Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿಯೇ ವಿವಿಧ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ. ಇವುಗಳಲ್ಲಿ ಮಧುಮೇಹ ಕಾಯಿಲೆಯು ಒಂದು. ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ ಹಾಗೂ ದೈಹಿಕ ಚಟುವಟಿಕೆಯ ಕೊರತೆಯಂತಹ ಅಂಶಗಳು ಮಧುಮೇಹಕ್ಕೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮಧುಮೇಹ ಇರುವವರು ಹೆಚ್ಚಾಗಿ ಏನು ತಿನ್ನಬೇಕು ಹಾಗೂ ಏನು ತಿನ್ನಬಾರದು ಎಂಬುದರ ಬಗ್ಗೆ ಬಹಳ ಕಾಳಜಿ ವಹಿಸುತ್ತಾರೆ. ಅವರು ಹಣ್ಣುಗಳನ್ನು ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಬೇಕಾಗುತ್ತದೆ. ಕೆಲವು ಹಣ್ಣುಗಳು ತುಂಬಾ ಸಿಹಿಯಾಗಿರುವುದರಿಂದ, ಅವುಗಳನ್ನು ತಿನ್ನುವುದು ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಹೀಗಾಗಿ ಮಧುಮೇಹಿಗಳು ಕಡಿಮೆ ಸಕ್ಕರೆ ಅಂಶವಿರುವ ಈ ಐದು ಹಣ್ಣುಗಳನ್ನು ಸೇವಿಸಿದರೆ ಉತ್ತಮ. ಈ ಹಣ್ಣುಗಳು ಯಾವುವು ಎಂಬುದನ್ನು ಇಲ್ಲಿ ತಿಳಿಯೋಣ. ಕಿವಿ ಹಣ್ಣು ಅತ್ಯುತ್ತಮ: ಸೈನ್ಸ್ ಡೈರೆಕ್ಟ್.ಕಾಮ್ ವೆಬ್ಸೈಟ್ ಪ್ರಕಾರ, ಈ ಹಣ್ಣುಗಳು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಹಾಗೂ ಇತರ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಅವುಗಳನ್ನು ತಿನ್ನುವುದು ಹೃದಯದ ಆರೋಗ್ಯವನ್ನು ಸಹ…
Updated By: Priyalachhi ಬೆಳಗಾವಿ: ವಿಭೂತಿ ಪುರುಷ, ಜನಸ್ನೇಹಿ ಆಡಳಿತಗಾರ, ಬಡವರ ಪಾಲಿಗೆ ದೇವರೇ ಆಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ದುರಂತ ಅಂತ್ಯ ಕಂಡಿದ್ದಾರೆ. ಇನ್ನೂ ಬದುಕಿ ಬಾಳಬೇಕಿದ್ದ ಅವರು, ಅರ್ಧದಲ್ಲೇ ಪಯಣ ಮುಗಿಸಿ ಬಾರದ ಲೋಕಕ್ಕೆ ಪಯಣ ಬೆಳೆಸಿದರು. ಸಾವಿರಾರು ಜನರು ಒಲ್ಲದ ಮನಸ್ಸಿನಿಂದಲೇ ಅವರಿಗೆ ಅಂತಿಮ ವಿದಾಯ ಹೇಳಿದರು. ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಾಘತದಲ್ಲಿ ಮೃತಪಟ್ಟ ಮಹಾಂತೇಶ ಬೀಳಗಿ ಸೇರಿ ನಾಲ್ವರ ಮೃತದೇಹಗಳ ಅಂತ್ಯಕ್ರಿಯೆ ಇಂದು ಸಂಜೆ 5:40ರ ವೇಳೆಗೆ ರಾಮದುರ್ಗ ಹೊರ ವಲಯದ ಅವರ ತೋಟದಲ್ಲಿ ಲಿಂಗಾಯತ ಧರ್ಮದ ವಿಧಿವಿಧಾನಗಳ ಪ್ರಕಾರ ನೆರವೇರಿತು. ಮಹಾಂತೇಶ ಬೀಳಗಿ ಅವರ ಚಿತೆಗೆ ಅಣ್ಣ ಸಿದ್ದರಾಮಪ್ಪ ಅವರು ಅಗ್ನಿಸ್ಪರ್ಶ ಮಾಡಿದರು. ಕುಟುಂಬಸ್ಥರ ಆಕ್ರಂದನದ ನಡುವೆ ನಾಲ್ವರ ಅಂತ್ಯಸಂಸ್ಕಾರ ಮಾಡಲಾಯಿತು. ಮಹಾಂತೇಶ ಅವರ ಪಕ್ಕದಲ್ಲಿ ಶಂಕರ ಬೀಳಗಿ, ಈರಣ್ಣಾ ಬೀಳಗಿ, ಈರಣ್ಣಾ ಶಿರಸಂಗಿ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು. ಈ ವೇಳೆ ಪತ್ನಿ…
Updated By: Priyalachhi ನವದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲಾಗುವುದು. ಈ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ನಾನು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ. ಡಿಸೆಂಬರ್ 1 ರಂದು ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ರಾಜ್ಯದಲ್ಲಿ ನಾಯಕತ್ವದಲ್ಲಿನ ಯಾವುದೇ ಬದಲಾವಣೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲು ಯೋಜಿಸಿದೆ ಎಂದು ವರದಿಗಳು ತಿಳಿಸಿವೆ. ಏತನ್ಮಧ್ಯೆ, ರಾಹುಲ್ ಗಾಂಧಿ ಶಿವಕುಮಾರ್ ಅವರಿಗೆ ಸಂಕ್ಷಿಪ್ತ ವಾಟ್ಸಾಪ್ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, “ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ” ಎಂದು ಹೇಳಿರುವುದಾಗಿ ವರದಿಯಾಗಿದೆ.
