Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಬೆಂಗಳೂರು: ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ತುಂಬಿರುವ ಅಂಗವಾಗಿ ಇಂದು ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ, ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದರು. ಭೂಮಿಯ ಮೇಲಿನ ಜೀವಸಂಕುಲಕ್ಕೆ ಬದುಕಲು ಉತ್ತಮ ಪರಿಸರ ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು, ದಾವಣಗೆರೆ, ಕಲಬುರ್ಗಿ ನಗರವೂ ಸೇರಿರುವುದು ಆತಂಕಕಾರಿ…
Updated By: Priyalachhi ಕೊಯಮತ್ತೂರು: ಸಾವಯವ ಕೃಷಿಗೆ ಭಾರತ ಜಾಗತಿಕ ಕೇಂದ್ರವಾಗುವತ್ತ ಸಾಗುತ್ತಿದೆ. ಇದು ದೇಶದ ಸ್ಥಳೀಯ ಮತ್ತು ಸಾಂಪ್ರದಾಯಿಕ ವಿಧಾನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದ ಅದ್ಭುತ ಗೆಲುವಿನ ನಂತರ ತಮಿಳುನಾಡಿಗೆ ಆಗಮಿಸಿದಾಗ ರೈತರು ಶಾಲುಗಳನ್ನು ಬೀಸುತ್ತಿರುವುದನ್ನು ನೋಡಿದರೆ ನಾನು ಬರುವುದಕ್ಕೂ ಮೊದಲೇ ‘ಬಿಹಾರದ ಗಾಳಿ’ ತಮಿಳುನಾಡಿಗೆ ಬಂದಂತೆ ಭಾಸವಾಗುತ್ತಿದೆ ಎಂದರು. ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಮತ್ತು ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಒಂಬತ್ತು ಕೋಟಿ ರೈತರಿಗೆ ನೆರವು ನೀಡುವ ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಒಟ್ಟು ಮೊತ್ತ 18,000 ಕೋಟಿಗೂ ಹೆಚ್ಚು ಹಣವನ್ನು ರೈತರ ಖಾತೆಗಳಿಗೆ ವರ್ಗಾಯಿಸಿದರು. ತಮಿಳುನಾಡಿನಲ್ಲಿ ಎಐಎಡಿಎಂಕೆ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (DMK) ನೇತೃತ್ವದ ಮೈತ್ರಿಕೂಟದ ವಿರುದ್ಧ ಸ್ಪರ್ಧಿಸಲಿದೆ. ವಿರೋಧ ಪಕ್ಷಗಳ ಮೈತ್ರಿಕೂಟವು ಎಂ.ಕೆ ಸ್ಟಾಲಿನ್ ನೇತೃತ್ವದ ಸರ್ಕಾರವನ್ನು ಉರುಳಿಸಲು…
Updated By: Priyalachhi ಬೆಂಗಳೂರು: ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಮನಸ್ಸಿಗೆ ಬಂದ ಬೆಲೆಗೆ ಮೆಡಿಸನ್ ಮಾರಾಟ ಮಾಡಲಾಗುತ್ತಿದ್ದು, ಹಗಲು ದರೋಡೆ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿಟಿ ರವಿ ಬುಧವಾರ ಆರೋಪಿಸಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಬೆಲೆಗಿಂತ 10 ಪಟ್ಟು ಹೆಚ್ಚಿನ ಬೆಲೆಯಲ್ಲಿ ಮೆಡಿಸಿನ್ ಮಾರಾಟ ಮಾಡಲಾಗುತ್ತಿದ್ದು, ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿಗಳ ಖರೀದಿಗೆ ಟೆಂಡರ್ ಕರೆಯುವಾಗ ಗೋಲ್ಮಾಲ್ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ಕೊಟ್ಟಿದ್ದೆ. ಬಳಿಕ ಕೆಲವು ಭಯಾನಕ ಸತ್ಯಗಳನ್ನು ನನ್ನ ಗಮನಕ್ಕೆ ತಂದರು. ವೈದ್ಯಕೀಯ ಕಾಲೇಜಿನಲ್ಲಿ ಜೀವರಕ್ಷಕ ಔಷಧಿಗಳ ಖರೀದಿಗೆ ಟೆಂಡರ್ ಕರೆಯುವಾಗ ಗೋಲ್ಮಾಲ್ ನಡೆಸಿದ್ದಾರೆ. ಬಿಡ್ ನಿಗದಿಪಡಿಸಬೇಕಾದರೆ, ಒಂದು ಔಷಧಿಗೆ ಕಡಿಮೆ ದರ ಇದ್ದವರ ಬದಲಾಗಿ ಎಲ್ಲ…
Updated By: Priyalachhi ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಖ್ಯಭೂಮಿಕೆಯ ಬಹುನಿರೀಕ್ಷಿತ ‘ಕೆ.ಡಿ’ ಸಿನಿಮಾ ಮುಂದಿನ ವರ್ಷ ಚಿತ್ರಮಂದಿರ ಪ್ರವೇಶಿಸಲಿದೆ. ಈ ಮಧ್ಯೆ ನಟನ ಹೊಸ ಸಿನಿಮಾ ಇತ್ತೀಚೆಗೆ ಅದ್ಧೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ಬಸವನಗುಡಿಯ ಅನ್ನಪೂರ್ಣ ನವ ಮಂತ್ರಾಲಯ ಮಂದಿರದಲ್ಲಿ ‘ಕ್ರಿಮಿನಲ್’ ಶೀರ್ಷಿಕೆಯ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ‘ಕ್ರಿಮಿನಲ್’, ಧ್ರುವ ಅವರ 7ನೇ ಚಿತ್ರವಾಗಿದ್ದು, ನಾಯಕಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಸಾಥ್ ಕೊಡುತ್ತಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆಯನ್ನಾಧರಿಸಿದೆ. ಸಿನಿಮಾ ಮುಹೂರ್ತದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿರ್ದೇಶಕ ರಾಜ್ ಗುರು, ”ಕಥೆ ಕೇಳಿ ಧ್ರುವ ಸರ್ಜಾ ಓಕೆ ಮಾಡಿದ್ರು. ಬಳಿಕ ಸೆಲ್ಫಿ ತೆಗೆದುಕೊಂಡೆ. ಸೆಲ್ಫಿ ನೋಡಿ ಖುಷಿ ಜೊತೆಗೆ ಭಯ ಶುರುವಾಯ್ತು. ಇದು ಜವಾಬ್ದಾರಿ ಎಂಬ ಭಯ. ಉತ್ತರ ಕರ್ನಾಟಕದ ಬಗ್ಗೆ ಸಿನಿಮಾ ಮಾಡುತ್ತಿದ್ದೇವೆ. ದೊಡ್ಡ ಪ್ರೊಡಕ್ಷನ್ ಕಂಪನಿ ನನಗೆ ಅವಕಾಶ ಕೊಟ್ಟಿದೆ. ಇದು ನನ್ನ 2ನೇ ಸಿನಿಮಾ. ಈ ಚಿತ್ರಕ್ಕೆ…
Updated By: Priyalachhi ಬೆಂಗಳೂರು: ನಗರದಲ್ಲಿಂದು ಕೋಟ್ಯಂತರ ರೂಪಾಯಿ ದರೋಡೆ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ಯಂತ್ರಗಳಿಗೆ ಹಣ ತುಂಬಿಸಲು ಕೊಂಡೊಯ್ಯುತ್ತಿದ್ದ ವಾಹನದಿಂದ 7.11 ಕೋಟಿ ರೂಪಾಯಿ ದೋಚಿದ್ದಾರೆ. ನಗರದ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ದುಷ್ಕೃತ್ಯ ನಡೆದಿದೆ. ಏನಾಯ್ತು?: ಸರ್ಕಾರಿ ವಾಹನದಂತೆ ಸ್ಟಿಕ್ಕರ್ ಹಾಕಿದ್ದ ಇನ್ನೋವಾ ಕಾರಿನಲ್ಲಿ ಬಂದಿದ್ದ 5ರಿಂದ 6 ಜನರಿದ್ದ ದರೋಡೆಕೋರರ ಗುಂಪು ಸೌತ್ ಎಂಡ್ ಸರ್ಕಲ್ ಬಳಿ ಎಟಿಂಎಗೆ ಹಣ ತುಂಬಿಸಿ ಹೊರಟಿದ್ದ ಕಸ್ಟೋಡಿಯನ್ ವಾಹನವನ್ನು ತಡೆದಿದ್ದಾರೆ. ಬಳಿಕ ತಾವು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಹಾಗೂ ಆರ್ಬಿಐ ಎನ್ನುತ್ತಾ ಕಸ್ಟೋಡಿಯನ್ ವಾಹನದಲ್ಲಿದ್ದ ಗನ್ಮ್ಯಾನ್ ಸಹಿತ ಎಲ್ಲ ಸಿಬ್ಬಂದಿಯನ್ನು ಕೆಳಗಿಳಿಸಿದ್ದಾರೆ. ಚಾಲಕನನ್ನು ಮಾತ್ರ ಕೂರಿಸಿಕೊಂಡು ಜಯದೇವ ಆಸ್ಪತ್ರೆ ಕಡೆಯಿಂದ ಡೈರಿ ಸರ್ಕಲ್ ಕಡೆಗೆ ವಾಹನವನ್ನು ಕರೆದೊಯ್ದಿದ್ದಾರೆ. ಫ್ಲೈ ಓವರ್ ಮೇಲೆ ಕಸ್ಟೋಡಿಯನ್ ವಾಹನವನ್ನು ನಿಲ್ಲಿಸಿ ಚಾಲಕನನ್ನು ಬೆದರಿಸಿ, 7.11 ಕೋಟಿ ರೂ ಹಣವಿದ್ದ ಪೆಟ್ಟಿಗೆಯನ್ನು ತಮ್ಮ ಕಾರಿಗೆ ಹಾಕಿಕೊಂಡು ಪರಾರಿಯಾಗಿದ್ದಾರೆ. ದರೋಡೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು…
Updated By: Priyalachhi ಬೆಂಗಳೂರು: ಮನೆ ಕೆಲಸದ ಮಹಿಳೆಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಆರೋಪವನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿರುವ ಹೈಕೋರ್ಟ್, ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪದಲ್ಲಿ ಸಂಜ್ಞೆ ಪರಿಗಣಿಸಿದ್ದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ. ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ. ಅಲ್ಲದೇ, ಪ್ರಕರಣ ಸಂಬಂಧ 42ನೇ ಎಸಿಜೆಎಂ ನ್ಯಾಯಾಲಯ ಅರ್ಜಿದಾರ ರೇವಣ್ಣ ವಿರುದ್ಧ ಐಪಿಸಿ 354 (ಮಹಿಳೆಯ ಘನತೆಗೆ ಚ್ಯುತಿ) ಅಡಿ ಸಂಜ್ಞೆ ಪರಿಗಣಿಸಿರುವುದನ್ನು ರದ್ದುಪಡಿಸಲಾಗಿದೆ. ವಿಳಂಬವನ್ನು ಮೀರಿ ಐಪಿಸಿ 354ಎ (ಲೈಂಗಿಕ ದೌರ್ಜನ್ಯ) ಅಡಿ ಸೂಕ್ತ ಆದೇಶ ಮಾಡಲು ಪರಿಗಣಿಸುವಂತೆ ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಮರಳಿಸಲಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅಲ್ಲದೇ, ದೂರಿನಲ್ಲಿರುವ ಆರೋಪಗಳು ಐಪಿಸಿ ಸೆಕ್ಷನ್…
