Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಮೈಸೂರು ಸಿಟಿ ಕಾರ್ಪೊರೇಷನ್ ಆಗಿ ಪರಿವರ್ತಿಸಲು ರಾಜ್ಯ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ‘ಕೆಲವು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಕೆಲವು ಹಳ್ಳಿಗಳನ್ನು ಮೈಸೂರು ಮಹಾನಗರ ಪಾಲಿಕೆ (ನಿಗಮ) ಗೆ ಸೇರಿಸುವ ಮೂಲಕ, ಅದನ್ನು ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ (ಗ್ರೇಟರ್ ಮೈಸೂರು ಸಿಟಿ ಕಾರ್ಪೊರೇಷನ್) ಆಗಿ ಪರಿವರ್ತಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು. ಅಂತೆಯೇ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಲಿಮಿಟೆಡ್ (ಬಿಎಸ್‌ಡಬ್ಲ್ಯೂಎಂಎಲ್) ಮೂಲಕ “ಭೂಕುಸಿತ ತಾಣಗಳ ಕಾರ್ಯಾಚರಣೆ ಮತ್ತು ನಿರ್ವಹಣೆ” ಪ್ಯಾಕೇಜ್ ಕಾಮಗಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಘನ ತ್ಯಾಜ್ಯದ ಸರಿಯಾದ ನಿರ್ವಹಣೆಗಾಗಿ ಅಂದಾಜು 100 ಕೋಟಿ ರೂ. ವೆಚ್ಚದಲ್ಲಿ ಕಾರ್ಯಗತಗೊಳಿಸಲು ಅನುಮೋದನೆ ನೀಡಲಾಗಿದೆ. ಇದಲ್ಲದೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ…

Read More

Updated By: Priyalachhi ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ, ಮದುವೆಯ ಗುಣಲಕ್ಷಣಗಳನ್ನು ಹೊಂದಿರುವ ಲಿವ್‌–ಇನ್‌(ಪುರುಷ-ಮಹಿಳೆ ವಿವಾಹವಾಗದೆ ಒಟ್ಟಿಗೆ ಇರುವುದು) ಸಂಬಂಧಗಳಿಗೂ ಅನ್ವಯವಾಗುತ್ತದೆ ಎಂದು ಹೈಕೋರ್ಟ್‌ ಇಂದು ಮಹತ್ವದ ಆದೇಶ ನೀಡಿತು. ಮಹಿಳೆಯೊಬ್ಬರು(ಎರಡನೇ ಪತ್ನಿ) ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಶಿವಮೊಗ್ಗದ ಡಾ.ಬಿ.ಎಚ್‌.ಲೋಕೇಶ್‌ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಪೀಠ ಈ ಆದೇಶ ನೀಡಿದೆ. ಈ ಪ್ರಕರಣದಲ್ಲಿ ಅರ್ಜಿದಾರರು ಮತ್ತು ದೂರುದಾರರು ವೈವಾಹಿಕವಾಗಿ ಒಂದಾಗುವಂತಹ ಎಲ್ಲ ಲಕ್ಷಣಗಳನ್ನು ಹೊಂದಿದ್ದು, ಒಟ್ಟಾಗಿ ನೆಲೆಸಿ, ಸಹಬಾಳ್ವೆಯಿಂದ ನಡೆದುಕೊಂಡು ಪತಿ-ಪತ್ನಿ ಎಂಬುದಾಗಿ ಗುರುತಿಸಿಕೊಂಡು ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸಿರುವುದು ಸ್ಪಷ್ಟವಾಗಿದೆ. ಹೀಗಾಗಿ ಪತಿ-ಪತ್ನಿಯ ಹೊಂದಾಣಿಕೆಯಂತೆ ತೋರುವ ಈ ಸಂಬಂಧಕ್ಕೂ ಕ್ರೌರ್ಯ ನೀಡಿರುವುದು ಸಾಬೀತಾದಲ್ಲಿ ಐಪಿಸಿ ಸೆಕ್ಷನ್ 498(ಎ) ಅಡಿ ರಕ್ಷಣೆ ದೊರೆಯಲಿದೆ. ಈ ರೀತಿಯ ಆರೋಪವಿರುವ ಪ್ರಕರಣಗಳಲ್ಲಿ ಕಾನೂನುಬದ್ದ ಪತಿ-ಪತ್ನಿಯ ಸಂಬಂಧ ಹೊಂದಿರಬೇಕು ಎಂಬ…

