Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಟ ಮತ್ತು ದೈಹಿಕ ಶಿಕ್ಷಣ ತರಗತಿಗಳಿಗೆ ವಿಷಯ ಶಿಕ್ಷಕರು ಅಡ್ಡಿಪಡಿಸದಂತೆ ನೋಡಿಕೊಳ್ಳಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಎಲ್ಲ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಟ ಮತ್ತು ದೈಹಿಕ ಶಿಕ್ಷಣದ ಕೊರತೆಯ ಬಗ್ಗೆ ಕೆಎಸ್ಸಿಪಿಸಿಆರ್ ಸದಸ್ಯರು ಪತ್ರ ಬರೆದ ನಂತರ ಶಿಕ್ಷಣ ಇಲಾಖೆಯಿಂದ ಈ ಸೂಚನೆಯನ್ನು ನೀಡಲಾಗಿದೆ. ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ ಟಿ ತಿಪ್ಪೇಸ್ವಾಮಿ, “ಕಳೆದ ತಿಂಗಳು, ನಾನು ವಿವಿಧ ಶಾಲೆಗಳಿಗೆ ಭೇಟಿ ನೀಡಿ 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದೇನೆ. ಕ್ರೀಡಾ ಅವಧಿಯಲ್ಲಿ ಆಟವಾಡಲು ಅಥವಾ ದೈಹಿಕ ತರಗತಿಗಳನ್ನು ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಯೋಗಕ್ಕೆ ತಿಳಿಸಿದ್ದಾರೆ. ಈ ದೈಹಿಕ ಶಿಕ್ಷಣ ತರಗತಿಗಳನ್ನು ಹೆಚ್ಚುವರಿ ತರಗತಿಗಳನ್ನು ನಡೆಸಲು ಮತ್ತು ಅವರ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಇತರ ವಿಷಯದ ಶಿಕ್ಷಕರು ಬಳಸಿಕೊಳ್ಳುತ್ತಿರೆ” ಎಂದು ಹೇಳಿದ್ದಾರೆ.
Updated By: Priyalachhi ಬೆಂಗಳೂರು: ಜಲ ಜೀವನ್ ಮಿಷನ್(ಜೆಜೆಎಂ) ಅಡಿಯಲ್ಲಿ ಬಾಕಿ ಇರುವ ಕೇಂದ್ರದ ಪಾಲಿನ ಹಣ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಕರ್ನಾಟಕವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರು ಪೂರೈಸಲಾಗುತ್ತಿದೆ. 2023-24, 2024-25 ಮತ್ತು 2025-26ರ ಆರ್ಥಿಕ ವರ್ಷಗಳಲ್ಲಿ ಗಮನಾರ್ಹ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ತಿಳಿಸಿದರು. ಇಲ್ಲಿಯವರೆಗೆ, ಶೇಕಡಾ 86 ಕ್ಕಿಂತ ಹೆಚ್ಚು ಗ್ರಾಮೀಣ ಮನೆಗಳಿಗೆ ನೀರಿನ ಸಂಪರ್ಕಗಳನ್ನು ಒದಗಿಸಲಾಗಿದೆ ಮತ್ತು ಇತರ ಬಹು-ಗ್ರಾಮ ಮತ್ತು ಏಕ-ಗ್ರಾಮ ಯೋಜನೆಗಳು ಪ್ರಗತಿಯ ವಿವಿಧ ಹಂತಗಳಲ್ಲಿವೆ ಎಂದು ಖರ್ಗೆ, ಕೇಂದ್ರ ಸಚಿವರಿಗೆ ವಿವರಿಸಿದ್ದಾರೆ.
Updated By: Priyalachhi ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಕುರ್ಚಿಗಾಗಿ ಗುದ್ದಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮೊದಲ ಬಾರಿಗೆ ಡಿಸಿಎಂ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹೌದು.. ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಬ್ರೇಕ್ಫಾಸ್ಟ್ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಇನ್ನು ರಾಜಕಾರಣ ಇಲ್ಲ. ಏನಿದ್ರೂ ಜನರ ಸೇವೆ, ಆಡಳಿತ ಅಷ್ಟೇ. ಡಿನ್ನರ್ಗೆ ಸಿಎಂ ಕರೆಯುವ ದಿನಾಂಕ ನಿಮಗೆ ಹೇಳುತ್ತೇನೆ ಎಂದಿದ್ದಾರೆ. ನನ್ನ ಆಹ್ವಾನದ ಮೇರೆಗೆ ಮನೆಗೆ ಬಂದು ಉಪಾಹಾರ ಸೇವಿಸಿದ ಡಿಕೆ ಉಪಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಅವರೂ ಕೂಡ ನನ್ನನ್ನು ಮನೆಗೆ ಉಪಾಹಾರಕ್ಕಾಗಿ ಆಮಂತ್ರಣ ನೀಡಿದ್ದಾರೆ. ನಮ್ಮಿಬ್ಬರ ಒಗ್ಗಟ್ಟು ಗಟ್ಟಿಯಾಗಿದ್ದು, ಯಾರೂ ಕೂಡ ಈ ಒಗ್ಗಟ್ಟನ್ನು ಮುರಿಯಲಾರರು” ಎಂದು ಸಿದ್ದರಾಮಯ್ಯ ಹೇಳಿದರು. ಬೆಳಗಿನ ಉಪಾಹಾರ…
Updated By: Priyalachhi ಪಣಜಿ (ಗೋವಾ): 56ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (ಐಎಫ್ಎಫ್ಐ) ಶುಕ್ರವಾರ ಮುಕ್ತಾಯಗೊಂಡಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮೆಗಾಸ್ಟಾರ್ ರಜನಿಕಾಂತ್, ಕನ್ನಡ ನಟ – ನಿರ್ದೇಶಕ ರಿಷಬ್ ಶೆಟ್ಟಿ, ಬಾಲಿವುಡ್ ನಟ ರಣ್ವೀರ್ ಸಿಂಗ್ ಅವರಂತಹ ಚಿತ್ರರಂಗದ ಗಣ್ಯರು ಸಮಾರೋಪ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಐಎಫ್ಎಫ್ಐನ ಸಮಾರೋಪ ಸಮಾರಂಭವು ಪ್ರಸಿದ್ಧ ತಾರಾಬಳಗದಿಂದ ಕೂಡಿತ್ತು. ಈ ಕಾರ್ಯಕ್ರಮದಲ್ಲಿ ಅದ್ಭುತ ನೃತ್ಯ ಮತ್ತು ಸಂಗೀತ ಪ್ರದರ್ಶನಗಳು, ಆಕರ್ಷಕ ಚಲನಚಿತ್ರ ಚರ್ಚೆಗಳು ಮತ್ತು ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದವು. ಕೆಲವೇ ಕ್ಷಣಗಳಲ್ಲಿ, ಸಮಾರಂಭದಿಂದ ಹಲವು ಸ್ಮರಣೀಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವು. ಅಭಿಮಾನಿಗಳಿಂದ ಮೆಚ್ಚುಗೆ ಸ್ವೀಕರಿಸಿದವು. ಭಾರತೀಯ ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿದ ರಜನಿಕಾಂತ್ ಅವರನ್ನು ಸಮಾರೋಪ ಸಮಾರಂಭದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು. ರಜನಿಕಾಂತ್ ಕುಟುಂಬ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸೂಪರ್ಸ್ಟಾರ್ಗೆ ಶಾಲು ಹೊದಿಸಿ ಸನ್ಮಾನಿಸಿದರು. ಅರ್ಧ ಶತಮಾನದಿಂದ ಭಾರತೀಯ ಪ್ರೇಕ್ಷಕರನ್ನು ಆಕರ್ಷಿಸಿರುವ ಐಕಾನಿಕ್ ಸ್ಟಾರ್…
