Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಹೈದರಾಬಾದ್​: ಬೆಂಗಳೂರಿನಿಂದ ಹೈದರಾಬಾದ್​​​​​ಗೆ ಆಂಧ್ರಪ್ರದೇಶದ ಮೂಲಕ ಹೈ – ಸ್ಪೀಡ್ ಗ್ರೀನ್‌ಫೀಲ್ಡ್ ಕಾರಿಡಾರ್ ನಿರ್ಮಿಸಲು ಯೋಜನೆ ಸಿದ್ಧವಾಗುತ್ತಿದೆ. ಇದು ಆಂಧ್ರ ಪ್ರದೇಶದ ಕರ್ನೂಲ್, ನಂದ್ಯಾಲ್, ಅನಂತಪುರ ಮತ್ತು ಶ್ರೀ ಸತ್ಯ ಸಾಯಿ ಜಿಲ್ಲೆಗಳ ಮೂಲಕ ಹಾದು ಹೋಗುತ್ತದೆ. ಅಸ್ತಿತ್ವದಲ್ಲಿರುವ ಹೈದರಾಬಾದ್ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ – 44ಕ್ಕೆ ಸಮಾನಾಂತರವಾಗಿ ನಿರ್ಮಿಸಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ಮೂರು ಜೋಡಣೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಇವುಗಳಲ್ಲಿ ಒಂದನ್ನು ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ (MoNH) ಜೋಡಣೆ ಅನುಮೋದನೆ ಸಮಿತಿಯು ಅನುಮೋದನೆ ನೀಡುತ್ತದೆ. ಜಸ್ಟ್​ 5 ಗಂಟೆಗಳಲ್ಲಿ ಬೆಂಗಳೂರಿಗೆ: ಪ್ರಸ್ತುತ NH – 44 ರಲ್ಲಿ ಹೈದರಾಬಾದ್ ನಿಂದ ಬೆಂಗಳೂರಿಗೆ ಪ್ರಯಾಣಿಸಲು 8-9 ಗಂಟೆಗಳು ಬೇಕಾಗುತ್ತದೆ. ಹೊಸದಾಗಿ ನಿರ್ಮಿಸಲಾಗುವ ಹೈ-ಸ್ಪೀಡ್ ಕಾರಿಡಾರ್ ಅನ್ನು ಕೇವಲ 5 ಗಂಟೆಗಳಲ್ಲಿ ತಲುಪಲು ಅನುಕೂಲವಾಗುವಂತೆ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಈ ರಸ್ತೆಯಲ್ಲಿ ವಾಹನಗಳು 120 ಕಿ.ಮೀ ವೇಗದಲ್ಲಿ ಚಲಿಸುವಂತೆ ವಿನ್ಯಾಸವನ್ನು ಮಾಡಲಾಗುತ್ತಿದೆ. ಆರು ಪಥಗಳಿರುವ ಗ್ರೀನ್‌ಫೀಲ್ಡ್ ಕಾರಿಡಾರ್: ವಾಸ್ತವವಾಗಿ, ಪ್ರಸ್ತುತ NH-44…

Read More

Updated By: Priyalachhi ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಹಮ್ಮಿಕೊಂಡಿದ್ದ ವೇಳೆ ನಡೆದಿದ್ದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದ ಘಟನೆಯ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ವರದಿಯನ್ನು ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಆಯೋಗ ರಚನೆ ಮಾಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್​​ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಮತ್ತು ನ್ಯಾಯಮೂರ್ತಿ ತಾರಾ ವಿತಾಸ್ತಾ ಗಂಜು ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ರಾಜ್ಯ ಸರ್ಕಾರದ ನಿಲುವು ಅರ್ಜಿದಾರರಾದ ಡಿಎನ್ಎ ಎಂಟರ್ಟೈನ್ಮೆಂಟ್ ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ಹೇಳಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಾಕಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಾಧ್ಯಮಗಳಲ್ಲಿ ಡಿಎನ್ಎ ಮತ್ತು ಅದರ…

