Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನೀರಾವರಿ ಇಲಾಖೆಗೆ ಸಂಬಂಧಿಸಿದ 61, 843 ಪ್ರಕರಣಗಳು ಬಾಕಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಒಪ್ಪಿತ ಭೂಸ್ವಾಧೀನಕ್ಕೆ ಪರಿಹಾರದ ಮೊತ್ತ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಇದಕ್ಕೆ ಸುಮಾರು 75 ಸಾವಿರ ಕೋಟಿ ರೂ. ಮೀಸಲಿರಿಸಲಾಗುವುದು. ವಿವಿಧ ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ 61, 843 ಪ್ರಕರಣಗಳಿವೆ ಎಂದರು. ಕಂದಾಯ ಇಲಾಖೆಯವರು ಬೆಂಗಳೂರು ವ್ಯಾಪ್ತಿಯಲ್ಲಿ ತನಿಖೆ ಮಾಡಲು ಆದೇಶ ಮಾಡಿದ್ದು, ಅಧಿಕಾರಿಗಳು, ಕಾನೂನು ತಂಡದವರು ಸೇರಿ ಸರಿಯಾದ ಸಮಯದಲ್ಲಿ ಅರ್ಜಿ…

Read More

Updated By: Priyalachhi ಬೆಂಗಳೂರು: “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ತಿಳಿಸಿದರು.

Read More

Updated By: Priyalachhi ಜೋಹಾನ್ಸ್ ಬರ್ಗ್: ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆಯ ನಡುವಿನ ಸಂಬಂಧ ಮುರಿಯಲು ಜಿ20 ವಿಶೇಷ ಉಪ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಶನಿವಾರ ಕರೆ ನೀಡಿದರು. ‘ಫೆಂಟನಿಲ್ ನಂತಹ ಅಪಾಯಕಾರಿ ಸಂಶ್ಲೇಷಿತ ಔಷಧಗಳ ಹರಡುವಿಕೆ, ಕಳ್ಳಸಾಗಣೆಯನ್ನು ತಡೆಗಟ್ಟಬೇಕಾಗಿದೆ ಮತ್ತು ಭಯೋತ್ಪಾದನೆ ಪ್ರೋತ್ಸಾಹಿಸುವ ಆರ್ಥಿಕ ಅಪರಾಧಕ್ಕೆ ಮಟ್ಟ ಹಾಕಬೇಕಾಗಿದೆ ಎಂದು ಹೇಳಿದರು. ಸಂಶ್ಲೇಷಿತ ಔಷಧಿಗಳು ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ, ಫೆಂಟನಿಲ್‌ನಂತಹ ವಸ್ತುಗಳು ಸಾರ್ವಜನಿಕ ಆರೋಗ್ಯ, ಸಾಮಾಜಿಕ ಸ್ಥಿರತೆ ಮತ್ತು ಪ್ರಪಂಚದಾದ್ಯಂತ ಭದ್ರತಾ ವ್ಯವಸ್ಥೆಗಳಿಗೆ ತೀವ್ರ ಅಪಾಯಗಳನ್ನುಂಟುಮಾಡುತ್ತವೆ ಎಂದು ಎಚ್ಚರಿಸಿದರು. ಮಾದಕವಸ್ತು ಕಳ್ಳಸಾಗಣೆ ಜಾಲಗಳನ್ನು ಅಡ್ಡಿಪಡಿಸಲು, ಅಕ್ರಮವಾಗಿ ಹಣದ ಹರಿವನ್ನು ನಿಲ್ಲಿಸಲು ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವುದನ್ನು ತಡೆಯಲು ಎಲ್ಲಾ ದೇಶಗಳು ಒಟ್ಟಾಗಿ ಆರ್ಥಿಕ ಮತ್ತು ಭದ್ರತಾ ಕ್ರಮಗಳನ್ನು ಬಳಸಬೇಕು’ ಎಂದು ಮೋದಿ ಹೇಳಿದರು. ಜಾಗತಿಕ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾಲ್ಕು ಹೊಸ ಉಪಕ್ರಮಗಳನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಇದರಲ್ಲಿ ಮಾದಕವಸ್ತು-ಭಯೋತ್ಪಾದನಾ ಸಂಬಂಧವನ್ನು ಎದುರಿಸುವ ಉಪಕ್ರಮವೂ ಸೇರಿದೆ…

Read More

Updated By: Priyalachhi ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷದ ನಡುವೆ ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ “ಸ್ಫೋಟಕ” ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶನಿವಾರ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜೆಡಿ(ಎಸ್) ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದರು. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Read More

