವು ಶರಣಾಗಬೇಕಾದ ದಿನವಾಗಬಹುದು. ಹಾಗೆ ಮಾಡುವಲ್ಲಿ,…

Read More

Updated By: Priyalachhi ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಆ ಮೂಲಕ ಅಧಿಕಾರಿಗಳಾದ ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ. ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು…

Read More

Updated By: Priyalachhi ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಹಲವಾರು ಶಾಪಿಂಗ್ ಮಾಲ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಅನ್ನು ನಗರ ಪೊಲೀಸ್ ಆಯುಕ್ತರ ಅಧಿಕೃತ ಐಡಿಗೆ ಕಳುಹಿಸಲಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಬಾಂಬ್ ಬೆದರಿಕೆ ಇಮೇಲ್ ಅನ್ನು ಕಳುಹಿಸಿದವರನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನವೆಂಬರ್ 30 ರಂದು ಬೆಳಗ್ಗೆ 11.53ಕ್ಕೆ ಮೋಹಿತ್ ಕುಮಾರ್ ಎಂಬ ವ್ಯಕ್ತಿಯೊಬ್ಬರು ಜಿಮೇಲ್ ಖಾತೆಯ ಮೂಲಕ ಪೊಲೀಸ್ ಆಯುಕ್ತರ ಅಧಿಕೃತ ಇಮೇಲ್ ಐಡಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಪರಿಶೀಲನೆ ನಂತರ ಇಂದು ‘ಹುಸಿ ಬಾಂಬ್ ಬೆದರಿಕೆ’ ಎಂದು ಕಂಡುಬಂದಿದೆ

Read More

Updated By: Priyalachhi ಬೆಂಗಳೂರು: ಈ ಹಿಂದೆ 2016 ಮುಖ್ಯಮಂತ್ರಿಯಾಗಿದ್ದಾಗ ಹ್ಯೂಬ್ಲೋಟ್ ವಾಚಿನಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಮತ್ತೊಮ್ಮೆ ಕಾರ್ಟಿಯರ್ ವಾಚಿನಿಂದ ವಿವಾದಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವೆ ಸಿಎಂ ಪಟ್ಟಕ್ಕಾಗಿ ನಡೆಯುತ್ತಿರುವ ಹಗ್ಗಜಗ್ಗಾಟಕ್ಕೆ ತಾತ್ಕಾಲಿಕ ಬ್ರೇಕ್ ಹಾಕುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಎರಡನೇ ಬಾರಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುವ ಮೂಲಕ ಮತ್ತೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಆದರೆ ಈ ಉಭಯ ನಾಯಕರು ಕಟ್ಟಿರುವ ಒಂದೇ ಕಂಪನಿಯ ಒಂದೇ ತರಹದ ವಾಚ್ ತೀವ್ರ ಚರ್ಚೆಗೆ ಕಾರಣವಾಗಿದೆ. ಒಗ್ಗಟ್ಟು ಪ್ರದರ್ಶಿಸಲು ಇಬ್ಬರು ನಾಯಕರು ಒಂದೇ ತರಹದ ವಾಚ್ ಕಟ್ಟಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಕಾರಣ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ವೇಳೆ ಇಬ್ಬರು ನಾಯಕರು ಕಾರ್ಟಿಯರ್(cartier) ಬ್ರ್ಯಾಂಡ್ ವಾಚ್ ಕಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Read More

