Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಭಾರತೀಯ ಮಹಿಳಾ ಕಬಡ್ಡಿ ತಂಡ ವಿಶ್ವಕ್ಕೆ ಮತ್ತೊಮ್ಮೆ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದಿದ್ದ 2025ರ ಮಹಿಳಾ ಕಬಡ್ಡಿ ವಿಶ್ವಕಪ್ ಫೈನಲ್ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಪ್ರಶಸ್ತಿ ನಿರ್ಣಾಯಕ ಪಂದ್ಯದಲ್ಲಿ, ಭಾರತ ತಂಡವು ಬಲಿಷ್ಠ ಚೈನೀಸ್ ತೈಪೆಯನ್ನು 35-28 ಅಂತರದಿಂದ ಸೋಲಿಸುವ ಮೂಲಕ ಸತತ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯಾವಳಿಯಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋಲದೆ ಅಜೇಯವಾಗಿ ವಿಶ್ವಕಪ್ ಗೆದ್ದುಕೊಂಡಿರುವದು ವಿಶೇಷ. ರೋಚಕದಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವು ಭಾರತೀಯ ಮಹಿಳಾ ತಂಡಕ್ಕೆ ಕಠಿಣ ಸ್ಪರ್ಧೆ ನೀಡಿತು. ಆದಾಗ್ಯೂ, ಭಾರತೀಯ ನಾಯಕಿ ರಿತು ನೇಗಿ ಮತ್ತು ಉಪನಾಯಕಿ ಪುಷ್ಪಾ ರಾಣಾ ಅತ್ಯುತ್ತಮ ನಾಯಕತ್ವ ಕೌಶಲ್ಯವನ್ನು ಪ್ರದರ್ಶಿಸಿದರು. ವಿಶೇಷವಾಗಿ ಸಂಜು ದೇವಿ ಅವರ ಸೂಪರ್ ರೈಡ್ ತಂಡಕ್ಕೆ ನಿರ್ಣಾಯಕ ತಿರುವು ನೀಡಿ ಪಂದ್ಯದ ದಿಕ್ಕನ್ನು ಬದಲಾಯಿಸಿತು. ಇದರಿಂದಾಗಿ ಭಾರತಕ್ಕೆ ಗೆಲುವು ಸುಲಭವಾಯ್ತು. ಭಾರತ ತಂಡವು ಫೈನಲ್ನಲ್ಲಿ…
Updated By: Priyalachhi ಬೆಂಗಳೂರು : ಕೊಲೆಯಾದ ರೀತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ನೆಲಮಂಗಲ ಬಳಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ದೇವಿಶ್ರೀ (21) ಕೊಲೆಯಾದ ರೀತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ. ನೆಲಮಂಗಲ ಬಳಿಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕೆಯ ಜೊತೆ ರೂಮ್ಗೆ ಬಂದಿದ್ದ ಆಕೆಯ ಸ್ನೇಹಿತ ಘಟನೆ ಬಳಿಕ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಬೆನ್ನತ್ತಿದ್ದಾರೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ರೆಡ್ಡಪ್ಪ ಜಗದಂಭ ದಂಪತಿಯ ಮಗಳಾದ ದೇವಿಶ್ರೀ, ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದಿದ್ದಳು. ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ಈಕೆ, ತಮ್ಮೇನಹಳ್ಳಿಯ ಪಿಜಿಯೊಂದರಲ್ಲಿ ವಾಸವಾಗಿದ್ದಳು. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ, ನಾಪತ್ತೆಯಾಗಿರುವ ಆಕೆಯ ಸ್ನೇಹಿತನಿಗಾಗಿ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಲ ಶಂಕಿಸಿ ಪತ್ನಿಯ ಕೊಲೆ (ಪ್ರತ್ಯೇಕ ಘಟನೆ):…
Updated By: Priyalachhi ಬೆಂಗಳೂರು: ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) – RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ ಮಂಡ್ಯ – ನಗರ ಪಾಲಿಕೆ CAO ಪುಟ್ಟಸ್ವಾಮಿ ಬೀದರ್ – ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್ ಮೈಸೂರು – ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ರಾಮಸ್ವಾಮಿ ಸಿ ಧಾರವಾಡ – ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ ಧಾರವಾಡ – ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್ ಶಿವಮೊಗ್ಗ – SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್ ದಾವಣಗೆರೆ – APMC ಸಹ ನಿರ್ದೇಶಕ ಪ್ರಭು ಜೆ. ಮೈಸೂರು – ಮಡಿಕೇರಿ PWD, ಸ.