Updated By: Priyalachhi ಹೊಂಬಾಳೆ ಫಿಲ್ಮ್ಸ್‌ನ ಮಹಾವತಾರ ನರಸಿಂಹ ಚಿತ್ರವು ಆಸ್ಕರ್ ಪ್ರಶಸ್ತಿ ಗೆಲ್ಲುವತ್ತ ಒಂದೊಂದೆ ಹೆಜ್ಜೆ ಹಾಕುತ್ತಾ ಸಾಗುತ್ತಿದೆ. 2026ರ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಸಲ್ಲಿಸಲ್ಪಟ್ಟಿದ್ದ ಅಶ್ವಿನ್ ಕುಮಾರ್ ನಿರ್ದೇಶನದ 2D ಮತ್ತು 3D ಅನಿಮೇಟೆಡ್ ಚಿತ್ರವನ್ನು ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ ವಿಭಾಗದ ಅಡಿಯಲ್ಲಿ ಶಾರ್ಟ್‌ಲಿಸ್ಟ್ ಮಾಡಲಾಗಿದೆ. ವಿಷ್ಣು ಮತ್ತು ರಾಜ ಹಿರಣ್ಯಕಶಿಪು ಮತ್ತು ಆತನ ಮಗ ಭಕ್ತ ಪ್ರಹ್ಲಾದನ ಕಥೆಯನ್ನು ಹೇಳುವ ಪೌರಾಣಿಕ ಕಥೆಯಾಗಿದ್ದು, ಈ ವಿಭಾಗದಲ್ಲಿ ಸ್ಪರ್ಧಿಸಲು ಆಯ್ಕೆಯಾದ 35 ಚಿತ್ರಗಳಲ್ಲಿ ಒಂದಾಗಿದೆ. ಈ ವಿಭಾಗದಲ್ಲಿ ದಿ ಬ್ಯಾಡ್ ಗೈಸ್ 2, ಝೂಟೋಪಿಯಾ 2, ಡೆಮನ್ ಸ್ಲೇಯರ್: ಕಿಮೆಟ್ಸು ನೋ ಯೈಬಾ ಇನ್ಫಿನಿಟಿ ಕ್ಯಾಸಲ್, ಕೆಪಾಪ್ ಡೆಮನ್ ಹಂಟರ್ಸ್, ದಿ ಸ್ಪಾಂಜ್‌ಬಾಬ್ ಮೂವಿ: ಸರ್ಚ್ ಫಾರ್ ಸ್ಕ್ವೇರ್‌ಪ್ಯಾಂಟ್ಸ್ ಮತ್ತು ದಿ ಟ್ವಿಟ್ಸ್, ಇತರವುಗಳು ಶಾರ್ಟ್‌ಲಿಸ್ಟ್ ಆಗಿವೆ. ಮಹಾವತಾರ ನರಸಿಂಹ ಚಿತ್ರವು ಅಂತಿಮ ನಾಮನಿರ್ದೇಶಿತರ ಪಟ್ಟಿಯಲ್ಲಿ ಸ್ಥಾನ ಪಡೆದರೆ, ಆ ವಿಭಾಗದಲ್ಲಿ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಅನಿಮೇಟೆಡ್ ಚಿತ್ರವಾಗಲಿದೆ.…

Read More

Updated By: Priyalachhi ಬೆಂಗಳೂರು: ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಐಟಿ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರು ನಗರ ಮತ್ತು ರಾಜಧಾನಿಗೆ ಹತ್ತಿರದಲ್ಲಿಯೇ ಇರುವ ಬೆಂಗಳೂರು ಗ್ರಾಮೀಣ ಭಾಗದ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವು ಅತ್ಯಂತ ಕಡಿಮೆಯಾಗಿದ್ದು, ರಾಜ್ಯದ ಸರಾಸರಿಗಿಂತ ಕಡಿಮೆಯಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಿಡುಗಡೆ ಮಾಡಿದ ಮಕ್ಕಳ ಹಕ್ಕುಗಳ ಸೂಚ್ಯಂಕ (CRI) ವರದಿ ತಿಳಿಸಿದೆ. ಬೆಂಗಳೂರು ನಗರದಲ್ಲಿ 3 ರಿಂದ 5 ನೇ ತರಗತಿಯವರೆಗಿನ ಮಕ್ಕಳಲ್ಲಿ ಕೇವಲ ಶೇಕಡಾ 17.6 ರಷ್ಚು ಮಕ್ಕಳು ಮಾತ್ರ 2 ನೇ ತರಗತಿಯ ಪಠ್ಯಪುಸ್ತಕವನ್ನು ನಿರರ್ಗಳವಾಗಿ ಓದಬಲ್ಲರು ಎಂಬ ಆತಂಕಕಾರಿ ವಿಷಯ ವರದಿಯಿಂದ ಬಹಿರಂಗವಾಗಿದೆ. ಬೆಂಗಳೂರು ಗ್ರಾಮೀಣ ಮಕ್ಕಳಿಗೆ ಇದು ಶೇಕಡಾ 17.3 ರಷ್ಟಾಗಿದೆ. ಬೆಂಗಳೂರು ಗ್ರಾಮೀಣ ಭಾಗದ ಮಕ್ಕಳಲ್ಲಿ ಕೇವಲ 44.7% ಮತ್ತು ಬೆಂಗಳೂರು ನಗರದಲ್ಲಿ 49.7% ಮಕ್ಕಳು ಸರಳ ವ್ಯವಕಲನ ಸಮಸ್ಯೆಗಳನ್ನು ಪರಿಹರಿಸಬಲ್ಲರು. ಇದು ರಾಜ್ಯದ ಸರಾಸರಿ 34% ಕ್ಕಿಂತ ಕಡಿಮೆಯಾಗಿದೆ. ಮಕ್ಕಳಲ್ಲಿ ಶಿಕ್ಷಣದ ಗುಣಮಟ್ಟ ತೀರಾ…