Updated By: Priyalachhi ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮಂಗಳವಾರ ತಡರಾತ್ರಿಯ ಭೇಟಿ ರಾಜ್ಯ ಪವರ್ ಫೈಟ್ಗೆ ಮತ್ತಷ್ಟು ತಿರುವು ನೀಡಿದೆ. ಖಾಸಗಿ ಹೊಟೇಲ್ನಲ್ಲಿ ಸತೀಶ್ ಜಾರಕಿಹೊಳಿ, ಡಿಕೆಶಿ ನಡುವೆ ಮಾತುಕತೆ ನಡೆದಿದೆ. ಸತೀಶ್ ಜಾರಕಿಹೊಳಿ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದೀರ್ಘ ಚರ್ಚೆ ನಡೆಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಸಿಎಂ ಅವರ ಮನವೊಲಿಸುವ ಜೊತೆಗೆ ತಮ್ಮ ಸಹಕಾರ ಬೇಕೆಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೈಕಮಾಂಡ್ ನಿರ್ಧರಿಸಿ ಸಿಎಂ ಸ್ಥಾನ ಕೊಟ್ಟರೆ ನೀವು ಬೆಂಬಲಿಸಬೇಕು. ನಿಮ್ಮ ಜೊತೆಗಿನ ವಿಶ್ವಾಸವನ್ನು ಹೀಗೇ ಮುಂದುವರೆಸುತ್ತೇನೆ ಎಂದು ಡಿಕೆಶಿ ಭರವಸೆ ನೀಡಿದ್ದಾರೆ. ಈ ವೇಳೆ ಸತೀಶ್ ಜಾರಕಿಹೊಳಿ, ನಾವು ಸಿದ್ದರಾಮಯ್ಯನವರನ್ನು ಬಿಟ್ಟು ಬರಲು ಆಗಲ್ಲ. ಹೈಕಮಾಂಡ್ ನಿರ್ಧಾರ ಮಾಡಿದ್ರೆ ಅದಕ್ಕೆ ನಾವು ಬದ್ಧರು. ಹೈಕಮಾಂಡ್ ನಿರ್ಣಯ ಮಾಡಲಿ ನೋಡೋಣ. ನಾವಾಗಿಯೇ ಇವರನ್ನು ಮಾಡಿ, ಅವರನ್ನು ಮಾಡಿ ಎಂದು ಹೇಳುವುದು ಕಷ್ಟ ಎಂದು…
Updated By: Priyalachhi ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಪ್ರಕರಣ ಸಂಬಂಧ ನಂದಿನಿ ಉತ್ಪನ್ನದ ಅಧಿಕೃತ ಮಾರಾಟಗಾರ ಸೇರಿ ನಾಲ್ವರನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಇದೀಗ ಪ್ರಕರಣದ ಪ್ರಮುಖ ರೂವಾರಿಗಳಾದ ಇನ್ನಿಬ್ಬರನ್ನು ಮಟ್ಟ ಹಾಕಿದ್ದಾರೆ. ಮೈಸೂರಿನ ವಿಜಯನಗರದಲ್ಲಿ ವಾಸವಾಗಿರುವ ಶಿವಕುಮಾರ್ ಹಾಗೂ ರಮ್ಯಾ ಎಂಬ ದಂಪತಿಯನ್ನು ಅರೆಸ್ಟ್ ಮಾಡಲಾಗಿದೆ. ನಕಲಿ ತುಪ್ಪ ತಯಾರಿಸುವುದಕ್ಕಾಗಿಯೇ ಇವರು ತಮಿಳುನಾಡಿನ ತಿರುಪತ್ತೂರಿನಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಫ್ಯಾಕ್ಟರಿ ತೆರೆದಿದ್ದರು. ಈ ಮೂಲಕ ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟದಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿರುವ ಕೃಷ್ಣ ಎಂಟರ್ಪ್ರೈಸಸ್ ಎಂಬ ಗೋದಾಮಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿರುವ ಬಗ್ಗೆ ಸಿಸಿಬಿ ಹಾಗೂ ಕೆಎಂಎಫ್ ಜಾಗೃತದಳ ಜಂಟಿ ಕಾರ್ಯಾಚರಣೆ ನಡೆಸಿ ನ.14ರಂದು ದಾಳಿ ನಡೆಸಿ ನಂದಿನಿ ಉತ್ಪನ್ನಗಳ ಅಧಿಕೃತ ಮಾರಾಟಗಾರ ಮಹೇಂದ್ರ, ಈತನ ಪುತ್ರ ದೀಪಕ್, ತಮಿಳುನಾಡು ಮೂಲದ ಮುನಿರಾಜು ಹಾಗೂ ಅಭಿ ಅರಸು ಎಂಬವರನ್ನು ಬಂಧಿಸಿ 1.26 ಕೋಟಿ…