Read More

Updated By: Priyalachhi ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಇತ್ತೀಚೆಗೆ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟಕ್ಕೇರಿದ ಭಾರತ ತಂಡದ ಭಾಗವಾಗಿದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೀನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ಸ್​​ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಆಟಗಾರ್ತಿ ಲಕ್ಷ್ಯ ರಾಜೇಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಸನ್ಮಾನಿಸಿದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರ ನೇತೃತ್ವದಲ್ಲಿ ಇಬ್ಬರೂ ಕ್ರೀಡಾಪಟುಗಳು ಇಂದು ಸಿಎಂರನ್ನು ಅವರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಅಭಿನಂದಿಸಿ, ಸನ್ಮಾನಿಸಿದ ಸಿದ್ದರಾಮಯ್ಯ, ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದರು. ರಾಜ್ಯ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆಯೂ ಸಿಎಂ ಹಾರೈಸಿದರು. ಇಬ್ಬರೂ ವಿಜೇತಪಟುಗಳಿಗೆ ತಲಾ ಐದು ಲಕ್ಷ ರೂ.ಯ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರ…

Read More

Updated By: Priyalachhi ಬೆಂಗಳೂರು: ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅನ್ಯಾಯವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ಗುರುವಾರ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. “ವಿಧಾನಸಭೆ ಚುನಾವಣೆಯ ಸಮಯದಲ್ಲಿ, ಶಿವಕುಮಾರ್ ಅವರು ಸಾಕಷ್ಟು ಶ್ರಮಿಸಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿದ್ದಾರೆ ಮತ್ತು ಅವರ ಪ್ರಯತ್ನದಿಂದಾಗಿ ಕಾಂಗ್ರೆಸ್ 140 ಸ್ಥಾನಗಳನ್ನು ಗಳಿಸಿತು” ಎಂದು ಸಂಘದ ಅಧ್ಯಕ್ಷ ಎಲ್ ಶ್ರೀನಿವಾಸ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಿದ್ದರಾಮಯ್ಯ ಅವರ ಎರಡೂವರೆ ವರ್ಷಗಳ ಅವಧಿ ಪೂರ್ಣಗೊಂಡ ನಂತರ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲಾಗುವುದು ಎಂದು ಕಾಂಗ್ರೆಸ್ ಹೈಕಮಾಂಡ್ ಈ ಹಿಂದೆ ಶಿವಕುಮಾರ್ ಅವರಿಗೆ ಭರವಸೆ ನೀಡಿತ್ತು ಎಂದು ಜನ ಹೇಳುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು ಮತ್ತು ಈಗ ಈ…

Read More

Updated By: Priyalachhi ಮೈಸೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರ ಪುತ್ರ ಮತ್ತು ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ ಮತ್ತು ಅವರು ಯಾವುದೇ ಹಗರಣಗಳಲ್ಲಿ ಭಾಗಿಯಾಗಿಲ್ಲ ಎಂದು  ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ ಮತ್ತು ಶಾಸಕರ ಬೆಂಬಲ ಹೊಂದಿದ್ದಾರೆ ಎಂದು ಪ್ರತಿಪಾದಿಸಿದ ಯತೀಂದ್ರ, ಮುಖ್ಯಮಂತ್ರಿ ಬದಲಾವಣೆಗೆ ಒತ್ತಾಯಿಸುತ್ತಿರುವ ಕೆಲವು ವರ್ಗಗಳ ಬೇಡಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು. “ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದು ಅಂತಿಮ. ಆದ್ದರಿಂದ ಹೈಕಮಾಂಡ್ ಹೇಳುವ ಮೊದಲು ನಾವು ಪ್ರತಿಕ್ರಿಯಿಸುವುದು ಸರಿಯಲ್ಲ” ಎಂದು ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಯತೀಂದ್ರ ಉತ್ತರಿಸಿದರು. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆಯೇ ಎಂದು ಕೇಳಿದಾಗ, ಪಕ್ಷದ ಕಾರ್ಯಕರ್ತ ಮತ್ತು ಎಂಎಲ್‌ಸಿಯಾಗಿ, ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪರಿಸ್ಥಿತಿ ಸದ್ಯ ಕಾಣುತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿ ವಿರುದ್ಧ ಯಾವುದೇ ಭ್ರಷ್ಟಾಚಾರ…

