Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಫೈಟ್ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಭೇಟಿ ನೀಡಲಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ, ನಾಳೆ ಬಗ್ಗೆ 9.30ಕ್ಕೆ ಕಾವೇರಿ ನಿವಾಸಕ್ಕೆ ಬನ್ನಿ ಎಂದು ಹೇಳಿದ್ದಾರೆ. ಸಿಎಂ ಆಹ್ವಾನ ಒಪ್ಪಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಳಗ್ಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳುತ್ತಿದ್ದು, ಉಭಯ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್ ನವರು ನನಗೆ ಮತ್ತು ಡಿಕೆ ಶಿವಕುಮಾರ್ ಗೆ ಕರೆ ಮಾಡಿದ್ದರು. ಇಬ್ಬರು ಕುಳಿತು ಮಾತಾಡಿ ಎಂದಿದ್ದಾರೆ. ಹೈಕಮಾಂಡ್ ಏನು ಹೇಳುತ್ತೆ ಅದನ್ನು ಕೇಳುತ್ತೇನೆ. ಹೈಕಮಾಂಡ್ ನಾಯಕರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದ್ದಾರೆ.…

Read More

Updated By: Priyalachhi ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಇಂದು ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲು ಆಗುವುದಿಲ್ಲ. ಒಟ್ಟಾರೆ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಈ ಹಿಂದೆ ನಾನೇ ಹೇಳಿದ್ದೇನೆ. ಅದರಲ್ಲಿ ದೈಹಿಕ ಶಿಕ್ಷಕರೂ ಸೇರಿದ್ದಾರೆ. ಆದಷ್ಟು ಬೇಗ ಶಿಕ್ಷಕರನ್ನು ನೇಮಕಾತಿ‌ ಮಾಡಿಕೊಳ್ಳಲಾಗುವುದು. ಶಿವಮೊಗ್ಗದ ದುರ್ಗಿಗುಡಿಯಲ್ಲಿ ಶಿಕ್ಷಕರ ಕೊರತೆ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ನೂರಾರು ವರ್ಷದ ಶಾಲೆ ಇದು. ಶೀಘ್ರವಾಗಿ ಶಿಕ್ಷಕರ ಕೊರತೆ ಪರಿಹರಿಸುವ ಕಾರ್ಯ ಮಾಡುತ್ತೇನೆ ಎಂದರು. ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ: ಸಿಎಂ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್​​ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮಾಧ್ಯಮಗಳಲ್ಲಿ ತೋರಿಸಿದಷ್ಟು ನಮ್ಮ ಪಕ್ಷದಲ್ಲಿ ಏನೂ ಆಗಿಲ್ಲ‌,…

Read More

Updated By: Priyalachhi ಕೆನಕೋನಾ(ಗೋವಾ): ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ದಕ್ಷಿಣ ಗೋವಾಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಕೆನಕೋನಾದಲ್ಲಿನ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಿದ ಪ್ರಧಾನಿ, ಮಠ ಅಭಿವೃದ್ಧಿಪಡಿಸಿರುವ ರಾಮಾಯಣ ಥೀಮ್​ ಪಾರ್ಕ್​ ಉದ್ಘಾಟಿಸಿದರು. ಇದರ ಸ್ಮರಣಾರ್ಥವಾಗಿ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಬಳಿಕ ಮಠದ 550ನೇ ವಾರ್ಷಿಕೋತ್ಸವವಾದ ಸಾರ್ಧ ಪಂಚಶತಮಾನೋತ್ಸವದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ನೆರೆದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯ ಶ್ರೀ ರಾಮಮಂದಿರದ ಮೇಲೆ ಪವಿತ್ರ ಧ್ವಜಾರೋಹಣ ಮಾಡಿದ ಕೆಲವು ದಿನಗಳ ನಂತರ, ವಿಶ್ವದ ಅತಿ ಎತ್ತರದ ಭಗವಾನ್ ರಾಮನ ಪ್ರತಿಮೆಯನ್ನು ಅನಾವರಣಗೊಳಿಸುವ ಅವಕಾಶ ಸಿಕ್ಕಿದ್ದು ನನಗೆ ಭಾರಿ ಸಂತಸ ನೀಡಿದೆ ಎಂದು ತಿಳಿಸಿದರು. ಪರ್ತಗಲಿ ಮಠವು ಭಾರತದ ಅತ್ಯಂತ ಹಳೆಯ ಮಠಗಳಲ್ಲಿ ಒಂದು. ಇದು ಆಧ್ಯಾತ್ಮಿಕ, ಸಾಂಸ್ಕೃತಿಕ…