Updated By: Priyalachhi ಚೆನ್ನೈ: ಒಂಬತ್ತು ಬಾರಿ ಶಾಸಕರಾಗಿರುವ ಉಚ್ಚಾಟಿತ ಎಐಎಡಿಎಂಕೆ ಶಾಸಕ ಕೆಎ ಸೆಂಗೋಟ್ಟೈಯನ್ ಅವರು ಬುಧವಾರ ತಮಿಳುನಾಡು ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ತೀವ್ರ ಊಹಾಪೋಹಗಳಿಗೆ ಕಾರಣವಾಗಿದೆ. ಸೆಂಗೋಟ್ಟೈಯನ್ ಅವರು ಇಂದು ರಾಜ್ಯ ಸಚಿವಾಲಯದಲ್ಲಿ ವಿಧಾನಸಭಾ ಸ್ಪೀಕರ್ ಎಂ ಅಪ್ಪಾವು ಅವರನ್ನು ಭೇಟಿ ಮಾಡಿ ಕೈಬರಹದ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಅದನ್ನು ಸ್ಪೀಕರ್ ಶೀಘ್ರದಲ್ಲೇ ಅಂಗೀಕರಿಸುವ ನಿರೀಕ್ಷೆಯಿದೆ. 72 ವರ್ಷದ ನಾಯಕ ಸೆಂಗೊಟ್ಟೈಯನ್ ಅವರು ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಸೇರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಮಧ್ಯೆ ಆಡಳಿತಾರೂಢ ಡಿಎಂಕೆ ಕೂಡ ಅವರನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸಿದೆ. ಸೆಂಗೊಟ್ಟೈಯನ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಲ್ಪ ಸಮಯದ ನಂತರ ಡಿಎಂಕೆ ಸಚಿವ ಪಿಕೆ ಶೇಖರಬಾಬು ಅವರೊಂದಿಗೆ ಚರ್ಚೆ ನಡೆಸಿದ್ದು, ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. ಸ್ಪೀಕರ್ ಗೆ ರಾಜೀನಾಮೆ ಪತ್ರ…
Updated By: Priyalachhi ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಬುಧವಾರ ಬಿಗ್ ರಿಲೀಫ್ ನೀಡಿದ್ದು, ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಹಾಗೂ ಇತರ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. 2022 ಆಗಸ್ಟ್ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರನ್ನು ಕೂಡ ನಿರ್ದೋಷಿ ಎಂದು ಕೋರ್ಟ್ ತೀರ್ಪು…
Updated By: Priyalachhi ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದರು. ಸಮಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ…