Read More

Updated By: Priyalachhi ನವದೆಹಲಿ/ಬೆಂಗಳೂರು: ಉದ್ಯೋಗದ ಆಸೆಗೆ ಬಿದ್ದು ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿಕೊಂಡಿದ್ದ 25 ಮಂದಿ ಕನ್ನಡಿಗರು ಸೇರಿ ಒಟ್ಟು 125 ಮಂದಿ ಭಾರತೀಯರನ್ನು ರಕ್ಷಣೆ ಮಾಡಲಾಗಿದ್ದು, ಥೈಲ್ಯಾಂಡ್ ನಿಂದ ಭಾರತಕ್ಕೆ ಬುಧವಾರ ಕರೆತರಲಾಗಿದೆ. ಇದರೊಂದಿಗೆ, ಈ ವರ್ಷದ ಮಾರ್ಚ್‌ನಿಂದ ಮಯನ್ಮಾರ್‌ನ ಕಳ್ಳಸಾಗಣೆ ಕೇಂದ್ರಗಳಿಂದ ಒಟ್ಟು 1,500 ಭಾರತೀಯರನ್ನು ಥೈಲ್ಯಾಂಡ್ ಮೂಲಕ ದೇಶಕ್ಕೆ ಮರಳಿ ಕರೆತರಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಆಗ್ನೇಯ ಏಷ್ಯಾದ ಕಳ್ಳಸಾಗಣೆ ಕೇಂದ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಭಾರತ ಸರ್ಕಾರದ ಪ್ರಯತ್ನಗಳ ಭಾಗವಾಗಿ, ಬ್ಯಾಂಕಾಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಥೈಲ್ಯಾಂಡ್‌ನ ಚಿಯಾಂಗ್ ಮಾಯ್ ಪ್ರಾಂತ್ಯದಲ್ಲಿರುವ ಭಾರತೀಯ ದೂತವಾಸವು ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಥಾಯ್ ಸರ್ಕಾರ ಮತ್ತು ಟಕ್ ಪ್ರಾಂತ್ಯದ ವಿವಿಧ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಕೆಲಸ ಮಾಡಿದೆ. ಅಲ್ಲದೇ, ಭಾರತೀಯ ನಾಗರಿಕರು ವಿದೇಶಗಳಲ್ಲಿ ಉದ್ಯೋಗಾವಕಾಶ ಸ್ವೀಕರಿಸುವ ಮೊದಲು ವಿದೇಶಿ ಉದ್ಯೋಗದಾತರ ರುಜುವಾತುಗಳನ್ನು ಪರಿಶೀಲಿಸಲು ಮತ್ತು ನೇಮಕಾತಿ ಏಜೆಂಟ್‌ಗಳು ಮತ್ತು…

Read More

Updated By: Priyalachhi ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವ ಚಿಕ್ಕ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ‘ಒಂಬತ್ತು ತಿಂಗಳಿನಿಂದ ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕರೆದುಕೊಂಡು ಹೋಗುವಾಗ, ಮಕ್ಕಳು ಹೆಲ್ಮೆಟ್ ಧರಿಸುವುದು ಕಡ್ಡಾಯ’ ಎಂದು ನ್ಯಾಯಮೂರ್ತಿ ವಿಭು ಬಬ್ರು ಅವರು ನೇತೃತ್ವ ವಹಿಸಿದ್ದ ವಿಭಾಗೀಯ ನ್ಯಾಯಪೀಠ ತೀರ್ಪು ನೀಡಿದೆ. ಶಿವಮೊಗ್ಗದ ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಕೆ. ಅರ್ಚನಾ ಭಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶವನ್ನು ನೀಡಿದೆ. ಕೇಂದ್ರ ನಿಯಮಗಳನ್ನು ಜೋರಾಗಿ ಜಾರಿಗೆ ತರಲು ಆದೇಶ ನ್ಯಾಯಪೀಠವು ತನ್ನ ತೀರ್ಪಿನಲ್ಲಿ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೋಟಾರು ವಾಹನ ನಿಯಮಗಳನ್ನು ತಕ್ಷಣವೇ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಸ್ಪಷ್ಟಪಡಿಸಿದೆ. “ಈ ನಿಯಮಗಳನ್ನು ಜಾರಿಗೆ ತರಲು ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ, ವಾಸ್ತವವಾಗಿ ಅವುಗಳಾವುವೂ ಕಠಿಣ ರೀತಿಯಲ್ಲಿ ಜಾರಿಗೆ…

Read More

Updated By: Priyalachhi ಬೆಂಗಳೂರು ನಗರ ಜಿಲ್ಲೆ, ನವೆಂಬರ್ 20 (ಕರ್ನಾಟಕ ವಾರ್ತೆ) ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದರು. ಇಂದು ಸರ್ವಜ್ಞ ನಗರದ ವಸತಿ ಸಂಕೀರ್ಣ ಹಾಗೂ ಕೊಳಗೇರಿ ಪ್ರದೇಶಗಳಿಗೆ ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಮಾತನಾಡಿದ ಅವರು ಕೊಳಗೇರಿ ಪ್ರದೇಶಗಳ ವಸ್ತುಸ್ಥಿತಿ ಪರಿಶೀಲಿಸದರಲ್ಲದೆ, ಕೊಳೇರಿ ನಿವಾಸಿಗಳಿಗೆ ತುರ್ತಾಗಿ ಆಗಬೇಕಿರುವ ವಸತಿ ಸೌಕರ್ಯಗಳು ಹಾಗೂ ಅದಕ್ಕೆ ಅಗತ್ಯವಿರುವ ಹಣಕಾಸಿನ ಕುರಿತು ಚರ್ಚಿಸಿದರು. ವಸತಿ ಇಲಾಖೆಯು ಕರ್ನಾಟಕ ಗೃಹಮಂಡಳಿ ಮೂಲಕ ನಿರ್ಮಿಸಿದ ವಸತಿ ಸಂಕೀರ್ಣದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ಆದಷ್ಟು ಬೇಗ ವಸತಿ ಸೌಕರ್ಯವನ್ನು ಅಭಿವೃದ್ದಿಪಡಿಸಬೇಕಿದೆ. ಈ ನಿಟ್ಟಿನಲ್ಲಿ 684 ಮನೆಗಳನ್ನು ಗುರುತಿಸಿದ್ದು, ತಕ್ಷಣವೇ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ ಎಂದು ವಸತಿ ಸಚಿವರಿಗೆ ವಿವರಿಸಿದರು. ಕಾಚರಕನಹಳ್ಳಿಗೆ ಹೊಂದಿಕೊಂಡಿರುವ ಕೊಳಗೇರಿ ಪ್ರದೇಶಕ್ಕೆ…

Read More

Updated By: Priyalachhi ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ರೋಚಕ ಘಟ್ಟ ತಲುಪಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಿತ ಓರ್ವ ಸಚಿವರು ಹಾಗೂ ಕೆಲವು ಶಾಸಕರು ಗುರುವಾರ ದಿಢೀರ್ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಧಿಕಾರ ಹಂಚಿಕೆ ವಿಚಾರ ಕಾಂಗ್ರೆಸ್ ನಲ್ಲಿ ಭುಗಿಲೆದಿದ್ದು, ಡಿಕೆ ಶಿವಕುಮಾರ್ ಪರವಾಗಿರುವ ಶಾಸಕರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಇನ್ನೂ ಎರಡೂವರೆ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಐದು ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಮೇ 20, 2023 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆಗ ಹೈಕಮಾಂಡ್ ಡಿಕೆ ಶಿವಕುಮಾರ್ ಅವರ ಮನವೊಲಿಸಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ಅಲ್ಲದೇ…

