Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು, ಮೇ 18: ಕಳೆದ ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದ ರಾಜಧಾನಿ ಬೆಂಗಳೂರಿಗರಿಗೆ ವರುಣ ತಂಪೆರೆದಿದ್ದಾನೆ. ನಗರದ ವಿವಿಧೆಡೆ ಗಾಳಿ ಸಹಿತ ಮಳೆ ಸುರಿದಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದ ಸಮಸ್ಯೆಗೆ ಸಿಲುಕಿದ್ದು, ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಲ್ಲಿ, ಅಂಗಡಿ ಮುಂಗಟ್ಟುಗಳ ಎದುರು ಸವಾರರು ನಿಂತ ದೃಶ್ಯಗಳು ಕಂಡುಬಂದಿವೆ. ನಗರದ ಹಲವು ರಸ್ತೆಗಳು ಮಳೆ‌ನೀರಿನಿಂದ ಆವೃತವಾಗಿದ್ದು, ತಗ್ಗು ಪ್ರದೇಶದ ರಸ್ತೆಗಳು ಕೆರೆಯಂತಾಗಿವೆ. ಮುಖ್ಯಾಂಶಗಳು ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ವರುಣ ನಗರದ ವಿವಿಧೆಡೆ ಗಾಳಿ ಸಹಿತ ಸುರಿದ ಸಾಧಾರಣ ಮಳೆ ಮಳೆ ಕಾರಣ ಕೆಲವೆಡೆ ವಾಹನಗಳ ಸಂಚಾರಕ್ಕೆ ತೊಡಕು ವಸಂತನಗರ, ಸಿಟಿ ಮಾರ್ಕೆಟ್​​, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ. ನಗರ, ಬನಶಂಕರಿ, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ಇಂದಿರಾ ನಗರ, ಲಗ್ಗೆರೆ, ನಂದಿನಿ ಲೇಔಟ್,…

Read More

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರದಿಂದ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ. ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯಕ್ಕೆ ಶೇ 12.5 ವೇತನ ಪರಿಷ್ಕರಣೆಗೆ ಒಪ್ಪಿದೆ. ಅಲ್ಲದೆ, 26 ತಿಂಗಳ ವೇತನ ಹಿಂಬಾಕಿಯ ಮೊದಲ ಕಂತಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೌಕರರು ಸರ್ಕಾರದ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳು ಈಡೇರದ ಹೊರತು ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.…