Updated By: Priyalachhi ಕಾರವಾರ: ನವೆಂಬರ್ 28 ರಂದು ಗೋವಾದ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದಲ್ಲಿ 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಅತ್ಯಂತ ಪೂಜ್ಯ ಮಠಗಳಲ್ಲಿ ಒಂದಾದ ಮಠ, ತನ್ನ 550 ನೇ ಸಂಸ್ಥಾಪನಾ ವಾರ್ಷಿಕೋತ್ಸವವನ್ನು ಸಾರ್ಥ ಪಂಚ ಶತಮಾನೋತ್ಸವ (550 ನೇ ವಾರ್ಷಿಕೋತ್ಸವ) ದೊಂದಿಗೆ ಆಚರಿಸಲು ಸಜ್ಜಾಗಿದೆ. ಮಾರ್ಗಶಿರ ಶುಕ್ಲ ಸಪ್ತಮಿಯಿಂದ ಮಾರ್ಗಶಿರ ಕೃಷ್ಣ ತೃತೀಯಾ ಅವಧಿಗೆ ಹೊಂದಿಕೆಯಾಗುವ 11 ದಿನಗಳ ಆಚರಣೆಯು ಪಾರ್ತಗಲಿಯ ಕೇಂದ್ರ ಮಠದಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 7 ರವರೆಗೆ ನಡೆಯಲಿದೆ ಎಂದು ಸಾರ್ಥ ಪಂಚ ಶತಮಾನೋತ್ಸವ ಸಮಿತಿಯ ಜಂಟಿ ಸಂಚಾಲಕ ಮುಕುಂದ್ ಕಾಮತ್ ಹೇಳಿದ್ದಾರೆ. ಸಾರ್ಧ ಪಂಚ ಶತಮಾನೋತ್ಸವ ಸಮಿತಿಯ ಸಂಚಾಲಕ ಪ್ರದೀಪ್ ಪೈ, ಶ್ರೀ ಕ್ಷೇತ್ರ ಬದರೀಕಾಶ್ರಮದಲ್ಲಿ ಶ್ರೀಮದ್ ನಾರಾಯಣ ತೀರ್ಥ ಸ್ವಾಮೀಜಿ ಅವರಿಂದ 1475 ಸಿಇ (ಮನ್ಮಥ ನಾಮ ಸಂವತ್ಸರ, ಚೈತ್ರ ಶುಕ್ಲ ದ್ವಿತೀಯ) ಮಠದ ಗುರುಪರಂಪರೆಯನ್ನು…
Updated By: Priyalachhi ಬೆಂಗಳೂರು: ದೆಹಲಿ ಅಂಗಳಕ್ಕೆ ತಲುಪಿರುವ ರಾಜ್ಯ ಕಾಂಗ್ರೆಸ್ ಪವರ್ ಫೈಟ್ ಇದೀಗ ಅಂತಿಮ ಘಟ್ಟಕ್ಕೆ ತಲುಪಿದಂತೆ ಕಂಡು ಬರುತ್ತಿದೆ. ಹೈ ಕಮಾಂಡ್ ಬಹುತೇಕ ಒಂದು ತೀರ್ಮಾನಕ್ಕೆ ಬಂದಿದ್ದು, ಸದ್ಯದಲ್ಲೇ ಉಭಯ ನಾಯಕರನ್ನು ಕರೆಸಿ ಪಟ್ಟದ ಗೊಂದಲವನ್ನು ಬಗೆಹರಿಸಲಿದೆ. ಕುತೂಹಲ ಘಟ್ಟಕ್ಕೆ ತಲುಪಿರುವ ರಾಜ್ಯದ ಪವರ್ ಫೈಟ್ ಇದೀಗ ಬಹುತೇಕ ಅಂತಿಮ ಹಂತಕ್ಕೆ ತಲುಪಿದಂತೆ ಕಂಡು ಬರುತ್ತಿದೆ. ಪವರ್ ಫೈಟ್ ಹಿನ್ನೆಲೆ ಬಣ ರಾಜಕೀಯ ಉಲ್ಬಣಗೊಂಡಿದ್ದು, ಹೈ ಕಮಾಂಡ್ಗೆ ಶೀಘ್ರ ಒಂದು ತೀರ್ಮಾನಕ್ಕೆ ಬರುವ ಅನಿವಾರ್ಯತೆ ಎದುರಾಗಿದೆ. ಇತ್ತ ಮೂರು ನಾಲ್ಕು ದಿನಗಳ ಕಾಲ ಬೆಂಗಳೂರಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯರ ಜೊತೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಇತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಖರ್ಗೆ ಬಳಿ ಅಧಿಕಾರ ಹಂಚಿಕೆಯ ಮಾತುಕತೆ ನಡೆಸಿದ್ದಾರೆ. ಸದ್ಯ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ರಾಜ್ಯ ರಾಜಕೀಯದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪವರ್…
Subscribe to Updates
Get the latest creative news from FooBar about art, design and business.