Read More

Updated By: Priyalachhi ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ. ರಾಜ್ಯದ ನಾಯಕತ್ವ ವಿಚಾರ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಮೂಲಕ ಸಿಎಂ ಕುರ್ಚಿ ಕುರಿತು ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ನಡುವಿನ ತಿಕ್ಕಾಟವನ್ನು ಒಪ್ಪಿಕೊಂಡಿದ್ದಾರೆ. ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಕರ್ನಾಟಕದ ಜನರು ಮಾತ್ರ ನೋಡಲು ಸಾಧ್ಯ. ನಾನು ಹೇಳಲು ಬಯಸುವುದೇನೆಂದರೆ ಯಾವುದೇ ಸಮಸ್ಯೆಗಳೇ ಆದರೂ ಅದಕ್ಕೆ ಪರಿಹಾರ ಇದ್ದೇ ಇರುತ್ತದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆಗೆ ಒಟ್ಟಿಗೆ ಕುಳಿತು ಚರ್ಚಿಸಲಾಗುವುದು. ನಂತರ ಸಮಸ್ಯೆಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಏತನ್ಮಧ್ಯೆ…

Read More

Updated By: Priyalachhi ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಶುಕ್ರವಾರ) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್​ಆರ್​ಟಿಸಿ ಬಸ್‌ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್‌ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ರಸ್ತೆ ಅಗೆಯುವಂತಿಲ್ಲ, ದ್ರೋಣ್ ಹಾರಿಸುವಂತಿಲ್ಲ: ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪರಿಪಾಲನೆಗೆ ಜಿಲ್ಲಾಡಳಿತ ಹೆಚ್ಚಿನ ಆದ್ಯತೆ ನೀಡಿದೆ. ಎಲ್ಲಿಯೂ ಯಾವುದೇ ರೀತಿಯಲ್ಲೂ ವ್ಯತ್ಯಾಸ, ಸಮಸ್ಯೆಗಳು ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನ.28ರಂದು ನಗರದಲ್ಲಿ ಯಾವುದೇ ಕಾಮಗಾರಿ, ಹೊಂಡತೋಡುವುದು ಇತ್ಯಾದಿಗಳನ್ನು ಮಾಡಬಾರದು. ಹಾಗೆಯೇ ಕಾರ್ಯಕ್ರಮ ನಡೆಯುವ ದಿನ ಸಹಿತ ಮೊದಲೆರೆಡು ದಿನ ಪರವಾನಗಿ ಇಲ್ಲದೇ ದ್ರೋಣ್ ಹಾರಿಸುವಂತಿಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಲಕ್ಷಕಂಠ ಗೀತಾ ಪಾರಾಯಣದ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿ…

Read More

Updated By: Priyalachhi ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಅಸಲು ದಾವೆಯಲ್ಲಿ ಅಂಗೀಕರಿಸಿದ ರಾಜಿ ಅಂತಿಮ ತೀರ್ಪಿನ ನಿಯಮಗಳ ಪ್ರಕಾರ ತಮ್ಮ ಹೆಸರಿಗೆ ಖಾತಾ ವರ್ಗಾವಣೆ ಮಾಡುವಂತೆ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡುವಂತೆ ಕೋರಿ ಗಿಲ್ಬರ್ಟ್ ವಾಸ್ ಮತ್ತಿತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕ ಸದಸ್ಯ ಪೀಠ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಕಂದಾಯ ಇಲಾಖೆಗೆ ನಿರ್ದೇಶನ ನೀಡಿದೆ. ಅಲ್ಲದೇ, ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್ಜಿ) ಸಹಯೋಗದೊಂದಿಗೆ ಈ ಕಾರ್ಯವನ್ನು ಮಾಡಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ. ‘ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ,…