Read More

Updated By: Priyalachhi ತಿರುಮಲ: ಹಿಂದೂಗಳ ಪವಿತ್ರ ಧಾರ್ಮಿಕ ಯಾತ್ರಾತಾಣ ವಿಶ್ವ ವಿಖ್ಯಾತ ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ವಿಶೇಷ ದರ್ಷಶನಕ್ಕೆ ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ ಆನ್ ಲೈನ್ ಟಿಕೆಟ್ ವಿತರಣೆ ಆರಂಭಿಸಿದೆ. ಹೌದು.. ತಿರುಮಲ ತಿರುಪತಿ ದೇವಸ್ಥಾನಗಳು ವೈಕುಂಠ ಏಕಾದಶಿ ದರ್ಶನದ ವೇಳಾಪಟ್ಟಿಯನ್ನು ದೃಢಪಡಿಸಿದ್ದು, ವರ್ಷಾಂತ್ಯದ ಭಾರೀ ಜನದಟ್ಟಣೆಯನ್ನು ನಿರ್ವಹಿಸಲು ಸ್ಪಷ್ಟ ವ್ಯವಸ್ಥೆಗಳನ್ನು ಮಾಡಿದೆ. ಮೊದಲ 3 ದಿನಗಳಲ್ಲಿ ಆನ್‌ಲೈನ್ ಇ-ಡಿಪ್ ಟೋಕನ್ ಹೊಂದಿರುವವರಿಗೆ ಮಾತ್ರ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಟಿಟಿಡಿ ಘೋಷಿಸಿದೆ. ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 30ರಿಂದ ಜನವರಿ 8ರವರೆಗೆ 10 ದಿನಗಳ ಕಾಲ ವೈಕುಂಠ ದ್ವಾರ ದರ್ಶನವನ್ನು ಮುಂದುವರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಸಿಎಂ ನೇತೃತ್ವದಲ್ಲಿ ಮಹತ್ವ ನಿರ್ಣಯಗಳು ಇನ್ನು ವೈಕುಂಠ ಏಕಾದಶಿ ನಿಮಿತ್ತ ತಿರುಮಲದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಟಿಟಿಡಿ ಮತ್ತು ಸಿಎಂ ಚಂದ್ರಬಾಬು ನಾಯ್ಡು ಅವರು ಮಹತ್ವದ ಸಭೆ ನಡೆಸಿದರು. ಈ…

Read More

Updated By: Priyalachhi ಮೈಸೂರು: ದೇಶದಲ್ಲೇ ಅತ್ಯಂತ ವ್ಯವಸ್ಥಿತ ನಗರಗಳಲ್ಲಿ ಒಂದಾದ ಸಾಂಸ್ಕೃತಿಕ ನಗರಿ ಮೈಸೂರು ಏರ್ ಕ್ವಾಲಿಟಿ ಇಂಡೆಕ್ಸ್​ನಲ್ಲಿ (ವಾಯು ಗುಣಮಟ್ಟ ಸೂಚ್ಯಂಕ) ಅಂದರೆ ಶುದ್ಧ ಗಾಳಿ ಹೊಂದಿರುವ ರಾಜ್ಯದ ನಗರಗಳಲ್ಲಿ ಮೊದಲ ಸ್ಥಾನ ಹಾಗೂ ದೇಶದಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಬಿಡುಗಡೆ ಮಾಡಿದ್ದು, ಮತ್ತೊಮ್ಮೆ ಮೈಸೂರು ಸ್ವಚ್ಛ ನಗರಿ ಎಂಬುದನ್ನು ಸಾಬೀತುಪಡಿಸಿದೆ. ಈ ಬಗ್ಗೆ ಪಾಲಿಕೆಯ ತೋಟಗಾರಿಕೆ ಇಲಾಖೆಯ ವಿಭಾಗದ ಮುಖ್ಯಸ್ಥರಾದ ಮೋಹನ್ ಕುಮಾರ್ ಈಟಿವಿ ಭಾರತ​ಕ್ಕೆ ವಿವರಿಸಿದ್ದಾರೆ. “ಮೈಸೂರಿನಲ್ಲಿ ಒಟ್ಟು 65 ವಾರ್ಡ್​ಗಳಿದ್ದು ವಿಜಯನಗರ ಮೂರನೇ ಹಂತ ಸಹ ಮೈಸೂರು ನಗರ ಪಾಲಿಕೆಗೆ ಸೇರುತ್ತದೆ. ಇಲ್ಲಿಯವರೆಗೆ 585 ಉದ್ಯಾನವನಗಳು ಇವೆ. ಇವುಗಳಲ್ಲಿ 332 ಉದ್ಯಾನವನಗಳನ್ನು ಗುತ್ತಿಗೆದಾರರ ಮುಖಾಂತರ ನಿರ್ವಹಣೆ ಮಾಡಲಾಗುತ್ತಿದೆ. ಹಾಗೂ ಕೆಲವು ಆಸಕ್ತ ಸಂಘ ಸಂಸ್ಥೆಗಳು, CSR ಫಂಡ್ ಹಾಗೂ ಸಾರ್ವಜನಿಕರು ದತ್ತು ತೆಗೆದುಕೊಂಡು ಸುಮಾರು 12 ರಿಂದ 13 ಪಾರ್ಕಅನ್ನು ನೋಡಿಕೊಳ್ಳುತ್ತಿದ್ದಾರೆ”. ನಗರ ಸೌಂದರ್ಯಕ್ಕೆ ರಸ್ತೆ ಮಧ್ಯ ಹೂ ಗಿಡಗಳು:…