Read More

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕರ್ನಾಟಕ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದ ನಾಯಕತ್ವ ಗೊಂದಲ ಸಂಪುಟ ಪುನಾರಚನೆ ಚರ್ಚೆಗೆ ಕೇರಳಂನಲ್ಲೇ ಸಿದ್ದರಾಮಯ್ಯ ಮನವಿ..? ತುಮಕೂರು ಸಾಧನಾ ಸಮಾವೇಶದ ಸುತ್ತ ರಾಜಕೀಯ ಜಿ. ಪರಮೇಶ್ವರ್ ಸಿಎಂ ಮಾಡಲು ವೇದಿಕೆ ಸಿದ್ಧತೆ? ಕೇರಳಂನಲ್ಲಿ ಕರ್ನಾಟಕ ಸಂಪುಟ ಪುನಾರಚನೆ ಚರ್ಚೆ ಕೇರಳಂನಲ್ಲಿ ಇಡೀ ಹೈಕಮಾಂಡ್ ನಾಯಕರೇ ಬೀಡು ಬಿಟ್ಟಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ ಮುಖ್ಯಮಂತ್ರಿಯಾಗಬೇಕು ಎಂದು ನಾವು ಹೇಳುತ್ತಿದ್ದೇವೆ ಎಂದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಎಂಟು ವರ್ಷಗಳ ಕಾಲ ಪರಮೇಶ್ವರ ಅವರ ಅಧಿಕಾರಾವಧಿಯನ್ನು ನೆನಪಿಸಿಕೊಂಡ ರಾಜಣ್ಣ, 2013ರಲ್ಲಿ ಪರಮೇಶ್ವರ್ ಗೆದ್ದಿದ್ದರೆ ಅವರೇ ಮುಖ್ಯಮಂತ್ರಿಯಾಗುತ್ತಿದ್ದರು ಎಂದರು. ಕೇರಳ ಭೇಟಿಯ ಸಂದರ್ಭದಲ್ಲಿ ಸಂಭಾವ್ಯ ಉನ್ನತ ಮಟ್ಟದ ಚರ್ಚೆಯ ಬಗ್ಗೆಯೂ ರಾಜಣ್ಣ ಸುಳಿವು ನೀಡಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್ ಅಲ್ಲಿಗೆ ಹೋಗುತ್ತಾರೆ. ಅಲ್ಲಿ ಏಕೆ ಚರ್ಚಿಸಬಾರದು? ಅದು ಕೂಡ ಒಂದು ಸಾಧ್ಯತೆ ಎಂದು ಅವರು ಹೇಳಿದರು. ಮುಖ್ಯಮಂತ್ರಿಯವರ ಪ್ರವಾಸ ಯೋಜನೆಯನ್ನು ಉಲ್ಲೇಖಿಸುತ್ತಾ, ನಾನು…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದಾಗ್ಯೂ, ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು ಮತ್ತು ವರದಿಗಳು ಕೇವಲ ವದಂತಿ ಎಂದು ದೃಢಪಡಿಸಿದರು. ಭಾನುವಾರ ರಾತ್ರಿಯಿಂದಲೇ ಈ ರೀತಿ ವದಂತಿಗಳು ಹರಡುತ್ತಿವೆ. ಇದರಿಂದಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಿರ ದೂರವಾಣಿ ಮೂಲಕ ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕೇಳುತ್ತಿದ್ದಾರೆ ಎಂದು ಹಿರಿಯ ಜೈಲು ಸಿಬ್ಬಂದಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. “ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿವೆ. ಅಂತಹ ವದಂತಿಗಳನ್ನು ನಂಬಿ ಯಾರೂ ಪರಪ್ಪನ ಅಗ್ರಹಾರ ಕೇಂದ್ರ ಜೈಲಿನ ಬಳಿ ಬರಬಾರದು ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮೈಸೂರು: ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ, ಅಭಿವೃದ್ಧಿ ಹೊಂದಿದ ಅನೇಕ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇನ್ನೂ ಇಂಧನ ದರ ಕಡಿಮೆಯೇ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ‘ಜನರೊಂದಿಗೆ ಜನತಾ ದಳ’ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಐದು ಗ್ಯಾರಂಟಿ ಯೋಜನೆಗಳಿಂದ ಜನರು ಸುಖವಾಗಿ ಬದುಕುತ್ತಿದ್ದಾರೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಅವರು ಪ್ರತಿದಿನ ನನ್ನ ಮನೆಗೆ ಬಂದರೆ ಜನರ ನಿಜವಾದ ಕಷ್ಟ ಏನು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು. ಇಂಧನ ದರ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಮೊದಲು ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಇರಾನ್–ಇಸ್ರೇಲ್–ಅಮೆರಿಕಾ ನಡುವಿನ ಜಾಗತಿಕ ಉದ್ವಿಗ್ನತೆಯಿಂದ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ವಿಶ್ವದಾದ್ಯಂತ ಇಂಧನ ದರ ಏರಿಕೆಯಾಗಿದೆ. “ಅಭಿವೃದ್ಧಿ ಹೊಂದಿದ ಅನೇಕ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಅವರ ಸ್ಥಾನದಿಂದ ತೆಗೆದುಹಾಕಿತ್ತು. ಇದೇ ವಿಷಯಕ್ಕೆ ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಸ್ವರೂಪ ಪಡೆದುಕೊಂಡ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಶ್ರೀಕಾಕುಳಂ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ಜನಸಂಖ್ಯಾ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ ಶನಿವಾರ ಮಹತ್ವ ಘೋಷಣೆ ಮಾಡಿದ್ದು, ಮೂರನೇ ಮಗು ಪಡೆಯುವ ದಂಪತಿಗೆ 30,000 ಮತ್ತು ನಾಲ್ಕನೇ ಮಗುವಿನ ಜನನಕ್ಕೆ 40,000 ಆರ್ಥಿಕ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಾಯ್ಡು, ರಾಜ್ಯ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಹೆಚ್ಚುವರಿ ವಿವರಗಳನ್ನು ಒಂದು ತಿಂಗಳೊಳಗೆ ಪ್ರಕಟಿಸಲಾಗುವುದು ಎಂದು ಹೇಳಿದರು. “ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿಸಲು ನಾನು ಹೊಸ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಪಡೆಯುವ ದಂಪತಿಗೆ ನಾವು 30,000 ಮತ್ತು ನಾಲ್ಕನೇ ಮಗುವಿಗೆ 40,000 ನೀಡುತ್ತೇವೆ. ಇದು ಸರಿಯಾದ ನಿರ್ಧಾರವಲ್ಲವೇ?” ಎಂದು ಸ್ವರ್ಣಆಂಧ್ರ–ಸ್ವಚ್ಛಆಂಧ್ರ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ನಾಯ್ಡು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ನಾಯ್ಡು ಈ ಹಿಂದೆ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಬೆಂಬಲಿಸಿದ್ದರು. ಪ್ರಸ್ತುತ ಜನಸಂಖ್ಯಾ ಪರಿಸ್ಥಿತಿಯು ಜನನ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೂಪಾಯಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಇದನ್ನು “ಜನವಿರೋಧಿ” ತೀರ್ಮಾನ ಎಂದು ಹೇಳಿದರು. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ದೇಶದ ಆರ್ಥಿಕತೆಯನ್ನು ದುರುಪಯೋಗವಾಗಿ ನಿರ್ವಹಿಸಿ ಜನರನ್ನು ವಿಫಲಗೊಳಿಸಿರುವ ಕಾರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುವ ಮೂಲಕ ಮೋದಿ ಸರ್ಕಾರ ತನ್ನ ವೈಫಲ್ಯಗಳ ಭಾರವನ್ನು ಜನರ ಮೇಲೆ ಹಾಕುತ್ತಿದೆ. ಕೇಂದ್ರ ಸರ್ಕಾರದ ವಿಫಲ ವಿದೇಶಾಂಗ ನೀತಿ, ದುರ್ಬಲ ಆರ್ಥಿಕ ನಿರ್ವಹಣೆ ಮತ್ತು ಬೆಲೆ ಏರಿಕೆಯ ಹೊರೆ ಜನರು ಅನುಭವಿಸುತ್ತಿದ್ದಾರೆ. ಜನರನ್ನು ರಕ್ಷಿಸುವ ಬದಲು, ಮೋದಿ ಸರ್ಕಾರ ಅವರನ್ನು ಆದಾಯ ಸಂಗ್ರಹಿಸುವ ಸಾಧನವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 106 ರೂಪಾಯಿ ಮತ್ತು ಡೀಸೆಲ್ ಬೆಲೆ ಸುಮಾರು 94 ರೂಪಾಯಿಯಷ್ಟಿದೆ. ಈ ಬೆಲೆ…

