Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಳಗಾವಿ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ಅವರ ಸಂಬಂಧಿಕರು, ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಹುಟ್ಟೂರು ರಾಮದುರ್ಗದಲ್ಲಿ ನೀರವಮೌನ ಆವರಿಸಿದ್ದು, ವಿಷಯ ತಿಳಿದು ಜನ ಅವರ ಮನೆಯತ್ತ ದೌಡಾಯಿಸಿದ್ದಾರೆ. ಚಾಲಕನ‌ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ದುರ್ಮರಣ ಹೊಂದಿರುವ ಘಟನೆ‌ ಮಂಗಳವಾರ ಕಲಬುರಗಿ ಜಿಲ್ಲೆಯ ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಸಮೀಪ ನಡೆದಿದೆ. ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮಹಾಂತೇಶ ಅವರ ಚಿಕ್ಕಪ್ಪನ ಮಕ್ಕಳಾದ ಶಂಕರ್ ಬೀಳಗಿ ಮತ್ತು ಈರಣ್ಣ ಬೀಳಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಾಂತೇಶ ಬೀಳಗಿ ಅವರ ಕಾರು ಚಾಲಕ ರಾಜು ಹಾಗೂ ಈರಣ್ಣ ಶಿರಸಂಗಿ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಮಹಾಂತೇಶ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು, ಸ್ನೇಹಿತರು, ಸಾರ್ವಜನಿಕರು ರಾಮದುರ್ಗದ ಅವರ ಮನೆ ಮುಂದೆ ಜಮಾಯಿಸಿದ್ದಾರೆ. ನಗರದಲ್ಲಿ…

Read More

Updated By: Priyalachhi ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು. ಆದ್ದರಿಂದ ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದರು. 900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಭಾಂಶು ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ, ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ…

Read More

Updated By: Priyalachhi ಇಂದು ಭಾರತದ ಸಂವಿಧಾನ ದಿನ . ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ. ಇಂದಿನ ಲೇಖನದಲ್ಲಿ ಸಂವಿಧಾನ ದಿನದ ಪ್ರಾಮುಖ್ಯೆತೆಯ ಜತೆಗೆ ವಿದ್ಯಾರ್ಥಿಗಳು ಈ ದಿನದಂದು ಭಾಷಣ ಮಾಡಲು, ಪ್ರಬಂಧಕ್ಕೆ ಪ್ರಮುಖ ಅಂಶಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ. ಭಾರತ ಸಂವಿಧಾನ ದಿನದ ಭಾಷಣ ಮತ್ತು ಪ್ರಬಂಧಕ್ಕೆ ಸಲಹೆಗಳು ನವೆಂಬರ್ 26, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ.ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949 ರ ನವೆಂಬರ್ 26 ರಂದೇ, ಆದರೂ ಅನುಷ್ಠಾನಕ್ಕೆ ಬಂದಿದ್ದು 1950 ರ ಜನವರಿ 26…

Read More

Updated By: Priyalachhi ಶಿವಮೊಗ್ಗ: ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಗೆದ್ದ ಖುಷಿಯ ಮಧ್ಯೆ ದೇಶದ ವನಿತೆಯರ ಅಂಧರ T20 ತಂಡವೂ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಂಧ ವನಿತೆಯರ ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಅನೇಕ ಗಣ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ನವೆಂಬರ್ 23ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ದೀಪಿಕಾ ಟಿ.ಸಿ. ಅವರ ನಾಯಕತ್ವದ ಭಾರತ ತಂಡ ನೇಪಾಳವನ್ನು ಏಳು ವಿಕೆಟ್‌ಗಳಿಂದ ಮಣಿಸಿ ಐತಿಹಾಸಿಕ ವಿಜಯ ಸಾಧಿಸಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಭಾರತ ತಂಡ ನೇಪಾಳವನ್ನು 114/5 ರನ್‌ಗಳಿಗೆ ಅಲೌಟ್ ಮಾಡಿತು‌‌. ನಂತರ ಬ್ಯಾಟಿಂಗ್ ಮಾಡಿದ ಭಾರತೀಯರು ಕೇವಲ 12 ಓವರ್‌ಗಳಲ್ಲಿ 117/3 ರನ್‌ ಬಾರಿಸಿ, ಚೊಚ್ಚಲ T20 ವಿಶ್ವಕಪ್ ಎತ್ತಿಹಿಡಿದರು. ವಿಶ್ವಕಪ್ ಗೆದ್ದ ತಂಡದಲ್ಲಿ ರಾಜ್ಯದ ಮೂವರಿದ್ದರು. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬರುವೆ ಗ್ರಾಮದ ಕಾವ್ಯ…

