BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಬೆಂಗಳೂರು ಎಟಿಎಂ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ

Author Picture
Published On: November 20, 2025

—Advertisement—

Updated By: Priyalachhi

ಚಿತ್ತೂರು: ಬೆಂಗಳೂರಿನಲ್ಲಿ ನಡೆದ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ಪ್ರಕರಣದ ಸಂಬಂಧ ಇಬ್ಬರನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೌತ್ ಎಂಡ್ ಸರ್ಕಲ್ ನಿಂದ ನಿನ್ನೆ ಮಧ್ಯಾಹ್ನ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳಲ್ಲಿ ಇಬ್ಬರು ಶಂಕಿತರನ್ನು ತಿರುಪತಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರೋಪಿಗಳಿಂದ ಮಹತ್ವದ ಮಾಹಿತಿ

ಇದೇ ವೇಳೆ ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಈ ವೇಳೆ ಬಂಧಿತರು ಇತರೆ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.

ಇನ್ನೋವಾ ಕಾರು ಪತ್ತೆ

ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿಯಲ್ಲಿ ಬಳಿ ಪತ್ತೆಯಾಗಿದ್ದು, ಖಚಿತ ಮಾಹಿತಿಯನ್ನು ಆಧರಿಸಿ ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿಯ ಬಳಿಯೇ ಇನೋವಾ ಕಾರು ಬಿಟ್ಟು ಆರೋಪಿಗಳು ಹಣದ ಸಮೇತ ಪರಾರಿಯಾಗಿದ್ದಾರೆ.

ಹೀಗಾಗಿ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ತಿರುಪತಿ ಪೊಲೀಸರ ಜೊತೆ ದಕ್ಷಿಣ ವಿಭಾಗ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸಲಾಗುತ್ತಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp