Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ‘ಮಾರುತ’. ಪಡ್ಡೆ ಹುಲಿ ಸಿನಿಮಾ ಖ್ಯಾತಿಯ ಶ್ರೇಯಸ್ ಮಂಜು ಹಾಗೂ ದುನಿಯಾ ವಿಜಯ್ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ. ಎಸ್.ನಾರಾಯಣ್ ನಿರ್ದೇಶನದ ಈ ಚಿತ್ರ ಇದೇ ವಾರ ಪ್ರೇಕ್ಷಕರೆದುರು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆಗೂ ಮುನ್ನ ಪೊಲೀಸ್ ಇಲಾಖೆಯವರಿಗಾಗಿ ಚಿತ್ರತಂಡ ವಿಶೇಷ ಪ್ರದರ್ಶನ ಆಯೋಜಿಸಿತ್ತು. ಬೆಂಗಳೂರು ನಗರದ ಭದ್ರತಾ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮಂಜುನಾಥ ಬಾಬು ಸೇರಿದಂತೆ ಪೊಲೀಸ್ ಸಿಬ್ಬಂದಿ ಸಿನಿಮಾ ವೀಕ್ಷಿಸಿದರು. ಬಳಿಕ ಮಾತನಾಡಿದ ಉಪ ಪೊಲೀಸ್ ಆಯುಕ್ತರಾದ ಮಂಜುನಾಥ್ ಬಾಬು ಅವರು, “ಮೊದಲು ಸಮಾಜಕ್ಕೆ ಇಂಥ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿಕೊಟ್ಟ ನಿರ್ಮಾಪಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ದೇಶಕ ಎಸ್.ನಾರಾಯಣ್ ಅವರು ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ವಿಷಯವನ್ನಿಟ್ಟುಕೊಂಡು ಅದ್ಭುತ ಸಿನಿಮಾ ಮಾಡಿದ್ದಾರೆ. ಚಿತ್ರದಲ್ಲಿರುವ ಎಲ್ಲ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ದುನಿಯಾ ವಿಜಯ್ ಅವರದಂತೂ ಅದ್ಭುತ ಅಭಿನಯ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಅನುಕೂಲ ಇದೆಯೋ, ಅಷ್ಟೇ ತೊಂದರೆ ಕೂಡಾ ಇದೆ ಅನ್ನುವುದನ್ನು ಸಿನಿಮಾದಲ್ಲಿ ಉತ್ತಮವಾಗಿ ತೋರಿಸಿದ್ದಾರೆ.…
Updated By: Priyalachhi ಪಟ್ನಾ(ಬಿಹಾರ): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರಿ ಹಿನ್ನಡೆ ಅನುಭವಿಸಿದ ರಾಷ್ಟ್ರೀಯ ಜನತಾ ದಳ(ಆರ್ಜೆಡಿ), ಪಕ್ಷದ ಸೋಲಿಗೆ ಇವಿಎಂ ದುರ್ಬಳಕೆ ಮತ್ತು ಹಣದ ಶಕ್ತಿ ಕಾರಣ ಎಂದು ಆರೋಪಿಸಿದೆ. ಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ನೇತೃತ್ವದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಮತ್ತು ಪಕ್ಷದ ಹಿರಿಯ ನಾಯಕರೊಂದಿಗೆ ಇಂದು ನಡೆದ ಸಭೆಯಲ್ಲಿ, ಚುನಾವಣೆಯ ಸೋಲಿನ ಕುರಿತು ಅವಲೋಕನ ನಡೆಯಿತು. ಇದಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ಜೆಡಿ ರಾಜ್ಯಾಧ್ಯಕ್ಷ ಮಂಗನಿ ಲಾಲ್ ಮಂಡಲ್, “ಪಕ್ಷ ಸೋಲಿನ ಕುರಿತು ವಿವರವಾದ ಪರಿಶೀಲನೆ ನಡೆಸಿತು. ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮತ್ತು ಹಣದ ಬಲ ಪ್ರಮುಖ ಪಾತ್ರ ವಹಿಸಿದೆ. ಚುನಾವಣೆಗೆ ಮುನ್ನ ಮುಕ್ತವಾಗಿ ಹಣ ಹಂಚಿಕೆ ಮಾಡಲಾಗಿದೆ” ಎಂದು ಆರೋಪಿಸಿದರು. “ಮತದಾರರ ಮೇಲೆ ಪ್ರಭಾವ ಬೀರಲು ಅಪಾರ ಪ್ರಮಾಣದ ಹಣ ಹಂಚಲಾಯಿತು. ಚುನಾವಣೆಯ ಸಂದರ್ಭದಲ್ಲಿ ಆರ್ಜೆಡಿ ನಾಯಕರನ್ನು ಟೀಕಿಸಲಾಯಿತು. ಪಕ್ಷದ ಕಾರ್ಯಕರ್ತರಿಗೆ ವಿವಿಧ ಸ್ಥಳಗಳಲ್ಲಿ ಕಿರುಕುಳ ನೀಡಿ, ಬಂಧಿಸಲಾಯಿತು.…
Updated By: Priyalachhi ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಐತಿಹಾಸಿಕ ಶಿವನಸಮುದ್ರದ (ಬ್ಲಫ್) ಬಳಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಕಾಲುವೆಗೆ ಇಳಿದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯು ಎರಡು ದಿನಗಳ ಮಹತ್ವದ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ಮೇಲೆತ್ತಿದೆ. ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಕೆ ಮಾಡುವ ಸುಮಾರು 50 ಅಡಿ ಅಳದ ಕೆನಾಲ್ ಗೇಟ್ ಮೂಲಕ ಶನಿವಾರ ರಾತ್ರಿ ಕಾಡಾನೆ ನೀರು ಕುಡಿಯಲು ಇಳಿದಿತ್ತು. ಆದರೆ, ನೀರಿನ ಹರಿವಿನ ರಭಸಕ್ಕೆ ವಾಪಸ್ ಕಾಲುವೆಯಿಂದ ಮೇಲೆ ಬರಲು ಸಾಧ್ಯವಾಗದೆ ಅದರೊಳಗೆ ಓಡಾಡುತ್ತಿತ್ತು. ಭಾನುವಾರ ಬೆಳಗ್ಗೆ ಆನೆಯ ಓಡಾಟವನ್ನು ಗಮನಿಸಿದ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಸಿಬ್ಬಂದಿ, ಆನೆ ವಾಪಸ್ ಹೋಗಬಹುದು ಎಂದು ಕಾದಿದ್ದರು. ಆದರೆ, ಭಾನುವಾರ ಸಂಜೆವರೆಗೂ ಕಾಡಾನೆ ಮೇಲಕ್ಕೆ ಬರಲಿಲ್ಲ. ಆಗ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಭಾನುವಾರವೂ ಸಹ ಕಾದ ಅಧಿಕಾರಿಗಳು, ಮೇಲೆ ಬರದಿರುವುದನ್ನು ಕಂಡು ಅದಕ್ಕೆ ಬೇಕಾದ ಆಹಾರವನ್ನು ಇಲ್ಲಿಂದಲೇ ಹಾಕಿದ್ದರು. ಸೋಮವಾರ ಬೆಳಗ್ಗೆ ಕಾಲುವೆಯಿಂದ ಮೇಲೆತ್ತುವ ಕಾರ್ಯಾಚರಣೆ…
Updated By: Priyalachhi ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿ ಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್ಪೇಟೆ, ಕ್ಯಾತ್ಸಂದ್ರ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಸಂಚಾರ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದರು. ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್ಶಿಪ್ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ…
Updated By: Priyalachhi ಬೆಂಗಳೂರು : ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣವು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28ನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಶೃಂಗಸಭೆಯಲ್ಲಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು. 2034ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ…
Updated By: Priyalachhi ಬೆಂಗಳೂರು: ಹೆಚ್ಚುವರಿ ಕೆಲಸದ ಅವಧಿಯ ಕುರಿತು ಮೊದಲಿನಿಂದಲೂ ಒತ್ತಾಯ ಹೇರುತ್ತಾ ಬಂದಿದ್ದ ಇನ್ಫೋಸಿಸ್ ಅಧ್ಯಕ್ಷ ನಾರಾಯಣಮೂರ್ತಿ ಇದೀಗ ಅಂತಹುದೇ ಮತ್ತೊಂದು ಸೂತ್ರದೊಂದಿಗೆ ಮುಂದೆ ಬಂದಿದ್ದಾರೆ. ಹೌದು.. ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತೊಮ್ಮೆ ಕೆಲಸದ ಅವಧಿಯ ವಿಚಾರವಾಗಿ ಮಾತನಾಡಿದ್ದು, ಈ ಬಾರಿ ಚೀನಾ ನಿದರ್ಶನದೊಂದಿಗೆ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ. ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದು, ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ ನಿದರ್ಶನ ನೀಡಿದ್ದಾರೆ. ಚೀನಾದಲ್ಲಿ ವಾರಕ್ಕೆ 6 ದಿನ, ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಕೆಲಸ ಮಾಡಲಾಗುವುದನ್ನು ನಾರಾಯಣಮೂರ್ತಿ ಉದಾಹರಣೆಯಾಗಿ ನೀಡಿದ್ದಾರೆ. ಅಂತೆಯೇ ಸಮರ್ಥ ಕೆಲಸದ ವ್ಯವಸ್ಥೆಯು ದೇಶದ ಅಭಿವೃದ್ದಿಗೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದ್ದಾರೆ. ಪ್ರಯತ್ನದಿಂದ ಮಾತ್ರವೇ ಅಭಿವೃದ್ಧಿ ಬರುವುದು. ಯಾವುದೇ ವ್ಯಕ್ತಿ ಸಮುದಾಯ ಮತ್ತು ದೇಶವಾಗಲೀ ಪರಿಶ್ರಮ ಇಲ್ಲದೇ ಅಭಿವೃದ್ಧಿ ಹೊಂದಿಲ್ಲ. ಹಾಗೆಯೇ, ಮೊದಲು ಜೀವನ ಪಡೆಯಿರಿ, ಬಳಿಕ ಕೆಲಸ ಮತ್ತು ಜೀವನ ಸಮತೋಲನ…
Updated By: Priyalachhi ಬೆಂಗಳೂರು: ಬೆಂಗಳೂರು ‘ನಿರಂತರವಾಗಿ ವಿಕಸನಗೊಳ್ಳುತ್ತಿರುವ ಪರಿವರ್ತನೆಯ ಎಂಜಿನ್’ ಎಂದು ಬಣ್ಣಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರವು 1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡುವ ಮೂಲಕ ನಗರದ ಮೂಲಸೌಕರ್ಯವನ್ನು ಸುಧಾರಿಸುತ್ತಿದೆ ಎಂದು ಮಂಗಳವಾರ ಹೇಳಿದ್ದಾರೆ. ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಇಐಸಿ) ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಕಾರ್ಯಕ್ರಮವಾಗಿರುವ ‘ಬೆಂಗಳೂರು ಟೆಕ್ ಸಮ್ಮಿಟ್ 2025’ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ‘ತಂತ್ರಜ್ಞಾನ, ನಾವೀನ್ಯತೆ ಮತ್ತು ಹೂಡಿಕೆಯ ಅಡಿಪಾಯಗಳು ಬಲವಾಗಿದ್ದಾಗ ಮಾತ್ರ ಅಭಿವೃದ್ಧಿ ಹೊಂದುತ್ತವೆ ಎಂದು ನಾವು ಭಾವಿಸುತ್ತೇವೆ. ಅದಕ್ಕಾಗಿಯೇ ನಮ್ಮ ಸರ್ಕಾರವು ಅಭೂತಪೂರ್ವ ವೇಗದಲ್ಲಿ ಮೂಲಸೌಕರ್ಯ ಕೆಲಸಗಳನ್ನು ವೇಗಗೊಳಿಸುತ್ತಿದೆ’ ಎಂದು ಶಿವಕುಮಾರ್ ಹೇಳಿದರು. ‘ಸರ್ಕಾರವು ಬೆಂಗಳೂರಿನಲ್ಲಿ ಬೃಹತ್ ಮೂಲಸೌಕರ್ಯ ಯೋಜನೆಗಳನ್ನು ಪ್ರಾರಂಭಿಸಿದೆ. ₹42,500 ಕೋಟಿ ವೆಚ್ಚದಲ್ಲಿ 40 ಕಿಮೀ ಉದ್ದದ ಅವಳಿ ಸುರಂಗ ಯೋಜನೆ, ₹18,000 ಕೋಟಿ ವೆಚ್ಚದಲ್ಲಿ 41 ಕಿಮೀ ಉದ್ದದ ಡಬಲ್ ಡೆಕ್ಕರ್ ಮೆಟ್ರೋ, ₹15,000 ಕೋಟಿ ವೆಚ್ಚದಲ್ಲಿ 110…
Updated By: Priyalachhi ಬೆಂಗಳೂರು: ಕರ್ನಾಟಕವನ್ನು ನಾವೀನ್ಯತೆ ಮತ್ತು ಆಳವಾದ ತಂತ್ರಜ್ಞಾನ ಪರಿಹಾರಗಳಿಗಾಗಿ ಜಾಗತಿಕ ತಾಣವಾಗಿ ಪರಿವರ್ತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮೂರು ಪ್ರಮುಖ ನೀತಿಗಳಾದ ಮಾಹಿತಿ ತಂತ್ರಜ್ಞಾನ ನೀತಿ, ಬಾಹ್ಯಾಕಾಶ ತಂತ್ರಜ್ಞಾನ ನೀತಿ ಮತ್ತು ಸ್ಟಾರ್ಟ್ಅಪ್ ನೀತಿ ಅನಾವರಣಗೊಳಿಸಿದರು. ಭಾರತದ ಪ್ರಮುಖ ತಂತ್ರಜ್ಞಾನ ಕೇಂದ್ರವಾಗಿ ರಾಜ್ಯದ ಸ್ಥಾನವನ್ನು ಬಲಪಡಿಸುವುದಾಗಿ ಹೇಳಿದ ಸಿಎಂ, ಕರ್ನಾಟಕವು “ಜಾಗತಿಕ ತಂತ್ರಜ್ಞಾನ ಕ್ರಾಂತಿಯಲ್ಲಿ ಭಾಗವಹಿಸುವುದಷ್ಟೇ ಅಲ್ಲ, ಅದನ್ನು ಮುನ್ನಡೆಸುತ್ತಿದೆ” ಎಂದು ಪ್ರತಿಪಾದಿಸಿದರು. ರಾಜ್ಯ ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(ಬಿಇಐಸಿ) ಆಯೋಜಿಸಲಾಗಿರುವ ‘ಬೆಂಗಳೂರು ಟೆಕ್ ಸಮ್ಮಿಟ್ 2025’ ಅನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀತಿ ನಾವೀನ್ಯತೆಯಲ್ಲಿ ಕರ್ನಾಟಕ ಯಾವಾಗಲೂ ಭಾರತವನ್ನು ಮುನ್ನಡೆಸಿದೆ ಎಂದು ಹೇಳಿದರು. ನಾವು 1997 ರಲ್ಲಿ ಭಾರತದ ಮೊದಲ ಐಟಿ ನೀತಿಯನ್ನು ಪ್ರಾರಂಭಿಸಿದೇವು ಮತ್ತು ಹೊಸ ನೀತಿಗಳೊಂದಿಗೆ ಈ ನಾಯಕತ್ವವನ್ನು ಮುಂದುವರಿಸುತ್ತೇವೆ ಎಂದರು. ಈ ಶೃಂಗಸಭೆಯಲ್ಲಿ, ನಾವು ಮೂರು ಪರಿವರ್ತಕ ನೀತಿಗಳನ್ನು ಆರಂಭಿಸುವ ಮೂಲಕ ಐತಿಹಾಸಿಕ ಹೆಜ್ಜೆ ಇಡುತ್ತಿದ್ದೇವೆ. ಕರ್ನಾಟಕ…
Updated By: Priyalachhi ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಶನಿವಾರ ತನಿಖಾ ಸ್ಥಿತಿಗತಿ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ನಡೆಸಿತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರು ಹಾಗೂ ಜಾರಿ ನಿರ್ದೇಶನಾಲಯ ಹಾಗೂ ಲೋಕಾಯುಕ್ತ ಪರವಾಗಿ ವಿಶೇಷ ಪಬ್ಲಿಕ್ ಪ್ಲಾಸಿಕ್ಯೂಟರ್ (SPP) ಉಪಸ್ಥಿತಿದ್ದರು. ಸಂಕ್ಷಿಪ್ತ ವಿಚಾರಣೆಯ ಸಮಯದಲ್ಲಿ, ಲೋಕಾಯುಕ್ತದ SPP ಮುಡಾ ಸಂಬಂಧಿತ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಿದರು. ವರದಿಯ ಪ್ರತಿಯನ್ನು ದೂರುದಾರರಿಗೆ ಹಸ್ತಾಂತರಿಸಲಾಯಿತು. ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಪ್ರಾಸಿಕ್ಯೂಟರ್, ಹೆಚ್ಚಿನ ವಿವರವಾದ ವರದಿ ಸಲ್ಲಿಸಲು…
Updated By: Priyalachhi ಕೋಲ್ಕತ್ತಾ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ ಎದುರಾಗಿದೆ. ಪ್ರಶ್ನೆ ಕೇಳಲು ಹಣ ಕೇಳಿದ ಆರೋಪದಲ್ಲಿ ಅವರ ವಿರುದ್ಧ ನಾಲ್ಕು ವಾರಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಲೋಕಪಾಲವು ಸಿಬಿಐಗೆ ಅನುಮತಿ ನೀಡಿದೆ. ಇದರೊಂದಿಗೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ಕ್ಷೇತ್ರದ ಸಂಸದೆ ವಿರುದ್ಧ ಸಿಬಿಐ ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ನವೆಂಬರ್ 12 ರಂದು ಸಭೆ ನಡೆಸಿದ ಲೋಕಪಾಲದ ಪೂರ್ಣ ಪೀಠ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡುವ ನಿರ್ಧಾರ ತೆಗೆದುಕೊಂಡಿತು. ಆರೋಪಪಟ್ಟಿಯ ಪ್ರತಿಯನ್ನು ತನಗೆ ಸಲ್ಲಿಸುವಂತೆ ಕೇಂದ್ರಿಯ ತನಿಖಾ ತಂಡಕ್ಕೆ ಲೋಕಪಾಲ್ ಸೂಚಿಸಿದೆ. ಮಹುವಾ ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಹಣ ಮತ್ತು ಗಿಫ್ಟ್ ಪಡೆದು ಸದನದಲ್ಲಿ ಪ್ರಶ್ನೆ ಕೇಳುವ ಮೂಲಕ ಉದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತಿತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮಹುವಾ ವಿರುದ್ಧ…
Subscribe to Updates
Get the latest creative news from FooBar about art, design and business.