Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ಬಾಸ್ ಶೋ’ ವೀಕ್ಷಕರ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ವಿವಾದವೂ ಹೆಚ್ಚಾಗುತ್ತಿದೆ. ಈ ಬಾರಿ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಪೈಕಿ ಅಶ್ವಿನಿ ಗೌಡ ಅವರ ಆಕ್ರಮಣಕಾರಿ ಸ್ವಭಾವ ಕುರಿತು ವೀಕ್ಷಕರಿಂದ ಟೀಕೆಗಳು ವ್ಯಕ್ತವಾಗುತ್ತಿವೆ. ರಕ್ಷಿತಾ, ಗಿಲ್ಲಿ, ರಘು ಸೇರಿದಂತೆ ಮತ್ತಿತರ ಸ್ಪರ್ಧಿಗಳೊಂದಿಗೆ ಆಗಾಗ್ಗೆ ಜಗಳ, ಪದ ಬಳಕೆ ಸೇರಿದಂತೆ ಮತ್ತಿತರ ಕಾರಣಗಳನ್ನು ಮುಂದಿಟ್ಟು ಅನೇಕ ವೀಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಕಿಡಿಕಾರುತ್ತಿದ್ದಾರೆ. ಈ ಹಿಂದೆ ರಕ್ಷಿತಾ ಅವರನ್ನು s(ಸ್ಲಂ) ಎಂದಿದ್ದ ಅಶ್ವಿನಿ ಗೌಡ, ಅಮಾವಾಸ್ಯೆ ಅಂತಲೂ ಕರೆಯುವ ಮೂಲಕ ಅವಮಾನಿಸಿದ್ದಾರೆ ಎಂದು ವೀಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸುದೀಪ್ ವಿರುದ್ಧವೂ ಟೀಕೆ: ಅಲ್ಲದೇ, ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ವಿರುದ್ಧವೂ ಟೀಕೆಗಳು ಕೇಳಿಬರುತ್ತಿವೆ. ವಾರಾಂತ್ಯದಲ್ಲಿ ಬೇರೆ ಎಲ್ಲರಿಗೂ ತಿದ್ದಿ ಬುದ್ದಿವಾದ ಹೇಳುವ ಸುದೀಪ್, ಅಶ್ವಿನಿ ಗೌಡ ವಿಚಾರದಲ್ಲಿ ಮೌನ ವಹಿಸುತ್ತಾರೆ. ವಾರ್ನಿಂಗ್ ನೀಡಲ್ಲ ಎಂದು ಎಷ್ಟೋ ವೀಕ್ಷಕರು…
Updated By: Priyalachhi ನವದೆಹಲಿ: ಮುಸ್ಲಿಂ ಸಮುದಾಯ ಭವನಗಳಿಗಾಗಿ ರಾಜ್ಯ ಸರ್ಕಾರ ರೂ. 67 ಕೋಟಿ ಮಂಜೂರು ಮಾಡಿರುವ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಓಲೈಕೆ ರಾಜಕಾರಣ ಮತ್ತು ತುಷ್ಟೀಕರಣಕ್ಕೆ ಸ್ವಲ್ಪ ಮಿತಿಯಿರಬೇಕು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಖಜಾನೆಯನ್ನು ಕೇವಲ ಒಂದೇ ಸಮುದಾಯಕ್ಕೆ ವಿನಿಯೋಗಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ. ಮುಸ್ಲಿಂರಿಗೆ ಉದಾರಿ ಈ ಸಿಎಂ: ರಾಜ್ಯದ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿಯಾಗಿದ್ದಾರೆ. ರೈತರಿಗೆ ಪರಿಹಾರ ನೀಡಲು ಹಿಂದೆಮುಂದೆ ನೋಡುತ್ತಾರೆ. ನೌಕರರ ಸರಿಯಾಗಿ ಸಕಾಲಕ್ಕೆ ಸಂಬಳ ಕೊಡಲು ಹಣವಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿಗೆ ಹಣವಿಲ್ಲ, ಹದಗೆಟ್ಟ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಸಹ ಹಣವಿಲ್ಲ ಎನ್ನುವ ಸರ್ಕಾರ ಮುಸ್ಲಿಂ ಅಂದರೆ ಸಾಕು ಧಾರಾಕಾರವಾಗಿ ಅನುದಾನ ಮಂಜೂರು ಮಾಡ್ತದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ಒಂದೇ…
Updated By: Priyalachhi ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮನೆಕೆಲಸದಾಕೆ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ವಿರುದ್ಧ ಮ್ಯಾಜಿಸ್ಟ್ರೇಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣವನ್ನು ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ) ಅಡಿಯಲ್ಲಿ ದಾಖಲಿಸಿ ನಂತರ ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಲಾಗಿತ್ತು. “ದೂರು ದಾಖಲಿಸುವಲ್ಲಿನ ವಿಳಂಬವನ್ನು ಕ್ಷಮಿಸಲು ಮತ್ತು ಅರ್ಜಿದಾರ ಹೆಚ್ ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ದಾಖಲಿಸಿದ ಅಪರಾಧಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶ ನೀಡಲು ಇದು ಸೂಕ್ತವಾದ ಪ್ರಕರಣವೇ ಎಂದು ಪರಿಗಣಿಸಲು ಈ ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹೊಳೆನರಸೀಪುರದಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿದ್ದ 47 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ನ್ನು ಪ್ರಶ್ನಿಸಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಆದೇಶವನ್ನು ನ್ಯಾಯಮೂರ್ತಿ ಎಂಐ…
Updated By: Priyalachhi ಮೈಸೂರು: ನನಗೀಗ 78 ವರ್ಷ ತುಂಬಿ, 79ನೇ ವರ್ಷ ನಡೆದಿದೆ. ನಾನಂತೂ ಕನಿಷ್ಠ ನೂರು ವರ್ಷ ಬಾಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಈಗ 79 ವರ್ಷ 4 ತಿಂಗಳು ಆಗಿದೆ. ನಾನಂತೂ 100 ವರ್ಷ ಬದುಕುತ್ತೇನೆ. ಗಾಂಧೀಜಿಗೆ ಒಬ್ರು ಪತ್ರ ಬರೆದು, 100 ವರ್ಷ ಬದುಕಿ ಅಂತ ಹೇಳಿದ್ದರು. ಆಗ ನಾನು 125 ವರ್ಷ ಬದುಕಬೇಕು ಅಂತಿದ್ದೇನೆ ಅಂತ ಗಾಂಧಿ ಉತ್ತರ ಕೊಟ್ಟಿದ್ದರು ಅಂತ ಸ್ಮರಿಸಿಕೊಂಡ್ರು. ನಾನೂ ಕೂಡ 100 ವರ್ಷ ಬದುಕುತ್ತೇನೆ ಎಂದು ನಗುತ್ತಾ ಸಿದ್ದರಾಮಯ್ಯ ಹೇಳಿದ್ರು. ಜನರ ಆಶೀರ್ವಾದ ಇದ್ದಾಗಲಷ್ಟೇ ನಾವು ಅಧಿಕಾರದಲ್ಲಿರಲು ಸಾಧ್ಯ. ಒಟ್ಟು 16 ಚುನಾವಣೆ ಎದುರಿಸಿದ್ದು, ನಾಲ್ಕು ಬಾರಿ ಸೋತಿದ್ದೇನೆ’ ಎಂದರು. ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಶುಕ್ರವಾರ ವಕೀಲ ರವಿವರ್ಮಕುಮಾರ್ ಅವರಿಗೆ, ‘ಡಿ.ದೇವರಾಜ ಅರಸು–ಎಲ್.ಜಿ. ಹಾವನೂರು’ ಪ್ರಶಸ್ತಿ ಪ್ರದಾನ ಮಾಡಿದರು. ಹಿಂದೆ ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ, ಕೆಲ ಜ್ಯೋತಿಷಿಗಳು ಸಿ.ಎಂ ಸ್ಥಾನವೇ…
Updated By: Priyalachhi ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ)ಗೆ ಡಿಸೆಂಬರ್ 7ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಿ, ಅಂದೇ ಫಲಿತಾಂಶ ಪ್ರಕಟಿಸಬೇಕು ಎಂದು ಕೆಎಸ್ಸಿಎ ಚುನಾವಣಾಧಿಕಾರಿಗಳಿಗೆ ಹೈಕೋರ್ಟ್ ಇಂದು ನಿರ್ದೇಶನ ನೀಡಿತು. ಚುನಾವಣಾ ದಿನಾಂಕವನ್ನು ನವೆಂಬರ್ 30ರ ಬದಲಿಗೆ ಡಿಸೆಂಬರ್ 30ಕ್ಕೆ ಮುಂದೂಡಿದ ಚುನಾವಣಾಧಿಕಾರಿಯೂ ಆಗಿರುವ ನಿವೃತ್ತ ಐಎಎಸ್ ಅಧಿಕಾರಿ ಡಾ.ಬಿ.ಸಬರಾಜು ಅವರು ನವೆಂಬರ್ 17ರಂದು ಹೊರಡಿಸಿದ್ದ ಪತ್ರ ರದ್ದು ಕೋರಿ ಕೆಎಸ್ಸಿಎ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಈಗಾಗಲೇ ನಿಗದಿಪಡಿಸಿದ್ದ ದಿನಾಂಕದಂದು ಚುನಾವಣೆ ನಡೆಸಲು ನಿರ್ದೇಶನ ಕೋರಿ ಕೆಎಸ್ಸಿಎ ಸದಸ್ಯ ಬಿ.ಕೆ.ರವಿ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಚುನಾವಣೆಯನ್ನು ನವೆಂಬರ್ 30ರ ಬದಲಿಗೆ ಡಿಸೆಂಬರ್ 30ಕ್ಕೆ ಮುಂದೂಡಿ ನವೆಂಬರ್ 17ರಂದು ಹೊರಡಿಸಿದ್ದ ಪತ್ರವನ್ನು ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುಭಾಶ್ ಬಿ.ಅಡಿ ಅವರ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ನಿರ್ದೇಸಿಸಿ…