Updated By: Priyalachhi ಬೆಂಗಳೂರು: ನಾನು ಮತ್ತು ಡಿಸಿಎಂ ಹಿಂದೆ ಒಟ್ಟಿಗೆ ಕೆಲಸ ಮಾಡಿದಂತೆ ಮುಂದೆಯೂ ಒಟ್ಟಿಗೆ ಹೋಗಲು ತೀರ್ಮಾನ ಮಾಡಿದ್ದೇವೆ. ನಮ್ಮಿಬ್ಬರ ಮಧ್ಯೆ ಯಾವುದೇ ಗೊಂದಲ್ಲ , ಭಿನ್ನಮತ ಇಲ್ಲ, ಮುಂದೆಯೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹೈಕಮಾಂಡ್ ಅಣತಿಯಂತೆ ಬ್ರೇಕ್ ಫಾಸ್ಟ್ ಮೀಟಿಂಗ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿಎಂ ಮಾತನಾಡಿ, ನಾವಿಬ್ಬರು ಒಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಹೈ ಕಮಾಂಡ್ ಹೇಳಿರುವುದರಿಂದ ನಮ್ಮ ಮನೆಗೆ ಉಪಾಹಾರಕ್ಕೆ ಬರಲು ಡಿಕೆಶಿ ಅವರಿಗೆ ಹೇಳಿದೆ. ಬ್ರೇಕ್ ಫಾಸ್ಟ್ ಸಭೆಯಲ್ಲಿ ಉಭಯ ಕುಶಲೋಪರಿ ಚರ್ಚೆ ಆಗಿದೆ. ಅನಗತ್ಯ ಕೆಲವು ಗೊಂದಲ ನಿರ್ಮಾಣ ಆಗಿದ್ದರಿಂದ ನಾವಿಬ್ಬರೇ ಕುಳಿತು ಮಾತನಾಡಿದ್ದೇವೆ. ಡಿಕೆಶಿ ಅವರು ಕೂಡ ಅವರ ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದಾರೆ ಎಂದರು. 2028ರ ಚುನಾವಣೆ ಬಹಳ ಮುಖ್ಯ, ಸ್ಥಳೀಯ ಸಂಸ್ಥೆಗಳು, ಜಿಬಿಎ ಚುನಾವಣೆ ಮುಖ್ಯವಾಗಿದೆ. ಅದರ ಬಗ್ಗೆ…
Updated By: Priyalachhi ಆಹಾರದಲ್ಲಿ ಬೆಳ್ಳುಳ್ಳಿ (Garlic) ಸೇರಿಸುವುದರಿಂದ ಅದಕ್ಕೆ ವಿಶೇಷ ರುಚಿ ಸಿಗುತ್ತದೆ. ಅಷ್ಟೇ ಅಲ್ಲ, ಇದರ ನಿಯಮಿತ ಸೇವನೆ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿಯಾಗಿದ್ದು ಅನೇಕ ರೀತಿಯ ಆರೋಗ್ಯ ಸಮಸ್ಯೆಗನ್ನು ನಿವಾರಿಸುತ್ತದೆ. ವಿಶೇಷವಾಗಿ, ಹಸಿ ಬೆಳ್ಳುಳ್ಳಿ (Raw Garlic) ಎಸಳುಗಳನ್ನು ತಿನ್ನುವುದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಕೆಲವರಿಗೆ ಯಾವಾಗ, ಎಷ್ಟು ಪ್ರಮಾಣದಲ್ಲಿ ಸೇವನೆ ಮಾಡಬೇಕು ಎಂಬ ಗೊಂದಲವಿರಬಹುದು. ಅಂತವರು ಈ ಸ್ಟೋರಿ ಓದಿ ತಿಳಿದುಕೊಳ್ಳಬಹುದು. ಸಾಮಾನ್ಯವಾಗಿ ನಿಯಮಿತವಾಗಿ ಹಸಿ ಬೆಳ್ಳುಳ್ಳಿ ಎಸಳುಗಳ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಯಾವವು, ಯಾಕೆ ಈ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದು ತಿಳಿದುಕೊಳ್ಳಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿನ್ನುವುದು ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಬಯಸುತ್ತಿದ್ದರೆ ಪ್ರತಿದಿನ ಎರಡು ಎಸಳು ಹಸಿ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದು. ಮಧುಮೇಹ ರೋಗಿಗಳಿಗೆ ಹಸಿ ಬೆಳ್ಳುಳ್ಳಿ ಸೇವನೆ ಒಳ್ಳೆಯದು. ಇದು…
Updated By: Priyalachhi ಚೆನ್ನೈ: ಲಡ್ಡು ಪ್ರಸಾದಂ ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಯನ್ನು ಬಂಧಿಸಿದೆ. ಟಿಟಿಡಿ ಲಡ್ಡು-ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೇತೃತ್ವದ ಎಸ್ಐಟಿ ಟಿಟಿಡಿ ಎಂಜಿನಿಯರಿಂಗ್ ಇಲಾಖೆಯ ಹಿರಿಯ ಅಧಿಕಾರಿ ಆರ್ ಎಸ್ಎಸ್ವಿಆರ್ ಸುಬ್ರಹ್ಮಣ್ಯಂ ಅವರನ್ನು ಬಂಧಿಸಿದೆ. ಸುಬ್ರಹ್ಮಣ್ಯಂ ಅವರು ಈ ಹಿಂದೆ ಟಿಟಿಡಿಯಲ್ಲಿ ಜನರಲ್ ಮ್ಯಾನೇಜರ್ (ಪ್ರೊಕ್ಯೂರ್ಮೆಂಟ್) ಆಗಿ ಸೇವೆ ಸಲ್ಲಿಸಿದ್ದರು ಮತ್ತು ಲಡ್ಡು ತಯಾರಿಸಲು ಬಳಸುವ ತುಪ್ಪ ಸೇರಿದಂತೆ ಪ್ರಮುಖ ವಸ್ತುಗಳನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ಹೊಂದಿದ್ದರು ಎಂದು ಎಸ್ಐಟಿ ಮತ್ತು ಗುಂಟೂರು ರೇಂಜ್ ಐಜಿ ಸದಸ್ಯ ಸರ್ವಶ್ರೇಷ್ಠಿ ತ್ರಿಪಾಠಿ ಹೇಳಿದ್ದಾರೆ. ಎಸ್ಐಟಿ ಆತನನ್ನು ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ೧೫ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ಈತ ೨೯ನೇ ಆರೋಪಿ. ಅವರ ಬಂಧನದೊಂದಿಗೆ ಈವರೆಗೆ ಒಟ್ಟು ಒಂಬತ್ತು ಜನರನ್ನು ಬಂಧಿಸಲಾಗಿದೆ. ಕೆಲವು ಆರೋಪಿಗಳ ಹೇಳಿಕೆಗಳ ಆಧಾರದ ಮೇಲೆ ಎಸ್…
Updated By: Priyalachhi ಹಾವೇರಿ: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಫೈಟ್ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿರೋಧ ಪಕ್ಷ ಬಿಜೆಪಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಪರಿಗಣಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ‘ಕಪ್ಪು ಕುದುರೆ’ ಸಹ ಸ್ಪರ್ಧೆಗೆ ಇಳಿಯಬಹುದು ಎಂದು ಭವಿಷ್ಯ ನುಡಿದಿದ್ದಾರೆ. ನಾಯಕತ್ವದ ವಿಷಯಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಎರಡು ಮೂರು ಸೂತ್ರಗಳನ್ನು ಪ್ರಸ್ತಾಪಿಸಿದೆ ಎಂದು ಹಾವೇರಿ ಬಿಜೆಪಿ ಸಂಸದರು ಹೇಳಿದ್ದಾರೆ. “ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಸಿಎಂ ಹುದ್ದೆಗಾಗಿ ಕಾಂಗ್ರೆಸ್ ಪಕ್ಷದ ಆಂತರಿಕ ಜಗಳ ಹೀಗೆಯೇ ಮುಂದುವರಿದರೆ, ರಾಜ್ಯದಲ್ಲಿ ರಾಜಕೀಯ ಅಲ್ಲೋಲ-ಕಲ್ಲೋಲ ಆಗುವ ಸಾಧ್ಯತೆ ಇದೆ.ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು…