Read More

Updated By: Priyalachhi ಉಡುಪಿ: ಭಯೋತ್ಪಾದಕ ದಾಳಿಯ ನಂತರ ಹಿಂದಿನ ಸರ್ಕಾರಗಳು ತಕ್ಕ ಪ್ರತಿಕ್ರಿಯೆ ನೀಡಲು ಹಿಂಜರಿಯುತ್ತಿದ್ದವು. ಆದರೆ ನವ ಭಾರತ ತನ್ನ ಜನರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರ ಮುಂದೆಯೂ ತಲೆಬಾಗುವುದಿಲ್ಲ ಅಥವಾ ಹಿಂಜರಿಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಇಂದು ಉಡುಪಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಹಿಂದಿನ ಸರ್ಕಾರಗಳು ಭಯೋತ್ಪಾದಕ ದಾಳಿಯ ನಂತರ ಸುಮ್ಮನೆ ಕುಳಿತುಕೊಳ್ಳುತ್ತಿದ್ದವು. ಆದರೆ ನವ ಭಾರತ ತನ್ನ ಜನರನ್ನು ರಕ್ಷಿಸಲು ಬದ್ಧವಾಗಿದೆ ಮತ್ತು ಯಾರ ಮುಂದೆಯೂ ತಲೆಬಾಗುವುದಿಲ್ಲ ಅಥವಾ ಹಿಂಜರಿಯುವುದಿಲ್ಲ” ಎಂದರು. ಒಂದು ಲಕ್ಷ ಜನ ಶ್ರೀಮದ್ ಭಗವದ್ಗೀತೆಯನ್ನು ಪಠಿಸಿದ “ಲಕ್ಷ ಕಂಠ ಗೀತಾ ಪಾರಾಯಣ”ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಉಡುಪಿಗೆ ಆಗಮಿಸಿದ್ದರು. ಉಡುಪಿಯ ಶ್ರೀ ಕೃಷ್ಣ ಮಠವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. “ನಮಗೆ ಶಾಂತಿ ಸ್ಥಾಪನೆಯೂ ಗೊತ್ತು, ರಕ್ಷಣೆಯೂ ಗೊತ್ತು. ಸತ್ಯಕ್ಕಾಗಿ ಶ್ರಮಿಸಲು ಹಾಗೂ ದೌರ್ಜನ್ಯ ಎಸಗುವವರನ್ನು ಹತ್ತಿಕ್ಕುವ ಅಗತ್ಯವನ್ನು ಗೀತೆ ನಮಗೆ ಕಲಿಸುತ್ತದೆ. ನಾವು ವಸುಧೈವ ಕುಟುಂಬಕಂನಲ್ಲಿ ನಂಬಿಕೆ…

Read More

Updated By: Priyalachhi ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದ ಬಗ್ಗೆ ಜೋರಾದ ಚರ್ಚೆ ನಡೆಯುತ್ತಿರುವಂತೆಯೇ ನನಗೇನೂ ಬೇಡ, ಆತುರಪಡಲು ಬಯಸುವುದಿಲ್ಲ ಮತ್ತು ಪಕ್ಷದ ಹೈಕಮಾಂಡ್ ಸಿಎಂ ಹುದ್ದೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಅಧಿಕಾರಕ್ಕಾಗಿ ಬಣ ಬಡಿದಾಟಗಳ ನಡುವೆ ಒಕ್ಕಲಿಗ ಸಮುದಾಯದ ನಂಜಾವದೂತ ಸ್ವಾಮೀಜಿ ಅವರೊಂದಿಗಿನ ಭೇಟಿಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಕಾಂಗ್ರೆಸ್ ನನ್ನ ಸಮುದಾಯವಾಗಿದ್ದು, ರಾಜ್ಯದ ಎಲ್ಲಾ ಸಮುದಾಯಗಳನ್ನು ಸಮಾನವಾಗಿ ನೋಡುವುದಾಗಿ ಹೇಳಿದರು. ನನಗೆ ಏನೂ ಬೇಡ. ಯಾವುದಕ್ಕೂ ಆತುರಪಡುತ್ತಿಲ್ಲ. ನನ್ನ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ. ಕಾಂಗ್ರೆಸ್ ನನ್ನ ಸಮುದಾಯ. ಸಮಾಜದ ಎಲ್ಲಾ ವರ್ಗಗಳನ್ನು ನಾನು ಪ್ರೀತಿಸುತ್ತೇನೆ ಎಂದರು. ಖಂಡಿತವಾಗಿ ದೆಹಲಿಗೆ ಹೋಗ್ತೀನಿ: ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಭೆ ನಡೆಯಲಿದೆ ಎಂಬ ವದಂತಿಗಳಿದ್ದರೂ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕರ್ನಾಟಕದ ರೈತ ಸಮಸ್ಯೆಗಳನ್ನು ಇಟ್ಟುಕೊಳ್ಳಲು ದೆಹಲಿಗೆ ಭೇಟಿ…