Updated By: Priyalachhi ಬೆಂಗಳೂರು: ಒಂದೆಡೆ ಕಾಂಗ್ರೆಸ್ ಪವರ್ ಫೈಟ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಇನ್ನೊಂದೆಡೆ ಸಿಎಂ-ಡಿಸಿಎಂ ನಡುವೆ ಮತ್ತೊಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ. ಇತ್ತೀಚೆಗೆ ಸಿಎಂ ಆಯೋಜಿಸಿದ ಬ್ರೇಕ್‌ಫಾಸ್ಟ್ ಬಳಿಕ ಇಂದು ಡಿಸಿಎಂ ಡಿಕೆಶಿ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿದ್ದಾರೆ. ಬೆಳಗ್ಗೆ 9.30ಕ್ಕೆ ಡಿಕೆಶಿ ಅವರ ಸದಾಶಿವನಗರದ ನಿವಾಸದಲ್ಲಿ ಉಭಯ ನಾಯಕರು ಬ್ರೇಕ್‌ಫಾಸ್ಟ್ ಮಾಡಲಿದ್ದಾರೆ. ಕಳೆದ ಶನಿವಾರ ಸಿಎಂ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್‌ಫಾಸ್ಟ್ ಆಯೋಜಿಸಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದರು. ಹೀಗಾಗಿ ಇಂದು ಸಿಎಂಗೆ ಡಿಸಿಎಂ ಬ್ರೇಕ್‌ಫಾಸ್ಟ್ ಆತಿಥ್ಯ ನೀಡಲಿದ್ದು, ಸಹಜವಾಗಿಯೇ ರಾಜಕೀಯವಾಗಿ ಕುತೂಹಲ ಮೂಡಿಸಿದೆ. ನಾನು ಮತ್ತು ಸಿಎಂ ಸಹೋದರರಂತೆ ಕೆಲಸ ಮಾಡ್ತಿದ್ದೀವಿ-ಡಿಕೆಶಿ: ಬ್ರೇಕ್‌ಫಾಸ್ಟ್ ಸಭೆ ಬಗ್ಗೆ ಸೋಮವಾರ ಮಾತಾಡಿರುವ ಡಿಕೆಶಿ, “ನಮ್ಮ ನಡುವೆ ಯಾವುದೇ ಗೊಂದಲ ಇಲ್ಲ. ಗುಂಪು ಇಲ್ಲ. ನಾನು ಮತ್ತು ಸಿಎಂ ಸಹೋದರರಂತೆ ಕೆಲಸ ಮಾಡ್ತಿದ್ದೀವಿ. 140 ಜನ ಶಾಸಕರೂ ನಮ್ಮವರೇ, ಒಟ್ಟಿಗೇ ಹೋಗ್ತೀವಿ. ಬ್ರೇಕ್‌ಫಾಸ್ಟ್ ಎಲ್ಲ…

Read More

Updated By: Priyalachhi ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಲಕ್ಷಾಂತರ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ಮಂಡ್ಯ ಮತ್ತು ಹುಬ್ಬಳ್ಳಿಯಲ್ಲಿ ಕೇಂದ್ಹರ ಸರ್ಕಾರದ ಸಚಿವರ ನಿವಾಸಗಳ ಎದುರು ಪ್ರತಿಭಟಿಸುವುದರೊಂದಿಗೆ ರಾಜ್ಯದ್ಯಂತ ಹೋರಾಟ ಆರಂಭಿಸಿದ್ದಾರೆ. ತುಮಕೂರಿನಲ್ಲೂ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಅಂಗನವಾಡಿ ಘಟಕ ವೆಚ್ಚ ಹೆಚ್ಚಳ ಮಾಡಿ, ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು. ಆದರೆ, 2018ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ 2,700 ರೂ. ಸಹಾಯಕಿಯರಿಗೆ 1,350 ರೂ. ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ಕನಿಷ್ಠವೇತನವನ್ನೂ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೌತಿಕ ಗುರುತು ವ್ಯವಸ್ಥೆ (ಎಫ್‌ಆರ್‌ಎಸ್) ರದ್ದು ಮಾಡಬೇಕು. ಇಲ್ಲದಿದ್ದರೆ ಎಫ್‌ಆರ್‌ಎಸ್ ಇರುವ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ವ್ಯವಸ್ಥೆ ಅಳವಡಿಸಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಗೆ ಬಳಸಬಾರದು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು…

Read More

Updated By: Priyalachhi ಬೆಂಗಳೂರು: 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಳನ್ನು 48 ಮಂದಿ ಕ್ರೀಡಾಪಡುಗಳಿಗೆ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರೀಡಾಪಡುಗಳನ್ನು ಸೋಮವಾರ ಸನ್ಮಾನಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದ್ದು, ಈ ವೇಳೆ ಇನ್ನು ಮುಂದೆ ಆಯಾ ವರ್ಷವೇ ಏಕಲವ್ಯ ಪ್ರಶಸ್ತಿಗಳನ್ನು ನೀಡುವುದಾಗಿ ಘೋಷಣೆ ಮಾಡಿದರು. ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು,4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು. ಉತ್ತಮ ಕ್ರೀಡಾಪಟುಗಳನ್ನು…

Read More

Updated By: Priyalachhi ಬೆಂಗಳೂರು: ರಾಜ್ಯದ ಪವರ್ ಫೈಟ್ ಸಂಬಂಧ ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆಯುವ ಹೈ ಕಮಾಂಡ್ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ಸಭೆಯಲ್ಲಿ ರಾಜ್ಯ ರಾಜಕೀಯ ಚರ್ಚೆ ಬಗ್ಗೆ ನಿರೀಕ್ಷಿತ ಚರ್ಚೆ ಆಗಿಲ್ಲ. ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಮೂಲಕ ಹೈ ಕಮಾಂಡ್ ರಾಜ್ಯ ಪವರ್ ಫೈಟ್​​ಗೆ ತಾತ್ಕಾಲಿಕ ವಿರಾಮ ನೀಡಿದ್ದು, ರಾಜ್ಯ ರಾಜಕಾರಣದ ಬಗ್ಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸೋನಿಯಾ ಗಾಂಧಿ ಅವರ ದೆಹಲಿ ನಿವಾಸದಲ್ಲಿ ಭಾನುವಾರ ಸಂಜೆ ಮಹತ್ವದ ಸಭೆ ನಡೆಯಿತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಪಾಲ್ಗೊಂಡಿದ್ದ ಈ ಸಭೆಯಲ್ಲಿ ಪ್ರಮುಖವಾಗಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಲೋಕಸಭೆ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಕಟ್ಟಿ ಹಾಕುವ ಬಗ್ಗೆ ಕಾರ್ಯತಂತ್ರ ರೂಪಿಸುವ ಕುರಿತ…

Read More

Updated By: Priyalachhi ಶಿವಮೊಗ್ಗ: ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭಾನುವಾರ ನಡೆದ ಭಗವದ್ಗೀತಾ ಅಭಿಯಾನ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭಗವದ್ಗೀತೆಯನ್ನು ಪಠ್ಯಪುಸ್ತಕಗಳಲ್ಲಿ ಸೇರಿಸುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.ತದ ನಂತರ ಮಾತನಾಡಿದ ಕುಮಾರಸ್ವಾಮಿ, ಮುಂದಿನ ದಿನಗಳಲ್ಲಿ ಕ್ರಮಗಳನ್ನು ಪ್ರಾರಂಭಿಸುವುದಾಗಿ ಭರವಸೆ ನೀಡಿದರು. ಶಾಲಾ ಮಕ್ಕಳಿಗೆ ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡಲು ರಾಮಾಯಣ ಮತ್ತು ಮಹಾಭಾರತವನ್ನು ಕಲಿಸಬೇಕು. “ಸಮಾಜದಲ್ಲಿ ಹಿಂಸೆ, ಕಾನೂನುಬಾಹಿರ ಕೃತ್ಯಗಳು ಮತ್ತು ಅಶಾಂತಿ ದೈನಂದಿನ ವ್ಯವಹಾರವಾಗಿ ಮಾರ್ಪಟ್ಟಿರುವುದರಿಂದ ಮಕ್ಕಳಿಗೆ ಭಗವದ್ಗೀತೆ ಕಲಿಸುವುದು ಇಂದಿನ ಅಗತ್ಯವಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡಲು ಭಗವದ್ಗೀತೆ ಈ ಪೀಳಿಗೆಗೆ ಮಾರ್ಗದರ್ಶನದ ಬೆಳಕಾಗಿದೆ. ಪ್ರತಿಯೊಬ್ಬರೂ ಭಗವದ್ಗೀತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

Read More