• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಖಾಸಗಿ ಆಂಬ್ಯುಲೆನ್ಸ್​ಗಳ ನಿಯಂತ್ರಣ, ನಿರ್ದಿಷ್ಟ ದರ ನಿಗದಿಗಾಗಿ ತಿದ್ದುಪಡಿ ಮಸೂದೆಗೆ ಸಂಪುಟ ಅಸ್ತು

Sambrama Prabha News by Sambrama Prabha News
November 28, 2025
in Politics
0
ಖಾಸಗಿ ಆಂಬ್ಯುಲೆನ್ಸ್​ಗಳ ನಿಯಂತ್ರಣ, ನಿರ್ದಿಷ್ಟ ದರ ನಿಗದಿಗಾಗಿ ತಿದ್ದುಪಡಿ ಮಸೂದೆಗೆ ಸಂಪುಟ ಅಸ್ತು

Updated By: Priyalachhi

ಬೆಂಗಳೂರು: ಖಾಸಗಿ ಆಂಬ್ಯುಲೆನ್ಸ್​ಗಳನ್ನು ನಿಯಂತ್ರಿಸಲು ಹಾಗೂ ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆ ಎಂದು ನೋಂದಾಯಿಸಲು ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಿತು. ಸ್ವಯಂ ಪ್ರೇರಿತವಾಗಿ ನೋಂದಾಯಿಸಿದ ಖಾಸಗಿ ಆಂಬ್ಯುಲೆನ್ಸ್‌ ಸೇವಾ ನಿರ್ವಾಹಕರನ್ನು ನಿಯಂತ್ರಿಸಲು ಮತ್ತು ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯೆಂದು ನೋಂದಾಯಿಸಲು ಅವಶ್ಯಕವಾಗಿರುವುದರಿಂದ ತಿದ್ದುಪಡಿಯನ್ನು ತರಲಾಗುತ್ತಿದೆ. ಪ್ರಸ್ತುತ ಅಧಿನಿಯಮದಲ್ಲಿ ತಾತ್ಕಾಲಿಕ ನೋಂದಣಿಗೆ ಅವಕಾಶ ಇಲ್ಲದೇ ಇರುವುದರಿಂದ ಕೇಂದ್ರ ಅಧಿನಿಯಮದ ಮಾದರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಸ್ವ ಮಾನ್ಯತೆ ಪತ್ರ ಒದಗಿಸಿದ ವೈದ್ಯಕೀಯ ಸಂಸ್ಥೆಗಳಿಗೆ 30 ದಿನಗಳೊಳಗಾಗಿ ಖಾಯಂ ನೋಂದಣಿ ನೀಡಲು ತಿದ್ದುಪಡಿಯನ್ನು ಪ್ರಸ್ತಾಪಿಸಲಾಗಿದೆ.

ಖಾಸಗಿ ಆಂಬ್ಯುಲೆನ್ಸ್‌ಗಳ ಸೇವೆಯನ್ನು ಮೊಬೈಲ್ ಆ್ಯಪ್ ಮೂಲಕ ಪಡೆಯಲು ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ (ಕೆಪಿಎಂಇ) ಕಾಯ್ದೆಯಂತೆ ಅವುಗಳ ಸೇವೆಗೆ ನಿರ್ದಿಷ್ಟ ದರ ನಿಗದಿಪಡಿಸಲು ಈ ತಿದ್ದುಪಡಿ ಮಸೂದೆ ಅನುವು ಮಾಡಿಕೊಡಲಿದೆ. ಈ ಮಸೂದೆಯಲ್ಲಿ ಮೋಟಾರು ವಾಹನಗಳ ಅಧಿನಿಯಮ 1988 ಮತ್ತು ಅದರ ಅಡಿ ರಚಿಸಲಾದ ನಿಯಮಗಳ ಜೊತೆಗೆ ಐಚ್ಚಿಕವಾಗಿ ನೋಂದಾಯಿಸಿದ ಆಂಬ್ಯುಲೆನ್ಸ್ ಸೇವಾದಾರರನ್ನು ಅಗ್ರೆಗೇಟರ್​​ನಂತೆ ನಿಯಂತ್ರಿಸಲು ನಿಯಮ ರೂಪಿಸಲಾಗಿದೆ.

ಮಾನಸಿಕ ಆರೋಗ್ಯ ಸಂಸ್ಥೆ ಮತ್ತು ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆ ಎಂದು ನೋಂದಾಯಿಸಲು ನಿಯಮ ರೂಪಿಸಲಾಗಿದೆ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ನೋಂದಾಯಿತ ವೈದ್ಯಕೀಯ ಸಂಸ್ಥೆಗಳ ಸಂಘದ ಪ್ರತಿನಿಧಿಯನ್ನು ಅಥವಾ ಆಯುಷ್ ವೈದ್ಯಕೀಯ ವೃತ್ತಿಪರ ಸಂಘದ ಪ್ರತಿನಿಧಿ ಒಬ್ಬರನ್ನು ನೇಮಿಸಲು ಅವಕಾಶ ನೀಡಲಾಗಿದೆ.

Tags: ಖಾಸಗಿ ಆಂಬ್ಯುಲೆನ್ಸ್
Previous Post

ಅನ್ನಭಾಗ್ಯಕ್ಕೆ ಕನ್ನ: ಆಹಾರ ಇಲಾಖೆ ಮತ್ತು ಆದಾಯ ತಂಡದ ಅಧಿಕಾರಿಗಳು ಜಪ್ತಿ

Next Post

SC – ST ಮೀಸಲಾತಿ ಹೆಚ್ಚಳ: ನೇಮಕಾತಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​

Next Post
SC – ST ಮೀಸಲಾತಿ ಹೆಚ್ಚಳ: ನೇಮಕಾತಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​

SC - ST ಮೀಸಲಾತಿ ಹೆಚ್ಚಳ: ನೇಮಕಾತಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.