Read More

Updated By: Priyalachhi ಬೆಳ್ತಂಗಡಿ (ದಕ್ಷಿಣ ಕನ್ನಡ) : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​​ಐಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ. 20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಯ ವರದಿಯನ್ನು ಸಲ್ಲಿಸಿದೆ. ಬೆಳ್ತಂಗಡಿ ಎಸ್​​ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು ಸೆಕ್ಷನ್​ 215ರ ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ. ಹೆಚ್. ಟಿ ಮುಂದೆ ಇಂದು (ನ.20) ಮಧ್ಯಾಹ್ನ 3:15 ಗಂಟೆಗೆ ಸಲ್ಲಿಕೆ ಮಾಡಿದ್ದಾರೆ. ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐವರು ಆರೋಪಿಗಳು ತನಿಖೆಗೆ…

Read More

Updated By: Priyalachhi ಬೆಂಗಳೂರು: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಬಿಡುಗಡೆ ಮಾಡಿದ ಬೆಂಗಳೂರು ನಾವೀನ್ಯತೆ ವರದಿಯಲ್ಲಿ, ಬೆಂಗಳೂರು 2035 ರವರೆಗೆ ವಾರ್ಷಿಕ ಶೇ. 8.5 ರಷ್ಟು ಬೆಳೆವಣಿಗೆ ಸಾಧಿಸುತ್ತಿದೆ ಎಂದು ಹೇಳಲಾಗಿದ್ದು, ಸಿಲಿಕಾನ್ ಸಿಟಿ ಮುಂಬೈ(6.6%) ಮತ್ತು ದೆಹಲಿ(6.5%)ಗಿಂತ ಬಹಳ ಮುಂದಿದೆ. ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ(ಜಿಸಿಸಿ) ಶೇ. 40 ರಷ್ಟು ಬೆಂಗಳೂರಿನಲ್ಲಿ ನೆಲೆಗೊಂಡಿದ್ದು, ಇದು ದೇಶದಲ್ಲಿಯೇ ಅತಿ ಹೆಚ್ಚು, ಮತ್ತು ಇದು 2029ರ ವೇಳೆಗೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ. ಜಾಗತಿಕ ತಂತ್ರಜ್ಞಾನ ದೈತ್ಯರು ಭಾರತದ ಎಐ-ಕ್ವಾಂಟಮ್ ಕಂಪ್ಯೂಟಿಂಗ್ ಹಾಟ್‌ಸ್ಪಾಟ್ ಆಗಲು ಬೆಂಗಳೂರನ್ನು ಏಕೆ ಆಯ್ಕೆ ಮಾಡುತ್ತಿದ್ದಾರೆ ಎಂಬುದನ್ನು ಈ ವರದಿ ಎತ್ತಿ ತೋರಿಸುತ್ತಿದೆ. ವರದಿಯ ಪ್ರಕಾರ, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ವೃತ್ತಿಪರರ ಸರಾಸರಿ ವಾರ್ಷಿಕ ವೇತನ 12,000 ಡಾಲರ್ ಆಗಿರುವುದರಿಂದ ಕಾರ್ಪೊರೇಟ್ ವೆಚ್ಚ ಕಡಿಮೆ ಇದೆ. ಇದು ಇತರ ಅಂತರರಾಷ್ಟ್ರೀಯ ನಗರಗಳಿಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಜಾಗತಿಕ ತಂತ್ರಜ್ಞಾನ ದೈತ್ಯರು ಬೆಂಗಳೂರನ್ನು ಆಯ್ಕೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕಚೇರಿ ಸ್ಥಳ ಬಾಡಿಗೆಯ…

Read More