Read More

Updated By: Priyalachhi ಬೆಂಗಳೂರು: ನಿಗದಿತವಾಗಿ ಗೊತ್ತುಪಡಿಸಿದ ಸ್ಥಳ (ರುದ್ರಭೂಮಿ) ಹೊರತುಪಡಿಸಿ ಇತರೆ ಜಾಗಗಳಲ್ಲಿ ಅನುಮತಿ ಇಲ್ಲದೆ ಮೃತದೇಹಗಳನ್ನು ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಇಂದು ಮೌಖಿಕವಾಗಿ ತಿಳಿಸಿದೆ. ತಮ್ಮ ಒಪ್ಪಿಗೆಯಿಲ್ಲದೆ ಸೊಸೆಯ ಶವವನ್ನು ಮನೆಯ ಬಳಿ ಹೂಳಲಾಗಿದ್ದು, ಸಮಾಧಿ ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಬಂಗಾರಪೇಟೆಯ ತುರಾಂಡಹಳ್ಳಿಯ ಹೆಚ್‌.ಗೋಪಾಲಗೌಡ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಮೃತದೇಹಗಳನ್ನು ಎಲ್ಲೆಂದರಲ್ಲಿ ಸಮಾಧಿ ಮಾಡುವುದು ಅತ್ಯಂತ ಸೂಕ್ಷ್ಮ ವಿಷಯ. ಈ ಪ್ರಕರಣ ಒಂದು ಶವ ಸಮಾಧಿ ಮಾಡುವುದು ಮಾತ್ರವಲ್ಲ, ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡಿದಲ್ಲಿ ಗಂಭೀರ ಪರಿಣಾಮ ಎದುರಾಗುತ್ತದೆ. ಎಲ್ಲೆಂದರಲ್ಲಿ ಸಮಾಧಿ ಮಾಡುವುದಕ್ಕೆ ಅವಕಾಶ ಸಿಕ್ಕಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದೆ. ನಿಗದಿತ ಸ್ಥಳ (ರುದ್ರಭೂಮಿ)ದಲ್ಲಿ ಹೊರತುಪಡಿಸಿ ಬೇರೆ ಸ್ಥಳದಲ್ಲಿ ಶವ ಹೂಳಲು ಅವಕಾಶವಿಲ್ಲ. ಇದಕ್ಕೆ ಅವಕಾಶ ನೀಡಿದಲ್ಲಿ ಮುಂದೊಂದಿನ ಕೊಲೆ ಪ್ರಕರಣಗಳಲ್ಲಿಯೂ ಮುಂದುವರೆಯುವ ಸಾಧ್ಯತೆ…

Read More

Updated By: Priyalachhi ದಾವಣಗೆರೆ: ನಿಮ್ಮ ಕುರ್ಚಿ ಬಡಿದಾಟದಿಂದಾಗಿ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಬೆಳಗಾವಿ ಅಧಿವೇಶನಕ್ಕೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಉತ್ತರ ಸಿಗುತ್ತದೆ ಎಂದು ಜನರು ಕಾಯುತ್ತಿದ್ದಾರೆ. ಆದರೆ ಸಿಎಂ ಕುರ್ಚಿ ಕದನ ಶುರುಮಾಡಿಕೊಂಡಿದ್ದಾರೆ. ಅಧಿವೇಶನಕ್ಕೂ ಮುನ್ನವೇ ನಿಮ್ಮ ಕುರ್ಚಿ ಸಮಸ್ಯೆಗೆ ಪರಿಹಾರ ಕಂಡುಕೊಂಡು ಬನ್ನಿ. ಇಲ್ಲವಾದ್ರೆ ಅಧಿವೇಶನದಲ್ಲಿ ಜನರ ಸಮಸ್ಯೆಗೆ ಪರಿಹಾರ ಎಲ್ಲಿ ಸಿಗುತ್ತೆ?. ಅಧಿವೇಶನ ಮುಂದೂಡಿದರೂ ಪರವಾಗಿಲ್ಲ, ನಿಮ್ಮ ಕುರ್ಚಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ರಾಜ್ಯಾದ್ಯಂತ ಹೋರಾಟ ಮಾಡಿದರೂ ಕಿವಿಕೊಡುತ್ತಿಲ್ಲ. ಸರ್ಕಾರದ ವಿರುದ್ಧ ರೈತರ ಪರವಾಗಿ ಹೋರಾಟ ಮಾಡಲು ನಾವು ನಿರ್ಧಾರ ಮಾಡಿದ್ದೇವೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ತಿಂಗಳು 27, 28ಕ್ಕೆ ಹೋರಾಟ ಮಾಡಲು ಸಿದ್ಧರಾಗಿದ್ದೇವೆ. ಡಿಸೆಂಬರ್ 1ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ…

Read More

Updated By: Priyalachhi ರಾಮನಗರ: ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರುವುದು, ಪಕ್ಷವನ್ನು ದುರ್ಬಲಗೊಳಿಸುವುದು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರಿದ್ದರೆ ನಾವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಇಂದು ಮಾಧ್ಯಮವರೊಂದಿಗೆ ಅವರು ಮಾತನಾಡಿದರು. ಅದು ಗುಟ್ಟಿನ ವಿಚಾರ, ಬಹಿರಂಗಪಡಿಸಲಾರೆ: ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ? ಎಂದು ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದರು. ಇದೇ ವೇಳೆ, ಸಿಎಂ ಹಿರಿಯ ನಾಯಕರು. ಅವರು ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ವಿರೋಧ ಪಕ್ಷದ ನಾಯಕರಾಗಿಯೂ ಅವರು ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ.…

