Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ
Politics Latest News

ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

Sambrama Prabha NewsBy Sambrama Prabha NewsNovember 2, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್​ಬಾಗ್​ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಲಾಲ್​ಬಾಗ್​ನಲ್ಲಿ ಜನಜಾಗೃತಿ ಅಭಿಯಾನ ನಡೆಸಿದರು. ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಅಶ್ವತ್ಥ ನಾರಾಯಣ ಅವರು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಸಹಿ ಸಂಗ್ರಹಿಸಿದರು.

Tunnel Road

ಇದೇ ವೇಳೆ, ಜಿಬಿಎ ಮುಖ್ಯ ಇಂಜಿನಿಯರ್ ಹಾಗೂ ಲಾಲ್​ಬಾಗ್​ ಜಂಟಿ ನಿರ್ದೇಶಕರಿಂದ ಮಾಹಿತಿ ಪಡೆದ ಅಶೋಕ್, ಆರು ಎಕರೆ ಬಳಸಿಕೊಂಡರೆ ಇದು ಮಾರ್ಕೆಟ್ ಆಗುವುದಿಲ್ಲವೇ?. ಮುಂದೆ ನಾವೂ ಇರಲ್ಲ, ನೀವೂ ಇರಲ್ಲ. ಆದ್ರೆ ನಾವು ಮಾಡುವ ಆದೇಶ ಉಳಿದುಕೊಳ್ಳುತ್ತದೆ. ಬೆಂಗಳೂರಿಗೆ ಯಾರು ಬಂದರೂ ಮೊದಲು ನೋಡುವುದೇ ಲಾಲ್‌ಬಾಗ್, ವಿಧಾನಸೌಧ ಎಂದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಶೋಕ್, ಬೆಂಗಳೂರಿನ ಪರಿಸರಪ್ರೇಮಿಗಳ ಇತಿಹಾಸ ಹೊಂದಿರುವ ಸಸ್ಯಕಾಶಿಗೆ ರಾಜ್ಯ ಸರ್ಕಾರ ಗುಂಡಿ ತೋಡುವ ಕೆಲಸ ಮಾಡುತ್ತಿದೆ. ಟನಲ್ ರಸ್ತೆಯ ಯೋಜನೆಯಿಂದ ಬೆಂಗಳೂರಿನ‌ ಪರಿಸರ ಹಾಳಾಗುತ್ತದೆ. ಇದರಿಂದ ಬೆಂಗಳೂರಿನ ಜನ ನಿದ್ದೆಗೆಡುವಂತಾಗಿದೆ. 18 ಕಿ.ಮೀ ಟನಲ್ ರಸ್ತೆ ನಿರ್ಮಾಣವಾದರೆ ಟ್ರಾಫಿಕ್ ಸಂಪೂರ್ಣವಾಗಿ ಕಡಿಮೆಯಾಗುತ್ತದೆ ಎಂದರೆ ಮಾಡಿ, ನಾವು ಬೆಂಬಲ ಕೊಡುತ್ತೇವೆ ಎಂದು ಹೇಳಿದರು.

Tunnel Road

ನಗರದಲ್ಲಿ 70% ದ್ವಿಚಕ್ರ ವಾಹನಗಳಿವೆ. ಕೇವಲ 10% ಜನರಿಗಾಗಿ ಟನಲ್ ರಸ್ತೆ ಮಾಡುತ್ತಿದ್ದೀರಿ. ಬೈಕ್, ಸೈಕಲ್‌ಗಳಿಗೆ ಆ ರಸ್ತೆಗೆ ಪ್ರವೇಶವಿಲ್ಲ. ಕೇವಲ ಕಾರುಗಳಿಗೆ ಮಾತ್ರ ಪ್ರವೇಶ ಎನ್ನುತ್ತಿದ್ದೀರಿ. ಆ ಟನಲ್ ರಸ್ತೆಯಲ್ಲಿ ಟ್ರಾವೆಲ್ ಮಾಡಿದರೆ 16-20 ಸಾವಿರ ರೂಪಾಯಿ ತಿಂಗಳಿಗೆ ಖರ್ಚು ಮಾಡಬೇಕು. ಅಷ್ಟು ಖರ್ಚು ಮಾಡಿ ಇಎಂಐ ಕಟ್ಟಿದರೆ ಒಂದು ಬೆಂಜ್ ಕಾರೋ ಮೂರು ಬೆಡ್ ರೂಮ್‌ನ ವಿಲ್ಲಾವನ್ನೋ ಖರೀದಿಸಿಬಿಡಬಹುದು. ಇದು ಟ್ವಿನ್ ಟನಲ್ ರಸ್ತೆಯಲ್ಲ, ವಿಐಪಿ ಕಾರಿಡಾರ್ ಆಗುತ್ತೆ. ಭೂಮಿ ಮೇಲಿರುವ ರಸ್ತೆಗಳನ್ನೇ ಸರಿಯಾಗಿ ಮಾಡದೆ, ಭೂಮಿ‌ಯೊಳಗೆ ರಸ್ತೆ ಮಾಡಲು ಹೊರಟಿದ್ದಾರೆ. ಟನಲ್ ರಸ್ತೆ ಯೋಜನೆಗೂ ಮುನ್ನ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನ‌ು ಮುಚ್ಚಿ ಎಂದು ಸಲಹೆ ನೀಡಿದರು.