Read More

Updated By: Priyalachhi ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50 ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ – 2022 ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ‌ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯಿದೆ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆ ಆಕ್ಷೇಪಿಸಿ ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಅಲ್ಲದೇ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ…

Read More

Updated By: Priyalachhi ಬೆಂಗಳೂರು: ಖಾಸಗಿ ಆಂಬ್ಯುಲೆನ್ಸ್​ಗಳನ್ನು ನಿಯಂತ್ರಿಸಲು ಹಾಗೂ ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆ ಎಂದು ನೋಂದಾಯಿಸಲು ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಿತು. ಸ್ವಯಂ ಪ್ರೇರಿತವಾಗಿ ನೋಂದಾಯಿಸಿದ ಖಾಸಗಿ ಆಂಬ್ಯುಲೆನ್ಸ್‌ ಸೇವಾ ನಿರ್ವಾಹಕರನ್ನು ನಿಯಂತ್ರಿಸಲು ಮತ್ತು ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯೆಂದು ನೋಂದಾಯಿಸಲು ಅವಶ್ಯಕವಾಗಿರುವುದರಿಂದ ತಿದ್ದುಪಡಿಯನ್ನು ತರಲಾಗುತ್ತಿದೆ. ಪ್ರಸ್ತುತ ಅಧಿನಿಯಮದಲ್ಲಿ ತಾತ್ಕಾಲಿಕ ನೋಂದಣಿಗೆ ಅವಕಾಶ ಇಲ್ಲದೇ ಇರುವುದರಿಂದ ಕೇಂದ್ರ ಅಧಿನಿಯಮದ ಮಾದರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಸ್ವ ಮಾನ್ಯತೆ ಪತ್ರ ಒದಗಿಸಿದ ವೈದ್ಯಕೀಯ ಸಂಸ್ಥೆಗಳಿಗೆ 30 ದಿನಗಳೊಳಗಾಗಿ ಖಾಯಂ ನೋಂದಣಿ ನೀಡಲು ತಿದ್ದುಪಡಿಯನ್ನು ಪ್ರಸ್ತಾಪಿಸಲಾಗಿದೆ. ಖಾಸಗಿ ಆಂಬ್ಯುಲೆನ್ಸ್‌ಗಳ ಸೇವೆಯನ್ನು ಮೊಬೈಲ್ ಆ್ಯಪ್ ಮೂಲಕ ಪಡೆಯಲು ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ (ಕೆಪಿಎಂಇ) ಕಾಯ್ದೆಯಂತೆ ಅವುಗಳ ಸೇವೆಗೆ ನಿರ್ದಿಷ್ಟ ದರ ನಿಗದಿಪಡಿಸಲು ಈ ತಿದ್ದುಪಡಿ ಮಸೂದೆ…

Read More

Updated By: Priyalachhi ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ ಯೋಜನೆ’ಯಡಿ ಬಡವರಿಗೆ ಉಚಿತವಾಗಿ ವಿತರಿಸಬೇಕಾದ ಅಕ್ಕಿಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಆಹಾರ ಇಲಾಖೆ ಮತ್ತು ಆದಾಯ ತಂಡದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ದಾಳಿಯಿಂದ ಸುಮಾರು 30 ಟನ್‌ಗೂ ಅಧಿಕ ಅನ್ನಭಾಗ್ಯ ಅಕ್ಕಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲಾ ಉಪವಿಭಾಗಾಧಿಕಾರಿ ಎಸಿ ಮೆಹೆಬೂಬ್ ಜಿಲಾನಿ ಅವರ ನೇತೃತ್ವದಲ್ಲಿ ಆಹಾರ ಇಲಾಖೆ, ತಹಶೀಲ್ದಾರ್ ಕಛೇರಿ ಮತ್ತು ಪೊಲೀಸ್ ಇಲಾಖೆಯ ಸಂಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿದೆ. ಬುಧವಾರ ರಾತ್ರಿ ಗುಪ್ತ ಮಾಹಿತಿ ಆಧಾರದ ಮೇಲೆ ಚಿತ್ರದುರ್ಗ-ಹಿರಿಯೂರು ರಸ್ತೆಯಲ್ಲಿ ತಡೆಗಟ್ಟಿ ಲಾರಿಯನ್ನು ತಪಾಸಣೆ ಮಾಡಿದಾಗ ಈ ಅಕ್ರಮ ಸಾಗಣೆ ಬಯಲಾಯಿತು. ಲಾರಿಯಲ್ಲಿ 300ಕ್ಕೂ ಹೆಚ್ಚು ಚೀಲಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಸರ್ಕಾರಿ ಮುದ್ರೆ ಹೊಂದಿದ್ದ ಅಕ್ಕಿ ಇತ್ತು. ಪ್ರತಿ ಚೀಲ 50 ಕೆ.ಜಿ. ತೂಕವಿದ್ದು, ಒಟ್ಟಾರೆ 30 ಟನ್‌ಗೂ ಅಧಿಕ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಈ ಅಕ್ಕಿಯ ಮಾರುಕಟ್ಟೆ ಮೌಲ್ಯ ಸುಮಾರು 15…