Read More

Updated By: Priyalachhi ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವಿಷಯವು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ. ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲು ಇಂದು ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ ಖರ್ಗೆ, “ಇದು ಇಲ್ಲಿ ಮತ್ತು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ, ನಾನು ಪರಿಶೀಲನಾ ಸಭೆಗಳಲ್ಲಿ ಭಾಗವಹಿಸಬೇಕಾಗಿದೆ ಎಂದರು. ರಾಹುಲ್ ಗಾಂಧಿಯವರೊಂದಿಗಿನ ಅವರ ಸಂಭಾವ್ಯ ಭೇಟಿಯ ಬಗ್ಗೆ ಕೇಳಿದಾಗ, “ಅಧ್ಯಕ್ಷರು ಬೇರೆಲ್ಲಿಯೂ ಚರ್ಚಿಸುವುದಿಲ್ಲ ಎಂದು ನಿಮಗೆಲ್ಲರಿಗೂ ತಿಳಿದಿದೆ. ಸಭೆ ನಡೆದರೆ, ಆ ಬಗ್ಗೆ ನಾವು ಚರ್ಚಿಸುತ್ತೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ತಿಳಿಸಿದರು. ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ…

Read More

Updated By: Priyalachhi ನವದೆಹಲಿ/ಅಯೋಧ್ಯೆ: ರಾಮನಗರಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ. ಇದರ ದ್ಯೋತಕವಾಗಿ ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡಲಿದ್ದು, ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಿದ್ದಾರೆ. ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ ವಿಕಿರಣ ಸೂರ್ಯನ ಚಿತ್ರವುಳ್ಳ 10 ಅಡಿ ಎತ್ತರ ಮತ್ತು 20 ಅಡಿ ಉದ್ದದ ತ್ರಿಕೋನ ಧ್ವಜ ಇದಾಗಿದ್ದು, ಅದರ ಮೇಲೆ ಕೋವಿದರ ಮರದ ಚಿತ್ರದೊಂದಿಗೆ ‘ಓಂ’ ಅನ್ನು ಕೆತ್ತಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಹೇಳಿಕೆ ತಿಳಿಸಿದೆ. ಪವಿತ್ರ ಕೇಸರಿ ಧ್ವಜವು ಘನತೆ, ಏಕತೆ ಮತ್ತು ಸಾಂಸ್ಕೃತಿಕ ನಿರಂತರತೆಯ ಸಂದೇಶ ಸಾರುತ್ತದೆ. ರಾಮ ರಾಜ್ಯದ ಆದರ್ಶಗಳನ್ನು ಸಾಕಾರಗೊಳಿಸುವ ಸಾಧನವಾಗಿದೆ ಎಂದು ಪಿಎಂಒ ತಿಳಿಸಿದೆ. ನಾಗರಶೈಲಿಯಲ್ಲಿ ಗೋಪುರ ನಿರ್ಮಾಣ: ರಾಮ ಮಂದಿರದ ಮೇಲಿನ ಗೋಪುರವನ್ನು ಸಾಂಪ್ರದಾಯಿಕ ಉತ್ತರ ಭಾರತದ ನಾಗರ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾಗಿದೆ. ಅದರ ಮೇಲೆ ಧ್ವಜ ನೆಡಲಾಗುವುದು. ದೇವಾಲಯದ ಸುತ್ತಲೂ ನಿರ್ಮಿಸಲಾದ 800 ಮೀಟರ್…

Read More

Updated By: Priyalachhi ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್‌ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್‌ ಫಂಡ್‌ಗಳನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು, ಗುರ್ಗಾವ್‌ನಲ್ಲಿನ ಗೇಮಿಂಗ್‌ ಆ್ಯಪ್‌ ‘ವಿಂಜೋ’ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸುಮಾರು 505 ಕೋಟಿ ರೂ. ಮೌಲ್ಯದ ಬ್ಯಾಂಕ್ ಠೇವಣಿ, ಬಾಂಡ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಇಡಿ ವಶಪಡಿಸಿಕೊಂಡಿದೆ. ವಿಂಜೋ ಗೇಮ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಗ್ರಾಹಕರಿಗೆ ಮೋಸ ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ. ಗೇಮಿಂಗ್‌ ಹೆಸರಲ್ಲಿ ಕಂಪನಿಯು ರಹಸ್ಯವಾಗಿ ಅಲ್ಗರಿದಮ್‌ಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಬಳಸಿ ಗ್ರಾಹಕರನ್ನು ಸೋಲಿಸುತ್ತಿತ್ತು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ವಿಂಜೋ ಯುಎಸ್ ಇಂಕ್ ಎಂಬ ನಕಲಿ ಕಂಪನಿಯನ್ನು ಸೃಷ್ಟಿಸಿ, ಭಾರತದಿಂದ ಸುಮಾರು 55 ಮಿಲಿಯನ್ ಡಾಲರ್ (ಅಂದಾಜು 489.90 ಕೋಟಿ ರೂ.)…

Read More