Read More

Updated By: Priyalachhi ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೈದಿಗಳ ಮೋಜು ಮಸ್ತಿಯ ತಾಣವಾಗಿ ಮಾರ್ಪಟ್ಟಿದೆ. ಜೈಲಲ್ಲೇ ರೌಡಿಗಳ ಹುಟ್ಟುಹಬ್ಬ ಆಚರಣೆ, ಗುಂಡು-ತುಂಡಿನ ಪಾರ್ಟಿಯ ಜೊತೆಗೆ ಉಗ್ರರ ಕೈನಲ್ಲೂ ಮೊಬೈಲ್​ ಇರುವ ಸಾಕಷ್ಟು ವಿಡಿಯೋಗಳು ಈಗಾಗಲೇ ಹೊರ ಬಂದಿವೆ. ಈ ನಡುವಲ್ಲೇ ಮತ್ತೊಂದು ಕರ್ಮಕಾಂಡದ ವಿಡಿಯೋ ವೈರಲ್ ಆಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮದ್ಯ ತಯಾರಿ ಮಾಡಿದ್ದಾರೆ ಎನ್ನಲಾದ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ್ಯಪಲ್, ದ್ರಾಕ್ಷಿಮತ್ತು ಪೈನ್ ಆ್ಯಪಲ್‌ಗಳನ್ನು ಬಳಸಿ ಜೈಲಿನಲ್ಲಿ ಕೈದಿಗಳು ವೈನ್ ತಯಾರಿಸಿದ್ದಾರೆ ಎನ್ನಲಾದ ವಿಡಿಯೋ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದನ್ನು ಜೆಡಿಎಸ್ ಪೋಸ್ಟ್ ಮಾಡಿದ್ದು, ‘ಪರಪ್ಪನ ಅಗ್ರಹಾರ ಜೈಲಿನಲ್ಲಿ ಮದ್ಯದ ಫ್ಯಾಕ್ಟರಿ ಮಾಡಿಕೊಟ್ಟ ಕಾಂಗ್ರೆಸ್ ಸರ್ಕಾರ’ ಎಂದು ಬರಹ ಬರೆದು, ವಿಡಿಯೋವನ್ನು ಹಂಚಿಕೊಂಡಿದೆ. ಒಟ್ಟು 33 ಸೆಕೆಂಡಿನ ವಿಡಿಯೋ ಅದಾಗಿದ್ದು, ಅದರಲ್ಲಿ ಮೂವರು ಕೈದಿಗಳು ಮತ್ತು 4 ಮದ್ಯದ ಬಾಟಲಿಗಳು ಕಾಣಿಸಿಕೊಂಡಿವೆ. ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯೊಬ್ಬನಿಗೆ ಇಬ್ಬರು ಕೈದಿಗಳು ಹಣ ನೀಡಿ ಮದ್ಯದ…

Read More

Updated By: Priyalachhi ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 2026 ರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ಸಹಾಯ ಸಂಸ್ಥೆಯ (ಅಂತರರಾಷ್ಟ್ರೀಯ ಐಡಿಇಎ) ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ಜ್ಞಾನೇಶ್ ಕುಮಾರ್ ಡಿಸೆಂಬರ್ 3 ರಂದು ಸ್ಟಾಕ್‌ಹೋಮ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಐಡಿಇಎ ಸದಸ್ಯ ರಾಷ್ಟ್ರಗಳ ಮಂಡಳಿಯ ಸಭೆಯಲ್ಲಿ ಐಐಡಿಇಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧ್ಯಕ್ಷರಾಗಿ, ಅವರು 2026 ರ ಅವಧಿಯಲ್ಲಿ ಎಲ್ಲಾ ಮಂಡಳಿ ಸಭೆಗಳ ಅಧ್ಯಕ್ಷತೆ ವಹಿಸಲಿದ್ದಾರೆ. 1995 ರಲ್ಲಿ ಸ್ಥಾಪನೆಯಾದ ಅಂತರರಾಷ್ಟ್ರೀಯ ಐಡಿಇಎ, ಪ್ರಪಂಚದಾದ್ಯಂತ ಪ್ರಜಾಪ್ರಭುತ್ವ ಸಂಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ಬಲಪಡಿಸಲು ಬದ್ಧವಾಗಿರುವ ಅಂತರ-ಸರ್ಕಾರಿ ಸಂಸ್ಥೆಯಾಗಿದೆ. 35 ದೇಶಗಳ ಪ್ರಸ್ತುತ ಸದಸ್ಯತ್ವ ಮತ್ತು ಯುನೈಟೆಡ್ ಸ್ಟೇಟ್ಸ್ ಮತ್ತು ಜಪಾನ್ ವೀಕ್ಷಕರಾಗಿದ್ದು, ಈ ಸಂಸ್ಥೆಯು ಎಲ್ಲರನ್ನೂ ಒಳಗೊಳ್ಳುವ, ಸ್ಥಿತಿಸ್ಥಾಪಕ ಮತ್ತು ಜವಾಬ್ದಾರಿಯುತ ಪ್ರಜಾಪ್ರಭುತ್ವಗಳನ್ನು ಉತ್ತೇಜಿಸುತ್ತದೆ. IIDEA ಯ ಸ್ಥಾಪಕ ಸದಸ್ಯ ರಾಷ್ಟ್ರವಾಗಿರುವ ಭಾರತ ಸಂಸ್ಥೆಯ ಆಡಳಿತ, ಪ್ರಜಾಪ್ರಭುತ್ವ ಸಂವಾದ ಮತ್ತು ಸಾಂಸ್ಥಿಕ ಉಪಕ್ರಮಗಳಿಗೆ…

Read More