Read More

Updated By: Priyalachhi ಬಿಳಿಯಾಗಿರುವುದು ಯಾವತ್ತಿಗೂ ದೇಹದ ಆರೋಗ್ಯಕ್ಕೆ (Body Health) ಮತ್ತು ಯೋಗಕ್ಷೇಮಕ್ಕೆ ಕಂಟಕ ಅಂತಾನೆ ಹಿರಿಯರು ಮತ್ತು ವೈದ್ಯರು ಹೇಳುತ್ತಾರೆ. ಬಿಳಿಯಾಗಿರುವ ಪದಾರ್ಥವೆಂದರೆ ಮೊದಲಿಗೆ ಕಣ್ಮುಂದೆ ಬರುವುದು ಸಕ್ಕರೆ (Sugar), ಇದನ್ನ ದಿನವಿಡೀ ಅನೇಕ ಆಹಾರಗಳ (Food) ತಯಾರಿಕೆಯಲ್ಲಿ ಬಳಸುತ್ತೇವೆ. ಮತ್ತೆ ಉಪ್ಪು (Salt) ಸಹ ಬಿಳಿಯಾಗಿರುತ್ತದೆ, ಅದು ಸಹ ಜಾಸ್ತಿ ತಿಂದರೆ ಅಧಿಕ ರಕ್ತದೊತ್ತಡಕ್ಕೆ (High Blood Pressure) ಗುರಿಯಾಗಬೇಕಾಗುತ್ತದೆ. ಸಕ್ಕರೆಗೆ ಪರ್ಯಾಯವೆಂದರೆ ಬೆಲ್ಲ ಅಂತ ಅನೇಕರಿಗೆ ತಿಳಿದಿದೆ, ಆದರೂ ಸಹ ತುಂಬಾ ಕಡಿಮೆ ಜನರು ಇದನ್ನು ಬಳಸುತ್ತಾರೆ. ಬನ್ನಿ ಹಾಗಾದರೆ ಸಕ್ಕರೆ ಮತ್ತು ಬೆಲ್ಲ ಈ ಎರಡರಲ್ಲಿ ನಿಜಕ್ಕೂ ದೇಹದ ಆರೋಗ್ಯಕ್ಕೆ ಯಾವುದು ಸೂಕ್ತ ಅನ್ನೋದರ ಬಗ್ಗೆ ವೈದ್ಯರೊಬ್ಬರು ರಿಯಾಲಿಟಿ ಚೆಕ್ ಮಾಡಿದ್ದಾರೆ ನೋಡಿ. ಯಾವತ್ತಿಗೂ ದೇಹದ ಆರೋಗ್ಯಕ್ಕೆ (Body Health) ಮತ್ತು ಯೋಗಕ್ಷೇಮಕ್ಕೆ ಕಂಟಕ ಅಂತಾನೆ ಹಿರಿಯರು ಮತ್ತು ವೈದ್ಯರು ಹೇಳುತ್ತಾರೆ. ಬಿಳಿಯಾಗಿರುವ ಪದಾರ್ಥವೆಂದರೆ ಮೊದಲಿಗೆ ಕಣ್ಮುಂದೆ ಬರುವುದು ಸಕ್ಕರೆ (Sugar), ಇದನ್ನ ದಿನವಿಡೀ ಅನೇಕ ಆಹಾರಗಳ (Food) ತಯಾರಿಕೆಯಲ್ಲಿ ಬಳಸುತ್ತೇವೆ. ಮತ್ತೆ ಉಪ್ಪು (Salt) ಸಹ ಬಿಳಿಯಾಗಿರುತ್ತದೆ, ಅದು ಸಹ ಜಾಸ್ತಿ ತಿಂದರೆ ಅಧಿಕ ರಕ್ತದೊತ್ತಡಕ್ಕೆ (High Blood Pressure) ಗುರಿಯಾಗಬೇಕಾಗುತ್ತದೆ. ಸಕ್ಕರೆಗೆ ಪರ್ಯಾಯವೆಂದರೆ ಬೆಲ್ಲ ಅಂತ ಅನೇಕರಿಗೆ ತಿಳಿದಿದೆ, ಆದರೂ ಸಹ ತುಂಬಾ ಕಡಿಮೆ ಜನರು ಇದನ್ನು ಬಳಸುತ್ತಾರೆ. ಬನ್ನಿ ಹಾಗಾದರೆ ಸಕ್ಕರೆ ಮತ್ತು ಬೆಲ್ಲ ಈ ಎರಡರಲ್ಲಿ ನಿಜಕ್ಕೂ ದೇಹದ ಆರೋಗ್ಯಕ್ಕೆ ಯಾವುದುಸೂಕ್ತ ಅನ್ನೋದರ ಬಗ್ಗೆ ವೈದ್ಯರೊಬ್ಬರು ರಿಯಾಲಿಟಿ ಚೆಕ್ ಮಾಡಿದ್ದಾರೆ ನೋಡಿ. ಈ ಎರಡು ಸಿಹಿಕಾರಕಗಳಲ್ಲಿ ಬೆಸ್ಟ್ ಯಾವುದು ಅಂತ ರಿಯಾಲಿಟಿ ಚೆಕ್ ಮಾಡಿದ ವೈದ್ಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ ಪಾಲ್ ಮಾಣಿಕ್ಕಮ್ ಅವರು ಸಕ್ಕರೆ ಮತ್ತು ಬೆಲ್ಲದ ವಿವರವಾದ ಹೋಲಿಕೆಯನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯ ಪುಟದಲ್ಲಿ ಹಂಚಿಕೊಂಡಿದ್ದಾರೆ ನೋಡಿ. ಸಕ್ಕರೆ ಸಾಂಪ್ರದಾಯಿಕ ಸಿಹಿಕಾರಕವಾಗಿದ್ದು, ಆರೋಗ್ಯಕರ ಆಯ್ಕೆಗಾಗಿ ಖ್ಯಾತಿಯನ್ನು ಹೊಂದಿದ್ದರೂ ಸಹ ಇದು ರಕ್ತಪ್ರವಾಹಕ್ಕೆ ಪ್ರವೇಶಿಸಿದ ನಂತರ ನಿಜವಾಗಿ ಏನಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ವೈದ್ಯರು ರಿಯಾಲಿಟಿ ಚೆಕ್ ನಡೆಸಿದರು. ನಂತರ ಇದರ ಫಲಿತಾಂಶವನ್ನು ಸಹ ತಮ್ಮ ಪೋಸ್ಟ್‌ನಲ್ಲಿ ಹೈಲೈಟ್ ಮಾಡಲಾದ ವೀಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಬೆಲ್ಲವು ಬಿಳಿ ಸಕ್ಕರೆಯಿಂದ ಮೂಲಭೂತವಾಗಿ ಭಿನ್ನವಾಗಿದೆ ಎಂಬ ಸಾಮಾನ್ಯ ನಂಬಿಕೆಯನ್ನು ತಿಳಿಸುವ ಮೂಲಕ ಡಾ ಪಾಲ್ ಪ್ರಾರಂಭಿಸಿದರು. ವೀಡಿಯೋದಲ್ಲಿ ಅವರ ಪ್ರಾತ್ಯಕ್ಷಿಕೆಯನ್ನು ಉಲ್ಲೇಖಿಸಿ, ಬೆಲ್ಲವನ್ನು ನೀರಿನಲ್ಲಿ ಇರಿಸಿದಾಗ ಅದರ ಗಾಢ ಬಣ್ಣವನ್ನು ಕಳೆದುಕೊಳ್ಳುತ್ತದೆ, ಏಕೆಂದರೆ ಅದರಿಂದ ಮೊಲಾಸಸ್ ಎಂಬ  ಅಂಶವು ಹೊರ ಬರುತ್ತದೆ…

Read More

Updated By: Priyalachhi ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ‌. Bengaluru Water Supply Regulations, 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್‌ಮೆಂಟ್ (One Time Settlement) ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಲಾಗಿದೆ.‌ ಫೆಬ್ರವರಿ 2025ರ ವರೆಗೆ ಗ್ರಾಹಕರು ಉಳಿಸಿಕೊಂಡಿರುವ…

Read More