Updated By: Priyalachhi ಬೆಂಗಳೂರು: ಕೇರಳ ರಾಜ್ಯದಲ್ಲಿರುವ ಪುಣ್ಯಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಕಳೆದ ಭಾನುವಾರದಿಂದ ಭಕ್ತರಿಗೆ ತೆರೆಯಲಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಲಕ್ಷಾಂತರ ಮಂದಿಯ ಭಕ್ತಸಾಗರವೇ ಹರಿದು ಬರುತ್ತಿದೆ. ಮತ್ತೊಂದೆಡೆ ಕೇರಳದಲ್ಲಿ ವೈರಸ್ ಭೀತಿ ಕಾಡುತ್ತಿದೆ. ಮೆದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತಂತೆ ರಾಜ್ಯದಿಂದ ತೆರಳಿರುವ ಅಯ್ಯಪ್ಪ ಭಕ್ತ ಮಾಲಾಧಾರಿಗಳಿಗೆ ಸುರಕ್ಷತಾ ಸಲಹಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಸೂಚಿಸಿದೆ. ಆರೋಗ್ಯ ಇಲಾಖೆಯ ಸಲಹೆ-ಸೂಚನೆಗಳು: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿಯಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಮಾಹಿತಿ ನೀಡಿದೆ. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ…
Updated By: Priyalachhi ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದರು. ಮೇಕೆದಾಟು ಯೋಜನೆ ಕಚೇರಿ: ಡಿಪಿಆರ್ ಮರು ಸಲ್ಲಿಕೆ ಮಾಡಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು. ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ತಯಾರು…
Updated By: Priyalachhi ಪ್ರತಿನಿತ್ಯ ನಾವು ಮಾಡುವ ಭೋಜನದಲ್ಲಿ ಅನ್ನ ಇಲ್ಲದೆ ಊಟ ಅಪೂರ್ಣವಾಗುತ್ತದೆ. ದೇಶದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ಜನರು ಅನ್ನವನ್ನು ಇಷ್ಟಪಟ್ಟು ಸೇವನೆ ಮಾಡುತ್ತಾರೆ. ಪ್ರಪಂಚದಾದ್ಯಂತ ರೈತರು ವಿವಿಧ ಪ್ರಕಾರದ ತಳಿಗಳ ಅಕ್ಕಿಗಳನ್ನು ಬೆಳೆಯುತ್ತಾರೆ. ಭಾರತ ದೇಶದಲ್ಲಿ ಉತ್ತಮ ರೀತಿಯ ಅಕ್ಕಿ ಅಂದ್ರೆ ಮೊದಲು ನೆನಪಿಗೆ ಬರುವುದು ಬಾಸ್ಮತಿ ಅಕ್ಕಿ. ಈ ಅಕ್ಕಿಯ ರುಚಿ ಹಾಗೂ ಸುವಾಸನೆ ಪ್ರತಿಯೊಬ್ಬರಿಗೂ ಹೆಚ್ಚು ಇಷ್ಟವಾಗುತ್ತದೆ. ಉದ್ದವಾದ ಅಕ್ಕಿಯು ಹೆಚ್ಚು ಪ್ರಸಿದ್ಧಿ ಪಡೆದಿರುವ ವಿಧವಾಗಿದೆ. ತುಂಬಾ ದುಬಾರಿ ಬೆಲೆಯ ಅಕ್ಕಿ ಪಟ್ಟಿಯಲ್ಲಿ ಈ ಬಾಸ್ಮತಿ ಅಕ್ಕಿ ಇಲ್ಲ. ಏಕೆಂದರೆ, ಈ ಅಕ್ಕಿಯ ಪ್ರತಿ ಕೆಜಿ ಬೆಲೆ ₹90ರಿಂದ ₹700 ರೂಪಾಯಿವರೆಗೆ ಇದೆ. ದೇಶದಲ್ಲಿ ಅನೇಕ ಪ್ರಕಾರದ ಅಕ್ಕಿಗಳು ಸಹ ಇವೆ. ಹೆಚ್ಚೆಂದ್ರೆ, ಇವುಗಳ ಬೆಲೆ ಕೆಜಿಗೆ ₹6,000 ರಿಂದ ₹7,000 ವರೆಗೆ ಇದೆ. ಇತ್ತೀಚೆಗೆ ವಿಶ್ವದ ಅತ್ಯಂತ ದುಬಾರಿ ಅಕ್ಕಿಯೊಂದು ಭಾರಿ ಸದ್ದು ಮಾಡುತ್ತಿದೆ. ಹೆಚ್ಚು ದರವಿರುವಂತಹ ಅಕ್ಕಿ ಯಾವುದು ಗೊತ್ತೇ? ಈ ರೈಸ್ನ…
Updated By: Priyalachhi ಹೈದರಾಬಾದ್(ತೆಲಂಗಾಣ): ಭಾರತೀಯ ಚಿತ್ರರಂಗದ ದಿಗ್ಗಜ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರ ವಿರುದ್ಧ ಹೈದರಾಬಾದ್ನ ಸರೂರ್ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದ ಗ್ಲೋಬ್ ಟ್ರಾಟರ್ (Globe Trotter) ಕಾರ್ಯಕ್ರಮದಲ್ಲಿ ಅವರು ಹನುಮಂತನ ಬಗ್ಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ ರಾಷ್ಟ್ರೀಯ ವಾನರಸೇನಾ ಸಂಘದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಬ್ಲಾಕ್ಬಸ್ಟರ್ ಚಿತ್ರಗಳಾದ ‘ಬಾಹುಬಲಿ’, ‘ಆರ್ಆರ್ಆರ್’ ಖ್ಯಾತಿಯ ನಿರ್ದೇಶಕ ಎಸ್.ಎಸ್.ರಾಜಮೌಳಿ ನಿರ್ದೇಶನದ ಮುಂದಿನ ಬಹುನಿರೀಕ್ಷಿತ ಚಿತ್ರದ ಅದ್ಧೂರಿ ಕಾರ್ಯಕ್ರಮ ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ಶೀರ್ಷಿಕೆ ‘ವಾರಣಾಸಿ’ ಎಂದು ಘೋಷಿಸಲಾಗಿತ್ತು. ಗ್ಲಿಂಪ್ಸ್ ರಿಲೀಸ್ ಸಂದರ್ಭದಲ್ಲಿ ತಾಂತ್ರಿಕ ದೋಷ ಸಂಭವಿಸಿ, ಕಾರ್ಯಕ್ರಮದಲ್ಲಿ ಸ್ವಲ್ಪ ಅಡಚಣೆಯಾಗಿತ್ತು. ಹಾಗಾಗಿ, ರಾಜಮೌಳಿ ಕೊಂಚ ಭಾವುಕರಾಗಿದ್ದರು. ಆ ಸಂದರ್ಭದಲ್ಲಿ ಮಾತನಾಡುತ್ತಾ ಅವರು, ನಾನು ‘ದೇವರನ್ನು ನಂಬುವುದಿಲ್ಲ’ ಎಂದು ಹೇಳಿದ್ದರು. ಒಮ್ಮೆ ನನ್ನ ತಂದೆ ನನ್ನೊಂದಿಗೆ ಮಾತನಾಡುತ್ತಾ, ” ಹನುಮಂತ ನಮ್ಮ ಹಿಂದಿದ್ದು ಮುನ್ನಡೆಸುತ್ತಾನೆ’’…
Subscribe to Updates
Get the latest creative news from FooBar about art, design and business.