Read More

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ದೇಶದ ಜನತೆಗೆ ಇಂಧನ ಮಿತವ್ಯಯದ ಬಗ್ಗೆ ಕರೆ ನೀಡಿದ್ದರು. ಪೆಟ್ರೋಲ್ ಮತ್ತು ಡೀಸಲ್ ಬಳಕೆಯನ್ನು ಕಡಿಮೆ ಮಾಡಬೇಕು, ಅನವಶ್ಯಕ ವಾಹನ ಸವಾರಿಯನ್ನು ತಗ್ಗಿಸಬೇಕು, ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಕೆಗೆ ಒತ್ತು ಕೊಡಬೇಕು ಎಂದು ಸಲಹೆ ನೀಡಿದ್ದರು. ಪ್ರಧಾನಿಯ ಕರೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ತಮ್ಮ ನಡೆಗೆ ಬದಲಾವಣೆ ತರುವ ಪ್ರಯತ್ನ ಮಾಡಿದ್ದಾರೆ. ತಮ್ಮ ಅಧಿಕೃತ ಕಾರು ಮತ್ತು ಬೆಂಗಾವಲು ವಾಹನಗಳನ್ನು ಕಡಿಮೆ ಮಾಡಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾದ ಮೆಟ್ರೋ ರೈಲನ್ನು ಬಳಸುವ ನಿರ್ಧಾರ ಮಾಡಿದ್ದಾರೆ. ಸಾರ್ವಜನಿಕರ ಸಾರಿಗೆ ಮೊರೆ ಹೋದ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂಂದ್ರ ಸಾರ್ವಜನಿಕರ ಸಾರಿಗೆ ಮೊರೆ ಹೋಗಿದ್ದಾರೆ. ಪಕ್ಷದ ಸಭೆ, ಕಾರ್ಯಕ್ರಮಗಳಿಗೆ ಹೋಗುವಾಗ ಕಾರು ಬಿಟ್ಟು ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ಅವರು ಮೆಜೆಸ್ಟಿಕ್ ನಿಂದ ಕೆಂಗೇರಿವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿ, ಸಾಮಾನ್ಯ ಜನರ ನಡುವೆ ನಿಂತು, ಕುಳಿತು…

Read More