Read More

Updated By: Priyalachhi ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ನಾಲ್ವರನ್ನು ಬಂಧಿಸಿ, ಅವರಿಂದ ಸುಮಾರು 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶನಿವಾರ ಇಲ್ಲಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದಿದ್ದ ಎಟಿಎಂ ಹಣ ಸಾಗಾಟ ವೇಳೆ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ‘ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಗಳನ್ನು ಬಂಧಿಸಲಾಗಿದೆ. 5.76 ಕೋಟಿ ಹಣ ಸೀಜ್ ಮಾಡಲಾಗಿದೆ. ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಿಗಳನ್ನು ಬಂಧನ ಮಾಡಲಾಗಿದೆ. 30 ತಾಸು ತಡವಾಗಿ ಮಾಹಿತಿ ಬಂದಿದೆ. ಮೊದಲು ಡಿಜೆ ಹಳ್ಳಿಯಲ್ಲಿ ಆಗಿದೆ ಅಂತ ಮಾಹಿತಿ ಬಂದಿತ್ತು. ಘಟನೆ ನಡೆದ ಒಂದೂವರೆ ಗಂಟೆಯ…

Read More

Updated By: Priyalachhi ಹುಬ್ಬಳ್ಳಿ: ರಾಜ್ಯ ಸರ್ಕಾರ ರೈತರ ದಾರಿ ತಪ್ಪಿಸೋ ಕೆಲಸ ಮಾಡುತ್ತಿದೆ. ಅನುಭವ ಇರೋ ವ್ಯಕ್ತಿ ವಿಚಾರ ಮಾಡಿ ಮಾತನಾಡಬೇಕು. ಆದ್ರೆ ಸಿದ್ದರಾಮಯ್ಯ ಬಾಯಿಗೆ ಬಂದಂಗೆ ಮಾತನಾಡಿದ್ದಾರೆ. ಮೆಕ್ಕೆಜೋಳ 70 ಲಕ್ಷ ಟನ್ ಆಮದು ಮಾಡಿಕೊಂಡಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಸುಳ್ಳು ಹೇಳಲಿಕ್ಕಾದ್ರು ಏನಾದ್ರು ಬೇಕು‌. ನಾವು ಈ ವರ್ಷ ₹900 ಕೋಟಿ ಮೌಲ್ಯದ ಮೆಕ್ಕೆಜೋಳ ರಪ್ತು ಮಾಡಿದ್ದೇವೆ. ನಾಪೆಡ್​​ನವರು ಖರೀದಿ ಮಾಡಲು ತಯಾರಿದ್ದಾರೆ. ಅದಕ್ಕೆ ಇಂಡೆಂಟ್ ರಾಜ್ಯ ಸರ್ಕಾರ ಕೊಡಬೇಕು, ಕೊಟ್ಟಿಲ್ಲ. ಖಾನೇ ಕೆ ಲಿಯೇ ಮೈ ಲಡನೇ ಕೆ ಲಿಯೇ ಬಡಾ ಬಾಯಿ ಅನ್ನೋದು ಸಿದ್ದರಾಮಯ್ಯ ಸಿದ್ಧಾಂತವಾಗಿದೆ ಎಂದು ಲೇವಡಿ ಮಾಡಿದರು. ರಾಜ್ಯ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದೆ: ರಾಜ್ಯ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಗೃಹಲಕ್ಷ್ಮಿ ಹಣ ಆಗಸ್ಟ್​ನಿಂದ ಬಾಕಿಯಿದೆ. ರಾಜ್ಯ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು…

Read More

Updated By: Priyalachhi ಬೆಂಗಳೂರು: ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಮೆಕ್ಕೆಜೋಳ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸುವಂತೆ ಕೋರಿದ್ದಾರೆ. ಪ್ರಧಾನಿಗೆ ಸಿಎಂ ಪತ್ರ: ಮೆಕ್ಕೆಜೋಳ, ಹೆಸರುಕಾಳು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ ಕಡಿಮೆಯಾದ ಮಾರುಕಟ್ಟೆ ಬೆಲೆಗಳು ರೈತರಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿವೆ. ಈ ಖಾರಿಫ್ ಋತುವಿನಲ್ಲಿ ಕರ್ನಾಟಕದಲ್ಲಿ 17.94 ಲಕ್ಷ ಹೆಕ್ಟೇರಿಗೂ ಅಧಿಕ ಪ್ರದೇಶದಲ್ಲಿ ಮೆಕ್ಕೆಜೋಳ ಹಾಗೂ 4.16 ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶದಲ್ಲಿ ಹೆಸರುಕಾಳು ಬೆಳೆಯಲಾಗಿದ್ದು, ರಾಜ್ಯದಲ್ಲಿ ಸುಮಾರು 54.74 ಲಕ್ಷ ಮೆಟ್ರಿಕ್ ಟನ್‌ಗಿಂತ ಹೆಚ್ಚು ಮೆಕ್ಕೆಜೋಳ ಮತ್ತು ಹೆಸರುಕಾಳು 1.983 ಲಕ್ಷ ಮೆಟ್ರಿಕ್ ಟನ್​ಗೂ ಹೆಚ್ಚು ಉತ್ಪಾದನೆಯಾಗುವ ನಿರೀಕ್ಷೆಯಿದೆ ಎಂದು ಪತ್ರದಲ್ಲಿ ಸಿಎಂ ವಿವರಿಸಿದ್ದಾರೆ. ಇದು ಸಮೃದ್ಧಿಯ ಅವಕಾಶವಾಗಬೇಕಿತ್ತು, ಆದರೆ ಪ್ರಸ್ತುತ ಮಾರುಕಟ್ಟೆ ಸ್ಥಿತಿಯು ಇದನ್ನು ಸಂಕಷ್ಟವನ್ನಾಗಿ ಪರಿವರ್ತಿಸಿದೆ. ಕೇಂದ್ರ ಸರ್ಕಾರ…

Read More

Updated By: Priyalachhi ಬೆಂಗಳೂರು: ಇಂದು ಯಾರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೋ ಆ ಮಹಾನುಭಾವರೇ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ತೆಗೆದರು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಪ್ರಸ್ತಾಪಿಸದೆ ಅಸಮಾಧಾನ ಹೊರಹಾಕಿದ್ದಾರೆ. ಜೆಡಿಎಸ್​ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ಬೆಂಗಳೂರಿನಲ್ಲಿರುವ ಜೆಪಿ ಭವನದ ಪಕ್ಷದ ಕಚೇರಿಯ ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ, ಮಾಜಿ ಪ್ರಧಾನಿ ದೇವೇಗೌಡರು, ಹಿಂದಿನ ಮೈತ್ರಿ ಸರ್ಕಾರದ ಪಥನ ವಿಚಾರವನ್ನ ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು. ಈಗಿರುವ ಮುಖ್ಯಮಂತ್ರಿಯೇ ಅಂದಿನ ಮೈತ್ರಿ ಸರ್ಕಾರವನ್ನ ಉರುಳಿಸಿದ್ದರು, 18 ಜನರನ್ನ ದೆಹಲಿಗೆ ಕಳುಹಿಸಿದ್ದರು, ಸತ್ಯಕ್ಕೆ ಬೆಲ ಇದೆ, ಸತ್ಯ ಮುಚ್ಚಿಡಲು ಆಗಲ್ಲ, ಯಾರೂ ತಪ್ಪಿಸಿಕೊಳ್ಳೋಕೆ ಆಗಲ್ಲ, ದೈವದ ಅನುಗ್ರಹ ಇರುತ್ತದೆ ಎನ್ನುವ ಮೂಲಕ ದೊಡ್ಡಗೌಡರು ಸಿಎಂ ಸಿದ್ದರಾಮಯ್ಯ ಅವರನ್ನ ಮಾತಿನಲ್ಲೇ ಕುಟುಕಿದರು. ನಾಳೆ ಮತ್ತೆ ಪುನಃ ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಕೂತುಹಲ ಮೂಡಿಸಿದ್ರು. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿ ಅನುಭವ…

Read More