ಯೋಜನೆಗಾಗಿ 1 ಕಿ.ಮೀಟರಿಗೆ 1,285 ಕೋಟಿ ರೂ ಖರ್ಚಾಗುತ್ತಿದೆ. ಇಸ್ರೋದ ಮಂಗಳಯಾನವೇ ಇದಕ್ಕಿಂತಲೂ ಕಡಿಮೆ ಬಜೆಟ್‌ನಲ್ಲಿ ಆಗಿದೆ. ಈಗ ಈ ದುಬಾರಿ ಯೋಜನೆಗಾಗಿ ಸಾಲ ಮಾಡಲು ಹೊರಟಿದ್ದಾರೆ. ಆ ಸಾಲಕ್ಕೆ ಬಡ್ಡಿ ಎಲ್ಲಿಂದ ಕೊಡುತ್ತೀರಿ. ಇದು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪಾತಾಳಕ್ಕೆ ತಳ್ಳುವ ಯೋಜನೆಯಿದು. ಸೌಖ್ಯವಾಗಿರಲಿ ಎಂದು ಕೆಂಪೇಗೌಡರು ಶಿಲೆಗಳ ಮೇಲೆ ಬೆಂಗಳೂರು ನಗರ ಕಟ್ಟಿದ್ದಾರೆ, ಇಲ್ಲಿ ಭೂಕಂಪಗಳು ಆಗುವುದಿಲ್ಲ. ಆದರೆ ಈ ಯೋಜನೆಯ ಮೂಲಕ 3 ಸಾವಿರ ದಶಲಕ್ಷ ಶಿಲೆಗಳಿರುವ ಭೂಮಿಯ ಆಳವನ್ನ ಕೊರೆಯಲು ಹೊರಟಿದ್ದೀರಿ. ಲಾಲ್‌ಬಾಗ್‌ನಲ್ಲಿ ಕಾನೂನಿನ ಬಗ್ಗೆ ರಾಜ್ಯ ಸರ್ಕಾರವೇ ಬೋರ್ಡ್ ಹಾಕಿ ತಾನೇ ಕೊಲೆ ಮಾಡಲು ಹೊರಟಿದೆ ಎಂದು ಟೀಕಿಸಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಟನಲ್ ರಸ್ತೆಗಾಗಿ ಲಾಲ್‌ಬಾಗ್, ಸ್ಯಾಂಕಿ ಎಲ್ಲೆಡೆ ಇನ್‌ಲೆಟ್, ಔಟ್‌ಲೆಟ್ ಮಾಡುತ್ತಿದ್ದಾರೆ. ಯಾವ ಇಲಾಖೆಯಿಂದಲೂ ಅನುಮತಿ ಪಡೆದಿಲ್ಲ. ಬೆಂಗಳೂರಿನಲ್ಲಿ 12% ಜನರ ಬಳಿ ಮಾತ್ರ ಕಾರುಗಳಿವೆ. ಟನಲ್ ರಸ್ತೆಯನ್ನು ಶ್ರೀಮಂತರಿಗಾಗಿ ಮಾಡಲಾಗುತ್ತಿದೆ. ಇದು ತೇಜಸ್ವಿ ಸೂರ್ಯ ವಿರೋಧಿಸುತ್ತಿರುವುದಲ್ಲ, ಬೆಂಗಳೂರು ಜನರ ವಿರೋಧ ಇದು. ನಾವು ಕೇಳುವ ಪ್ರಶ್ನೆಗಳಿಗೆ ಅಧಿಕಾರಿಗಳ ಬಳಿ ಉತ್ತರವಿಲ್ಲ. ಕೋರ್ಟ್ ಕೇಳುವ ಪ್ರಶ್ನೆಗಳಿಗೆ ಅಧಿಕಾರಿಗಳು ಹೇಗೆ ಉತ್ತರ ಕೊಡಲಿದ್ದಾರೋ ನೋಡಬೇಕು ಎಂದರು.

ಅಲ್ಲದೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಬೇರೆ ಯೋಜನೆ ಬಗ್ಗೆ ಮಾತಾಡಿರುವ ವಿಡಿಯೋ‌ವನ್ನು ಹಿಂದೆ ಮುಂದೆ ಮಾಡಿ ಅವರೇ ಹೇಳಿದ್ದಾರೆಂದು ಹಬ್ಬಿಸುತ್ತಿದ್ದಾರೆ. ಈ ಯೋಜನೆ ಬಗ್ಗೆ ಗಡ್ಕರಿ ಅವರಿಗೆ ನಾನು ತಿಳಿಸಿದಾಗ ಗಾಬರಿಯಾದರು. ಗಡ್ಕರಿಯವರೇ ಅನುಮತಿ ನೀಡಿದ್ದಾರೆ ಎಂದು ಹೇಳ್ತಿದ್ದೀರಲ್ಲ, ಅವರು ವಿರೋಧಿಸಿದರೆ ಯೋಜನೆ ನಿಲ್ಲಿಸುತ್ತೀರಾ ಎಂದು ಪ್ರಶ್ನಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
BJP Lalbagh ರಸ್ತೆ ಯೋಜನೆ
Add as Preferred on Google Follow on Google News
Share. WhatsApp Facebook Twitter Telegram
Previous Articleಇನ್ನು ಸಿಎಂ, ಸಚಿವರ ಭೇಟಿಯಾಗುವುದು ಸುಲಭ…! 
Next Article ನಾಲೆಯಲ್ಲಿ ಮುಳುಗಿದ ನಾಲ್ವರು ಮಕ್ಕಳು; ಇಬ್ಬರ ಸಾವು- ಮತ್ತಿಬ್ಬರು ನಾಪತ್ತೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

September 19, 2026

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.