Author: Sambrama Prabha News

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Updated By: Priyalachhi ತುಮಕೂರು, ನವೆಂಬರ್ 13: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ, ಶಾಸಕ ಕೆಎನ್ ರಾಜಣ್ಣ (KN Rajanna), ತುಮಕೂರು ಜಿಲ್ಲೆಯ ರಾಜಕಾರಣ ಮತ್ತು ಕಾಂಗ್ರೆಸ್ (Congress) ಪಕ್ಷದ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. 2004ರಲ್ಲಿ ತಾವು ದೊಡ್ಡೇರಿ ಹೋಬಳಿಯಿಂದ ಶಾಸಕರಾಗಿದ್ದ ಸಂದರ್ಭವನ್ನು ನೆನಪಿಸಿಕೊಂಡ ರಾಜಣ್ಣ, ಆಗ ಕಾಂಗ್ರೆಸ್ ಪಕ್ಷದಲ್ಲಿ ಸರಿಯಾದ ಗೌರವ ಸಿಗದ ಕಾರಣ ಜನತಾದಳಕ್ಕೆ ಸೇರಿ ಸ್ಪರ್ಧಿಸಿದ್ದೆ. ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್​ವಾಶ್ ಆಗಿತ್ತು ಎಂದ ಅವರು, ಇದೇ ಪರಿಸ್ಥಿತಿ ಈಗ ಮತ್ತೆ ಬರುತ್ತದೆಯೋ ಏನೋ ಗೊತ್ತಿಲ್ಲ ಎಂದು ಅಭಿಪ್ರಾಯಪಟ್ಟರು. ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದರಿಂದ ಹಿಂದೆ ಆದಂಥ ಪರಿಸ್ಥಿತಿ ಮತ್ತೆ ಬರುವುದಿಲ್ಲ. ಆದರೆ ಪರಿಸ್ಥಿತಿ ಏನಾಗುತ್ತದೆ ಎಂದು ಹೇಳಲಾಗದು ಎಂದು ನಗುತ್ತಾ ಹೇಳಿದರು. ಮುಂದುವರಿದು ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎಂದರು. ಮುಂದಿನ ತೀರ್ಮಾನಗಳನ್ನು ಜನರು ಮಾಡಬೇಕು, ತಾವು…

Read More

Updated By: Priyalachhi ನವದೆಹಲಿ/ಹುಬ್ಬಳ್ಳಿ: ಕರ್ನಾಟಕದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಜೊತೆಗೆ, ಕೇಂದ್ರದ ಸುಧಾರಣಾ ಕ್ರಮಗಳನ್ನು ಮರೆಮಾಚುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕೇಂದ್ರವು ಬೆಲೆ ಸ್ಥಿರತೆ ಮತ್ತು ಮಾರುಕಟ್ಟೆ ವೈವಿಧ್ಯತೆ ಎರಡನ್ನೂ ಉತ್ತಮವಾಗಿಸಿದೆ. ಆದರೆ ಪಾವತಿ ಜಾರಿ, ನೀರಾವರಿ ಮತ್ತು ಸಬ್ಸಿಡಿ ವಿತರಣೆಯಂತಹ ಸ್ಥಳೀಯ ಅನುಷ್ಠಾನದ ಹೊಣೆ ರಾಜ್ಯ ಸರ್ಕಾರದ ಮೇಲಿದೆ ಎಂಬುದನ್ನು ಮರೆಯದಿರಿ ಎಂದು ಸಿಎಂಗೆ ತಿರುಗೇಟು ನೀಡಿದ್ದಾರೆ. ‎ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕೆ, ಸಕ್ಕರೆ ವಲಯದಲ್ಲಿ ಸ್ಥಿರತೆ ಕಾಪಾಡಲು ಹಾಗೂ ದೀರ್ಘಕಾಲೀನ ಸುಸ್ಥಿರತೆ ಮತ್ತು ಸಮೃದ್ಧಿಯನ್ನು ಸೃಷ್ಟಿಸುವ ನೀತಿಗಳನ್ನು ಮುನ್ನಡೆಸಲು ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿರುವ ಜೋಶಿ, ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳು ವಾಸ್ತವದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ರಾಜ್ಯ ಸರ್ಕಾರವೇ ಕಾರಣ…

Read More

Updated By: Priyalachhi ಶಿವಮೊಗ್ಗ: ಇವರು ವೃತ್ತಿಯಲ್ಲಿ ನಿರ್ವಾಹಕ, ಪವೃತ್ತಿಯಲ್ಲಿ ಚುಟುಕು ಕವಿ. ಅಪ್ಪಟ್ಟ ಕನ್ನಡ ಪ್ರೇಮಿ. ತಾವು ಕೆಲಸ ಮಾಡುವ ಬಸ್​ ಅನ್ನು ಕನ್ನಡದ ರಥವನ್ನಾಗಿಸಿ, ಭಾಷಾ ಪ್ರೇಮ ಮೆರೆದಿದ್ದಾರೆ. ಕಳೆದ 20 ವರ್ಷಗಳಿಂದಲೂ ತಮ್ಮ ಸ್ವಂತ ಖರ್ಚಿನಲ್ಲೇ ಕನ್ನಡಮ್ಮನ ಸೇವೆ ಮಾಡುತ್ತಾ ಮೆಚ್ಚುಗೆ ಗಳಿಸಿದ್ದಾರೆ. ಇವರ ಹೆಸರು ನಟರಾಜ್. ಮೂಲತಃ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದವರು. ಸದ್ಯ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಆನವಟ್ಟಿ ಗ್ರಾಮೀಣ ಭಾಗದ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಸಾರಿಗೆ ಸಂಸ್ಥೆಯಲ್ಲಿ ಕೆಲಸ ಪ್ರಾರಂಭಿಸಿದಾಗಿನಿಂದ ಇಂದಿನವರೆಗೂ ಇವರ ಮಾತೃಭಾಷಾ ಪ್ರೇಮ ಮುಂದುವರಿದಿದೆ. ಬಸ್​​ನಲ್ಲಿ ಕನ್ನಡದ ಪರಿಚಯ: ನಟರಾಜ್ ಅವರು ಬಸ್​ ಅನ್ನು ಸಂಪೂರ್ಣವಾಗಿ ಕನ್ನಡದ ರಥವನ್ನಾಗಿಸಿದ್ದಾರೆ. ಪ್ರಯಾಣಿಕರಿಗೆ ಬಸ್ಸಿನೊಳಗೆ ಬಂದ ಕೂಡಲೇ ಕನ್ನಡ ಲೋಕಕ್ಕೆ ಬಂದ ಅನುಭವವಾಗುತ್ತದೆ. ಬಸ್​ ಮುಂಭಾಗ ಕರ್ನಾಟಕ ಭೂಪಟ, ಮಧ್ಯದಲ್ಲಿ ತಾಯಿ ಭುವನೇಶ್ವರಿ ದೇವಿ ಕಂಗೊಳಿಸುತ್ತಾರೆ. ಎಡ ಮತ್ತು ಬಲ ಭಾಗದಲ್ಲಿ ಕನ್ನಡಕ್ಕೆ ಸೇವೆ ಸಲ್ಲಿಸಿದ ಕನ್ನಡದ…

Read More

Updated By: Priyalachhi ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಈ ನಡುವೆ ಘಟನೆ ವೇಳೆ ಹುಂಡೈ ಐ20 ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ಡಾ. ಉಮರ್ ಉನ್ ನಬಿ ಎನ್ನುವುದು ವಿಧಿವಿಜ್ಞಾನ ಪರೀಕ್ಷಾ ವರದಿಯಿಂದ ಬಹಿರಂಗಗೊಂಡಿದೆ. ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳು, ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಮೂಳೆಗಳು ಮತ್ತು ಹಲ್ಲುಗಳಿಂದ ಹೊರತೆಗೆಯಲಾದ ಡಿಎನ್ಎ ಮಾದರಿಗಳೊಂದಿಗೆ ಹೊಲಿಕೆಯಾದ ಬಳಿಕ ಈ ವಿಷಯ ದೃಢಪಟ್ಟಿದೆ. ಈ ಮಾದರಿಗಳನ್ನು ಏಮ್ಸ್ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ವಿಶ್ಲೇಷಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್‌ ಎಂದು ತನಿಖಾಧಿಕಾರಿಗಳು ಈ ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್‌ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯವಿತ್ತು. ಉಮರ್‌ ಕುಟುಂಬಸ್ಥರ ಡಿಎನ್‌ಎ ಸಂಗ್ರಹಿಸಲಾಗಿತ್ತು. ದೆಹಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಉಮರ್ ನಬಿ ಶ್ರೀನಗರದಿಂದ ಎಂಬಿಬಿಎಸ್ ಮತ್ತು…

Read More

Updated By: Priyalachhi ಚಿಕ್ಕಮಗಳೂರು: ಗೃಹಸಚಿವ ಡಾ. ಜಿ ಪರಮೇಶ್ವರ್ ಪುತ್ರನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯವನ್ನು ಖಂಡಿಸಿ ಮೊನ್ನೆ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡುವ ವೇಳೆ ಗೃಹ ಸಚಿವ ಡಾ. ಪರಮೇಶ್ವರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪೊಲೀಸರು ಸಂತೋಷ್ ಕೊಟ್ಯಾನ್ ನ್ನು ಬಂಧಿಸಿ, ಹೌಸಿಂಗ್ ಬೋರ್ಡ್‌ ನ್ಯಾಯಧೀಶರ ನಿವಾಸಕ್ಕೆ ಹಾಜರುಪಡಿಸಿದರು. ನಂತರ ನ್ಯಾಯಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದರು. ಏನು ಹೇಳಿದ್ದರು? ಸಂತೋಷ್ ಕೊಟ್ಯಾನ್ ಅವರು ಪ್ರತಿಭಟನೆಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಏನು ನಡೆದರೂ ಗೃಹಸಚಿವರಿಗೆ ಗೊತ್ತಿಲ್ಲ, ಗೊತ್ತಿಲ್ಲ. ಇದಕ್ಕಾಗಿಯೇ ಪರಮೇಶ್ವರ್ ಮಗ ಮಗಳಾಗಿ ಪರಿವರ್ತನೆಯಾಗಿದ್ದಾರೆ’ ಎಂದು…

Read More

Updated By: Priyalachhi ಬೆಂಗಳೂರು: ಕೋವಿಡ್ ಬಳಿಕ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದಲ್ಲಿ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದ್ದು ಜನರ ಜೀವ ತಗೆಯುತ್ತಿವೆ. ಅದರಲ್ಲೂ ಕೋಮಾರ್ಬಿಟಿಸ್ ರೋಗಿಗಳು ಸಾಂಕ್ರಾಮಿಕ ಖಾಯಿಲೆಗಳಿಂದ ಪರದಾಡುವಂತಾಗಿದೆ. ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯದ ಸಮಸ್ಯೆಗಳು ವ್ಯಾಪಕ ಹಿನ್ನಲೆ ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಲಿಸ್ಟ್ ಮಾಡಲಾಗಿದ್ದು ಇವರಿಗೆಲ್ಲ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ಹಾಗೂ ಔಷಧ ನೀಡುವ ‘ಗೃಹ ಆರೋಗ್ಯ’ ಯೋಜನೆಯನ್ನು (Gruha Arogya Scheme) ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲಾಗುತ್ತಿದೆ. ಕಳೆದ ಎರಡು ತಿಂಗಳಲ್ಲಿ ‘ಗೃಹ ಆರೋಗ್ಯದಡಿ’ ಲಕ್ಷಾಂತರ ಜನರಿಗೆ ಆರೋಗ್ಯ ಇಲಾಖೆ ಕ್ಯಾನ್ಸರ್ ಸ್ಕ್ರಿನಿಂಗ್ ಮಾಡಿದೆ. ಈ ವೇಳೆ 5664 ಕ್ಯಾನ್ಸರ್ (Cancer) ಪೀಡಿತ ರೋಗಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳ ‘ಗೃಹ ಆರೋಗ್ಯ’ದಲ್ಲಿ 5664 ಕ್ಯಾನ್ಸರ್ ಪೀಡಿತ ರೋಗಿಗಳು ಪತ್ತೆಯಾಗಿದ್ದು ಹೆಚ್ಚುವರಿ…

Read More

Updated By: Priyalachhi ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಪ್ರವಾಸಿ ಶ್ರೀಲಂಕಾ ತಂಡದ 8 ಆಟಗಾರರು ತವರಿಗೆ ಮರಳಲು ಮುಂದಾಗಿದ್ದಾರೆ. ಪಾಕಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಕೆಲ ಆಟಗಾರರು ತಮ್ಮ  ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ ತವರಿಗೆ ಮರಳಲು ವಿನಂತಿಸಿದ್ದಾರೆ. ಹೀಗಾಗಿ ಈ ಆಟಗಾರರನ್ನು ತವರಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ. ಶ್ರೀಲಂಕಾ ತಂಡದ ಕೆಲ ಸದಸ್ಯರು ಸ್ವದೇಶಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದರೂ, ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಉಳಿದ ಆಟಗಾರರಿಗೆ ಮತ್ತು ಸಹಾಯಕ ಸಿಬ್ಬಂದಿಗೆ ಪಾಕಿಸ್ತಾನದಲ್ಲಿ ತಮ್ಮ ಪಂದ್ಯಗಳನ್ನು ಮುಂದುವರಿಸಲು ಸೂಚನೆ ನೀಡಿದೆ. ಪ್ರವಾಸಿ ತಂಡದ ಪ್ರತಿಯೊಬ್ಬ ಸದಸ್ಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಅಲ್ಲದೆ ಎಲ್ಲಾ ಕಳವಳಗಳನ್ನು ಸರಿಯಾಗಿ ಪರಿಹರಿಸಲಾಗುತ್ತಿದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತನ್ನ ಆಟಗಾರರಿಗೆ ಆಶ್ವಾಸನೆ ನೀಡಿದೆ. ಇನ್ನು ತವರಿಗೆ ಮರಳಲಿರುವ ಆಟಗಾರರಿಗೆ ಬದಲಿಯಾಗಿ ಶ್ರೀಲಂಕಾದಿಂದ ಕೆಲ ಆಟಗಾರರು ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಈ ಮೂಲಕ…

Read More

Updated By: Priyalachhi ಬೆಂಗಳೂರು (ನ.13): ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ನೀತಿ 2025ಕ್ಕೆ (Menstrual Leave Policy, 2025) ಅ.9ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಸಂಬಂಧ ಬುಧವಾರ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ವಾರ್ಷಿಕವಾಗಿ 12 ದಿನಗಳ ರಜೆ ನೀಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ತಿಂಗಳಿಗೆ ಒಂದು ಋತುಚಕ್ರದ ರಜೆ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾ‌ರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ…

Read More

Updated By: Priyalachhi ಬೆಂಗಳೂರು: ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಅವರು ಈ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ. ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ…

Read More

ಲೇಖನ: ಪ್ರಿಯಲಚ್ಚಿ ಗಂಧನಹಳ್ಳಿ ಭಾರತದ ಯುವ ಸಮೂಹ ಕಳೆದ ನಾಲ್ಕೈದು ವರ್ಷಗಳಿಂದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದೆ. ಅದು ಹೃದಯರಕ್ತನಾಳೀಯ ಕಾಯಿಲೆಗಳು (CVD-Cardiovascular Disease) ಸಮಸ್ಯೆ. ಇದು ಮೌನವಾಗಿ ಆದರೆ ಸ್ಥಿರವಾಗಿ ದೇಶದಲ್ಲಿ ಜನರ ಅದರಲ್ಲೂ ಹಲವು ಯುವಜನತೆಯ ಮರಣಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಇಂದು ವಿಶ್ವ ಹೃದಯ ದಿನದ ಸಂದರ್ಭದಲ್ಲಿ, ಬೆಂಗಳೂರಿನ ವೈದ್ಯರು 30 ರಿಂದ 40ರ ವಯೋಮಾನದ ಜನರಲ್ಲಿ ಪರಿಧಮನಿಯ ಅಪಧಮನಿ ಕಾಯಿಲೆಗಳು, ಹೃದಯಾಘಾತ ಮತ್ತು ಹೃದಯ ವೈಫಲ್ಯಗಳು ಕಂಡುಬರುವುದನ್ನು ಗಮನಿಸುತ್ತಿದ್ದಾರೆ. ಹಾಗೆಂದು ಹೃದಯಾಘಾತ ಸಮಸ್ಯೆಯನ್ನು ಮನಸ್ಸಿಗೆ, ಹೃದಯಕ್ಕೆ ಭಾವನಾತ್ಮಕವಾಗಿ ತೆಗೆದುಕೊಳ್ಳಬಾರದು, ಇದರಿಂದ ಅಪಾಯ ಹೆಚ್ಚು ಎನ್ನುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಜಾಗತಿಕವಾಗಿ ಸಿವಿಡಿಗಳು ಸಾವಿಗೆ ಪ್ರಮುಖ ಕಾರಣ; ಮೂರು ಸಾವುಗಳಲ್ಲಿ ಒಂದು CVDಗಳಿಂದಾಗಿ ಉಂಟಾಗುತ್ತಿದೆ. ಭಾರತದಲ್ಲಿ CVDಗಳ ಆರಂಭಿಕ ಆಕ್ರಮಣವು ವಿಶೇಷವಾಗಿ ಆತಂಕಕಾರಿಯಾಗಿದೆ ಎಂದು ಭಾರತೀಯ ಹೃದ್ರೋಗಶಾಸ್ತ್ರ ಕಾಲೇಜಿನ ಡಾ. CM ನಾಗೇಶ್ ಹೇಳುತ್ತಾರೆ. 30 ಅಥವಾ 40 ರ ವಯೋಮಾನದ ಆರಂಭದಲ್ಲಿ ಯುವಜನರಲ್ಲಿ ಪರಿಧಮನಿಯ ಅಪಧಮನಿ…

Read More