Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಕಣ್ಣೂರು (ಕೇರಳ) : ಪಾನೂರಿನ ಪಾಲಥೈನಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕ ಮತ್ತು ಬಿಜೆಪಿ ನಾಯಕ ಕೆ. ಪದ್ಮರಾಜನ್ಗೆ ತಲಶ್ಶೇರಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ಆರೋಪಿಯ ವಿರುದ್ಧ ಸೆಕ್ಷನ್ 376AB (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿ ಆರೋಪ ಹೊರಿಸಲಾಗಿತ್ತು. ತಲಶ್ಶೇರಿ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಲರಾಣಿ ಅವರು ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದ್ದಾರೆ. ತಲಶ್ಶೇರಿಯ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಈ ಹಿಂದೆ ಶಿಕ್ಷಕನನ್ನು ಈ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಘೋಷಿಸಿತ್ತು. ಆರೋಪಿ ಕೆ. ಪದ್ಮರಾಜನ್ ಅವರ ವಿರುದ್ಧ ಜನವರಿ ಮತ್ತು ಫೆಬ್ರವರಿ 2020ರ ನಡುವೆ ಶಾಲೆಯ ಸೌಕರ್ಯ ಕೊಠಡಿಯೊಳಗೆ ಮೂರು ಬಾರಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಫೆಬ್ರವರಿ 23, 2024 ರಂದು ಪೋಕ್ಸೋ ನ್ಯಾಯಾಲಯದ…
Updated By: Priyalachhi ಬೆಂಗಳೂರು: ಒಡಿಶಾದ ಕಲೆ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮವನ್ನು ಪರಿಚಯಿಸುವ ಒಡಿಶಾ ಪರಬ್ (ಹಬ್ಬ) ಕ್ಕೆ ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರಿಂದ ಅದ್ಧೂರಿ ಚಾಲನೆ ದೊರೆತಿದೆ. ಬೆಂಗಳೂರು ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಇಂದಿನಿಂದ ನವೆಂಬರ್ 17ರ ವರೆಗೆ ನಡೆಯಲಿದೆ. ಒಡಿಶಾದ ಪ್ರವಾಸೋದ್ಯಮ ಇಲಾಖೆಯು ಆಯೋಜಿಸಿರುವ ಮೂರು ದಿನಗಳ ಒಡಿಶಾ ಪರಬ್ನಲ್ಲಿ ಅಲ್ಲಿನ ಸಂಸ್ಕೃತಿ ಪರಂಪರೆ, ಆಹಾರ ಪದ್ಧತಿ ಹಾಗೂ ವೈವಿಧ್ಯಮಯ ಕರಕುಶಲ ವಸ್ತುಗಳ ಪ್ರದರ್ಶನ ಇರಲಿದೆ. ಒಡಿಸ್ಸಿ, ಗೋಟಿಪುವಾ, ಛೌ, ಸಂಬಲ್ ಪುರಿ ಮತ್ತು ಇನ್ನಿತರ ನೃತ್ಯ ಪ್ರಕಾರಗಳು ಒಳಗೊಂಡಂತೆ ಶಾಸ್ತ್ರೀಯ ಹಾಗೂ ಜಾನಪದ ಸಂಪ್ರದಾಯ ಬಿಂಬಿಸುವ ಪ್ರದರ್ಶನಗಳು ನಡೆಯಲಿವೆ ಎಂದು ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ನಮ್ಮ ಧ್ಯೇಯ: ಬೆಂಗಳೂರಿನಲ್ಲಿ ಸುಮಾರು 15 ಲಕ್ಷ ಮಂದಿ ಒಡಿಶಾದ ಜನರಿದ್ದಾರೆ. ನಮ್ಮ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ. ನಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸಲು, ರಾಷ್ಟ್ರಮಟ್ಟದಲ್ಲಿ ತಿಳಿಸಲು ಈ ಬಾರಿ…
Updated By: Priyalachhi ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಗೊಂದಲದ ಬಗ್ಗೆ ಹೈಕಮಾಂಡ್ನಿಂದ ಸ್ಪಷ್ಟತೆ ಸಿಗುವ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲಕ್ಕೆ ಈಗಲಾದರೂ ತೆರೆ ಬೀಳುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೂ ವಿಶ್ವಾಸ ಇದೆ, ಹೈಕಮಾಂಡ್ನಿಂದ ಸ್ಪಷ್ಟತೆ ಸಿಗುತ್ತೆ ಎಂಬ ವಿಶ್ವಾಸ ಇದೆ. ನನಗಂತೂ ಸ್ಪಷ್ಟತೆ ಸಿಕ್ಕಿದೆ. ರಾಜ್ಯಾಧ್ಯಕ್ಷ ಆಗಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಪರೋಕ್ಷವಾಗಿ ತಾವೇ ಮುಂದುವರೆಯುವ ಬಗ್ಗೆ ಸುಳಿವು ನೀಡಿದರು. ‘ಮಂಗಲ್ ರಾಜ್’ ಬಯಸಿ ಎನ್ಡಿಎಗೆ ಮತ: ಬಿಹಾರದ ಜನ ಎನ್ಡಿಎ ಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ. ನಮಗೆ ಅಲ್ಲಿ ಐತಿಹಾಸಿಕ ಜಯ ಸಿಕ್ಕಿದೆ. ಬಿಹಾರ ಚುನಾವಣೆ ಮುಗಿಯುವವರೆಗೂ ವೋಟ್ ಚೋರಿ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಆದರೆ ‘ಜಂಗಲ್ ರಾಜ್’ ಅನ್ನು ಬಿಹಾರ ಜನ ಮರೆತಿಲ್ಲ. ಮತ್ತೊಮ್ಮೆ ‘ಮಂಗಲ್ ರಾಜ್’ ಬಯಸಿ ಎನ್ಡಿಎಗೆ ಮತ ಹಾಕಿದ್ದಾರೆ.…
Updated By: Priyalachhi ಬೆಂಗಳೂರು: ಹಸಿರೇ ಉಸಿರು ಎಂದು ಬದುಕಿ ಬಾಳಿದ ಶತಾಯುಷಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರವು ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ನಡೆಯಿತು. ಕವಿ ಸಿದ್ದಲಿಂಗಯ್ಯ ಸಮಾಧಿ ಪಕ್ಕದಲ್ಲಿ ಗುರುತಿಸಲಾಗಿದ್ದ ಸ್ಥಳದಲ್ಲಿ ಅಂತ್ಯಕ್ರಿಯೆ ನೇರವೇರಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ, ಸಕಲ ಸರ್ಕಾರಿ ಗೌರವದೊಂದಿಗೆ ವೃಕ್ಷಮಾತೆಯನ್ನು ಬೀಳ್ಕೊಟ್ಟರು. ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರು ಅಂತಿಮ ವಿಧಿ-ವಿಧಾನಗಳನ್ನು ಪೂರೈಸಿದರು. ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಲಾಗಿತ್ತು. ಈ ವೇಳೆ ನೆರೆದಿದ್ದ ತಿಮ್ಮಕ್ಕ ಅವರ ಕುಟುಂಬಸ್ಥರು, ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದರು. ಇದಕ್ಕೂ ಮುನ್ನ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಗೃಹ ಸಚಿವ ಜಿ. ಪರಮೇಶ್ವರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ನಟ ಮಾಸ್ಟರ್ ಆನಂದ್ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಅಪಾರವಾದ ನಷ್ಟ: ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ.ಪರಮೇಶ್ವರ್, ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ…
Updated By: Priyalachhi ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಪಕ್ಷದ ಸೋಲಿನ ಕುರಿತಂತೆ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದರು. ಆದರೆ ನವೆಂಬರ್ ಕ್ರಾಂತಿ ನಡೆಯುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಬದಲಿಗೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸೂಚನೆ ನೀಡಿದೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Updated By: Priyalachhi ಕರುನಾಡಿನ ಪ್ರೀತಿಯ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ಮಕ್ಕಳಾಗಿ ಕಂಡ ಹಿರಿಯ ಜೀವ ಪರಿಪೂರ್ಣ ಜೀವನ ನಡೆಸಿ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Salumarada Timmakka) ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ನಾಡಿನ ಹೆಮ್ಮೆಯ ಸಾಲು ಮರದ ತಿಮ್ಮಕ್ಕ ಬಗ್ಗೆ ಟಾಲಿವುಡ್ನ ಖ್ಯಾತ ನಟ, ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ತಮ್ಮ ಪೋಸ್ಟ್ ಮೂಲಕ ವೃಕ್ಷಮಾತೆಗೆ ಅವರು ಭಾವಪೂರ್ಣ ವಿದಾಯ ಹೇಳಿದ್ದಾರೆ.
Updated By: Priyalachhi ಬೆಂಗಳೂರು: “ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. “ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಜನರಿಗೆ ತಿಳಿಸಲಿದೆ. ನಾನು ಪುಸ್ತಕವನ್ನು ಪೂರ್ತಿ ಓದುವೆ” ಎಂದು ತಿಳಿಸಿದರು. ಮುಂದುವರೆದ ಸಿಎಂ, “ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ. ಮೇಕೆದಾಟಿನಲ್ಲಿ…
Updated By: Priyalachhi ಬೆಂಗಳೂರು: ಕೃಷ್ಣಾ, ಮಹದಾಯಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಪರ ನ್ಯಾಯಾಲಯದ ತೀರ್ಪು ಬಂದಿದ್ದರೂ ಅಧಿಸೂಚನೆ ಹೊರಡಿಸದ, ಅನುಮತಿ ನೀಡದ ಕೇಂದ್ರ ಸರ್ಕಾರದ ಅಸಹಕಾರದಿಂದ ಈ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ತಾವು ರಚಿಸಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಕೃಷ್ಣಾ ನದಿ ವಿವಾದದಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸುತ್ತಿಲ್ಲ. ಅಂದು ಯೋಜನೆಗೆ ಒಪ್ಪಿದ್ದ ಮಹಾರಾಷ್ಟ್ರ ಇಂದು ವಿರೋಧ ವ್ಯಕ್ತಪಡಿಸುತ್ತಿದೆ. ಮಹದಾಯಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಬಂದಿದ್ದರೂ ಅನುಷ್ಠಾನ ಆಗಿಲ್ಲ. ಗೋವಾದಲ್ಲಿ ಒಬ್ಬ ಸಂಸದ ಇದ್ದಾನೆ. ನಮ್ಮಲ್ಲಿ 28 ಸಂಸದರಿದ್ದರೂ ನಮ್ಮ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ. ಈ ಯೋಜನೆ ಜಾರಿಗೆ ಟೆಂಡರ್ ಕರೆಯಲಾಗಿದೆ. ಆದರೆ ಕೇಂದ್ರದ ಅರಣ್ಯ ಇಲಾಖೆ ಒಪ್ಪಿಗೆ ನೀಡುತ್ತಿಲ್ಲ ಎಂದರು. ರಾಜ್ಯದ…
Updated By: Priyalachhi ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಸಭೆಯಲ್ಲಿ ನಡೆದ ಸಂವಾದದಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಬೇಕಿದ್ದರೆ ಬಜೆಟ್ನಲ್ಲೇ ಘೊಷಣೆ ಮಾಡಬೇಕು. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತೇವೆ. ಆದಾಗ್ಯೂ, ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುವ ಬಗ್ಗೆ ನಾವು ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು. ಅನುಮೋದನೆ ಸಿಕ್ಕಿದ್ದೇ ಆದರೆ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಈ ಹಿಂದೆ,…
Updated By: Priyalachhi ಬೆಂಗಳೂರು: ಕಬ್ಬು ಬೆಳೆಗಾರರ ಹೆಸರಿನಲ್ಲಿ ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಹಚ್ಚಿರುವ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು. ಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ನಡುವೆ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದ್ದು, ಜವಾಬ್ದಾರಿಯುತ ಸರ್ಕಾರ ವಿಷಯದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳದೇ ಅತ್ತಿತ್ತ ಬೊಟ್ಟು ಮಾಡುತ್ತಾ, ಸಬೂಬು ಹೇಳುತ್ತಾ, ಸುಮ್ಮನೆ ಕುಳಿತಿರುವುದು ರೈತರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ಈ ಎಲ್ಲಾ ಬೆಳವಣಿಗೆಗೂ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅನ್ನದಾತರ ನೋವು…
Subscribe to Updates
Get the latest creative news from FooBar about art, design and business.