ಅ. ಇಂಜಿನಿಯರ್ ಗಿರೀಶ್ ಡಿ.ಎಂ ಹಾವೇರಿ – ಶೇಕಪ್ಪ,…
Updated By: Priyalachhi ಮಂಗಳೂರು: ಶಿವಮೊಗ್ಗ ಜೈಲಿನಲ್ಲಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಸಾಕ್ಷಿ, ದೂರುದಾರ 45 ವರ್ಷದ ಚಿನ್ನಯ್ಯನಿಗೆ ಸೋಮವಾರ ಮಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಚಿನ್ನಯ್ಯ ಜಾಮೀನಿ ಕೋರಿ ಅರ್ಜಿ ಸಲ್ಲಿಸಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಶ್ಯೂರಿಟಿಗಳೊಂದಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಆರೋಪಿ ಇದೇ ರೀತಿಯ ಅಪರಾಧವನ್ನು ಮತ್ತೆ ಮಾಡಬಾರದು ಮತ್ತು ಪರಾರಿಯಾಗಬಾರದು, ಬೆದರಿಕೆ, ಪ್ರಚೋದನೆಗಳ ಮೂಲಕ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಹಾಳು ಮಾಡಬಾರದು ಮತ್ತು ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ನಾಶಪಡಿಸಬಾರದು ಎಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಅಲ್ಲದೆ, ಆರೋಪಿ ತನಿಖಾ ಅಧಿಕಾರಿಗೆ ಲಭ್ಯವಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದೆ. ಪೂರ್ವಾನುಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿಯನ್ನು…
Updated By: Priyalachhi ಬೆಂಗಳೂರು: ಪದೇ ಪದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವ ಆರೋಪಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸುವ ಸಂಬಂಧ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ ಬಳಿಕ, ಆದೇಶ ರದ್ದು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಂಧಿತರಿಗೆ ಮನವರಿಕೆ ಮಾಡದೇ ಇರುವುದು ಸಂವಿಧಾನ ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು. ಇದೇ ವೇಳೆ, ಮಾದಕ ಪದಾರ್ಥ ಮತ್ತದರ ಉತ್ಪನ್ನಗಳ ಅಕ್ರಮ ಸಾಗಣೆ ತಡೆಗಟ್ಟುವಿಕೆಗೆ ಕಾಯ್ದೆ(ಎನ್ಡಿಪಿಎಸ್)ಯಡಿ ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿ ಆದೇಶಿಸಿದೆ. ಮಾದಕ ವಸ್ತುಗಳ ಸಾಗಣೆ ಆರೋಪದಲ್ಲಿ ದಾಖಲಾದ 3 ಪ್ರಕರಣಗಳಲ್ಲಿ ಜಾಮೀನು ಪಡೆದ ಆರೋಪಿಯೊಬ್ಬರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಿದ್ದ ಪೊಲೀಸ್ ಆಯುಕ್ತರ ಕ್ರಮ ಪ್ರಶ್ನಿಸಿ, ಆರೋಪಿತರ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ ಮತ್ತು ನ್ಯಾ.ವೆಂಕಟೇಶ್ ನಾಯಕ್ ಟಿ. ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. ಅಲ್ಲದೆ, ಎನ್ಡಿಪಿಎಸ್ ಕಾಯಿದೆಯ ಸೆಕ್ಷನ್ 9(ಎಫ್)…
Updated By: Priyalachhi ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗುದ್ದಾಟ ಇದೀಗ ಮತ್ತೊಂದು ಸ್ವರೂಪಕ್ಕೆ ತಿರುಗಿದೆ. ದಿನಗಳೆದಂತೆ ಅಧಿಕಾರ ಹಂಚಿಕೆಯ ಚರ್ಚೆ ತೀವ್ರಗೊಳ್ಳುತ್ತಿದೆ. ದೆಹಲಿ ಪರೇಡ್ ಮುಂದುವರಿದಿದೆ. ಇದರ ಮಧ್ಯೆ, ಇದೀಗ ಕಾಂಗ್ರೆಸ್ ಪಾಳಯದಲ್ಲಿ ಶಾಸಕರಿಂದ ಸಹಿ ಸಂಗ್ರಹದ ಸದ್ದು ಜೋರಾಗಿ ಕೇಳಿ ಬರುತ್ತಿದೆ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇದೀಗ ಅಧಿಕಾರ ಹಂಚಿಕೆಯ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಬಣ ರಾಜಕೀಯ ಇನ್ನಷ್ಟು ತೀವ್ರ ಸ್ವರೂಪ ಪಡೆಯುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಆದರೆ, ಅಧಿಕಾರ ಹಸ್ತಾಂತರದ ಗೊಂದಲ ಬಗೆಹರಿದಿಲ್ಲ. ಹೈಕಮಾಂಡ್ ಇದುವರೆಗೆ ಗೊಂದಲ ನಿವಾರಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ, ಹೈಕಮಾಂಡ್ ತೀರ್ಮಾನ ವಿಳಂಬವಾಗುತ್ತಿರುವ ಬೆನ್ನಲ್ಲೇ ಬಣ ರಾಜಕೀಯದ ಬೆಳವಣಿಗೆ ಉಲ್ಬಣಿಸುತ್ತಿದೆ. ಡಿಕೆಶಿ ಆಪ್ತ ಶಾಸಕರ ಮತ್ತೊಂದು ಗುಂಪು ದೆಹಲಿ ಪರೇಡ್: ಈಗಾಗಲೇ ನಾಲ್ಕೈದು ಮಂದಿ ಡಿಸಿಎಂ ಡಿ.ಕೆ.ಶಿವಕುಮಾರ್…
Updated By: Priyalachhi ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಟ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್ ಆಗಿ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ಹೇಳಿವೆ. ಧರ್ಮೇಂದ್ರ ಅವರ ಪಾರ್ಥಿವ ಶರೀರವನ್ನು ಸ್ಮಶಾನಕ್ಕೆ ಕರೆದೊಯ್ಯಲಾಗಿದ್ದು, ಮಗಳು ಇಶಾ ಡಿಯೋಲ್ ಸೇರಿದಂತೆ ಅನೇಕ ಕುಟುಂಬಸ್ಥರು, ಸ್ನೇಹಿತರು, ಚಿತ್ರರಂಗದ ಗಣ್ಯರು ಆಗಮಿಸುತ್ತಿದ್ದಾರೆ. ಬಾಲಿವುಡ್ ಹಿರಿಯ ನಟರಾದ ಅಮಿತಾಬ್ ಬಚ್ಚನ್, ಅಮೀರ್ ಖಾನ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಸ್ಮಶಾನಕ್ಕೆ ಆಗಮಿಸಿದ್ದಾರೆ. 1960 ರಲ್ಲಿ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಧರ್ಮೇಂದ್ರ, 1960 ರ ದಶಕದಲ್ಲಿ ಅನ್ಪದ್, ಬಂದಿನಿ, ಅನುಪಮಾ…
Updated By: Priyalachhi ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾಜ್ಯದ ಯಾವುದೇ ಪಕ್ಷದಲ್ಲಿ ಸಿದ್ದರಾಮಯ್ಯರಂತಹ ಸಾಮರ್ಥ್ಯ ಹೊಂದಿರುವ ನಾಯಕರಿಲ್ಲ ಎಂದಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ನಾಗರಾಜ್, ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಅಗತ್ಯವಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದಲ್ಲೂ ಸಿದ್ದರಾಮಯ್ಯರಂತಹ ನಾಯಕರಿಲ್ಲ. ಅವರು ಅದ್ಭುತ ವಿಚಾರಗಳನ್ನು ಹೊಂದಿರುವ ವ್ಯಕ್ತಿ ಮತ್ತು ಮುಖ್ಯಮಂತ್ರಿಯಾಗಲು ಅಗತ್ಯವಿರುವ ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಎಂದರು. ಅವರು ಏಳು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಸಮರ್ಥವಾಗಿ ನಡೆಸಿದ್ದಾರೆ. ಅವರನ್ನು ಬದಲಾಯಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದರು.