Updated By: Priyalachhi ತುಮಕೂರು: ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕು, ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಇಂದು ವಿವಿಧ ದಲಿತಪರ ಸಂಘಟನೆಗಳು ರಸ್ತೆ ತಡೆ ನಡೆಸಿ ಧರಣಿ ನಡೆಸಿದವು. ಟೌನ್ ವೃತ್ತದಲ್ಲಿ ಜಮಾಯಿಸಿದ ದಲಿತ ಪರ ಸಂಘಟನೆಗಳು ಹಾಗೂ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಅವರ ಭಾವಚಿತ್ರವನ್ನು ಹಿಡಿದು ಮುಖ್ಯಮಂತ್ರಿ ಆಗಲೇಬೇಕು ಎಂದು ಆಗ್ರಹಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕಲ್ಪಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನಾಕಾರರಲ್ಲಿ ಕೆಲವರು ಅರೆಬೆತ್ತಲೆ ಮೆರವಣಿಗೆಯನ್ನೂ ಕೂಡ ನಡೆಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ, ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಾಗಲು ಅನುವು ಮಾಡಿಕೊಡಲಾಗಿತ್ತು. ಇದೇ ರೀತಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಕಾಣಬೇಕೆಂದು ಡಿಕೆಶಿ ಅಭಿಮಾನಿ ಬಳಗದ ವತಿಯಿಂದ…
Updated By: Priyalachhi ಬೆಂಗಳೂರು: ಅಧಿಕಾರ ಹಸ್ತಾಂತರ ವಿಚಾರವಾಗಿ ರಾಜ್ಯದಲ್ಲಿ ಮುಸುಕಿನ ಗುದ್ದಾಟ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ”ಮಾತಿನ ಶಕ್ತಿ ಹಾಗೂ ನಂಬಿಕೆ” ಹೆಸರಿನಲ್ಲಿ ರಾಜಕೀಯ ನಾಯಕರು ಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಮುಖವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪವರ್ ಶೇರಿಂಗ್ ವಿಚಾರಕ್ಕೆ ಇವರಿಬ್ಬರ ಸೂಚ್ಯ ಹೇಳಿಕೆಗಳು ತೆರೆಮೆರೆ ಕದನಕ್ಕೆ ಇನ್ನಷ್ಟು ಕುತೂಹಲ ಮೂಡುವಂತೆ ಮಾಡಿದೆ. ಈಗಾಗಲೇ ಒಕ್ಕಲಿಗ ಸಂಘ ಹಾಗೂ ಈ ಸಮುದಾಯದ ಸ್ವಾಮೀಜಿಗಳಾದ ನಿರ್ಮಲಾನಂದನಾಥ ಸ್ವಾಮಿ ಹಾಗೂ ನಂಜಾವಧೂತ ಸ್ವಾಮಿಗಳು ಡಿ.ಕೆ.ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಬೇಕೆಂದು ಅಭಿಮತ ವ್ಯಕ್ತಪಡಿಸಿದ್ಧಾರೆ. ಅಲ್ಲದೆ, ಕೆಲ ಸಚಿವರು ಹಾಗೂ ಶಾಸಕರ ದೆಹಲಿ ಪರೇಡ್ ಮಾಡಿದ್ದಾರೆ. ಇದಕ್ಕೆ ಪ್ರತಿರೋಧವೆಂಬಂತೆ ಸಿದ್ದರಾಮಯ್ಯ ಬಣದ ಸಚಿವ-ಶಾಸಕರು ಸಹ ಐದು ವರ್ಷ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿರಬೇಕೆಂದು ಸಚಿವರಾದ ಸಂತೋಷ್ ಲಾಡ್, ಜಮೀರ್ ಅಹ್ಮದ್, ಹೆಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಇನ್ನಿತರ ಸಚಿವರು ಹಾಗೂ ಶಾಸಕರು ಒಲವು ವ್ಯಕ್ತಪಡಿಸಿದ್ದಾರೆ. ರಾಜ್ಯ ಕುರುಬ ಸಮುದಾಯವು ಸಿದ್ದರಾಮಯ್ಯ ಅವರನ್ನ ಬೆಂಬಲಿಸಿ ಶಕ್ತಿ…
Subscribe to Updates
Get the latest creative news from FooBar about art, design and business.