Updated By: Priyalachhi ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ಕೂಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಪಕ್ಷದ ಹೈಕಮಾಂಡ್ ಕುಳಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು. ಇಂದು ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಚೆಲುವರಾಯಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕೂಗಿದ್ದು, ಯಾವುದಾರೂ ಒಂದು ಆಗುತ್ತದೆ. ಸಿಎಂ-ಡಿಸಿಎಂ ಮತ್ತು ಹೈಕಮಾಂಡ್ ಕುಳಿತು ಬಗೆಹರಿಸಲಿದ್ದಾರೆ ಎಂದರು. ಮಾಧ್ಯಮ ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗ. ಊಹಾಪೋಹಗಳನ್ನು ಮೀರಿ ಸುದ್ದಿ ಮಾಡಲಾಗುತ್ತಿದೆ. ಇದು ದೇಶದ ವ್ಯವಸ್ಥೆಯಲ್ಲಿ ದುರದೃಷ್ಟಕರ, ನಿಮ್ಮ ಮೇಲೆ ಕೇಸ್ ಹಾಕಲು ಆಗುವುದಿಲ್ಲ ಎಂದು ಮಾಧ್ಯಮದ ವಿರುದ್ಧ ಸಚಿವರು ಬೇಸರ ವ್ಯಕ್ತಪಡಿಸಿದರು. ನಾನು ದೆಹಲಿಗೆ ಹೋಗಿದ್ದು ನೂರಕ್ಕೆ ನೂರು ಕೃಷಿಗೆ ಸಂಬಂಧಿಸಿದ ವಿಚಾರಕ್ಕೆ. MSP ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದೆ, ಇಂದು ಬೆಳಗ್ಗೆ ವಿಡಿಯೋ ಕಾನ್ಸರೆನ್ಸ್ನಲ್ಲಿ ಸಿಎಂ ಜೊತೆ ಚರ್ಚೆ…
Updated By: Priyalachhi ಮೈಸೂರು: ನಾನು ಈಗಲೂ ಸಹ ಮಾತಿಗೆ ತಪ್ಪಿಲ್ಲ, ಎಲ್ಲ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. “ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪಲ್ಲ” ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ಇದೇ ಸಂದರ್ಭದಲ್ಲಿ, ರಾಜ್ಯದ ಮುಂದಿನ ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ ಹಾಗೂ ಸಿಎಂ ಆಗಿಯೂ ನಾನೇ ಮುಂದುವರೆಯುತ್ತೇನೆ ಎಂದು ಪುನರುಚ್ಚರಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳ ಜೊತೆ ಸಿಎಂ ಮಾತನಾಡಿದರು. ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಹೇಳಿದಂತೆ ನಾನೂ ಕೇಳಬೇಕು ಹಾಗೂ ಡಿ.ಕೆ.ಶಿವಕುಮಾರ್ ಮತ್ತು ಎಲ್ಲ ಶಾಸಕರು, ಸಚಿವರೂ ಕೇಳಬೇಕು ಎಂದರು. ನಾಳೆ ಬೆಂಗಳೂರಿಗೆ ಬರುತ್ತಿರುವ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡುತ್ತೇನೆ. ಹೈಕಮಾಂಡ್ ಹೇಳಿದಂತೆ ನಾವೆಲ್ಲ ಕೇಳಬೇಕು. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಎಥನಾಲ್ ಉತ್ಪಾದನೆ, ಕಬ್ಬಿಗೆ ಎಂಎಸ್ಪಿ ದರ ನಿಗದಿ ಹಾಗೂ ರಾಜ್ಯಕ್ಕೆ…
