Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬೆಳಗಾವಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗಿಯಾದ ಬಿ ವೈ ವಿಜಯೇಂದ್ರ
Politics Home Latest News

ಬೆಳಗಾವಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗಿಯಾದ ಬಿ ವೈ ವಿಜಯೇಂದ್ರ

Sambrama Prabha NewsBy Sambrama Prabha NewsNovember 5, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರು ಚಳಿ, ಗಾಳಿಯೆನ್ನದೆ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದೆ.

ವಿಜಯೇಂದ್ರಗೆ ಹುಟ್ಟಹಬ್ಬದ ಶುಭಾಶಯ ಕೋರಿದ ರೈತರು: ರೈತರ ಅಹೋರಾತ್ರಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರೂ ಭಾಗವಹಿಸಿದರು. ಪ್ರತಿಭಟನೆಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ತಮ್ಮ ಹುಟ್ಟುಹಬ್ಬದ ನಡುವೆಯೂ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಅನ್ನದಾತರ ಪರ ಹೋರಾಟಕ್ಕೆ ಸಾಥ್​ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ರೈತರು ವಿಜಯೇಂದ್ರಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ರೈತರ ಪ್ರತಿಭಟನೆ ಸ್ಟೇಜ್ ಮೇಲೆಯೇ ವಿಜಯೇಂದ್ರ ಮಲಗಿದ್ದರು. ಮಧ್ಯರಾತ್ರಿ ವೇಳೆಗೆ ಅವರನ್ನು ಎಬ್ಬಿಸಿದ ರೈತರು ಜನ್ಮದಿನದ ಶುಭಾಶಯ ತಿಳಿಸಿದರು.

ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಪ್ರತಿಭಟನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ”ಕಳೆದ 6 ದಿನಗಳಿಂದ ಕಬ್ಬು ಬೆಳೆಗಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಇದಕ್ಕೆ ಕವಡೆಕಾಸಿನ ಕಿಮ್ಮತ್ತನ್ನೂ ನೀಡುತ್ತಿಲ್ಲ. ನಾನು ಇಲ್ಲಿ ಬಂದು, ಜಿಲ್ಲಾಧಿಕಾರಿಗೂ ಕೂಡ ಸರ್ಕಾರದ ಗಮನಕ್ಕೆ ತರುವಂತೆ ವಿನಂತಿ ಮಾಡಿದ್ದೇನೆ. ಈ ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಗುರ್ಲಾಪುರದಲ್ಲಿ ಹತ್ತಿರುವ ಪ್ರತಿಭಟನಾ ಕಿಡಿ ರಾಜ್ಯಾದ್ಯಂತ ಹಬ್ಬುತ್ತಿದೆ. ಎಲ್ಲಾ ತಾಲೂಕುಗಳಲ್ಲೂ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಪರಿಸ್ಥಿತಿ ಕೈಮೀರುವ ಮುನ್ನ ಸರ್ಕಾರದ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಬುಧವಾರ ಸಚಿವರು ಬರುತ್ತಾರೆ ಎಂಬ ಮಾಹಿತಿ ಇದೆ, ಮುಂದೆ ಏನಾಗುತ್ತದೆ ಎಂದು ನೋಡೋಣ” ಎಂದು ಹೇಳಿದರು.

”ವಾಸ್ತವ್ಯ ಇರಬೇಕೆಂಬ ಆಲೋಚನೆ ಇರಲಿಲ್ಲ. ಆದರೆ ಇಲ್ಲಿಗೆ ಬಂದಾಗ, ಉರಿಬಿಸಿಲಿನಲ್ಲೂ ಕೂಡ ಸಾವಿರಾರು ರೈತರು ಪ್ರತಿಭಟನೆ ಮಾಡುತ್ತಿರುವುದನ್ನು ನೋಡಿದೆ. ಇಂತಹ ಸಂದರ್ಭದಲ್ಲಿ ಬಂದು, ಒಂದೆರಡು ತಾಸು ಮಾತ್ರ ಇದ್ದರೆ ಅಪರಾಧ ಆಗುತ್ತದೆ. ಹೀಗಾಗಿ ಅವರಿಗೆ ಮಾನಸಿಕ ಸ್ಥೈರ್ಯ ತುಂಬಬೇಕು, ಹೋರಾಟಕ್ಕೆ ಬಲ ನೀಡಬೇಕೆಂದು ನಾನು, ನಮ್ಮ ಇತರ ನಾಯಕರು ನಮ್ಮ ಜೊತೆಗಿದ್ದಾರೆ” ಎಂದರು.

ರೈತರ ಬಗ್ಗೆ ಸರ್ಕಾರದ ತಾತ್ಸಾರ: ”ಹೋರಾಟ ಕೈಮೀರಿ ಹೋಗಬಾರದು ಅಂತ ಇದ್ದರೆ, ರೈತರ ಆಕ್ರೋಶವನ್ನು ಅರ್ಥ ಮಾಡಿಕೊಂಡು, ಈಗಲೇ ಸ್ಪಂದನೆ ಮಾಡಲು ಸಚಿವರು ಸ್ಥಳಕ್ಕೆ ಬಂದರೆ ಸರ್ಕಾರಕ್ಕೂ, ರೈತರಿಗೂ ಒಳ್ಳೆಯದಾಗುತ್ತದೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ, ಸೀಸನ್​ ಆರಂಭಕ್ಕೂ ಮುನ್ನವೇ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರ ಸಂಧಾನ ಸಭೆ ನಡೆಸಿ ಪರಿಹಾರ ಕಂಡುಕೊಂಡಿದ್ದರು. ಆದರೀಗ ಕಾಂಗ್ರೆಸ್​ ಸರ್ಕಾರ ರೈತರ ಬಗ್ಗೆ ತಾತ್ಸಾರ ಮಾಡುತ್ತಿದೆ. ಇದರ ಪರಿಣಾಮ ರೈತರು ಬೀದಿಗಿಳಿದು ಪ್ರತಿಭಟಿಸುವ ಪರಿಸ್ಥಿತಿ ಎದುರಾಗಿದೆ. ರೈತರ ತಾಳ್ಮೆಯನ್ನು ಪರೀಕ್ಷೆ ಮಾಡಬೇಡಿ, ಅವರ ನ್ಯಾಯಸಮ್ಮತ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸ್ಪಂದಿಸಬೇಕು” ಎಂದು ವಿಜಯೇಂದ್ರ ಆಗ್ರಹಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
BY Vijayendra ಚಿಕ್ಕೋಡಿ ಪ್ರತಿಭಟನೆ ಬಿ ವೈ ವಿಜಯೇಂದ್ರ
Add as Preferred on Google Follow on Google News
Share. WhatsApp Facebook Twitter Telegram
Previous Articleಅಂತರರಾಷ್ಟ್ರೀಯ ಪದಕ ವಿಜೇತರಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ
Next Article ಕಿರ್ಲೋಸ್ಕರ್​ನಿಂದ ರಾಜ್ಯದಲ್ಲಿ ₹3,000 ಕೋಟಿ ಹೂಡಿಕೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.