Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ
Latest News Politics

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Sub EditorBy Sub EditorAugust 26, 2026No Comments2 Mins Read
Share Facebook Twitter Pinterest Copy Link Telegram LinkedIn Tumblr Email
nikhil kumaraswamy
Share
Facebook Twitter LinkedIn Pinterest Email

ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ನಿಗಮದ ಹಣ ದುರ್ಬಳಕೆ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ತೆಗೆದುಕೊಂಡಿರುವುದರ ವಿರುದ್ಧ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದು, ಕೂಡಲೇ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಬೇರೆ ಸಮರ್ಥರು ಇರಲಿಲ್ಲವೇ ಎಂದ ನಿಖಿಲ್ ಪ್ರಶ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, “ನಾಗೇಂದ್ರ ಅವರ ಮೇಲಿನ ಆರೋಪ ನಿನ್ನೆ ಮೊನ್ನೆಯದಲ್ಲ. ಕಳೆದ ವರ್ಷವೇ ಈ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಖುದ್ದು ಮುಖ್ಯಮಂತ್ರಿಗಳೇ ಸದನದಲ್ಲಿ 189 ಕೋಟಿ ಅಲ್ಲ, 87 ಕೋಟಿ ರೂ.ಗಳ ಹಣ ದುರ್ಬಳಕೆಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಿರುವಾಗ ಅವರನ್ನೇ ಯಾಕೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕಿತ್ತು? ಕಾಂಗ್ರೆಸ್ ಪಕ್ಷದಲ್ಲಿ ಆ ಸ್ಥಾನ ತುಂಬಲು ಬೇರೆ ಸಮರ್ಥರು ಇರಲಿಲ್ಲವೇ? ಇದಕ್ಕೆ ಸರ್ಕಾರವೇ ಉತ್ತರ ಕೊಡಬೇಕು,” ಎಂದು ಗುಡುಗಿದ್ದಾರೆ.

ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಅವರು, “ಒಂದೆಡೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ರಾಜ್ಯದಾದ್ಯಂತ ತೀವ್ರ ಬರಗಾಲವಿದೆ. ಮೂರು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದೆ. ಸದನದಲ್ಲಿ ರೈತರ ಸಮಸ್ಯೆ, ಬಿಡದಿ ಹಾಗೂ ನೈಸ್ ರಸ್ತೆ ವಿಚಾರಗಳಂತಹ ಗಂಭೀರ ವಿಷಯಗಳ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ಸರ್ಕಾರದ ನಡೆ ಮುಜುಗರ ತರುವಂತಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

600 ಅಕೌಂಟ್‌ಗಳಿಗೆ ಹಣ, ಚುನಾವಣೆಗಳಿಗೆ ಬಳಕೆ: ರವಿಕುಮಾರ್ ಗಂಭೀರ ಆರೋಪ ಇದೇ ವಿಚಾರವಾಗಿ ಮಾತನಾಡಿದ ಬಿಜೆಪಿ ಎಂಎಲ್ಸಿ ರವಿಕುಮಾರ್, ಯಾವುದೇ ಕಾರಣಕ್ಕೂ ನಾಗೇಂದ್ರ ಅವರು ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. “ಮುಖ್ಯಮಂತ್ರಿಗಳು ಸದನದಲ್ಲೇ 87 ಕೋಟಿ ಕರಪ್ಷನ್ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಭ್ರಷ್ಟಾಚಾರದ ಹಣ ಬಂಧುಗಳು, ಸ್ನೇಹಿತರು ಸೇರಿದಂತೆ ಸುಮಾರು 600 ಅಕೌಂಟ್‌ಗಳಿಗೆ ವರ್ಗಾವಣೆಯಾಗಿದೆ. ಬಳ್ಳಾರಿ ಲೋಕಸಭಾ ಚುನಾವಣೆ ಹಾಗೂ ತೆಲಂಗಾಣ ಚುನಾವಣೆಗೂ ಈ ಹಣ ಬಳಕೆಯಾಗಿದೆ ಎಂಬುದು ತನಿಖೆಯಿಂದ ಬಯಲಾಗಿದೆ,” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಕೇವಲ ಅಧಿಕಾರಿಗಳ ಮೇಲೆ ತಪ್ಪು ಹೊರಿಸಿ, ಮಂತ್ರಿಯನ್ನು ಬಚಾವು ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ಯಾವುದೇ ಅರ್ಥವಿಲ್ಲ. ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವವರೆಗೂ ಅಥವಾ ಸರ್ಕಾರ ಅವರ ರಾಜೀನಾಮೆ ಪಡೆಯುವವರೆಗೂ ಭಾರತೀಯ ಜನತಾ ಪಾರ್ಟಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ,” ಎಂದು ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಪಡಸಾಲೆಯಲ್ಲಿ ಈ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
B Nagendra CM Siddaramaiah Kannada News Karnataka Politics MLC Ravikumar Nikhil Kumaraswamy Sambramaprabha Valmiki Corporation Scam ನಿಖಿಲ್ ಕುಮಾರಸ್ವಾಮಿ ಬಿ ನಾಗೇಂದ್ರ ಸಚಿವ ಸಂಪುಟ
Add as Preferred on Google Follow on Google News Follow on Flipboard
Share. Facebook Twitter Pinterest LinkedIn Tumblr Email Copy Link
Previous Articleಮಹಿಳಾ ಸ್ವೀಕಾರ ಕೇಂದ್ರದಲ್ಲಿ ಹೆಣ್ಣು ಮಕ್ಕಳ ದುರುಪಯೋಗ ಆರೋಪ; ಬೆಂಗಳೂರು ಕೇಂದ್ರವೊಂದರಲ್ಲೇ 1,776 ಮಹಿಳೆ, ಹೆಣ್ಣು ಮಕ್ಕಳ ನಾಪತ್ತೆ, ಗಡುವು ಮೀರಿದರೂ ವರದಿ ನೀಡದ ಡಿಜಿಪಿ, ಸರ್ಕಾರದ ಕಾರ್ಯದರ್ಶಿ
Next Article ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ
Sub Editor
  • Website

Related Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.