Updated By: Priyalachhi ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿ ಮಾಡಿರುವ ಕೋಟಾ ಪ್ರಮಾಣ ಅತ್ಯಂತ ಕಡಿಮೆ ಇದೆ. ಇದರಿಂದಾಗಿ ಖರೀದಿದಾರರಿಂದ ಮೆಕ್ಕೆಜೋಳದ ಖರೀದಿ ಪ್ರಮಾಣವೂ ಕಡಿಮೆಯಾಗಿದೆ ಎಂಬ ಅಭಿಪ್ರಾಯ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವ್ಯಕ್ತವಾಯಿತು. ಸಭೆಯಲ್ಲಿ ಪ್ರಸ್ತಾಪವಾದ ಪ್ರಮುಖ ವಿಷಯಗಳು: ಒಂದು ಕಡೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಾಗಿದೆ. ಈ ಬಗ್ಗೆ ಮಾಹಿತಿ ಇದ್ದೂ ಕೂಡ ಕೇಂದ್ರ ಸರ್ಕಾರ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದ ಮತ್ತು ದೇಶದ ಮೆಕ್ಕೆಜೋಳ ಬೆಳೆದ ರೈತರಿಗೆ ವಿಪರೀತ ಹೊರೆ ಆಗಿದೆ. ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿ ಮಾಡಿರುವ ಕೋಟಾ ಪ್ರಮಾಣವೂ…
Updated By: Priyalachhi ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಹಲವು ಕೇಳಿಬರುತ್ತಿರುವ ನವೆಂಬರ್ ಕ್ರಾಂತಿ ಕುರಿತು ಕುತೂಹಲಕಾರಿ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ‘ನನ್ ಹತ್ರ ಯಾವ್ ಬಣ್ಣನೂ ಇಲ್ಲ.. ನಾನು ಎಲ್ಲ 140 ಶಾಸಕರಿಗೂ ಅಧ್ಯಕ್ಷ’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿಕೆ ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಇದರ ಬೆನಲ್ಲೇ ಇತ್ತ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಸಚಿವ ರಹಸ್ಯ ಸಭೆ ನಡೆಸಿದ್ದು, ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ಈ ಬಣ ರಾಜಕೀಯ ಚಟುವಟಿಕೆಗಳ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಎಲ್ಲ 140 ಶಾಸಕರಿಗೂ ಅಧ್ಯಕ್ಷ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಕಳೆದ ಎರಡೂವರೆ ವರ್ಷಗಳಿಂದ ಸಾಕಷ್ಟು ಔತಣಕೂಟ ನಡೆದಿದೆ.…
Updated By: Priyalachhi ದುಬೈ: ದುಬೈ ಏರೋ ಶೋ ವೇಳೆ ಶುಕ್ರವಾರ ಮಧ್ಯಾಹ್ನ ಭಾರತದ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸುತ್ತಿದ್ದ ವಿಮಾನ ನೋಡ ನೋಡುತ್ತಿದ್ದಂತೆಯೇ ಬೆಂಕಿಯುಂಡೆಯಾಗಿ ನೆಲಕ್ಕೆ ಅಪ್ಪಳಿಸಿದೆ. ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ. ಪೈಲಟ್ನ ಸ್ಥಿತಿ ಅಥವಾ ಸ್ಫೋಟ ಸಂಭವಿಸಿದೆಯೇ ಎಂಬುದರ ಕುರಿತು ಅಧಿಕಾರಿಗಳು ತಕ್ಷಣಕ್ಕೆ ದೃಢಿಕರಿಸಿಲ್ಲ. ಭಾರತೀಯ ವಾಯುಪಡೆಯಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ. ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನಗಳಲ್ಲಿ ಒಂದಾದ ದ್ವೈವಾರ್ಷಿಕ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ. ಎಮಿರೇಟ್ಸ್ ಮತ್ತು ಪ್ಲೈ ದುಬೈನಿಂದ ಬಹು ಬಿಲಿಯನ್ ಡಾಲರ್ ಮೊತ್ತದ ವಿಮಾನ ಖರೀದಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಏರ್ ಶೋ ವೇಳೆಯಲ್ಲಿ ಘೋಷಿಸಲಾಗಿದೆ. ಇದು…
Subscribe to Updates
Get the latest creative news from FooBar about art, design and business.