Updated By: Priyalachhi ಬೆಂಗಳೂರು: ಬೆಂಗಳೂರಿನಲ್ಲಿ 30 ಕ್ಕೂ ಹೆಚ್ಚು ಜನರು ಕೇಸರಿ ಒಳಾಂಗಣ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ, ಕೇಸರಿ ಬೆಳೆಯುವ ವಿಧಾನಗಳು ಇತ್ತೀಚಿನ ವರ್ಷಗಳಲ್ಲಿ ಆರಂಭವಾಗಿದ್ದು, ಈಗ ಅವು ನಿಧಾನವಾಗಿ ಟ್ರೆಂಡ್ ಆಗುತ್ತಿವೆ. ಇದನ್ನು ಸಾಮಾನ್ಯವಾಗಿ ಗುಡ್ಡಗಾಡು ಅಥವಾ ಪರ್ವತ ಪ್ರದೇಶಗಳಲ್ಲಿ ಬೆಳೆಸಲಾಗುತ್ತದೆ. ಬೆಂಗಳೂರು ಸೇರಿ ಶೃಂಗೇರಿ, ಕುಣಿಗಲ್ ಮತ್ತು ತುಮಕೂರಿನಲ್ಲಿ ಈ ಪದ್ಧತಿ ವಿರಳವಾಗಿದ್ದರೂ ಸಹ ಪ್ರಚಲಿತವಾಗಿದೆ. ಬೆಂಗಳೂರು ಗುಡ್ಡಗಾಡು ಪ್ರದೇಶವಲ್ಲದಿದ್ದರೂ, ಅದರ ಎತ್ತರ ಮತ್ತು ಹವಾಮಾನವು ಕೇಸರಿ ಬೆಳೆಯಲು ಅನುಕೂಲಕರವಾಗಿದೆ ಎಂದು ಕರ್ನಾಟಕ ಕೇಸರಿ ರೈತರ ಸಂಘದ (ಕೆಎಸ್ಎಫ್ಎ) ಸಂಸ್ಥಾಪಕ ಮತ್ತು ಮುಖ್ಯ ಕಾರ್ಯದರ್ಶಿ ಲೋಕೇಶ್ ವೊಲಿವಿನ್ ಹೇಳಿದರು. ನಮ್ಮ ಹೆಚ್ಚಿನ ಸದಸ್ಯರು ಸಾಂಪ್ರದಾಯಿಕ ಕೃಷಿ ಕುಟುಂಬಗಳಿಂದ ಬಂದವರು, ಆದಾಗ್ಯೂ ಅವರಲ್ಲಿ ಹಲವರು ಪ್ರಸ್ತುತ ಐಟಿ, ಜೈವಿಕ ತಂತ್ರಜ್ಞಾನ, ಆರೋಗ್ಯ ಮತ್ತು ಸಂಶೋಧನೆ ಸೇರಿದಂತೆ ವಿವಿಧ ವೃತ್ತಿಪರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ವೈದ್ಯರು ಅಥವಾ ಅಧಿಕಾರಿಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವೊಲಿವಿನ್ ಹೇಳಿದರು.
Updated By: Priyalachhi ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪುಟ್ಟ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
Subscribe to Updates
Get the latest creative news from FooBar about art, design and business.