BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

, ,

CBSE 10ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟ: ಎಂದಿನಂತೆ ಬಾಲಕಿಯರೇ ಮೇಲುಗೈ

Author Picture
Published On: April 15, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE)ಯು ಬುಧವಾರ 2025 – 2026ನೇ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಯ(ಸೆಷನ್ 1) ಫಲಿತಾಂಶ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ವರ್ಷ ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದ CBSE 10ನೇ ತರಗತಿ ಪರೀಕ್ಷೆಗೆ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷ ಒಟ್ಟಾರೆ ಶೇ. 93.70 ವಿದ್ಯಾರ್ಥಿಗಳ ಪಾಸ್ ಆಗಿದ್ದಾರೆ. ಇದು ಕಳೆದ ವರ್ಷದ ಶೇ 93.66 ಕ್ಕಿಂತ ಸ್ವಲ್ಪ ಸುಧಾರಣೆಯಾಗಿದೆ.

ಹುಡುಗಿಯರು, ಹುಡುಗರಿಗಿಂತ ಹೆಚ್ಚು ಅಂದರೆ ಶೇ 94.99 ರಷ್ಟು ಉತ್ತೀರ್ಣರಾಗಿದ್ದು, ಹುಡುಗರು ಶೇ 92.6 ರಷ್ಟು ಉತ್ತೀರ್ಣರಾಗಿದ್ದಾರೆ.

“ಒಟ್ಟು 55,368 ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 22,157 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ತಿರುವನಂತಪುರಂ ಮತ್ತು ವಿಜಯವಾಡ ಶೇ. 99.79 ರಷ್ಟು ಉತ್ತೀರ್ಣತೆಯನ್ನು ದಾಖಲಿಸುವ ಮೂಲಕ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅಗ್ರಸ್ಥಾನದಲ್ಲಿವೆ. ಚೆನ್ನೈ ಶೇ.99.58 ರಷ್ಟು ಉತ್ತೀರ್ಣರಾಗಿದ್ದರೆ, ಬೆಂಗಳೂರು ಶೇ.98.91 ರಷ್ಟು ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದೆ.

ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಶೇ.33 ರಷ್ಟು ಅಂಕಗಳನ್ನು ಪಡೆಯಬೇಕು. ಶೇ.33 ರಷ್ಟು ಅಂಕಗಳನ್ನು ಗಳಿಸದವರಿಗೆ ಕಂಪಾರ್ಟ್‌ಮೆಂಟ್ ಪರೀಕ್ಷೆಯಲ್ಲಿ ಮತ್ತೊಂದು ಅವಕಾಶ ನೀಡಲಾಗುವುದು.

ಕಳೆದ ವರ್ಷಕ್ಕಿಂತ ಸ್ವಲ್ಪ ಸುಧಾರಣೆಯಾಗಿ ಈ ವರ್ಷ 1.47 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ‘ಕಂಪಾರ್ಟ್‌ಮೆಂಟ್’ ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp