Updated By: Priyalachhi

ಹಾವೇರಿ: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಫೈಟ್ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿರೋಧ ಪಕ್ಷ ಬಿಜೆಪಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಪರಿಗಣಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ‘ಕಪ್ಪು ಕುದುರೆ’ ಸಹ ಸ್ಪರ್ಧೆಗೆ ಇಳಿಯಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ನಾಯಕತ್ವದ ವಿಷಯಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಎರಡು ಮೂರು ಸೂತ್ರಗಳನ್ನು ಪ್ರಸ್ತಾಪಿಸಿದೆ ಎಂದು ಹಾವೇರಿ ಬಿಜೆಪಿ ಸಂಸದರು ಹೇಳಿದ್ದಾರೆ.

“ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಸಿಎಂ ಹುದ್ದೆಗಾಗಿ ಕಾಂಗ್ರೆಸ್ ಪಕ್ಷದ ಆಂತರಿಕ ಜಗಳ ಹೀಗೆಯೇ ಮುಂದುವರಿದರೆ, ರಾಜ್ಯದಲ್ಲಿ ರಾಜಕೀಯ ಅಲ್ಲೋಲ-ಕಲ್ಲೋಲ ಆಗುವ ಸಾಧ್ಯತೆ ಇದೆ.ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version