Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ಚಿತ್ತೂರು: ಬೆಂಗಳೂರಿನಲ್ಲಿ ನಡೆದ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ಪ್ರಕರಣದ ಸಂಬಂಧ ಇಬ್ಬರನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸೌತ್ ಎಂಡ್ ಸರ್ಕಲ್ ನಿಂದ ನಿನ್ನೆ ಮಧ್ಯಾಹ್ನ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳಲ್ಲಿ ಇಬ್ಬರು ಶಂಕಿತರನ್ನು ತಿರುಪತಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರೋಪಿಗಳಿಂದ ಮಹತ್ವದ ಮಾಹಿತಿ ಇದೇ ವೇಳೆ ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಈ ವೇಳೆ ಬಂಧಿತರು ಇತರೆ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ…

Read More

Updated By: Priyalachhi ಚಾಮರಾಜನಗರ: ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ‌ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು. ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ: ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ತಿಳಿಸಿದರು. ಇದೇ ವೇಳೆ,…

Read More

Updated By: Priyalachhi ಇಂಗ್ಲೆಂಡ್ ಪರ ಆಡಿದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಒಬ್ಬರಾದ ಕೆವಿನ್ ಪೀಟರ್ಸನ್, ತಮ್ಮ ದೇಶದಲ್ಲಿ ಮಾತ್ರವಲ್ಲದೆ ಏಷ್ಯಾ ಉಪಖಂಡದಲ್ಲಿಯೂ ಅಪಾರ ಅಭಿಮಾನಿಗಳ ಹೃದಯಗಳನ್ನು ಗೆದ್ದಿದ್ದಾರೆ. ಪೀಟರ್ಸನ್ ಭಾರತದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಕ್ರಿಕೆಟಿಗನಾಗಿ ಸಕ್ರಿಯರಾಗಿದ್ದ ದಿನಗಳಲ್ಲಿಯೂ ಸಹ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸುವ ಮೂಲಕ ಪೀಟರ್ಸನ್ ದೇಶದಲ್ಲಿ ಅಭಿಮಾನಿಗಳನ್ನು ಗಳಿಸಿದ್ದಾರೆ. ಪೀಟರ್ಸನ್ ಈಗಲೂ ಒಬ್ಬ ಪಂಡಿತ, ತಜ್ಞ ಮತ್ತು ತರಬೇತುದಾರನಾಗಿ ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಅವರು ಭಾರತದ ಬಗ್ಗೆ ತಮ್ಮ ಮೆಚ್ಚುಗೆಯನ್ನು ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಬುಧವಾರ, ಪೀಟರ್ಸನ್ ಅಂತಿಮವಾಗಿ ದೊಡ್ಡ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ‘ನಾನು ಏಕೆ ಯಾವಾಗಲೂ ಭಾರತದ ಪರ ಇರುತ್ತೇನೆ ಎಂದು ಜನರು ಆಗಾಗ್ಗೆ ಕೇಳುತ್ತಾರೆ. ಉತ್ತರ ಸರಳವಾಗಿದೆ: 20 ವರ್ಷಗಳಿಗೂ ಹೆಚ್ಚು ಕಾಲ ಮತ್ತು ಡಜನ್‌ಗಟ್ಟಲೆ ಪ್ರವಾಸಗಳಲ್ಲಿ, ನಾನು ಒಮ್ಮೆಯೂ ಅಗೌರವ, ನಕಾರಾತ್ಮಕತೆ, ಬೆನ್ನಿಗೆ ಇರಿತ ಅಥವಾ ಕೆಟ್ಟ ಶಕ್ತಿಯನ್ನು ಎದುರಿಸಿಲ್ಲ. ಒಮ್ಮೆ ಅಲ್ಲ! ಪ್ರತಿ ಬಾರಿಯೂ…

Read More

Updated By: Priyalachhi ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ದೋಷರಹಿತ ವ್ಯವಸ್ಥೆಗಳ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಸೂಚನೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನಕ್ಕೆ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳು ಯಾವುದೇ ಲೋಪ-ದೋಷಗಳಾಗದಂತೆ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಅಧಿವೇಶನದ ಸಮಯದಲ್ಲಿ ಉದ್ಭವಿಸುವ ಯಾವುದೇ ಸಮಸ್ಯೆಗಳನ್ನು ತಕ್ಷಣವೇ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಬೇಕು, ಜೊತೆಗೆ ತ್ವರಿತ ಪರಿಹಾರವನ್ನು ಕಂಡುಕೊಳ್ಳಬೇಕು. ಕಂಪ್ಯೂಟರ್‌ಗಳು ಮತ್ತು ಇತರ ಅಗತ್ಯ ಮೂಲಸೌಕರ್ಯಗಳಿಗೆ ಸರಿಯಾದ ವ್ಯವಸ್ಥೆಗಳೊಂದಿಗೆ ನೆಟ್‌ವರ್ಕ್ ಸಮಸ್ಯೆ ತಲೆದೋರದಂತೆ ನಿಗಾ ವಹಿಸಬೇಕು. ಸುವರ್ಣ ವಿಧಾನಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಬೇಕು . ಗೊಂದಲವನ್ನು ತಪ್ಪಿಸಲು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಪಾಸ್ ವಿತರಣೆಯನ್ನು ಸುಗಮವಾಗಿ ನಿರ್ವಹಿಸಬೇಕು ಎಂದು ಒತ್ತಿ ಹೇಳಿದರು. ಶಾಲಾ ಮಕ್ಕಳು ಮತ್ತು ಸಾರ್ವಜನಿಕರು…

Read More

Updated By: Priyalachhi ರಾಜ್ಯದ ಮಹಿಳೆಯರು ವ್ಯವಹಾರಗಳು, ಸಣ್ಣ ಪ್ರಮಾಣದ ಕೈಗಾರಿಕೆಗಳು, ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಬೇರೆ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಭರವಸೆ ನೀಡಿದರು. ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5 ಕೋಟಿ ರೂಪಾಯಿಗಳವರೆಗೆ ಸಾಲ ಸೌಲಭ್ಯ ನೀಡುತ್ತದೆ ಎಂದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (FKCCI) ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಿದ ಸಚಿವರು, ಹೆಚ್ಚಿನ ಮಹಿಳೆಯರು ಉದ್ಯೋಗಗಳನ್ನು ತೆಗೆದುಕೊಳ್ಳುವ ಮೂಲಕ ಅಥವಾ ಸ್ವಂತ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಮತ್ತು ಉದ್ಯೋಗಗಳನ್ನು ಬೇರೆಯವರಿಗೆ ಒದಗಿಸುವ ಮೂಲಕ ಆರ್ಥಿಕವಾಗಿ ಸ್ವತಂತ್ರರಾಗಿ ಸ್ವಾವಲಂಬಿಗಳಾಗಲು ಮುಂದೆ ಬರುತ್ತಿರುವುದರಿಂದ, ಸರ್ಕಾರವು ಅಂತಹ ಚಿಂತನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಹೇಳಿದರು. ಮಹಿಳೆಯರನ್ನು ಸಬಲೀಕರಣಗೊಳಿಸುವ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರವು 32,000…

Read More

Updated By: Priyalachhi ಬೆಂಗಳೂರು: ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ…

Read More

Updated By: Priyalachhi ಶ್ರೀ ರಂದೀಪ್‌ ಡಿ., ಪಂಚಾಯತ್‌ ರಾಜ್‌ ಕಾರ್ಯದರ್ಶಿ ಮತ್ತು ಆಯುಕ್ತರು, RDWSD ಅವರು ವಿಶ್ವ ಶೌಚಾಲಯ ದಿನದ ಪ್ರಯುಕ್ತ ನವೆಂಬರ್‌ 19ರಿಂದ ಡಿ. 10ರವರೆಗೆ ರಾಜ್ಯಾದ್ಯಂತ ನಡೆಯಲಿರುವ ‘ನಮ್ಮ ಶೌಚಾಲಯ, ನಮ್ಮ ಭವಿಷ್ಯ’ ಆಂದೋಲನಕ್ಕೆ ಚಾಲನೆ ನೀಡಿದರು. ಈ ವೇಳೆ RDWSD ಉಪ ಕಾರ್ಯದರ್ಶಿ (ಅಭಿವೃದ್ಧಿ) ಶ್ರೀ ಎಸ್.ಸಿ. ಮಹೇಶ್; ಶ್ರೀಮತಿ ಸ್ನೇಹಲತಾ, ಯೋಜನಾಧಿಕಾರಿ; ಎಲ್ಲಾ ಜಿಲ್ಲೆಗಳ CEOಗಳು ಹಾಗೂ SBMG ನೋಡಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Read More

Updated By: Priyalachhi ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 17ರ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಚರ್ಚಿಸಲಿದ್ದಾರೆ. ನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಭೇಟಿಯನ್ನು ದೃಢಪಡಿಸಿದೆ. ಮುಖ್ಯಮಂತ್ರಿಗಳ ಕಚೇರಿ ಹೇಳಿಕೆ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 11 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದು, ಮಧ್ಯಾಹ್ನ 1.30ಕ್ಕೆ ದೆಹಲಿಗೆ ಬಂದಿಳಿಯುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳು ಸಂಜೆ 7 ಗಂಟೆಗೆ ದೆಹಲಿಯಿಂದ ಹೊರಟು ರಾತ್ರಿ 9.30ಕ್ಕೆ ಬೆಂಗಳೂರು ತಲುಪಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಆದಾಗ್ಯೂ, ನಿಗದಿತ ರಿಟರ್ನ್ ಟ್ರಿಪ್ ತಾತ್ಕಾಲಿಕ ಎಂದು ಸಿಎಂ ಕಚೇರಿಯ ಮೂಲಗಳು ತಿಳಿಸಿವೆ. ಸೋಮವಾರ ಪ್ರಧಾನಿಯೊಂದಿಗೆ ಮುಖ್ಯಮಂತ್ರಿಗಳ ಸಭೆ ನಿಗದಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ,…

Read More

Updated By: Priyalachhi ಬೆಂಗಳೂರು: ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಸಿದ್ದವಿದ್ದು, ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ನನಗೆ ಕೊನೆಯ ಉಸಿರು ಇರುವವರೆಗೂ, ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಹೇಳಿದರು. ಅಹಿಂದ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು? ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ – ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

Read More

Updated By: Priyalachhi ಕಲಬುರಗಿ: ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಎಂಬುವರು ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಯನಾ ವಿರುದ್ಧ ದೂರು ನೀಡಿದ್ದು ಈ ಸಂಬಂಧ ನಟಿ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ನಯನಾ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಇದಕ್ಕೆ ನಟಿ ಕ್ಷಮೆ ಕೂಡ ಕೇಳಿದ್ದರು. ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ನಟಿಯನ್ನು ಬಂಧಿಸುವ ಸಾಧ್ಯತೆ ಇದೆ.

Read More