Author: Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Updated By: Priyalachhi ಮಂಡ್ಯ: ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು.ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಲಿದೆ ಎಂದು ಮೃತರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.
Updated By: Priyalachhi ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನಲ್ಲಿ ಅರಣ್ಯ ಆಧಾರಿತ ಬುಡಕಟ್ಟು ಜನರ ಅಭಿವೃದ್ಧಿಗಾಗಿ 200 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು , ಅದರಲ್ಲಿ 160 ಕೋಟಿ ರೂ.ಗಳಲ್ಲಿ 8 ಸಾವಿರ ಮನೆ ಕಟ್ಟಲು ಅನುಮೋದನೆ ನೀಡಿದ್ದಾರೆ ಎಂದು ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಟಿ. ಯೋಗೀಶ್ ಹೇಳಿದರು. ನಗರದ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ಚಾಮರಾಜನಗರ ಜಿಲ್ಲೆಯೊಂದರಿಂದಲೇ 32 ಸಾವಿರ ಮನೆಗಳ ಬೇಡಿಕೆ; ಚಾಮರಾಜನಗರ ಜಿಲ್ಲೆಯೊಂದರಲ್ಲೇ 3 ಸಾವಿರ ಮನೆಗಳ ಬೇಡಿಕೆ ಬಂದಿದೆ. ರಾಜೀವ್ಗಾಂಧಿ ಹೌಸಿಂಗ್ ಕಾರ್ಪೋರೇಷನ್ನಲ್ಲಿ ಒಂದು ಮನೆ ಕಟ್ಟಲು 2.39 ಲಕ್ಷ ಕೊಡುತ್ತಾರೆ. ಆದರೆ, ಮುಖ್ಯಮಂತ್ರಿಗಳು ಬುಡಕಟ್ಟು ಜನರ ಮನೆ ಕಟ್ಟಲು 1 ಮನೆಗೆ 4 ಲಕ್ಷದ 50 ಸಾವಿರ ನಿಗದಿ ಮಾಡಿದ್ದಾರೆ. ಇದು ಸರಕಾರದ ಆದೇಶವು ಆಗಿದೆ ಎಂದರು. ಆಶ್ರಮ ಶಾಲೆಗಳಿಗೆ 200 ಶಿಕ್ಷಕರ ನೇಮಕ: ಮೊದಲ ಹಂತದಲ್ಲಿ…
Updated By: Priyalachhi ಬೆಂಗಳೂರು: ಮುಂದಿನ ವರ್ಷ ಜವವರಿಯಲ್ಲಿ ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಅವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಸಕಾಲದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗಲು ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ತಕ್ಷಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಡಿಸೆಂಬರ್ 11ಕ್ಕೆ ವಿಚಾರಣೆ ಮುಂದೂಡಿಕೆ: ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಜನವರಿಯಲ್ಲಿ ಗ್ರಾ.ಪಂ.ಗಳ ಅವಧಿ ಮುಗಿಯಲಿದೆ. ಅವುಗಳಿಗೆ ಸಕಾಲದಲ್ಲಿ ಚುನಾವಣೆ ನಡೆಯಬೇಕು. ಚುನಾವಣೆ ನಡೆಯಲು ಮೀಸಲಾತಿ ನಿಗದಿಯಾಗಬೇಕು. ಒಟ್ಟು ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸದ…
Updated By: Priyalachhi ನವದೆಹಲಿ: ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ ಆದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ತೀವ್ರ ದುಃಖ ವ್ಯಕ್ತಪಡಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, “ಘೋರ ಕೃತ್ಯ”ದ ಸಂತ್ರಸ್ತರಿಗೆ ಗೌರವ ಸಲ್ಲಿಸಲು ಸಂಪುಟ ಸದಸ್ಯರು ಎರಡು ನಿಮಿಷಗಳ ಮೌನಾಚರಣೆ ಮಾಡಿದರು ಎಂದು ಮಾಹಿತಿ ನೀಡಿದರು. ದಾಳಿಗೆ ಸಂಬಂಧಿಸಿದಂತೆ ಸಚಿವ ಸಂಪುಟವು ಈ ಕೆಳಗಿನ ನಿರ್ಣಯವನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದರು. ಅಮಾಯಕರ ಜೀವಗಳಿಗೆ ಕಾರಣವಾದ ಈ ಹೇಡಿತನ ಮತ್ತು ಹೇಡಿತನದ ಕೃತ್ಯವನ್ನು ಸಚಿವ ಸಂಪುಟ ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದು ಸಚಿವರು ಹೇಳಿದರು. ದೇಶವು ನವೆಂಬರ್ 10, 2025 ರ ಸಂಜೆ ಕೆಂಪು ಕೋಟೆಯ ಬಳಿ ಕಾರು ಸ್ಫೋಟದ ಮೂಲಕ ದೇಶ ವಿರೋಧಿ ಶಕ್ತಿಗಳು ನಡೆಸಿದ ಘೋರ ಭಯೋತ್ಪಾದಕ…
Updated By: Priyalachhi ನವದೆಹಲಿ: ದೆಹಲಿಯ ಕೆಂಪು ಕೋಟೆ ಸ್ಫೋಟದಿಂದ ಗಾಯಗೊಂಡವರಿಗೆ ಸಾಂತ್ವನ ಹೇಳಲು ಮತ್ತು ಪರಿಸ್ಥಿತಿಯನ್ನು ನಿರ್ಣಯಿಸಲು ಭೂತಾನ್ನಿಂದ ಹಿಂದಿರುಗಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಎಲ್ಎನ್ಜೆಪಿ ಆಸ್ಪತ್ರೆಗೆ ತೆರಳಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು. ಪ್ರಧಾನಿ ಮೋದಿ ಗಾಯಾಳುಗಳೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಸಾಧ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದರು. ಈ ಕಷ್ಟದ ಸಮಯದಲ್ಲಿ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿರುವುದು ಈ ಭಯೋತ್ಪಾದಕ ದಾಳಿಯ ಸಂತ್ರಸ್ತರ ಸರ್ಕಾರದ ಸೂಕ್ಷ್ಮತೆಯನ್ನು ಮತ್ತು ಅವರ ಆರೈಕೆಗೆ ಅದು ನೀಡುವ ಹೆಚ್ಚಿನ ಆದ್ಯತೆಯನ್ನು ಪ್ರತಿಬಿಂಬಿಸುತ್ತದೆ. ಸಾಧ್ಯವಾದಷ್ಟು ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿಯವರು ಆಸ್ಪತ್ರೆ ಆಡಳಿತ ಮಂಡಳಿಗೆ ನಿರ್ದೇಶನ ನೀಡಿದರು. ಗಾಯಾಳುಗಳನ್ನು ಭೇಟಿ ಮಾಡಿದ ತಕ್ಷಣ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಉನ್ನತ ಮಟ್ಟದ ಭದ್ರತಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ದಾಳಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಈ ಸಭೆಯನ್ನು ಕರೆಯಲಾಗಿದೆ ಮತ್ತು ಮುಂದಿನ ಕ್ರಮ ಮತ್ತು ಭದ್ರತಾ ಕ್ರಮಗಳನ್ನು ವಿವರವಾಗಿ ಚರ್ಚಿಸಲಿದ್ದಾರೆ. ಸಂಜೆ…
Updated By: Priyalachhi ಚೆನ್ನೈ: ಜಿಎಸ್ ಟಿ ಕಡಿತದ ಪರಿಣಾಮವಾಗಿ ದೇಶದಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಭಾರತದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ 2025 ರಲ್ಲಿ ರಲ್ಲಿ ಶೇ. 0.25ಕ್ಕೆ ತೀವ್ರವಾಗಿ ಕುಸಿದಿದೆ. ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಹಣದುಬ್ಬರವಾಗಿದೆ. ಸೆಪ್ಟೆಂಬರ್ನಲ್ಲಿ ಶೇ. 1.54 ಇದ್ದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ನಲ್ಲಿ ಕೇವಲ ಶೇ. 0.25 ದಾಖಲಾಗಿದೆ. ಪ್ರಸ್ತುತ ಗ್ರಾಹಕ ಬೆಲೆ ಸೂಚ್ಯಂಕ(CPI) ಸರಣಿಯಲ್ಲಿ ಇದು ಅತ್ಯಂತ ಕಡಿಮೆ ಮಟ್ಟವನ್ನು ಗುರುತಿಸಿದೆ. ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ(MoSPI) ಮಾಹಿತಿಯ ಪ್ರಕಾರ, ಆಹಾರವಸ್ತುಗಳ ಬೆಲೆಗಳು ಭರ್ಜರಿ ಇಳಿಕೆಯಾಗಿರುವುದು ಹಣದುಬ್ಬರ ಕುಸಿತಕ್ಕೆ ಕಾರಣವಾಗಿದೆ. ಆಹಾರ ಹಣದುಬ್ಬರವು ಸೆಪ್ಟೆಂಬರ್ನಲ್ಲಿ ಮೈನಸ್ ಶೇ. 2.33 ಇದ್ದದ್ದು ಈಗ ಮೈನಸ್ 5.02ಕ್ಕೆ ಕುಸಿದಿದೆ. ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಂದಾಗಿ ತರಕಾರಿ, ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳ ಬೆಲೆಗಳು ಗಮನಾರ್ಹ ಕುಸಿತವನ್ನು ದಾಖಲಿಸಿವೆ. ಅಲ್ಲದೆ ಸೆಪ್ಟೆಂಬರ್ ಅಂತ್ಯದಲ್ಲಿ ಜಾರಿಗೆ ತರಲಾದ ಜಿಎಸ್ಟಿ ದರ ಕಡಿತ ಸಹ…
Updated By: Priyalachhi ಬೆಂಗಳೂರು: ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದು, ಹಾಲಿ ಮುಖ್ಯಮಂತ್ರಿಯೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ಏನು ತಪ್ಪೆಂದು ಪ್ರಶ್ನಿಸಿದ್ದಾರೆ. 2028 ರಲ್ಲಿ ಸಿದ್ದರಾಮಯ್ಯ ಅವರ ಐದು ವರ್ಷಗಳ ಅವಧಿ ಪೂರ್ಣಗೊಂಡ ನಂತರ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂಬ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಇತ್ತೀಚಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಪ್ರತಿಕ್ರಿಯೆ ನೀಡುವಾಗ ಈ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 2 ವರ್ಷ 6 ತಿಂಗಳು ಪೂರ್ಣಗೊಳ್ಳುತ್ತಿದ್ದು, ನವೆಂಬರ್ ನಲ್ಲಿ ಸರ್ಕಾರದ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿತ್ತು. ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ “ತುಂಬಾ ಸಂತೋಷ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆದರೆ ಏನು ತಪ್ಪು? ಮುಖ್ಯಮಂತ್ರಿ ಅಲ್ಲಿದ್ದಾರೆ. ಅವರು ಇರಲಿ. ನಮಗೆ ದುಃಖವಿಲ್ಲ.…
Updated By: Priyalachhi ಪ್ರಿಯಾಂಕಾ ಉಪೇಂದ್ರ (Priyanka Upendra) ಮಧ್ಯಮ ವರ್ಗದ ಮಹಿಳೆಯ ಪಾತ್ರ ಮಾಡಿಯೇ ಇಲ್ಲ. ಆದರೆ, ಸೆಪ್ಟೆಂಬರ್-21 ಚಿತ್ರದಲ್ಲಿ (September 21 Movie) ಈ ಚಾನ್ಸ್ ಸಿಕ್ಕಿದೆ. ಡಿ ಗ್ಲಾಮರಸ್ (D glamrs) ರೋಲ್ ಇದಾಗಿದೆ. ಮರುವಿನ ಕಾಯಿಲೆ ಇರೋ ವ್ಯಕ್ತಿಯ ಸೇವೆ ಮಾಡುವ ಪಾತ್ರ ಇದಾಗಿದೆ. ಇದಕ್ಕೆ ಏನು ಬೇಕೋ ಆ ರೀತಿನೇ ಪ್ರಿಯಾಂಕಾ (Priyanka) ತಯಾರಿ ಮಾಡಿಕೊಂಡಿದ್ದಾರೆ. ಅದು ಈಗ ಬಿಟ್ಟಿರೋ ಫೋಟೋಗಳಲ್ಲೂ ಕಾಣಿಸುತ್ತದೆ. ಅದರೊಟ್ಟಿಗೆ ಈ ಚಿತ್ರದ ರಿಲೀಸ್ ವಿಚಾರವೂ ತಿಳಿದಿದೆ. ಈ ಎಲ್ಲದರ ಒಂದು ಸ್ಟೋರಿ ಇಲ್ಲಿದೆ ಓದಿ. ಮಧ್ಯಮ ವರ್ಗದ ರೋಲ್ ಪ್ರಿಯಾಂಕಾ ಉಪೇಂದ್ರ ಮಾಡ್ರನ್ ಆಗಿದ್ದಾರೆ. ಇವರ ಪಾತ್ರಗಳಿಗೆ ಆ ಟಚ್ ಇದ್ದೇ ಇರುತ್ತದೆ. ಆದರೆ, ಸೆಪ್ಟೆಂಬರ್-21 ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಮಧ್ಯಮ ವರ್ಗದ ಪಾತ್ರ ಮಾಡಿದ್ದಾರೆ.
Updated By: Priyalachhi ಬೆಳಗಾವಿ: ಉತ್ತರ ಕರ್ನಾಟಕ ಭಾಗಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಕಳೆದ 13 ವರ್ಷಗಳಿಂದ ಉತ್ತರ ಕರ್ನಾಟಕ ವಿಕಾಸ ವೇದಿಕೆ ಹೋರಾಡುತ್ತಿದೆ. ಇದೀಗ ಪ್ರತ್ಯೇಕ ಉತ್ತರ ಕರ್ನಾಟಕ ಆಗದ ಹೊರತು ಅಭಿವೃದ್ಧಿ ಸಾಧ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದಿರುವ ಈ ವೇದಿಕೆ ಪ್ರತ್ಯೇಕ ರಾಜ್ಯದ ಪರವಾಗಿ 1 ಕೋಟಿ 9308 ಜನರ ಸಹಿ ಪಡೆದಿದೆ. ಬೇಡಿಕೆಗಳೇನು?: ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ಮಟ್ಟದ ಸೆಕ್ರೆಟರಿಯೇಟ್ ಕಚೇರಿಗಳನ್ನು ಪ್ರಾರಂಭಿಸಬೇಕು. ರಾಜ್ಯ ಮಟ್ಟದ ಕಾರ್ಯಾಲಯಗಳನ್ನು ಇಲ್ಲಿಗೆ ವರ್ಗಾಯಿಸಬೇಕು. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಬೇಕು. ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಈ ಬೇಡಿಕೆಗಳೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉತ್ತರ ಕರ್ನಾಟಕ ವಿಕಾಸ ವೇದಿಕೆ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ಮತ್ತು ವಿವಿಧ ಉತ್ತರ ಕರ್ನಾಟಕ ಪರ ಹೋರಾಟ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ಮಂಗಳವಾರ…
Updated By: Priyalachhi ಬೆಂಗಳೂರು: ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದವ. ಈತ ನೀಡಿದ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆಯ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶೋಧಕಾರ್ಯ ನಡೆಸುತ್ತಿದ್ದಾರೆ. ಪೀಣ್ಯದ ನಾಗಸಂದ್ರದ ಪಿಜಿ(ಪೇಯಿಂಗ್ ಗೆಸ್ಟ್)ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.1ರಂದು ಇಂದಿರಾನಗರದ ರೆಸ್ಟೋರೆಂಟ್ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ಧಾರೆ. ಮದ್ಯ ಸೇವಿಸಿಯದ ಬಳಿಕ ನಾನು ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದೆದೆ. ಹೀಗಾಗಿ ಯುವತಿ ಲಾಡ್ಜ್ವೊಂದರಲ್ಲಿ ರೂಮ್ ಬುಕ್…
Subscribe to Updates
Get the latest creative news from FooBar about art, design and business.